ಕಲಬುರಗಿ, ಕರ್ನಾಟಕ: ಕೇಂದ್ರ ಸಚಿವರ ಸಮ್ಮುಖದಲ್ಲೇ ಬಿಜೆಪಿ ಅಭ್ಯರ್ಥಿಯು ಚುನಾವಣಾ ನೀತಿ ಸಂಹಿತೆ (code of conduct violation) ಉಲ್ಲಂಘನೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ನಡೆದಿದೆ. ಚುನಾವಣಾ ಪ್ರಚಾರದ ವೇಳೆ, ಚಿಕ್ಕಮಗುವಿನ ಮೂಲಕ ಬಿಜೆಪಿ (BJP) ಪರವಾಗಿ ಮತ ಪ್ರಚಾರ ಮಾಡಲಾಗಿದೆ. ಆದರೆ, ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸುವಂತಿಲ್ಲ ಎಂಬ ನಿಯಮವಿದೆ(Karnataka Election 2023).
ಜೇವರ್ಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ್ ಪಾಟೀಲ್ ರದ್ದೆವಾಡಗಿ ಅವರು ಮಕ್ಕಳನ್ನು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಂಡ ಆರೋಪವನ್ನು ಎದುರಿಸುತ್ತಿದ್ದಾರೆ. ಜೇವರ್ಗಿ ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ಬಿಜೆಪಿ ಪ್ರಚಾರಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರೂ ಭಾಗಿಯಾಗಿದ್ದರು.
ಗಂವ್ಹಾರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಪಾಟೀಲ್ ಪರವಾಗಿ ಚಿಕ್ಕ ಮಗುವಿನ ಮೂಲಕ ಮತ ಪ್ರಚಾರ ಮಾಡಲಾಗಿದೆ. ಆ ಮೂಲಕ ಬಿಜೆಪಿ ಅಭ್ಯರ್ಥಿ ಸ್ಪಷ್ಟವಾಗಿ ಎಂದು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ವೇದಿಕೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರೂ ಹಾಜರಿದ್ದರು. ಈ ವೇಳೆ ಭಾಷಣ ಮಾಡುವ ಚಿಕ್ಕ ಮಗು, ಬಿಜೆಪಿಗೆ ಮತ ಹಾಕುವಂತೆ ಮನವಿ ಮಾಡುತ್ತದೆ. ಆಗ ವೇದಿಕೆಯಲ್ಲಿದ್ದ ಕೇಂದ್ರ ಸಚಿವರೂ ಸೇರಿ ಎಲ್ಲರೂ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಾರೆ. ಮಗುವನ್ನು ಪ್ರಚಾರಕ್ಕೆ ಬಳಸಿಕೊಂಡಿದ್ದಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Karnataka Election : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಸೊರಬದ ಎಸ್‍ಪಿ ಅಭ್ಯರ್ಥಿ ಪರಶುರಾಮ್ ವಿರುದ್ಧ ಪ್ರಕರಣ ದಾಖಲು
ಚುನಾವಣಾ ನಿಯಮಗಳ ಪ್ರಕಾರ ಪ್ರಚಾರಕ್ಕಾಗಿ ಚಿಕ್ಕಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ. ಒಂದೊಮ್ಮೆ ಬಳಸಿಕೊಂಡರೆ ಕಾನೂನು ಪ್ರಕಾರ ಅಪರಾಧ ಹಾಗೂ ನೀತಿ ಸಂಹಿತೆ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ. ಈ ಘಟನೆಯ ಬಗ್ಗೆ ಚುನಾವಣಾ ಆಯೋವು ದೂರು ದಾಖಲಿಸಿಕೊಂಡ ಬಗ್ಗೆ ಯಾವುದೇ ಮಾಹಿತಿ ಇಲ್ಲ.