Site icon Vistara News

Karnataka Election: ಸೀರೆ ಜಪ್ತಿ ವಿಚಾರಕ್ಕೆ ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಜಗಳ; ನಾಲ್ವರಿಗೆ ಗಾಯ

Bjp, Congress workers clash over seizure of sarees in Bommanahalli, Four injured

Bjp, Congress workers clash over seizure of sarees in Bommanahalli, Four injured

ಬೆಂಗಳೂರು: ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಸೀರೆಗಳನ್ನು ಚುನಾವಣಾ ಅಧಿಕಾರಿಗಳು (Karnataka Election) ಜಪ್ತಿ ಮಾಡಿದ ಹಿನ್ನೆಲೆಯಲ್ಲಿ ನಗರದ ಹೊರವಲಯದ ಬೊಮ್ಮನಹಳ್ಳಿಯಲ್ಲಿ ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಭಾನುವಾರ ರಾತ್ರಿ ಜಗಳ ನಡೆದಿದ್ದು, ನಾಲ್ವರಿಗೆ ಗಾಯಗಳಾಗಿವೆ. ಬೊಮ್ಮನಹಳ್ಳಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಫೊಟೋ ಇದ್ದ ಕವರ್‌ಗಳಲ್ಲಿ 50 ಸೀರೆಗಳನ್ನು ಶೇಖರಿಸಿಡಲಾಗಿತ್ತು. ಆ ಸ್ಥಳವನ್ನು ಕಾಂಗ್ರೆಸ್‌ ಕಾರ್ಯಕರ್ತರು ಚುನಾವಣಾ ಅಧಿಕಾರಿಗಳು ತೋರಿಸಿ, ಜಪ್ತಿ ಮಾಡಿಸಿದ್ದಾರೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಕೈ ಕಾರ್ಯಕರ್ತರ ನಡುವೆ ವಾಗ್ವಾದ, ಪರಸ್ಪರ ಹೊಡೆದಾಟ ನಡೆದಿದೆ. ಈ ವೇಳೆ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Shivamogga News: ಕ್ರಿಕೆಟ್ ಆಡುವಾಗ ಎರಡು ಕೋಮಿನ ಯುವಕರ ನಡುವೆ ಗಲಾಟೆ; 10 ಮಂದಿಗೆ ಗಾಯ

ಕೋಲಾರದಲ್ಲಿ ಕಲ್ಲು ತೂರಾಟ, ಮಾರಾಮಾರಿ

ಕೋಲಾರ: ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಪ್ರಚಾರ ಮುಗಿಸಿಕೊಂಡು ಹೋಗುವಾಗ ಕಲ್ಲು ತೂರಾಟ ನಡೆದಿದ್ದು, ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿ ಗುಂಪು ಚದುರಿಸಿದ್ದಾರೆ.

ನಗರದ ಕ್ಲಾಕ್ ಟವರ್ ಬಳಿ ಭಾನುವಾರ ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯಿಂದ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

Exit mobile version