ಬೆಂಗಳೂರು: ರಾಜ್ಯ ಬಿಜೆಪಿಗೆ (BJP Karnataka) ನೂತನ ಉಸ್ತುವಾರಿ, ಸಹ ಉಸ್ತುವಾರಿಯನ್ನು ನೇಮಕ ಮಾಡಲಾಗಿದೆ. ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕವಾಗಿದ್ದಾರೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಮುಂದುವರಿಸಲಾಗಿದೆ.
ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಆದೇಶ ಹೊರಡಿಸಿದ್ದು, ಕರ್ನಾಟಕದ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ | Guarantee Schemes: ಗ್ಯಾರಂಟಿ ಯೋಜನೆಗಳಿಗೆ ದಲಿತರ 14 ಸಾವಿರ ಕೋಟಿ ರೂ. ಕಸಿದು ಕೊಟ್ಟ ಸಿದ್ದರಾಮಯ್ಯ!
ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆಗೆ ಬಿಜೆಪಿ ವಿರೋಧ
ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಮುಡಾ ಹಗರಣ ಹೊರಗೆ ತಂದಿದ್ದಕ್ಕೆ ರಾಜ್ಯ ಸರ್ಕಾರದಿಂದ ಸೇಡು ತೀರಿಸಿಕೊಳ್ಳುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ ಮಾಡಿದ್ದಾರೆ.
ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಮಾಡಿ ವಿಜಯೇಂದ್ರ ಅವರು, ಮೈಸೂರಿನ ಮುಡಾ ನಿವೇಶನ ಅವ್ಯವಹಾರದ ಬಗ್ಗೆ ನಿರಂತರವಾಗಿ ಸರ್ಕಾರಕ್ಕೆ ಪತ್ರ ಬರೆದು ಸೂಕ್ತ ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದ ಜಿಲ್ಲಾಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಕಾಂಗ್ರೆಸ್ ಸರ್ಕಾರ ದಕ್ಷ ಅಧಿಕಾರಿಯೊಬ್ಬರ ಮೇಲೆ ದ್ವೇಷ ಕಾರಿಕೊಂಡಿದೆ.
ಸದ್ಯ ಮುಡಾದ ಬಹುಕೋಟಿ ಹಗರಣದ ತನಿಖೆ ನಡೆಸುವ ನಾಟಕವಾಡುತ್ತಿರುವ ಸರ್ಕಾರ
ದಕ್ಷ ಅಧಿಕಾರಿಗಳು ಅದೇ ಸ್ಥಾನದಲ್ಲಿ ಮುಂದುವರಿದರೆ ಸತ್ಯ ಹೊರಬರುತ್ತದೆ ಎಂಬ ಆತಂಕದಿಂದ ವರ್ಗಾವಣೆ ಮಾಡಿರುವುದು ಸ್ಪಷ್ಟವಾಗಿದ್ದು, ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರದಿಂದ ಈ ವರ್ಗಾವಣೆಯ ಹಿಂದಿದೆ ಎಂದು ಆರೋಪಿಸಿದ್ದಾರೆ.