Site icon Vistara News

BJP Karnataka: ರಾಜ್ಯಾದ್ಯಂತ ಬಿಜೆಪಿ ಆಂತರಿಕ ಚುನಾವಣೆ: ತಲಾ ಮೂವರು ಅಭ್ಯರ್ಥಿಗಳ ಹೆಸರು ಸೂಚಿಸಿದ ಪದಾಧಿಕಾರಿಗಳು

bjp karnataka conducting internal elections across state

#image_title

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಚುರುಕುಗೊಳಿಸಿರುವ ಬಿಜೆಪಿ ರಾಜ್ಯಾದ್ಯಂತ ಕಾರ್ಯಕರ್ತರಿಂದ ಆಂತರಿಕ ಚುನಾವಣೆ ನಡೆಸುತ್ತಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಕೇಂದ್ರ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಮತದಾನ ಮೂಲಕ ಅಭಿಪ್ರಾಯ ಸಂಗ್ರಹ ನಡೆಯಿತು. ರಾಜಾಜಿನಗರ, ಗಾಂಧಿ ನಗರ, ಚಾಮರಾಜಪೇಟೆ, ಶಿವಾಜಿನಗರ, ಶಾಂತಿನಗರ, ಸರ್ವಜ್ಞ ನಗರ, ಸಿ. ವಿ. ರಾಮನ್ ನಗರ, ಮಹದೇವಪುರ ಕ್ಷೇತ್ರಗಳ ಕುರಿತು ಪದಾಧಿಕಾರಿಗಳು ಅಭಿಪ್ರಾಯ ನೀಡುತ್ತಿದ್ದಾರೆ.

ಬೆಳಗಾವಿ ಧರ್ಮನಾಥ ಭವನದಲ್ಲಿ ಬೆಳಗಾವಿ ಬಿಜೆಪಿ ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲಾ ಚುನಾವಣಾ ಸಿದ್ದತಾ ಸಭೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ನಡೆಯಿತು. ಬಳ್ಳಾರಿಯಲ್ಲಿ ಬಿಜೆಪಿ ರಾಜಾಧ್ಯಕ್ಷ ನಳೀನಕುಮಾರ್ ಕಟೀಲ್ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕಟೀಲ್‌, ಇಡೀ ರಾಜ್ಯದಲ್ಲಿ ಜಿಲ್ಲೆಗಳಿಗೆ ತಂಡಗಳನ್ನ ಕಳುಹಿಸಿ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದೇವೆ. ಅಭಿಪ್ರಾಯ ಸಂಗ್ರಹದ ನಂತರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಒಂದು ವಾರದೊಳಗೆ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದರು.

ಇದನ್ನೂ ಓದಿ: ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ

ಹಾವೇರಿಯಲ್ಲಿ ಸಚಿವ ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಚುನಾವಣೆ ನಡೆದಿದೆ. ರಾಜ್ಯದ ಎಲ್ಲ 36 ಸಂಘಟನಾ ಜಿಲ್ಲೆಗಳಲ್ಲೂ ಚುನಾವಣೆ ನಡೆದಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಇಂತಹ ಪ್ರಕ್ರಿಯೆ ನಡೆಸುತ್ತಿದೆ. ಜಿಲ್ಲಾ ಕೇಂದ್ರ ದಲ್ಲಿ ಪ್ರಕ್ರಿಯೆ ನಡೆದರೂ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಪ್ರತ್ಯೇಕ ಅಭಿಪ್ರಾಯ ಸಂಗ್ರಹ ನಡೆದಿದೆ.

ಪದಾದಿಕಾರಿಗಳು ಮೂವರು ಅಭ್ಯರ್ಥಿಗಳ ಹೆಸರನ್ನ ಬರೆದು ಮತಪೆಟ್ಟಿಗೆಯಲ್ಲಿ ಹಾಕಿದ್ದಾರೆ. ಈ ಕಾರ್ಯನಿರ್ವಹಣೆ ಮೇಲ್ವಿಚಾರಣೆಗೆ ವೀಕ್ಷಕರ ನೇಮಕ ಮಾಡಲಾಗಿದೆ. ಅಭಿಪ್ರಾಯ ಸಂಗ್ರಹ ಮುಗಿದ ಬಳಿಕ, ಅದನ್ನ ವೀಕ್ಷಕರು ರಾಜ್ಯ ಘಟಕಕ್ಕೆ ಸಲ್ಲಿಸಲಿದ್ದಾರೆ. ಇದರ ಆಧಾರದ ಮೇಲೆ ಏಪ್ರಿಲ್ 2 ಅಥವಾ 3 ರಂದು ರಾಜ್ಯ ಪಧಾದಿಕಾರಿಗಳ ಸಭೆ ನಡೆಯಲಿದೆ. ಸಭೆ ಬಳಿಕ ಈ ಅಭಿಪ್ರಾಯವನ್ನ ಕೇಂದ್ರ ಸಂಸದೀಯ ಮಂಡಳಿಗೆ ರವಾನಿಸಲಾಗುತ್ತೆ.

ಬ್ಯಾಲೇಟ್ ಪೇಪರ್ ಮೂಲಕ ಸಂಗ್ರಹವಾಗುವ ಅಭ್ಯರ್ಥಿಗಳ ಹೆಸರನ್ನು ರಾಜ್ಯ ಪದಾಧಿಕಾರಿಗಳು ಶನಿವಾರ ಶಾರ್ಟ್ ಲಿಸ್ಟ್ ಮಾಡಲಿದ್ದಾರೆ. ಬೆಂಗಳೂರಿನ ಹೊರ‌ ಹೊಲಯದ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಲಿರುವ ಸಭೆಗಳಲ್ಲಿ ಅಭ್ಯರ್ಥಿಗಳ ಶಿಫಾರಸನ್ನು ಕೇಂದ್ರಕ್ಕೆ ರವಾನೆ ಮಾಡಲಾಗುತ್ತದೆ.

ಇದನ್ನೂ ಓದಿ: ರಾಮ ರಾಮ! ಶ್ರೀರಾಮನ ಕಾಲಿನ ಮೇಲೆ ನಿಂತು ಪ್ರತಿಮೆಗೆ ಹೂವಿನ ಹಾರ ಹಾಕಿದ ಬಸವಕಲ್ಯಾಣ ಬಿಜೆಪಿ ಶಾಸಕ!

Exit mobile version