Site icon Vistara News

BJP JDS alliance : ಸೆ.11 ಅಥವಾ 13ಕ್ಕೆ ಡೆಲ್ಲಿಯಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿ ಘೋಷಣೆ?

HD Devegowda Meets PM Narendra Modi

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕರ್ನಾಟಕವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್‌ ಅನ್ನು ಕಟ್ಟಿಹಾಕಲು ಗೇಮ್‌ ಪ್ಲ್ಯಾನ್‌ ಶುರು ಮಾಡಿದೆ. ಚುನಾವಣೆಗೆ ಇನ್ನು ಎಂಟು ತಿಂಗಳು ಬಾಕಿ ಇದ್ದರೂ ಈಗಿನಿಂದಲೇ ಎಲ್ಲವನ್ನೂ ನಿರ್ಧಾರ ಮಾಡಿ ಆ ನಿಟ್ಟಿನಲ್ಲಿ ಕೆಲಸ ಮಾಡಲು ಪಕ್ಕಾ ಬ್ಲ್ಯೂ ಪ್ರಿಂಟ್‌ ಅನ್ನು ಸಿದ್ಧಪಡಿಸಿಟ್ಟುಕೊಂಡಿದೆ. ಇದರ ಭಾಗವಾಗಿಯೇ ಕರ್ನಾಟಕದಲ್ಲಿ ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದೆ. ಈಗಾಗಲೇ ಈ ವಿಷಯವನ್ನು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (Former CM BS Yediyurappa) ಘೋಷಣೆ ಮಾಡಿದ್ದಾರೆ. ಆದರೆ, ಅಂತಿಮವಾಗಿ ಬಿಜೆಪಿ ಹಾಗೂ ಜೆಡಿಎಸ್‌ ವರಿಷ್ಠರು ನವ ದೆಹಲಿಯಲ್ಲಿ ಒಂದು ಸಭೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಬೇಕಿದೆ. ಅಲ್ಲಿ ಒಮ್ಮತದ ತೀರ್ಮಾನಕ್ಕೆ ಬಂದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಹೊರಬೀಳುತ್ತದೆ. ಈಗಿನ ಮಾಹಿತಿ ಪ್ರಕಾರ ಸೆ.11 ಅಥವಾ 13ಕ್ಕೆ ಬಿಜೆಪಿ – ಜೆಡಿಎಸ್ ಮೈತ್ರಿ (BJP JDS alliance) ಬಗ್ಗೆ ಉಭಯ ಪಕ್ಷಗಳ ವರಿಷ್ಠರು ಘೋಷಣೆ ಮಾಡಲಿದ್ದಾರೆ.

ಮೈತ್ರಿ ಮಾತುಕತೆ ನಡೆಸಲು ನವದೆಹಲಿಯಲ್ಲಿ ವೇದಿಕೆ ಸಿದ್ಧವಾಗಿದೆ. ಸೆಪ್ಟೆಂಬರ್‌ 10ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ತನ್ನ ಪಕ್ಷದ ಶಾಸಕರು, ಸಂಸದರು, ಮಾಜಿ ಮತ್ತು ಹಾಲಿ ಶಾಸಕರು, ಸಂಸದರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರು, ವಿವಿಧ ಘಟಕಗಳ ಮುಖ್ಯಸ್ಥರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ಕರೆದಿದೆ. ಇಲ್ಲಿ ಮೈತ್ರಿ ಬಗ್ಗೆ ಔಪಚಾರಿಕವಾಗಿ ಚರ್ಚೆ ನಡೆಸಿ, ಇವರೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಬಳಿಕ ನವ ದೆಹಲಿಯಲ್ಲಿ ಸೆ. 11 ಅಥವಾ 13ಕ್ಕೆ ಮೈತ್ರಿ ಮಾತುಕತೆಯನ್ನು ನಡೆಸಲಾಗುತ್ತದೆ. ಇಲ್ಲಿ ಒಮ್ಮತದ ನಿರ್ಯಣಕ್ಕೆ ಬಂದ ಕೂಡಲೆ, ಅಂದೇ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ.

ಮೈತ್ರಿಗೆ ಒಪ್ಪಿರುವ ಎಚ್.ಡಿ. ದೇವೇಗೌಡ

ಈ ಮೊದಲು ಬಿಜೆಪಿ ಜತೆಗಿನ ಸಖ್ಯವನ್ನು ಒಪ್ಪದೇ ಇದ್ದ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (Former Prime Minister HD Deve Gowda) ಅವರು ಈ ಬಾರಿ ಮಾತ್ರ ಲೋಕಸಭೆಯಲ್ಲಿ ಬಿಜೆಪಿ ಜತೆಗಿನ ಮೈತ್ರಿಗೆ ಹಸಿರು ನಿಶಾನೆ ತೋರಿದ್ದಾರೆ. ಇಲ್ಲಿ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳುವುದು ಒಂದು ಕಡೆಯಾದರೆ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಯಶಸ್ಸು ಸ್ವಲ್ಪ ಮಟ್ಟಿನ ಎಚ್ಚರಿಕೆಯನ್ನು ನೀಡಿದೆ. ಅಲ್ಲದೆ, ಜೆಡಿಎಸ್‌ ಭದ್ರಕೋಟೆಯಲ್ಲಿಯೇ ಕೈಪಡೆ ಮುನ್ನುಗ್ಗುತ್ತಿರುವುದಕ್ಕೆ ಬ್ರೇಕ್‌ ಹಾಕುವ ಅನಿವಾರ್ಯತೆ ಅವರಿಗೆ ಬಂದಿದೆ. ಈ ಕಾರಣಗಳ ಜತೆ ಇನ್ನಿತರ ರಾಜಕೀಯ ಒಳಸುಳಿಗಾಗಿ ದೇವೇಗೌಡರು ಮೈತ್ರಿಗೆ ಒಪ್ಪಿದ್ದಾರೆನ್ನಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರ ಹಂಚಿಕೆ ಸೇರಿದಂತೆ ಬಿಜೆಪಿ ಹೈಕಮಾಂಡ್ ಜತೆ ಮಾತುಕತೆ ನಡೆಯಲಿದೆ. ರಾಜ್ಯ ಬಿಜೆಪಿ ನಾಯಕರು ಕೂಡ ಅಂದಿನ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಜೆಡಿಎಸ್‌ನಿಂದ ಮಾಜಿ ಸಿಎಂ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹಾಗೂ ಹಿರಿಯ ಮುಖಂಡರು ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ಕೈ ಕಟ್ಟಿ ಹಾಕುವುದೇ ಚುನಾವಣೆ ಪೂರ್ವ ಮೈತ್ರಿಯ ಉದ್ದೇಶವಾಗಿದೆ.

ಇದನ್ನೂ ಓದಿ: BJP JDS Alliance : ಬಿಜೆಪಿ – ಜೆಡಿಎಸ್‌ ಮೈತ್ರಿ ಹಿಂದಿದೆ ಜಾತಿ ಲೆಕ್ಕಾಚಾರ; 28 ಕ್ಷೇತ್ರಗಳ ಜಾತಿ ಪ್ರಾಬಲ್ಯ ಏನು?

ಬಿಜೆಪಿಗೆ ಏಕೆ ಮೈತ್ರಿ ಅನಿವಾರ್ಯ?

Exit mobile version