ಹಿರಿಯೂರು: ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಚಟುವಟಿಕೆ ಚುರುಕುಗೊಂಡಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರು ಉಮೇದುವಾರಿಕೆ (nomination) ಸಲ್ಲಿಸಿದರು. ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿದ ನಂತರ ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ವಿಶೇಷ ಪೂಜೆ ಸಲ್ಲಿಕೆ
ನಗರದ ಶ್ರೀ ತೇರು ಮಲ್ಲೇಶ್ವರ ದೇವಾಲಯ, ಕಾಳಿಕಾಂಬಾ ದೇವಿ, ದುರ್ಗಾಪರಮೇಶ್ವರಿ ದೇವಾಲಯ, ಶ್ರೀಕೃಷ್ಣ ದೇವಾಲಯ, ಚರ್ಚ್ ಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಗೆಲುವಿಗಾಗಿ ಪ್ರಾರ್ಥಿಸಿ ನಂತರ ನಗರದ ಶ್ರೀ ತೇರು ಮಲ್ಲೇಶ್ವರ ದೇವಾಲಯದಿಂದ ಸಾವಿರಾರು ಬೆಂಬಲಿಗರ ಜೊತೆ ರೋಡ್ ಶೋ (Road Show) ನಡೆಸಿದರು. ಬಳಿಕ ಚುನಾವಣಾ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಶಾಸಕಿ ಕೆ. ಪೂರ್ಣಿಮಾ ಹಿನ್ನೆಲೆ
ಕಳೆದ 2018ರಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಕೆ. ಪೂರ್ಣಿಮಾ ಶ್ರೀನಿವಾಸ್ ಗೆಲುವು ಸಾಧಿಸಿದ್ದರು. ಕಳೆದ 2013ರಲ್ಲಿ ಹಿರಿಯೂರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಪೂರ್ಣಿಮಾ ಶ್ರೀನಿವಾಸ್ ಅವರ ತಂದೆ ದಿವಂಗತ ಮಾಜಿ ಸಚಿವ ಎ. ಕೃಷ್ಣಪ್ಪ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಡಿ. ಸುಧಾಕರ್ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲುಕಂಡಿದ್ದರು.
ಇದನ್ನೂ ಓದಿ: Karnataka Elections : ಬಸವಣ್ಣರ ಮಾತು ಮೀರಿ ದುರ್ಜನರ ಸಂಗ ಮಾಡಿದ ಶೆಟ್ಟರ್; ರಾಜೀನಾಮೆಯಿಂದ ಸಮಸ್ಯೆ ಇಲ್ಲ ಎಂದ ಸಿಎಂ
ತಂದೆಯ ನಿಧನಾ ಬಳಿಕ ಪೂರ್ಣಿಮಾ ಅವರು ಬಿಜೆಪಿಗೆ ಸೇರ್ಪಡೆಗೊಂಡು ಪಕ್ಷ ಸಂಘಟನೆ ಮಾಡಿದ್ದರು. 2018ರಲ್ಲಿ ತಂದೆ ಸೋತ ಕ್ಷೇತ್ರದಲ್ಲಿ ಮಗಳು ಗೆಲುವು ಸಾಧಿಸಿದ್ದರು. ಇದೀಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.