Rajya Sabha Election: ಪಕ್ಷೇತರ ಶಾಸಕರಿಗೆ ಬಿಜೆಪಿ-ಜೆಡಿಎಸ್‌ ಗಾಳ, ದಳ ಶಾಸಕರ ಜತೆ ಕೈ ನಾಯಕರ ಸಂಪರ್ಕ! - Vistara News

ಕರ್ನಾಟಕ

Rajya Sabha Election: ಪಕ್ಷೇತರ ಶಾಸಕರಿಗೆ ಬಿಜೆಪಿ-ಜೆಡಿಎಸ್‌ ಗಾಳ, ದಳ ಶಾಸಕರ ಜತೆ ಕೈ ನಾಯಕರ ಸಂಪರ್ಕ!

Rajya Sabha Election: ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರನ್ನು ಕಾಂಗ್ರೆಸ್ ನಾಯಕರೊಬ್ಬರು ಸಂಪರ್ಕಿಸಿದ್ದಾರೆ. ಅದೇ ರೀತಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರನ್ನು ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಕುಪೇಂದ್ರರೆಡ್ಡಿ ಸಂಪರ್ಕಿಸಿದ್ದಾರೆ.

VISTARANEWS.COM


on

Sharanagouda Kandakur and Darshan Puttannaiah
ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಮತ್ತು ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಅಡ್ಡ ಮತದಾನದ ಭೀತಿ ಹಿನ್ನೆಲೆಯಲ್ಲಿ ಶಾಸಕರನ್ನು ರೇಸಾರ್ಟ್‌ಗೆ ಶಿಫ್ಟ್‌ ಮಾಡಲು ಕೈ ಪಡೆ ಮುಂದಾಗಿದೆ. ಕಾಂಗ್ರೆಸ್‌ ಮಾತ್ರವಲ್ಲದೇ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೂ ಅಡ್ಡ ಮತದಾನ ಭೀತಿ ಕಾಡುತ್ತಿದೆ. ಹೀಗಾಗಿ ಒಂದೆಡೆ ಪಕ್ಷೇತರ ಶಾಸಕರ ಮತ ಸೆಳೆಯಲು ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಯತ್ನಿಸುತ್ತಿದ್ದರೆ, ಮತ್ತೊಂದೆಡೆ ಜೆಡಿಎಸ್‌ ಶಾಸಕರನ್ನು ಸೆಳೆಯಲು ಕಾಂಗ್ರೆಸ್‌ ಮುಂದಾಗಿರುವುದು ಕಂಡುಬಂದಿದೆ.

ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರನ್ನು ಕಾಂಗ್ರೆಸ್ ನಾಯಕರೊಬ್ಬರು ಭೇಟಿಯಾಗಿ, ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲಿಸುವಂತೆ ಕೇಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶರಣಗೌಡ ಕಂದಕೂರು ಖಚಿತಪಡಿಸಿದ್ದಾರೆ.

ಇನ್ನು ಪಕ್ಷೇತರ ಶಾಸಕರಿಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಪೇಂದ್ರರೆಡ್ಡಿ ಆಮಿಷ ಒಡ್ಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಪ್ರತಿಕ್ರಿಯಿಸಿ, ಕುಪೇಂದ್ರರೆಡ್ಡಿ ನನ್ನನ್ನು ಸಂಪರ್ಕಿಸಿದ್ದು ನಿಜ. ಆದರೆ, ಯಾವುದೇ ಆಮಿಷ ಒಡ್ಡಿಲ್ಲ ಎಂದು ತಿಳಿಸಿದ್ದಾರೆ.

ಯಾದಗಿರಿಯಲ್ಲಿ ಶಾಸಕ ಶರಣಗೌಡ ಕಂದಕೂರು ಪ್ರತಿಕ್ರಿಯಿಸಿ, ರಾಜಕೀಯದಲ್ಲಿ ಎಲ್ಲರೂ ಸಂಪರ್ಕ ಮಾಡುವುದು ಸ್ವಾಭಾವಿಕ. ಚುನಾವಣೆ ಬಂದಾಗ ಸಹಜವಾಗಿ ಒಂದು ಪಕ್ಷದವರು ಮತ್ತೊಂದು ಪಕ್ಷದವರನ್ನು ಸಂಪರ್ಕ ಮಾಡುತ್ತಾರೆ. ಸಂಪರ್ಕ ಮಾಡಿದವರ ಹೆಸರು ಬಹಿರಂಗ ಪಡಿಸಲ್ಲ. ಕಾಂಗ್ರೆಸ್‌ನವರು ಸಂಪರ್ಕ ಮಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ | Rajya sabha Election: ಕಾಂಗ್ರೆಸ್‌ನಿಂದ ರೆಸಾರ್ಟ್‌ ಪಾಲಿಟಿಕ್ಸ್‌; ಹೆಚ್ಚುವರಿ ಬಟ್ಟೆ ಜತೆ ಬರುವಂತೆ ಶಾಸಕರಿಗೆ ಡಿಕೆಶಿ ಪತ್ರ

ಅಡ್ಡ ಮತದಾನ ಭೀತಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಡ್ಡ ಮತದಾನ ಆಗಬಹುದು. ಚುನಾವಣೆಯಲ್ಲಿ
ಅಡ್ಡಮತದಾನ ಸಹಜ ಪ್ರಕ್ರಿಯೆ. ಬಹಳ ದಿನಗಳ ನಂತರ ಮಾಜಿ ಸಿಎಂ ಕುಮಾರಸ್ವಾಮಿ ಫೋನ್ ಮಾಡಿದ್ದರು. ಬನ್ನಿ ಎಂದಿದ್ದಾರೆ ಬರುತ್ತೇನೆಂದು ಹೇಳಿದ್ದೇನೆ. ನಿಖಿಲ್ ಕುಮಾರಸ್ವಾಮಿ ಅವರು ನಮ್ಮ ಜತೆ ಸಂಪರ್ಕದಲ್ಲಿದ್ದಾರೆ. ನಾನು ಯಾರಿಗೆ ಬೆಂಬಲಿಸಬೇಕೆಂದು ಇನ್ನೂ ನಿರ್ಧಾರ ಮಾಡಿಲ್ಲ. ನಾನು ಹಿರಿಯರ ಅಭಿಪ್ರಾಯ ಪಡೆದು ಯಾರಿಗೆ ಬೆಂಬಲಿಸಬೇಕೆಂದು ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಅಮಿಷವೊಡ್ಡಿಲ್ಲ, ಮತ ಕೇಳಿದ್ದಾರೆ: ದರ್ಶನ್ ಪುಟ್ಟಣಯ್ಯ

ಈ ಬಗ್ಗೆ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಪ್ರತಿಕ್ರಿಯಿಸಿ, ರಾಜ್ಯಸಭೆ ಚುನಾವಣೆ ಸಂಬಂಧ ನನಗೆ ಯಾರೂ ಬೆದರಿಕೆ ಹಾಕಿಲ್ಲ. ಯಾವುದೇ ಆಮಿಷ ಒಡ್ಡಿಲ್ಲ. ಕುಪೇಂದ್ರರೆಡ್ಡಿ ನನ್ನ ಸಂಪರ್ಕಿಸಿದ್ದು ನಿಜ, ಆದರೆ, ಯಾವುದೇ ಆಮಿಷ ಒಡ್ಡಿಲ್ಲ. ದೂರು ಯಾಕೆ ಕೊಟ್ಟಿದ್ದಾರೊ ಗೊತ್ತಿಲ್ಲ. ಇದೆಲ್ಲಾ ಹೈಡ್ರಾಮವಾಗಿದೆ ಎಂದು ತಿಳಿಸಿದ್ದಾರೆ.

ಕ್ಷೇತ್ರದ ಎರಡು ಚುನಾವಣೆಯಲ್ಲಿ ಅಭ್ಯರ್ಥಿ ಹಾಕದೆ ಕಾಂಗ್ರೆಸ್ ನೆರವು ನೀಡಿದೆ. ಈಗ ಅವರ ಪರವಾಗಿ ನಿಲ್ಲಬೇಕಾಗಿರುವುದು ನನ್ನ ಕರ್ತವ್ಯ. ಕಳೆದ ಲೋಕಸಭೆ ಚುನಾವಣೆಯಲ್ಲಿ ರೈತ ಸಂಘ ಸುಮಲತಾ ಪರವಾಗಿ ಚುನಾವಣೆ ಮಾಡಿತ್ತು. ಈಗಿನ‌ ಚುನಾವಣೆಯಲ್ಲಿ ಏನು ಮಾಡುತ್ತೇವೆ ಅನ್ನೋದು ನಾನು ಹೇಳದೆಯೇ ನಿಮಗೆ ಗೊತ್ತಾಗುತ್ತದೆ. ಆದರೂ ರೈತ ಸಂಘದ ಹಿರಿಯರು ಅದರ ಬಗ್ಗೆ ಮಾತನಾಡುತ್ತಾರೆ. ಅನುದಾನ ವಾಪಸ್ ಹೋಗಿತ್ತು, ಆದರೆ ಅದನ್ನು ನಾವು ವಾಪಸ್ಸು ತಂದಿದ್ದೇವೆ. ಈಗಿನ ಸರ್ಕಾರ ಅನುದಾನ ಇನ್ನು ಕೊಟ್ಟಿಲ್ಲ. ಕೊಡುತ್ತೇವೆ ಎಂದು ಒಪ್ಪಿಕೊಂಡಿದ್ದಾರೆ ಎಂದರು.

ಇದನ್ನೂ ಓದಿ | CM Siddaramaiah: ಜೆಡಿಎಸ್‌ ಕೋಟೆಯಲ್ಲಿ ದೇವೇಗೌಡರ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ

ಎನ್‌ಡಿಎ ಅಭ್ಯರ್ಥಿ ಕುಪ್ಪೇಂದ್ರ ರೆಡ್ಡಿ ವಿರುದ್ಧ ಪ್ರಕರಣ

ಮತ ಹಾಕುವಂತೆ ಪಕ್ಷೇತರ ಶಾಸಕರಾದ ಎಚ್.ಎಸ್. ಪುಟ್ಟಸ್ವಾಮಿಗೌಡ, ಲತಾ ಮಲ್ಲಿಕಾರ್ಜುನ ಹಾಗೂ ದರ್ಶನ್ ಪುಟ್ಟಣ್ಣಯ್ಯಗೆ ಆಮಿಷ ಒಡ್ಡಿರುವ ರಾಜ್ಯಸಭೆ ಎನ್‌ಡಿಎ ಅಭ್ಯರ್ಥಿ ಕುಪ್ಪೇಂದ್ರ ರೆಡ್ಡಿ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ನೀಡಿದ ದೂರಿನ ಮೇರೆಗೆ ವಿಧಾನ ಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

MLC Election: ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ಗೆ ಬೆಂಬಲಿಸಲು ಮಾಜಿ ಸಚಿವ ಎಚ್. ಆಂಜನೇಯ ಮನವಿ

MLC Election: ಅಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಈ ಬಾರಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದ ವೈ.ಎ. ನಾರಾಯಣಸ್ವಾಮಿ ಅವರನ್ನು ಈ ಬಾರಿ ಸೋಲಿಸಲು ಶಿಕ್ಷಕರು ಈಗಾಗಲೇ ಎಲ್ಲಾ ಕಡೆಯಲ್ಲಿ ಶಪಥ ಮಾಡಿದ್ದಾರೆ ಎಂದು ಮಾಜಿ ಸಚಿವ ಎಚ್. ಆಂಜನೇಯ ತಿಳಿಸಿದ್ದಾರೆ.

VISTARANEWS.COM


on

Election campaign meeting for Congress party candidate d t Srinivas in Holalkere
Koo

ಹೊಳಲ್ಕೆರೆ: ಶಿಕ್ಷಕರ ಯಾವುದೇ ಸಮಸ್ಯೆ ಪರಿಹರಿಸುವ ಶಕ್ತಿ ನಮ್ಮ ಸರ್ಕಾರಕ್ಕೆ ಇದೆ ಎಂದು ಮಾಜಿ ಸಚಿವ ಎಚ್.ಆಂಜನೇಯ (MLC Election) ತಿಳಿಸಿದರು.

ಪಟ್ಟಣದ ಸ್ನೇಹ ಕಂಪರ್ಟ್‌ನಲ್ಲಿ ಆಯೋಜಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಪರ ಕೈಗೊಂಡ ಪ್ರಚಾರ ಸಭೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಶಿಕ್ಷಕರ ಯಾವುದೇ ಸಮಸ್ಯೆ ಪರಿಹರಿಸುವ ಶಕ್ತಿ ನಮ್ಮ ಸರ್ಕಾರಕ್ಕೆ ಇದೆ. ಶಿಕ್ಷಕರು ಚುನಾವಣೆಯಲ್ಲಿ ಸರ್ಕಾರಕ್ಕೆ ಬೆಂಬಲಿಸಬೇಕು. ಅದಕ್ಕೆ ಪ್ರತಿಫಲವಾಗಿ ಸೌಲಭ್ಯಗಳನ್ನು ಕೇಳಿ ಪಡೆದುಕೊಳ್ಳಬೇಕು. ಈ ಬಾರಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ ಗೆ ಬೆಂಬಲಿಸಿ, ಗೆಲ್ಲಿಸಿಕೊಂಡು ಬರಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಈ ಬಾರಿ ಶಿಕ್ಷಕರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದ ವೈ.ಎ.ನಾರಾಯಣಸ್ವಾಮಿ ಅವರನ್ನು ಈ ಬಾರಿ ಸೋಲಿಸಲು ಶಿಕ್ಷಕರು ಈಗಾಗಲೇ ಎಲ್ಲಾ ಕಡೆಯಲ್ಲಿ ಶಪಥ ಮಾಡಿದ್ದಾರೆ ಎಂದರು. ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಮಾತನಾಡಿದರು.

ಇದನ್ನೂ ಓದಿ: Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹನುಮಂತಪ್ಪ, ಮಾಜಿ ಸಂಸದ ಬಿ.ಎಸ್. ಚಂದ್ರಪ್ಪ, ಹನುಮಲಿ ಷಣ್ಮುಖಪ್ಪ, ಜಿಲ್ಲಾಧ್ಯಕ್ಷ ತಾಜಾಪೀರ್, ಜಿ.ಎಸ್. ಮಂಜುನಾಥ, ಎ. ಚಿತ್ತಪ್ಪ, ತಿರುಮಲಾಪುರದ ವಿಜಿಕುಮಾರ್, ಹಳೇಹಳ್ಳಿ ವೀರಭದ್ರಪ್ಪ, ಉಗಣೆ ಕಟ್ಟೆ ವೆಂಕಟೇಶ್, ಜಿ.ಪಂ. ಸದಸ್ಯರಾದ ಬಿ. ಗಂಗಾಧರ, ಡಿ.ಕೆ. ಶಿವಮೂರ್ತಿ, ಎಂ.ಜಿ. ಲೋಹಿತ್ ಕುಮಾರ್, ಎಸ್.ಜಿ. ರಂಗಸ್ವಾಮಿ, ನರಸಿಂಹಮೂರ್ತಿ, ಕೃಷ್ಣಮೂರ್ತಿ, ಪುರಸಭಾ ಸದಸ್ಯರಾದ ಸೈಯದ್ ಸಜೀಲ್, ಕೆ.ಸಿ. ರಮೇಶ್ ಸೇರಿದಂತೆ ಅನೇಕ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ದಕ್ಷಿಣ ಕನ್ನಡ

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾ ಅರೆಸ್ಟ್‌ ಆಗ್ತಾರಾ? ಮನೆ ಮುಂದೆ ಹೈಡ್ರಾಮಾ!

Harish Poonja: ಅಕ್ರಮ ಕಲ್ಲು ಗಣಿಗಾರಿಕೆ (Illegal quarrying) ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಸಂಬಂಧ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲದಲ್ಲಿರುವ ಶಾಸಕ ಹರೀಶ್ ಪೂಂಜಾ ಮನೆಗೆ ಬುಧವಾರ (ಮೇ 22) ಮಧ್ಯಾಹ್ನದ ವೇಳೆಗೆ ಪೊಲೀಸರು ಆಗಮಿಸಿದ್ದರು. ಸರ್ಕಲ್ ಇನ್ಸ್‌ಪೆಕ್ಟರ್‌ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ಆಗಮಿಸಿದೆ. ಆದರೆ, ನೋಟಿಸ್‌ ನೀಡದೆ ಬಂಧನಕ್ಕೆ ಮುಂದಾಗಲಾಗಿದೆ ಎಂದು ಶಾಸಕರ ಪರ ವಕೀಲರು ಆರೋಪ ಮಾಡಿದ್ದಾರೆ. ಇದು ಕಾನೂನು ಪ್ರಕಾರ ಅಪರಾಧ ಎಂದು ಹೇಳಿದ್ದಾರೆ.

VISTARANEWS.COM


on

Harish Poonja case Will MLA Harish Poonja be arrested in taunting case with police
Koo

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿರುವ ಬೆನ್ನಲ್ಲೇ ಅವರನ್ನು ಅರೆಸ್ಟ್‌ ಮಾಡಲು ಮನೆಗೆ ಪೊಲೀಸರು ಬಂದಿದ್ದಾರೆ. ಆದರೆ, ತಮ್ಮ ರೂಮಿನಲ್ಲೇ ಇರುವ ಹರೀಶ್‌ ಪೂಂಜಾ ಅವರು ಇನ್ನೂ ಹೊರಗೆ ಬಂದಿಲ್ಲ. ಈ ನಡುವೆ ಸ್ಥಳಕ್ಕೆ ಲಾಯರ್‌ಗಳು, ಬಿಜೆಪಿ ಕಾರ್ಯಕರ್ತರು ಬಂದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಹೈಡ್ರಾಮಾಕ್ಕೆ ಕಾರಣವಾಯಿತು.

ಅಕ್ರಮ ಕಲ್ಲು ಗಣಿಗಾರಿಕೆ (Illegal quarrying) ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಸಂಬಂಧ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲದಲ್ಲಿರುವ ಶಾಸಕ ಹರೀಶ್ ಪೂಂಜಾ ಮನೆಗೆ ಬುಧವಾರ (ಮೇ 22) ಮಧ್ಯಾಹ್ನದ ವೇಳೆಗೆ ಪೊಲೀಸರು ಆಗಮಿಸಿದ್ದರು. ಸರ್ಕಲ್ ಇನ್ಸ್‌ಪೆಕ್ಟರ್‌ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ಆಗಮಿಸಿತ್ತು.

Harish Poonja case Belthangady BJP MLA Harish Poonja arrested for taunting police

ಶಾಸಕರ ಮನೆ ಮುಂದೆ ಸೇರಿದ ನೂರಾರು ಬಿಜೆಪಿ ಕಾರ್ಯಕರ್ತರು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮನೆಗೆ ಪೊಲೀಸರು ಆಗಮಿಸಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಧಾವಿಸಿದ್ದಾರೆ. ಅಲ್ಲದೆ, ಇನ್ನೂ ಹಲವರು ಅತ್ತ ಆಗಮಿಸಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಮನೆ ಮುಂದೆ ಹೈಡ್ರಾಮಾ

ಹರೀಶ್ ಪೂಂಜ ಬಂಧನಕ್ಕೆ ಪೊಲೀಸರು ಬಂದಿದ್ದರಿಂದ ಗರ್ಡಡಿ ಹರೀಶ್ ಪೂಂಜ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿದೆ. ಪೊಲೀಸರ ಜತೆ ವಕೀಲರ ತಂಡದಿಂದ ಮಾತುಕತೆ ನಡೆಸಲಾಯಿತು. ಈ ವೇಳೆ ನಿರಂತರವಾಗಿ ಚರ್ಚೆ ನಡೆಸಲಾಯಿತು. ಮನೆಯ ಹೊರಗಡೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದರು. ಅಲ್ಲದೆ, ಪೊಲೀಸರು ಹಾಗು ಕಾರ್ಯಕರ್ತರ ನಡುವಿನ ಹೈ ಡ್ರಾಮಾಕ್ಕೆ ಪೂಂಜ ನಿವಾಸವು ಸಾಕ್ಷಿಯಾಯಿತು. ಇನ್ನು ಪೂಂಜಾ ನಿವಾಸದತ್ತ ಸಂಸದ ನಳಿನ್ ಕುಮಾರ್ ಕಟೀಲ್, ಬ್ರಿಜೇಶ್ ಚೌಟ ದೌಡಾಯಿಸಿದರು.

ನೋಟಿಸ್ ಇಲ್ಲದೇ ಅರೆಸ್ಟ್ ಮಾಡುವುದು ಅಪರಾಧ

ಈ ವೇಳೆ ಶಾಸಕ ಹರೀಶ್ ಪೂಂಜಾ ಪರ ವಕೀಲ ಶಂಭು ಶಂಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಿಚಾರಣೆಗೆ ಕರೆದುಕೊಂಡು ಹೋಗಲು ಬಂದಿದ್ದಾಗಿ ಪೊಲೀಸರು ಹೇಳಿದ್ದಾರೆ. ನಿಯಮ ಪ್ರಕಾರ ಆ ಕ್ರಮ ಇಲ್ಲ. ಪೊಲೀಸರು ಮನೆಗೆ ಒಳಗೆ ಕುಳಿತಿದ್ದಾರೆ. ನೋಟಿಸ್ ಈವರೆಗೆ ಕೊಟ್ಟಿಲ್ಲ. ಶಾಸಕರು ಅವರ ಕೆಲಸ ಮಾಡದ ಹಾಗೆ ಮಾಡಿದ್ದಾರೆ. ಮನೆಯಲ್ಲಿಯೇ ಕೂಡಿ ಹಾಕಿದ ಹಾಗೆ ಮಾಡಿದ್ದಾರೆ. ಒತ್ತಡಕ್ಕೆ ಮಣಿದು ಪೊಲೀಸರು ಇಲ್ಲಿಯೇ ಕುಳಿತಿದ್ದಾರೆ. ನೋಟಿಸ್ ಇಲ್ಲದೆ ಅರೆಸ್ಟ್ ಮಾಡುವುದು ಅಪರಾಧ ಎಂದು ಹೇಳಿದ್ದಾರೆ.

ಯಾವುದೇ ನೋಟಿಸ್ ನೀಡದೆ, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆಯುವಂತಿಲ್ಲ. ಅದು ಕಾನೂನು ಬಾಹಿರವಾಗುತ್ತದೆ. ಅಲ್ಲದೆ, ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಅದರಲ್ಲಿ ಕೆಲವು ಸೆಕ್ಷನ್ ನಾನ್ ಬೇಲಬಲ್ ಸೆಕ್ಷನ್‌ಗಳಿವೆ. ಸುಪ್ರೀಂ ಕೋರ್ಟ್‌ನ ಈ ಹಿಂದಿನ ಆದೇಶದ ಪ್ರಕಾರ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣಗಳಲ್ಲಿ ಬಂಧನ ಅನಿವಾರ್ಯವಲ್ಲ. ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಬಂಧನ ಮಾಡಲು ಅವಕಾಶವಿರುತ್ತದೆ. ಆದರೆ, ಎಲ್ಲ ಪ್ರಕರಣಗಳಲ್ಲೂ ಬಂಧನ ಅಗತ್ಯವಿಲ್ಲ. ವಿಚಾರಣೆಗೆ ಕರೆಯಲು ಪೇದೆಯ ಮೂಲಕ ನೋಟಿಸ್ ನೀಡಬಹುದು. ಆದರೆ ಹಿರಿಯ ಅಧಿಕಾರಿಗಳು ಬರುವ ಅಗತ್ಯತೆ ಏನಿದೆ? ಇದು ಶಾಸಕ ಪೂಂಜಾ ವಿರುದ್ಧ ಟಾರ್ಗೆಟ್ ಮಾಡಿ ಬಂಧಿಸುವ ಹುನ್ನಾರ ಆಗಿದೆ. ನೋಟಿಸ್ ನೀಡಲು ಕೇಳಿದ್ದೇವೆ. ಈ ವರೆಗೂ ನೋಟಿಸ್ ನೀಡಿಲ್ಲ ಎಂದು ವಕೀಲ ಶಂಭು ಶಂಕರ್ ಆಪಾದಿಸಿದರು.

Harish Poonja case Belthangady BJP MLA Harish Poonja arrested for taunting police

ಏನಿದು ಕೇಸ್‌?

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬುವವರನ್ನು ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ | Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

Continue Reading

ಕ್ರೈಂ

Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

Prajwal Revanna Case: ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪ್ರಜ್ವಲ್ ರೇವಣ್ಣ ಅವರಿಂದ 400 ಮಹಿಳೆಯರ ಮೇಲೆ ಮಾಸ್ ರೇಪ್ ಆಗಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ಕುಪಿತಗೊಂಡಿರುವ ಜೆಡಿಎಸ್‌ ನಾಯಕರು ಈಗ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದೆ. ರಾಹುಲ್‌ ಗಾಂಧಿಗೆ ಎಸ್‌ಐಟಿ ಸಮನ್ಸ್ ನೀಡಬೇಕು ಎಂದು ಆಗ್ರಹಿಸಲಾಗಿದೆ.

VISTARANEWS.COM


on

Prajwal Revanna Case JDS files complaint against Rahul Gandhi for Prajwal accused of mass rape of 400 women
Koo

ಬೆಂಗಳೂರು: ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ (Prajwal Revanna Case) ಮಾಸ್ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಗಳ ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಜೆಡಿಎಸ್ (JDS Karnataka) ದೂರು ನೀಡಿದೆ. ಈ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಪಕ್ಷ ಒತ್ತಾಯ ಮಾಡಿದೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಅವರು ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾಸ್ ರೇಪ್ ಬಗ್ಗೆ ಹೇಳಿದ್ದರು. ಇದೇ ಮಾಹಿತಿಯನ್ನು ಮಾಧ್ಯಮಗಳ ಮುಂದೆಯೂ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಹುಲ್‌ ಗಾಂಧಿಗೆ ಎಸ್‌ಐಟಿ ಸಮನ್ಸ್ ಜಾರಿ ಮಾಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ಮಂಜೇಗೌಡ, ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ. ರಂಗನಾಥ್, ಬೆಂಗಳೂರು ನಗರದ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ರಮೇಶ್ ಅವರಿದ್ದ ನಿಯೋಗ ಬುಧವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದರು.

ದೂರಿನಲ್ಲಿ ಇನ್ನೇನು ಇದೆ?

ಎಚ್.ಎಂ. ರಮೇಶ್ ಗೌಡ ಸಹಿ ಹಾಕಿರುವ ದೂರಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಅನೇಕ ಗಂಭೀರ, ಗುರುತರ ಆರೋಪಗಳನ್ನು ಮಾಡಲಾಗಿದೆ.

ಕಾಂಗ್ರೆಸ್ ನಾಯಕ, ವಯನಾಡು ಲೋಕಸಭಾ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರು, ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಮಾಡಿ ಅದನ್ನು ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ, ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಇದೇ ಮೇ 2ರಂದು ಹೇಳಿಕೆ ನೀಡಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆ, ಭಾಷಣ ಎಲ್ಲವೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಮುದ್ರಣ ಮಾಧ್ಯಮದಲ್ಲಿಯೂ ವರದಿಯಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಅದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸಿದೆ.

400 ಮಹಿಳೆಯರ ಮಾಹಿತಿ ರಾಹುಲ್‌ ಗಾಂಧಿಗೆ ಇದೆ!

ನೊಂದ ಮಹಿಳೆಯರ ನ್ಯಾಯ ಕೊಡಿಸುವುದನ್ನು ಕಡೆಗಣಿಸಿ ಒಬ್ಬ ಜನಪ್ರತಿನಿಧಿಯಾಗಿ ರಾಹುಲ್ ಗಾಂಧಿ ಅವರು ಇಂಥ ಹೇಳಿಕೆ ನೀಡಿರುವುದು ಕಾನೂನು ಉಲ್ಲಂಘನೆ ಆಗಿರುತ್ತದೆ. ನಾನೂರು ಮಹಿಳೆಯರ ಮೇಲೆ ಮಾಸ್ ರೇಪ್ ಆಗಿರುವ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಎಲ್ಲ ಮಾಹಿತಿ ಇದೆ. ಜತೆಗೆ ಅತ್ಯಾಚಾರಕ್ಕೆ ತುತ್ತಾದ ಅಷ್ಟೂ ಮಹಿಳೆಯರ ಮಾಹಿತಿ ಅವರಲ್ಲಿ ಇದೆ ಎನ್ನುವುದು ಅವರದೇ ಹೇಳಿಕೆಯಿಂದ ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 1860ರ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಲ್ಲಿ ಜೆಡಿಎಸ್ ಪಕ್ಷ ಒತ್ತಾಯ ಮಾಡಿದೆ.

ರಾಜ್ಯ ಸರ್ಕಾರವೂ ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆ ಮಾಡಿದ್ದು, ಕೂಡಲೇ ಈ ತಂಡವು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿ ಇಲ್ಲಿಗೆ ಕರೆಸಬೇಕು. ನಾನೂರು ಮಹಿಳೆಯರು ಎಂದು ತಪ್ಪು ಮಾಹಿತಿ ನೀಡಿ, ಸಮಾಜಕ್ಕೆ ಕೆಟ್ಟ ಸಂದೇಶ ಹೋಗುವಂತೆ ಮಾಡಿದ ಅವರ ವಿರುದ್ಧ ಕೂಡಲೇ ಸೆಕ್ಷನ್ 202, 1860ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಜೆಡಿಎಸ್ ಆಗ್ರಹಪಡಿಸಿದೆ.

ಇದನ್ನೂ ಓದಿ: Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

ಅಲ್ಲದೆ, ಪೆನ್ ಡ್ರೈವ್ ಹಂಚಿಕೆಯ ಬಗ್ಗೆಯೂ ಜೆಡಿಎಸ್ ಡಿಜಿ ಅವರ ಜತೆ ಮಾತುಕತೆ ನಡೆಸಿತು. ಎಸ್‌ಐಟಿ ಏಕಪಕ್ಷೀಯವಾಗಿ ತನಿಖೆ ನಡೆಸುತ್ತಿದೆ. ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ವಿನಾಕಾರಣ ಕಿರುಕುಳ ನೀಡುತ್ತಿದೆ. ಆದರೆ, ಪೆನ್ ಡ್ರೈವ್ ಹಂಚಿಕೆ ಆರೋಪಿಗಳ ಬಗ್ಗೆ ಮೌನ ವಹಿಸಿದೆ. ನ್ಯಾಯಾಲಯ ಜಾಮೀನು ನಿರಾಕರಿಸಿದ್ದರೂ ಈವರೆಗೆ ಅವರನ್ನು ಎಸ್ ಐಟಿ ಬಂಧನ ಮಾಡಿಲ್ಲ ಎಂದು ನಿಯೋಗ ದೂರಿತು.

Continue Reading

ಕ್ರೈಂ

Gas Leak deaths: ಮುಚ್ಚಿದ ಮನೆಯಲ್ಲಿ ಗ್ಯಾಸ್‌ ಸೋರಿಕೆ, ನಿದ್ರೆಯಲ್ಲೇ ಚಿರನಿದ್ರೆಗೆ ಜಾರಿದ 4 ಮಂದಿ

Gas Leak deaths: ಮೃತಪಟ್ಟ ಕುಮಾರಸ್ವಾಮಿ ಕುಟುಂಬ ಎರಗನಹಳ್ಳಿ ಗ್ರಾಮದಲ್ಲಿ ಕಳೆದ ಮೂವತ್ತು ವರ್ಷಗಳಿಂದ ವಾಸವಿದೆ. 10×30 ಅಡಿ ಅಳತೆಯ ಪುಟ್ಟ ಮನೆಯಲ್ಲಿ ನಾಲ್ವರ ಕುಟುಂಬ ವಾಸವಿತ್ತು. ಮನೆಯ ಹಿಂಭಾಗ ಹಾಗೂ ಮುಂಭಾಗ ಮಾತ್ರ ಕಿಟಕಿ ವ್ಯವಸ್ಥೆಯಿದೆ. ಮನೆಯ ಯಜಮಾನ ಕುಮಾರಸ್ವಾಮಿ ಇಸ್ತ್ರೀ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

VISTARANEWS.COM


on

gas leak deaths mysore
Koo

ಮೈಸೂರು: ಮನೆಯೊಳಗೆ ಅಡುಗೆ ಅನಿಲ ಸೋರಿಕೆಯಾದ (Gas leakage) ಪರಿಣಾಮ ಒಂದೇ ಕುಟುಂಬದ ನಾಲ್ವರು ರಾತ್ರಿ ನಿದ್ರೆಯಲ್ಲೇ ಪ್ರಾಣ (Gas Leak deaths) ಬಿಟ್ಟಿದ್ದಾರೆ. ಕಿಟಕಿ ಬಾಗಿಲುಗಳು ಭದ್ರವಾಗಿ ಮುಚ್ಚಿದ್ದರಿಂದ, ಅಡುಗೆ ಅನಿಲ (LPG) ಹೊರಹೋಗಲು ಯಾವುದೇ ಕಿಂಡಿಯಿಲ್ಲದೆ ಬಂದ್‌ ಆಗಿದ್ದು, ನಾಲ್ವರ ಜೀವ ತೆಗೆದಿದೆ.

ಮೃತಪಟ್ಟ ನಾಲ್ವರು ಚಿಕ್ಕಮಗಳೂರು ಜಿಲ್ಲೆಯ ಸಕ್ಕರಾಯ ಪಟ್ಟಣ ಗ್ರಾಮದವರು. ಕುಮಾರಸ್ವಾಮಿ (45), ಮಂಜುಳಾ (39), ಮಕ್ಕಳಾದ ಅರ್ಚನಾ (19) ಸ್ವಾತಿ (17) ಸಾವನ್ನಪ್ಪಿದ್ದಾರೆ. ಸೋಮವಾರ ಕಡೂರಿನಲ್ಲಿ ಸಂಬಂಧಿಕರ ಮದುವೆ ಮುಗಿಸಿ ವಾಪಸ್ ಮನೆಗೆ ಬಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದರು. ಬುಧವಾರ ಬೆಳಗಿನ ಜಾವ ಆದರೂ ಎದ್ದಿರಲಿಲ್ಲ. ಅನುಮಾನಗೊಂಡ ಸ್ಥಳೀಯರು ಬಾಗಿಲು ಬಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ನಾಲ್ವರ ಬಲಿ ಪಡೆಯಿತಾ ಗಾಳಿ ಬೆಳಕು ಇಲ್ಲದ ಮನೆ?

ಮೃತಪಟ್ಟ ಕುಮಾರಸ್ವಾಮಿ ಕುಟುಂಬ ಎರಗನಹಳ್ಳಿ ಗ್ರಾಮದಲ್ಲಿ ಕಳೆದ ಮೂವತ್ತು ವರ್ಷಗಳಿಂದ ವಾಸವಿದೆ. 10×30 ಅಡಿ ಅಳತೆಯ ಪುಟ್ಟ ಮನೆಯಲ್ಲಿ ನಾಲ್ವರ ಕುಟುಂಬ ವಾಸವಿತ್ತು. ಮನೆಯ ಹಿಂಭಾಗ ಹಾಗೂ ಮುಂಭಾಗ ಮಾತ್ರ ಕಿಟಕಿ ವ್ಯವಸ್ಥೆಯಿದೆ. ಮನೆಯ ಯಜಮಾನ ಕುಮಾರಸ್ವಾಮಿ ಇಸ್ತ್ರೀ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಬಟ್ಟೆ ಇಸ್ತ್ರಿ ಪೆಟ್ಟಿಗೆಗೆ ಗ್ಯಾಸ್ ಬಳಸುತ್ತಿದ್ದರು. ಇದಕ್ಕಾಗಿ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಇಟ್ಟುಕೊಂಡಿದ್ದರು. ಇದರಿಂದಲೇ ಅನಿಲ ಸೋರಿಕೆಯಾಗಿದೆ.

ಸೋಮವಾರ ರಾತ್ರಿ ಮನೆಗೆ ಬಂದವರು ಎರಡು ಕಿಟಕಿ ಬಂದ್ ಮಾಡಿಕೊಂಡು ಮಲಗಿದ್ದರು. ರೂಂನಲ್ಲಿ ಗಂಡ ಹೆಂಡತಿ, ಹಾಲ್‌ನಲ್ಲಿ ಮಕ್ಕಳಿಬ್ಬರು ಮಲಗಿದ್ದರು. ಈ ವೇಳೆ ಸೋರಿಕೆಯಾದ ಅನಿಲ ಸೇವಿಸಿ ಎಲ್ಲರೂ ಮೃತಪಟ್ಟಿದ್ದಾರೆ. ಅವರಲ್ಲಿ ಒಬ್ಬ ಮಗಳಿಂದ ಬಾಗಿಲು ತೆಗೆಯುವ ವಿಫಲ ಯತ್ನ ನಡೆದಿದೆ. ಎಲ್ಲರ ಕಿವಿ ಮತ್ತು ಮೂಗು ಬಾಯಲ್ಲಿ ರಕ್ತ ಸೋರಿದೆ. ಅಂತಿಮವಾಗಿ ಕುಟುಂಬ ದುರಂತ ಅಂತ್ಯ ಕಂಡಿದೆ.

” ಮೊಬೈಲ್‌ ಕಾಲ್‌ ರಿಸೀವ್‌ ಮಾಡದ್ದರಿಂದ ಅನುಮಾನಪಟ್ಟ ಸಂಬಂಧಿಕರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಿಯರು ಪರಿಶೀಲಿಸಿ ನಮಗೆ ಮಾಹಿತಿ ನೀಡಿದರು. ನಾವು ಬಂದಾಗ ಗ್ಯಾಸ್ ವಾಸನೆ ಬರುತ್ತಿತ್ತು. ಮನೆಯ ಹಿಂದಿನ ಕಿಟಕಿ ತೆರೆದು ನೋಡಿದಾಗಲೂ ಸ್ಮೆಲ್ ಬರ್ತಿತ್ತು. ಫೈರ್ ಡಿಪಾರ್ಟ್ಮೆಂಟ್, ಎಫ್ಎಸ್ಐಲ್ ಬಂದು ಡೋರ್ ಒಪನ್ ಮಾಡಿದೆವು. ಮನೆಯಲ್ಲಿ ಮೂರು ಸಿಲಿಂಡರ್ ಇದೆ. ಗ್ಯಾಸ್‌ ಬಳಸಿ ಐರನ್ ಮಾಡ್ತಿದ್ದರು. ಮೇಲ್ನೋಟಕ್ಕೆ ಒಂದು ಸಿಲಿಂಡರ್ ಮಾತ್ರ ಲೀಕ್ ಆಗಿದೆ. ಉಳಿದ ಎರಡು ಸಿಲಿಂಡರ್ ಖಾಲಿ ಇತ್ತು” ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ.

ಇದನ್ನೂ ಓದಿ: Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Continue Reading
Advertisement
IPL 2024
ಕ್ರೀಡೆ8 mins ago

IPL 2024 : ರಮೇಶ್​ ಪವಾರ್​​ ಸೃಷ್ಟಿಸಿದ್ದ 16 ವರ್ಷಗಳ ಹಿಂದಿ ದಾಖಲೆ ಮುರಿದ ಎಸ್​ಆರ್​​ಎಚ್​​ ನಾಯಕ

Virat kohli
ಕ್ರೀಡೆ34 mins ago

Virat kohli : ವಿಶ್ವ ಕಪ್​ನಲ್ಲಿಯೂ ಕೊಹ್ಲಿಯೇ ಸ್ಟಾರ್​​; ಭವಿಷ್ಯ ನುಡಿದ ರಿಕಿ ಪಾಂಟಿಂಗ್​

Election campaign meeting for Congress party candidate d t Srinivas in Holalkere
ರಾಜಕೀಯ39 mins ago

MLC Election: ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ಗೆ ಬೆಂಬಲಿಸಲು ಮಾಜಿ ಸಚಿವ ಎಚ್. ಆಂಜನೇಯ ಮನವಿ

Harish Poonja case Will MLA Harish Poonja be arrested in taunting case with police
ದಕ್ಷಿಣ ಕನ್ನಡ40 mins ago

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾ ಅರೆಸ್ಟ್‌ ಆಗ್ತಾರಾ? ಮನೆ ಮುಂದೆ ಹೈಡ್ರಾಮಾ!

Viral News
ವೈರಲ್ ನ್ಯೂಸ್45 mins ago

Viral News: ನ್ಯಾಯ ಕೊಡಿಸಿ ಎಂದು ಠಾಣೆ ಎದುರೇ ಎಸ್‌ಐ ಪತ್ನಿ ಅಹೋರಾತ್ರಿ ಧರಣಿ; ಏನಿದು ಕೇಸ್‌?

Poonam Pandey instagram id in a public place
ಸಿನಿಮಾ50 mins ago

Poonam Pandey: ಪೂನಂ ಪಾಂಡೆಗೆ ಮಕ್ಕಳಿಂದ ಚಿಕ್ಕ ರಿಕ್ವೆಸ್ಟ್‌; ಅಮ್ಮ ಹೊಡಿತಾರೆ ಎಂದ ಹಾಟ್‌ ಬೆಡಗಿ!

Virat kohli
ಪ್ರಮುಖ ಸುದ್ದಿ57 mins ago

Virat kohli : ವಿರಾಟ್​ ಕೊಹ್ಲಿಗೆ ಪ್ರಾಣ ಬೆದರಿಕೆ; ಅಭ್ಯಾಸ ಬಂದ್​, ಪಂದ್ಯದ ಗತಿ ಏನು?

UPSC
ಶಿಕ್ಷಣ57 mins ago

UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

PM Narendra Modi
ದೇಶ1 hour ago

PM Narendra Modi: “ನನ್ನನ್ನು ದೇವರೇ ಈ ಭೂಮಿಗೆ ಕಳಿಸಿದ್ದಾನೆ..”; ಭಾರೀ ಸದ್ದು ಮಾಡ್ತಿದೆ ಮೋದಿಯ ಈ ವಿಡಿಯೊ

Prajwal Revanna Case JDS files complaint against Rahul Gandhi for Prajwal accused of mass rape of 400 women
ಕ್ರೈಂ1 hour ago

Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ10 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌