Site icon Vistara News

BJP Karnataka : ಪ್ರತಿಪಕ್ಷ ನಾಯಕ, ರಾಜ್ಯ ಅಧ್ಯಕ್ಷ ಸ್ಥಾನದ ಬಗ್ಗೆ ಮಾತಾಡಬೇಡಿ: ಬಿಜೆಪಿ ನಾಯಕರಿಗೆ ನಳಿನ್‌ ಕಟೀಲ್‌ ಸೂಚನೆ

Nalin Kumar Kateel ravikumar and tejasvini gowd ain BJP office

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತ ನಂತರದಲ್ಲಿ ರಾಜ್ಯ ಬಿಜೆಪಿಯಲ್ಲಿ (BJP Karnataka) ಭುಗಿಲೆದ್ದಿರುವ ಅಸಮಾಧಾನ, ನಾಯಕರ ನಡುವಿನ ಮಾತಿನ ಚಕಮಕಿಗೆ ತೆರೆ ಎಳೆಯುವ ಪ್ರಯತ್ನವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾಡಿದ್ದಾರೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಕುರಿತು ಮಾಧ್ಯಮಗಳಲ್ಲಿ ಯಾರೂ ಮಾತನಾಡಬಾರದು ಎಂದು ಕಟೀಲ್‌ ಸೂಚನೆ ನೀಡಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು.

ಇದನ್ನೂ ಓದಿ: BJP Politics: ಕಟೀಲ್‌ ಯು ಟರ್ನ್‌ ಹೊಡೆದಿದ್ದೇಕೆ? ಯಾರಾಗ್ತಾರೆ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷ?

ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು ಸೂಕ್ತ ಸಮಯದಲ್ಲಿ ಸಮರ್ಥ ನಿರ್ಧಾರವನ್ನು ಪ್ರಕಟಿಸಲಿದೆ. ಪಕ್ಷದ ಕೆಲವು ನಾಯಕರು ಈ ನಡುವೆ ಮಾಧ್ಯಮಗಳ ಮುಂದೆ ವಿವಿಧ ಹುದ್ದೆ ಕುರಿತು ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದೆ. ಅಲ್ಲದೆ, ಪಕ್ಷದ ಸಭೆಗಳಲ್ಲಿ ಈ ವಿಷಯವಾಗಿ ಚರ್ಚಿಸುತ್ತಿರುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.

ಪಕ್ಷದ ಘನತೆಗೆ ಧಕ್ಕೆ ಉಂಟಾಗದಂತೆ ನಾಯಕರು ನೋಡಿಕೊಳ್ಳಬೇಕು. ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಚರ್ಚಿಸುವುದು ಸೂಕ್ತವಲ್ಲ ಎಂದು ಕಟೀಲ್‌ ಸೂಚಿಸಿದ್ದಾರೆ.

Exit mobile version