Site icon Vistara News

ಶಿರಹಟ್ಟಿಯಲ್ಲಿ ಇಂದು ಬಿಜೆಪಿ ಜನಸಂಕಲ್ಪ ಯಾತ್ರೆ

jana sankalpa

ಗದಗ: ಇಂದು ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ನಡೆಯಲಿದೆ.

ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್, ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್ ಸೇರಿದಂತೆ ರಾಜ್ಯದ ಹಲವು ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಢೋಂಗಿತನ ಹಾಗೂ ಅಪಪ್ರಚಾರಗಳ ಬಗ್ಗೆ ಜನರಿಗೆ ತಿಳಿಸುವ ವಿರಾಟ್ ಸಮಾವೇಶ ಇದಾಗಲಿದೆ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.

ಶಿರಹಟ್ಟಿ ಪಟ್ಟಣದ ಎಫ್.ಎಂ ಡಬಾಲಿ ಕಾಲೇಜ್ ಮೈದಾನದಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಗೆ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 35 ಸಾವಿರಕ್ಕೂ ಅಧಿಕ ಜನರು ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಮೈದಾನದಲ್ಲಿ ಬೃಹತ್ ವೇದಿಕೆ ಹಾಕಲಾಗಿದ್ದು ಬರುವ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಜನಸಂಕಲ್ಪ ಯಾತ್ರೆ ನಡೆಯಲಿದೆ. ಭದ್ರತಾ ದೃಷ್ಟಿಯಿಂದ ಇಬ್ಬರು ಡಿವೈಎಸ್‌ಪಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

Exit mobile version