ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲಿಯೂ ಅಭಿವೃದ್ಧಿ ಆಗಿದ್ದು, ಪ್ರತಿಯೊಬ್ಬ ವ್ಯಕ್ತಿಯು ಅಭಿವೃದ್ಧಿ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅತ್ಯಧಿಕ ಮತಗಳಿಂದ ಬಿಜೆಪಿ ಗೆಲ್ಲಲಿದೆ ಎಂದು ಶಾಸಕ, ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ್ ನಾಯ್ಕ (KB Ashok Naik) ಅವರು ಚುನಾವಣಾ (Karnataka Election 2023) ಪ್ರಚಾರ ಭಾಷಣದ ವೇಳೆ ತಿಳಿಸಿದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳೆಹೊನ್ನೂರು ಮಹಾಶಕ್ತಿ ಕೇಂದ್ರದ ವಿವಿಧ ಬೂತ್‌ಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಕೆ.ಬಿ. ಅಶೋಕ್ ನಾಯ್ಕ, ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವಾಗ ಜನರು ಅಪಾರ ಬೆಂಬಲ ಸೂಚಿಸುತ್ತಿದ್ದು, ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳು ಗೆಲುವಿಗೆ ಸಹಕಾರಿ ಆಗಲಿದೆ ಎಂದು ತಿಳಿಸಿದರು.
ಸಮಗ್ರ ಅಭಿವೃದ್ಧಿಗೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತನ್ನಿ
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಸದೃಢವಾಗಿ ಮುನ್ನಡೆಯುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಿದ ಅವಧಿಯಲ್ಲಿ ಅಭಿವೃದ್ಧಿ ಅತ್ಯಂತ ವೇಗಗತಿಯಲ್ಲಿ ನಡೆದಿದೆ. ರಾಜ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿಯನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಕೆಲಸ ಆಗಬೇಕು. ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಕೆ.ಬಿ. ಅಶೋಕ್ ನಾಯ್ಕ ಹೇಳಿದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳೆಹೊನ್ನೂರು ಮಹಾಶಕ್ತಿ ಕೇಂದ್ರದ ವಿವಿಧ ಬೂತ್‌ಗಳಲ್ಲಿ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ್ ನಾಯ್ಕ ಪ್ರಚಾರ ನಡೆಸಿದರು. ಅರದೋಟ್ಲು, ಅರಬಿಳಚಿ ಸೇರಿದಂತೆ ವಿವಿಧ ಬೂತ್‌ಗಳಲ್ಲಿ ಇತರ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಹೊಳೆಹೊನ್ನೂರು ಮಹಾಶಕ್ತಿ ಕೇಂದ್ರದ ಅರದೋಟ್ಲು, ಅರಬಿಳಚಿ, ಕ್ಯಾಂಪ್, ಕೋಡಿಹೊಸೂರು, ದಾನವಾಡಿ, ಅರಕೆರೆ ಸೇರಿದಂತೆ ವಿವಿಧ ಬೂತ್‌ಗಳಲ್ಲಿ ಮತಯಾಚನೆ ನಡೆಸಿದರು. ನೂರಾರು ಕಾರ್ಯಕರ್ತರು ಪ್ರತಿ ಬೂತ್, ಗ್ರಾಮದ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದರು.
ವಿವಿಧ ಸಮಿತಿಗಳ ಸಭೆ
ಗ್ರಾಮಾಂತರ ಚುನಾವಣಾ ಕಾರ್ಯಾಲಯದಲ್ಲಿ ಕ್ಷೇತ್ರ ಪ್ರಭಾರಿ ಎಸ್. ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಗ್ರಾಮಾಂತರ ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಸ್ವರೂಪ್ ಸೇರಿದಂತೆ ವಿವಿಧ ಸಮಿತಿ ಮುಖಂಡರು ಗ್ರಾಮಾಂತರ ಕಾರ್ಯಾಲಯದಲ್ಲಿ ಸಭೆ ನಡೆಸಿದರು.
ಇದನ್ನೂ ಓದಿ: Karnataka Election 2023: ಬಿಜೆಪಿ ದಿಗ್ಗಜರಿಂದ ಎಲೆಕ್ಷನ್ ಕ್ಯಾಂಪೇನ್; 3 ದಿನದ ಮೋದಿ ಮೆಗಾ ರೋಡ್ ಶೋ ಎಲ್ಲೆಲ್ಲಿ?
ಹೊಳೆಹೊನ್ನೂರು ಮಹಾಶಕ್ತಿ ಕೇಂದ್ರದ ವಿವಿಧ ಬೂತ್‌ಗಳ ಪ್ರಚಾರ ಕಾರ್ಯದಲ್ಲಿ ಮಂಡಲ ಅಧ್ಯಕ್ಷ ಮಂಜುನಾಥ್ ಕಲ್ಲಜ್ಜನಾಳ್, ಸ್ಥಳೀಯ ಮುಖಂಡರು, ಮಹಾಶಕ್ತಿ ಕೇಂದ್ರದ ಪ್ರಮುಖರು, ನೂರಾರು ಕಾರ್ಯಕರ್ತರು ಹಾಜರಿದ್ದರು.