Site icon Vistara News

BJP Karnataka: ಕಾಂಗ್ರೆಸ್‌ ಮಾಜಿ ಶಾಸಕ ಎಸ್.‌ ಬಾಲರಾಜು ಬಿಜೆಪಿ ಸೇರ್ಪಡೆ: 140 ಸ್ಥಾನ ನಿಶ್ಚಿತ ಎಂದ ಬಿ.ಎಸ್‌. ಯಡಿಯೂರಪ್ಪ

bjp karnataka leader bs yeiyurappa says party will win more than 140 seats

#image_title

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎಸ್. ಬಾಲರಾಜು ಹಾಗೂ ಅವರ ಬೆಂಬಲಿಗರು ಇಂದು ಬಿಜೆಪಿ ಸೇರ್ಪಡೆಯಾದರು. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಸಮ್ಮುಖದಲ್ಲಿ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಬಾಲರಾಜು ಅವರ ಸೇರ್ಪಡೆಯಿಂದ ಚಾಮರಾಜನಗರದಲ್ಲಿ ಬಿಜೆಪಿಗೆ ಬಲ ಬಂದಿದೆ. 1999ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಾಲರಾಜು ಅವರು ಕೇವಲ ನಾಲ್ಕು ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. 2004ರಲ್ಲಿ ಪಕ್ಷೇತರರಾಗಿ ಗೆಲುವು ಕಂಡಿದ್ದರು ಎಂದರು.

ಎಸ್. ಬಾಲರಾಜು ಮಾತನಾಡಿ, ಅತ್ಯಂತ ಜನಪ್ರಿಯ ಪ್ರಧಾನ ನರೇಂದ್ರಮೋದಿ ಅವರು ಭಾರತವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತಿದ್ದಾರೆ. ಬಿಜೆಪಿಯಿಂದ ಈ ಹಿಂದೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಕಡಿಮೆ ಅಂತರದಿಂದ ಪರಾಭಗೊಂಡಿದ್ದ ನನಗೆ ಇದೀಗ ಮತ್ತೆ ಪಕ್ಷಕ್ಕೆ ಕೆಲಸ ಮಾಡಲು ಹೆಮ್ಮೆ ಎನಿಸುತ್ತಿದೆ. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಸಂಪೂರ್ಣ ನೆಲಸಮವಾಗಲಿದೆ. ಬಿಜೆಪಿ 135ರಿಂದ 140 ಸ್ಥಾನಗಳನ್ನು ಗೆದ್ದು, ಅಧಿಕಾರಕ್ಕೆ ಬರುವುದು ನಿಶ್ಚಿತ. ಭಾನುವಾರದಿಂದು ಚುನಾವಣಾ ಪ್ರವಾಸ ಆರಂಭವಾಗಲಿದ್ದು, ಆಗ ಯಾವ ರೀತಿ ಗಾಳಿ ಬೀಸುತ್ತಿದೆ ಎಂದು ಅರ್ಥವಾಗುತ್ತೆ. ನರೇಂದ್ರಮೋದಿ ಅವರು ಪ್ರಚಾರಕ್ಕೆ ಇಳಿದ ನಂತರ 140 ಸ್ಥಾನ ಗೆದ್ದು, ಸರ್ಕಾರ ರಚನೆ ಮಾಡುವುದರಲ್ಲಿ ಸಂಶಯವಿಲ್ಲ. ಪಕ್ಷಕ್ಕೆ ಸೇರಲು ಅನೇಕರು ತಮ್ಮನ್ನು ಭೇಟಿಯಾಗುತ್ತಿದ್ದಾರೆ. ಬಿಜೆಪಿ ತತ್ವ-ಸಿದ್ಧಾಂತ ಒಪ್ಪಿ ಬರುವುದಾದರೆ ಅಂತವರನ್ನು ಸ್ವಾಗತಿಸಲು ಸಿದ್ಧರಾಗಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: BJP Karnataka: ಬಿ.ಎಲ್‌. ಸಂತೋಷ್‌ ವಿರುದ್ಧ ಮಾತನಾಡಿದ್ದು ಶೆಟ್ಟರ್‌ಗೆ ಶೋಭೆಯಲ್ಲ: ಬಿ.ಎಸ್‌. ಯಡಿಯೂರಪ್ಪ

Exit mobile version