Site icon Vistara News

BJP Executive Meeting | ವಿಜಯೇಂದ್ರ ರಾಜಕೀಯ ಭವಿಷ್ಯದ ಬಗ್ಗೆ ಪ್ರಧಾನಿ ಮೋದಿ ಜತೆ ಬಿಎಸ್‌ವೈ ಗಂಭೀರ ಚರ್ಚೆ

BJP Executive Meeting

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ಆರಂಭವಾದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ (BJP Executive Meeting) ಬಳಿಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕರ್ನಾಟಕ ರಾಜಕೀಯ ಹಾಗೂ ವಿಶೇಷವಾಗಿ ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯ ಭವಿಷ್ಯದ ಬಗ್ಗೆ ಬಿ.ಎಸ್‌.ವೈ, ಮೋದಿ ಅವರೊಂದಿಗೆ ಚರ್ಚಿಸಿದ್ದಾರೆ.

ಯಡಿಯೂರಪ್ಪ ಜತೆ ಸುಮಾರು 15 ನಿಮಿಷ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿದ್ದಾರೆ. 2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಕ್ಕೆ ಯಡಿಯೂರಪ್ಪ ಅವರ ಮಾರ್ಗದರ್ಶನ, ಸಹಕಾರ ಅಗತ್ಯ ಎಂದು ಬಿಎಸ್‌ವೈ ಅವರನ್ನು ಕೇಳಿರುವ ಪ್ರಧಾನಿ ಮೋದಿ, ಸಣ್ಣ ಪುಟ್ಟ ತಪ್ಪುಗಳನ್ನು ಸರಿಪಡಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯದ ಭವಿಷ್ಯದ ಬಗ್ಗೆ ಮೋದಿ ಅವರೊಂದಿಗೆ ಯಡಿಯೂರಪ್ಪ ಗಂಭೀರ ಚರ್ಚೆ ನಡೆಸಿದ್ದಾರೆ. ಎಲ್ಲ ಪ್ರಶ್ನೆಗಳಿಗೆ ಸಕಾರಾತ್ಮಕ ಉತ್ತರ ನೀಡಿರುವ ಮೋದಿ ಅವರು, ರಾಜ್ಯ ರಾಜಕೀಯ ಪರಿಸ್ಥಿತಿ ಬಗ್ಗೆ ಮಾಜಿ ಸಿಎಂ ಅವರಿಂದ ಮಾಹಿತಿ ಪಡೆದಿದ್ದಾರೆ. ಇದೇ ವೇಳೆ ರಾಜ್ಯಕ್ಕೆ ಹೆಚ್ಚು ಹೆಚ್ಚಾಗಿ ಭೇಟಿ ನೀಡುವೆ, ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕೆಲಸ ಮಾಡಬೇಕು ಎಂದು ಪ್ರಧಾನಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ಮೋದಿಯನ್ನು ಬಿಎಸ್‌ವೈ ಆಹ್ವಾನಿಸಿದ್ದಾರೆ.

ಇದನ್ನೂ ಓದಿ | BJP Meeting | ಕಾರ್ಯಕಾರಿಣಿಯಲ್ಲಿ ಕರ್ನಾಟಕದ್ದೇ ಚರ್ಚೆ, ನಾಯಕರಿಗೆ ವಸ್ತುಸ್ಥಿತಿ ವಿವರಿಸಿದ ಬೊಮ್ಮಾಯಿ, ಕಟೀಲ್

Exit mobile version