Site icon Vistara News

BY Vijayendra : ನನ್ನ ಆಯ್ಕೆ ಕುಟುಂಬ ರಾಜಕಾರಣವಲ್ಲ; ಯುವ ಕೋಟಾದಲ್ಲಿ ಮನ್ನಣೆ ಸಿಕ್ಕಿದೆ ಎಂದ ಬಿ.ವೈ. ವಿಜಯೇಂದ್ರ

BY Vijayendra BJP State bjp state president

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ (BJP State President) ಆಯ್ಕೆಯಾಗಿರುವ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಅವರು, ತಮ್ಮ ಆಯ್ಕೆ ಕುಟುಂಬ ರಾಜಕಾರಣ ಅಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಹಾಗೆ ಆಯ್ಕೆ ಮಾಡುವುದಿದ್ದರೆ ಕಳೆದ ಮೂರು ತಿಂಗಳ ಹಿಂದೆಯೇ ವರಿಷ್ಠರು ಮಾಡುತ್ತಿದ್ದರು. ಇದು ಬಿಜೆಪಿ (BJP Karnataka) ರಾಜಕಾರಣವಲ್ಲ. ಯುವಕರಿಗೆ ಆದ್ಯತೆ ಕೊಡಬೇಕು ಎಂಬ ನಿಟ್ಟಿನಲ್ಲಿ ನನಗೆ ಅವಕಾಶವನ್ನು ನೀಡಿದ್ದಾರೆ ಎಂದು ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶುಕ್ರವಾರವಷ್ಟೇ ದೆಹಲಿಯಿಂದ ವರಿಷ್ಠರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ನಾನು ವರಿಷ್ಠರಿಗೆ ಅಭಾರಿಯಾಗಿದ್ದೇನೆ. ಪಕ್ಷ ಸಂಘಟನೆಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ಪಕ್ಷದ ಹಿರಿಯರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕಾದ ಜವಾಬ್ದಾರಿ ನನ್ನ ಮೇಲೆ ಇದೆ ಎಂದು ಹೇಳಿದರು.

ಇದನ್ನೂ ಓದಿ: BS Yediyurappa : ಜನರ ಸಮಸ್ಯೆ ಆಲಿಸಲು ನನ್ನ ಜತೆ ಬನ್ನಿ; ಡಿಕೆಶಿಗೆ ಬಿಎಸ್‌ವೈ ಸವಾಲು

ನಮ್ಮದು ರಾಷ್ಟ್ರೀಯ ಪಕ್ಷ. ಇಡೀ ಪ್ರಪಂಚದಲ್ಲಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುವುದು ಕುಟುಂಬದ ಆಧಾರದ ಮೇಲೆ ಅಲ್ಲ. ಹಾಗೆ ಮಾಡುವುದಿದ್ದರೆ ಮೂರು ತಿಂಗಳ ಹಿಂದೆಯೇ ನಾನು ಅಧ್ಯಕ್ಷನಾಗಿ ಆಯ್ಕೆ ಆಗಬೇಕಿತ್ತು. ಹಾಗಾಗಿ ಕುಟುಂಬದ ಆಧಾರದ ಮೇಲೆ ಆಯ್ಕೆ ಆಗಿಲ್ಲ. ಯುವಕರಿಗೆ ಆದ್ಯತೆ ಕೊಡಲು ನನಗೆ ಅವಕಾಶ ನೀಡಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.

ಮುಂದಿನ ಚುನಾವಣೆಗೆ ಇಂದಿನಿಂದಲೇ ತಂತ್ರಗಾರಿಕೆ ಶುರುವಾಗಿದೆ. ದೇಶದಲ್ಲಿ ಬಿಜೆಪಿ ಅಲೆ ಇದೆ. ಅದಕ್ಕೆ ತಕ್ಕಂತೆ ಕೆಲಸ ಮಾಡುತ್ತೇವೆ. ಪಕ್ಷ ನನಗೆ ದೊಡ್ಡ ಜವಾಬ್ದಾರಿಯನ್ನು ಕೊಟ್ಟಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ಎಲ್ಲರನ್ನೂ ಭೇಟಿಯಾಗುತ್ತೇನೆ. ಸಣ್ಣಪುಟ್ಟ ಸಮಸ್ಯೆಯನ್ನು ಬಗೆಹರಿಸಿಕೊಂಡು ಮುಂದೆ ಹೋಗುತ್ತೇವೆ. ಹಿರಿಯರನ್ನು ಭೇಟಿ ಮಾಡುತ್ತೇನೆ. ಅವರ ಮಾರ್ಗದರ್ಶನದಲ್ಲಿ ಸಂಘಟನೆ ಮಾಡುತ್ತೇನೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ಇದನ್ನೂ ಓದಿ: BY Vijayendra : ವಿಜಯೇಂದ್ರಗೆ ಭಾರಿ ಸವಾಲಿದೆ ಎಂದು ತಲೆ ಮೇಲೆ ಕೈಹೊತ್ತು ನಡೆದ ಸಿ.ಟಿ. ರವಿ!

ಪದಗ್ರಹಣ ದಿನಾಂಕ ಆದಷ್ಟು ಬೇಗ ತಿಳಿಸುತ್ತೇನೆ. ನನಗೆ ಜವಾಬ್ದಾರಿ ನೀಡಿದ್ದಾರೆ. ನಾಯಕರನ್ನು ಸಮಾನವಾಗಿ ತೆಗೆದುಕೊಂಡು ಹೋಗುವ ಜವಾಬ್ದಾರಿ ಇದೆ. ಅದನ್ನು ನಿರ್ವಹಿಸುತ್ತೇನೆ. ರಾಜ್ಯದಲ್ಲಿ ಕಾರ್ಯಕರ್ತರಿಗೆ ಉತ್ಸಾಹ ತುಂಬಬೇಕಿದೆ. ಹಿರಿಯರ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಲಿದ್ದು, 2019ರ ಫಲಿತಾಂಶವು ಮರುಕಳಿಸಲಿದೆ ಎಂದು ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

Exit mobile version