bjp karnataka somanna says he is ready to become state bjpBJP Karnataka: 100 ದಿನ ಅವಕಾಶ ಕೊಡಿ ನಾನೇನು ಅಂತ ತೋರಿಸ್ತೀನಿ: ರಾಜ್ಯ ಬಿಜೆಪಿ ಅಧ್ಯಕ್ಷರಾಗಲು ವಿ. ಸೋಮಣ್ಣ ರೆಡಿ Vistara News

ಕರ್ನಾಟಕ

BJP Karnataka: 100 ದಿನ ಅವಕಾಶ ಕೊಡಿ ನಾನೇನು ಅಂತ ತೋರಿಸ್ತೀನಿ: ರಾಜ್ಯ ಬಿಜೆಪಿ ಅಧ್ಯಕ್ಷರಾಗಲು ವಿ. ಸೋಮಣ್ಣ ರೆಡಿ

ನಾನು ತಗೊಂಡಿರೋ ರಿಸ್ಕ್ ಅನ್ನು ಕನಕಪುರದಲ್ಲಿ ಅಶೋಕ್ ತಗೊಂಡಿಲ್ಲ ಎಂದು ಜನರೇ ಮಾತಾಡಿಕೊಳ್ತಿದ್ದಾರೆ ಎಂದು ಸೋಮಣ್ಣ ಹೇಳಿದರು.

VISTARANEWS.COM


on

V Soamanna attacks on BS yediyurappa close aides
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡೂ ಕಡೆ ಸೋಲುಂಡ ನಂತರ ಮೌನವಾಗಿದ್ದ ಮಾಜಿ ಸಚಿವ ವಿ. ಸೋಮಣ್ಣ ಬಹಿರಂಗವಾಗಿ ಮಾತನಾಡಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಆಗಲು ತಾವು ಸಿದ್ಧ ಎಂದಿದ್ದಾರೆ.

ಎರಡು ಬಾರಿ ನಾನು ದೆಹಲಿಗೆ ಹೋಗಿ ಬಂದಿದ್ದೇನೆ. ವರಿಷ್ಠರ ಭೇಟಿ ಮಾಡಿ ಕೆಲ ಸಂಗತಿಗಳ ಬಗ್ಗೆ ಹೇಳಿ ಬಂದಿದ್ದೇನೆ. ನಾನು 45 ವರ್ಷ ರಾಜಕಾರಣ ಅನುಭವದ ಆಧಾರದ ಮೇಲೆ ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಹೇಳಿದ್ದೇನೆ. ಪತ್ರವನ್ನು ಕೂಡ ನಾನು ಬರೆದಿದ್ದೇನೆ.

ಪಕ್ಷ ಕೊಟ್ಟ ಎಲ್ಲ ಟಾಸ್ಕ್‌ಗಳನ್ನೂ ಸ್ವೀಕಾರ ಮಾಡಿ ಅತ್ಯಂತ ಶ್ರಮ ಪಟ್ಟು ಅದನ್ನು ನಿರ್ವಹಣೆ ಮಾಡಿದ್ದೇನೆ. ಮೊನ್ನೆಯ ಚುನಾವಣೆ ಸಾಕಷ್ಟು ಹಿನ್ನಡೆ ಆಗಿದೆ. ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುವ ಶಕ್ತಿ ಇದೆಯಾ ಎಂದು ಕೆಲವರು ಮಾತಾಡಿಕೊಳ್ಳಬಹುದು. ಆದರೆ ನಾನು ಪಕ್ಷದಲ್ಲಿ ಹಿರಿಯನಿದ್ದೇನೆ. ಎಲ್ಲರನ್ನು ನಾನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ. ದೊಡ್ಡವರ ರೀತಿಯಲ್ಲೇ ನಂದು ಒಂದು ತೆರೆದ ಪುಸ್ತಕ. 43 ದಿನ 50 ಡಿಗ್ರಿ ಬಿಸಲಲ್ಲಿ ಓಡಾಡಿ ಉಪ ಚುನಾವಣೆಗಳನ್ನು ಗೆಲ್ಲಿಸಿದ್ದೇನೆ.

ಪಕ್ಷದ ಬಹುತೇಕ ನಾಯಕರಿಗೆ ನಾನು ವಿನಂತಿ ಮಾಡಿದ್ದೇನೆ. ನನಗೂ ಒಂದೂವರೆ ತಿಂಗಳಿಂದ ಯಾವುದೇ ಕೆಲಸ ಇಲ್ಲ. ನನಗೂ ಒಂದು ಅವಕಾಶ ಮಾಡಿಕೊಡಿ. ನೂರು ದಿನಗಳ ಕಾಲ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ. ಪಕ್ಷದ ಸಂಘಟನೆಯನ್ನು ಯಾವ ರೀತಿ ತೊಡಗಿಸಿಕೊಳ್ಳಬಹುದು ಎಂದು ತೋರಿಸಿಕೊಡ್ತೀನಿ ಎಂದಿದ್ದೇನೆ. ಪ್ರಧಾನಿಗಳನ್ನು ಹೊರತು ಪಡಿಸಿ, ಅಮಿತ್ ಶಾ, ಜೆ.ಪಿ. ನಡ್ಡಾ, ಬಿ. ಎಲ್. ಸಂತೋಷ್ ಸೇರಿ ಎಲ್ಲರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ.

ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿರುವ ಆರ್‌. ಅಶೋಕ್ ಕುರಿತು ಮಾತನಾಡಿದ ಸೋಮಣ್ಣ, ನಾನು ಚುನಾವಣೆಗೆ ಮುನ್ನವೇ ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ದೇನೆ. ನನಗೆ ನೂರು ದಿನ ಕೊಡಲಿ. ನಾನೇನು ಹೇಡಿ ಅಲ್ಲ. ನಾನು ತೆಗೆದುಕೊಳ್ಳುವ ಯಾವುದೇ ಹುದ್ದೆ ಆದರೂ ಅದನ್ನು, ಚಾಲೆಂಜ್ ಆಗಿ ಪರಿಗಣಿಸುತ್ತೇನೆ. ಅಶೋಕ್ ರಾಜ್ಯಾಧ್ಯಕ್ಷ ಆದರೆ ಬೇಡ ಅಂತೀವಾ? ನಂದೆ ಒಂದು ಕಾರ್ಯವೈಖರಿ ಬೇರೆ. ನಾನು ತಗೊಂಡಿರೋ ರಿಸ್ಕ್ ಇವರು ಯಾರೂ ತಗೊಂಡಿಲ್ಲ. ಕನಕಪುರದಲ್ಲಿ ಅಶೋಕ್ ರಿಸ್ಕ್ ತಗೊಂಡಿಲ್ಲ ಎಂದು ಜನರೇ ಮಾತಾಡಿಕೊಳ್ತಿದ್ದಾರೆ. ನಾನು ಪಕ್ಷದಲ್ಲಿ ತಗೊಂಡಿರೋ ಒಂದು ಚಾಲೆಂಜನ್ನು ಇವ್ರು ಯಾವುದಾದರೂ ಒಂದು ತಗೊಂಡಿದ್ದೀರಾ ಕೇಳಿ. ನಾನು ಉಪ ಚುನಾವಣೆ ಸೇರಿ ಹಲವು ಚುನಾವಣೆ ಗಳನ್ನು ಚಾಲೆಂಜ್ ಆಗಿ ತಗೊಂಡಿದ್ದೇನೆ. ಇವರ ಎಲ್ಲರಕ್ಕಿಂತ ನಾನು ಚೆನ್ನಾಗಿ ಕೆಲಸ ಮಾಡಿದ್ದೇನೆ. ನನಗೇನು ಹುಚ್ಚು ಹಿಡಿದಿತ್ತಾ ಸಿದ್ದರಾಮಯ್ಯ ವಿರುದ್ಧ ಚುನಾವಣೆ ನಿಲ್ಲೋಕೆ ಎಂದರು.

ಇದನ್ನೂ ಓದಿ: Karnataka CM : ಸಿದ್ರಾಮಯ್ಯ ಹೈಕಮಾಂಡ್‌ ಕೈಗೊಂಬೆ, ಸಚಿವರ ಆಯ್ಕೆಗೂ ಅಧಿಕಾರವಿಲ್ಲ ಅಂದ ಕಟೀಲ್ ; ನೆಟ್ಟಿಗರು ಏನಂದ್ರು?

ರಾಜ್ಯಾಧ್ಯಕ್ಷ ಮಾಡಿದರೆ ಎಲ್ಲರೂ ಒಪ್ಪುತ್ತಾರೆಯೇ ಎಂಬ ಪ್ರಶ್ನೆಗೆ, ನಾನು ರಾಜ್ಯಾಧ್ಯಕ್ಷ ಆಗೋದಕ್ಕೆ ಯಡಿಯೂರಪ್ಪ ನವ್ರು ಒಪ್ಕೊಬೇಕು, ಬೇರೆಯವರು ಒಪ್ಕೊಬೇಕು. ಯಾಕೆ ನಾವು ಇಷ್ಟು ದಿನ ಯಡಿಯೂರಪ್ಪ ಹೇಳಿದ್ದನ್ನು ಕೇಳಿಲ್ವಾ..? ಚುನಾವಣೆ ಮುಗಿದ ನಂತರ ಒಂದು ಫೋನೂ ಕೂಡ ಅವ್ರು ಮಾಡಿಲ್ಲ ನನಗೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದ ಯಾವ ನಾಯಕರ ಜತೆಗೂ ನಾನು ಮಾತಾಡಿಲ್ಲ. ಇವರ ಕೈಯಲ್ಲಿ ಕಿಸಯದೇ ಇರುವ ಕೆಲಸ ನಾನು ಮಾಡಿದ್ದೇನೆ. ಪ್ರಾಣದ ಹಂಗು ತೊರೆದು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ನನ್ನ ಸರ್ವೀಸನ್ನು ಉಪಯೋಗಿಸಿ, ಆದರೆ ಕಡೆಗಣಿಸಬೇಡಿ. ನಾನು ಸೋತಿರಬಹುದು, ಆದರೆ ನನಗೆ ಕೊಟ್ಟ ಟಾಸ್ಕ್‌ನಲ್ಲಿ ಸೋತಿಲ್ಲ, ಗೆದ್ದಿದ್ದೇನೆ. ಸೋಲಿನ ಬಗ್ಗೆ ಯಾರಿಗೆ ತಿಳಿಸಬೇಕೋ ಅವರಿಗೆ ನಾನು ತಿಳಿಸಿದ್ದೇನೆ. ನಾನು ನಾನೇ, ನನ್ನ ಸ್ಟೈಲೇ ಬೇರೆ ಎಂದರು.

ಅನ್ನಭಾಗ್ಯ ಯೋಜನೆ ಕುರಿತು ಮಾತನಾಡಿ, ಈ ನಗ್ಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಚೆನ್ನಾಗಿ ಹೇಳಿದ್ದಾರೆ. ನೀವು 10 ಕೆ.ಜಿ. ಅಂದಾಗ ಕೇಂದ್ರ ಸರ್ಕಾರದ ಬಗ್ಗೆ ಹೇಳೇ ಇರಲಿಲ್ಲ. 10 ಕೆಜಿ ಅಕ್ಕಿ ಕೊಡೋದು ನಿಮ್ದು, ನೀವು ಕೊಡಿ. ಇನ್ನೂ ೧೦-೧೨ ದಿನ ಆಗಲಿ, ನಾನು ಇದರ‌ ಬಗ್ಗೆ ನಮ್ದೇ ಆದ ಭಾಷೆಯಲ್ಲಿ ಮಾತಾಡ್ತೀನಿ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder Case : ಸರಿಯಾಗಿ ನೋಡಿಕೊಳ್ತಿಲ್ಲ ಎಂದು ಪತ್ನಿಯನ್ನೇ ಕೊಂದ ಮಧುಮೇಹ ರೋಗಿ!

Murder Case : ಬಳ್ಳಾರಿಯ ಸಿರುಗುಪ್ಪದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಮಧು ಮೇಹ ರೋಗಿಯಾಗಿರುವ ತನ್ನನ್ನು ಆಕೆ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎನ್ನುವುದು ಅವನ ಸಿಟ್ಟು.

VISTARANEWS.COM


on

Murder Case Ballary
Koo

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಬಲಕುಂದಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ (Man Hacks his wife to death). ಆತ ಕೊಲೆ ಮಾಡಿರುವುದು (Murder case) ಅತ್ಯಂತ ಕ್ಷುಲ್ಲಕ ಕಾರಣಕ್ಕೆ. ಹೆಂಡತಿ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎನ್ನುವುದು ಅವನು ಕೊಟ್ಟಿರುವ ಕಾರಣ.

ಸಿರುಗುಪ್ಪದ ಬಲಕುಂದಿ ಗ್ರಾಮದ ನಿವಾಸಿಯಾಗಿರುವ ರಸೂಲ್ ಸಾಬ್ ಎಂಬಾತನೇ ಕೊಲೆ ಮಾಡಿರುವ ಆರೋಪಿ. ಆತ ತನ್ನ ಪತ್ನಿ ಮೈಬುನಾ ಬಿ. (35)ಯನ್ನು ಕೊಲೆ ಮಾಡಿದ್ದಾನೆ. ಸೋಮವಾರ ಆತ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಆತ ಪೊಲೀಸರಿಗೆ ಶರಣಾಗಿದ್ದಾನೆ.

ರಸೂಲ್‌ ಸಾಬ್‌ ಮಧುಮೇಹ ರೋಗಿ. ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿದ್ದಾನೆ. ಪತ್ನಿ ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎನ್ನುವ ಸಿಟ್ಟಿನಲ್ಲಿ ಆತ ಕೊಲೆ ಮಾಡಿದ್ದಾನೆ. ಮೈಮುನಾ ಮಲಗಿದ್ದ ವೇಳೆ ಹೋಗಿ ಕೊಡಲಿಯಿಂದ ಕೊಚ್ಚಿದ್ದಾನೆ.

ನನಗೆ ಮಧುಮೇಹ ಇದೆ, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದೇನೆ. ನಾನು ಬೇಗ ಸಾಯ್ತೇನೆ,
ನನಗಿಂತ ಮೊದಲು ಪತ್ನಿ ಸಾಯಬೇಕು ಅಂತಾ ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ, ಆತ ಹೆಂಡತಿ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂಬ ಕಾರಣಕ್ಕೆ ಕೊಲೆ ಮಾಡಿದ್ದಾನೆ ಎಂದೇ ಹೇಳಲಾಗಿದೆ. ಘಟನಾ ಸ್ಥಳಕ್ಕೆ ತೆಕ್ಕಲಕೋಟೆ ಪೊಲೀಸರು ಭೇಟಿ ನೀಡಿದ್ದಾರೆ. ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನೇಣು ಬಿಗಿದು ಗ್ರಾ.ಪಂ ಪ್ರಭಾರಿ ಪಿಡಿಓ ಆತ್ಮಹತ್ಯೆ

ಶಿರಸಿ: ಉ.ಕ ಜಿಲ್ಲೆ ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಪ್ರಭಾರ ಪಿಡಿಒ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮಲಿಂಗ ಶಿವಲಿಂಗಪ್ಪ ಕಳಸಗೇರಿ(39) ಎಂಬಾತ ನೇಣಿಗೆ ಶರಣಾದ ವ್ಯಕ್ತಿ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೊನ್ನತ್ತಿ ಪ್ರಭಾರಿ ಪಿಡಿಓ ಆಗಿದ್ದ ರಾಮಲಿಂಗ ಶಿವಲಿಂಗಪ್ಪ ಅವರು ಭಾನುವಾರ ರಜೆ ಕಾರಣ ತನ್ನ ಮನೆಗೆ ಬಂದಿದ್ದರು. ಅಲ್ಲೇ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಇವರು ಸಾಲ ಭಾದೆಯಿಂದ ಮನನೊಂದು ಆತ್ಮಹತ್ಯೆ ಶರಣಾದ ಶಂಕೆ ಇದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Live News

Karnataka Live News : ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

Karnataka Live News : ರಾಜಕೀಯ ವಿದ್ಯಮಾನ, ಸರ್ಕಾರದ ಪ್ರಮುಖ ನಿರ್ಧಾರ, ಅಪಘಾತ, ಅಪರಾಧ, ಹವಾಮಾನ, ಶೈಕ್ಷಣಿಕ, ಸಾಮಾಜಿಕ ಇತ್ಯಾದಿ ನಾಡಿನ ಪ್ರಮುಖ ಸಂಗತಿಗಳ ತ್ವರಿತ ಅಪ್‌ಡೇಟ್ಸ್ ಇಲ್ಲಿವೆ.

VISTARANEWS.COM


on

karnataka live news kannada today december 4
Koo
Continue Reading

ಕರ್ನಾಟಕ

Belagavi Winter Session: ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

Belagavi Winter Session : ರಾಜ್ಯವು ಬರಗಾಲಕ್ಕೆ ತುತ್ತಾಗುವ ಸ್ಪಷ್ಟ ಸೂಚನೆ ಇದ್ದರೂ ಬರ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾಗಿದ್ದ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳದ ಸರ್ಕಾರದ ವೈಫಲ್ಯದ ಕುರಿತು ಸದನದಲ್ಲಿ ಚರ್ಚಿಸಲು ಅವಕಾಶ ನೀಡಬೇಕೆಂದು ಬಿಜೆಪಿ ಹಾಗೂ ಜೆಡಿಎಸ್‌ ತನ್ನ ನಿಲುವಳಿ ಸೂಚನೆಯಲ್ಲಿ ಕೋರಿವೆ.

VISTARANEWS.COM


on

Belagavi Winter Session
Koo

ಬೆಂಗಳೂರು: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ (ಡಿ. 4) ಅಧಿವೇಶನ (Belagavi Winter Session) ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ವಿಪಕ್ಷಗಳಿಂದ ನಿಲುವಳಿ ನೋಟಿಸ್ (Adjournment notice) ಜಾರಿಯಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಜಂಟಿ ನೋಟಿಸ್ ನೀಡಿದ್ದು, ಸದನದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ರಾಜ್ಯ ಸರ್ಕಾರದ (Congress Government) ವೈಫಲ್ಯ ಚರ್ಚಿಸಲು ಆಗ್ರಹಿಸಿವೆ.

ರಾಜ್ಯವು ಬರಗಾಲಕ್ಕೆ ತುತ್ತಾಗುವ ಸ್ಪಷ್ಟ ಸೂಚನೆ ಇದ್ದರೂ ಬರ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾಗಿದ್ದ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳದ ಸರ್ಕಾರದ ವೈಫಲ್ಯದ ಕುರಿತು ಸದನದಲ್ಲಿ ಚರ್ಚಿಸಲು ಅವಕಾಶ ನೀಡಬೇಕೆಂದು ಬಿಜೆಪಿ ಹಾಗೂ ಜೆಡಿಎಸ್‌ ತನ್ನ ನಿಲುವಳಿ ಸೂಚನೆಯಲ್ಲಿ ಕೋರಿವೆ.

ನಿಲುವಳಿ ಸೂಚನೆ ಪತ್ರದಲ್ಲೇನಿದೆ?

ರಾಜ್ಯಾದ್ಯಂತ ಬರಗಾಲ ಆವರಿಸಿದೆ. ಉಳುಮೆ ಮತ್ತು ಬಿತ್ತನೆ ಕಾಲದಲ್ಲಿ ಬೀಳಬೇಕಾಗಿದ್ದ ಮಳೆ ಕೈಕೊಟ್ಟ ಕಾರಣ 215 ತಾಲೂಕುಗಳು ತೀವ್ರ ಬರ ಪೀಡಿತವಾಗಿವೆ. ರೈತರು ಬಿತ್ತನೆ ಮಾಡಿದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಸೇರಿ ಒಟ್ಟು 48 ಲಕ್ಷ ಹೆಕ್ಟೇರ್ ಬೆಳೆ ನಾಶ ಆಗಿದ್ದು, ಆತಂಕಗೊಂಡಿರುವ ರೈತರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ರಾಜ್ಯದಲ್ಲಿ ಬರಗಾಲ ಕಾಮಗಾರಿಗಳು ನಡೆಯುತ್ತಿಲ್ಲ. ಕೃಷಿ ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಬೇರೆ ರಾಜ್ಯಗಳಿಗೆ ಗುಳೆ ಹೋಗುತ್ತಿದ್ದಾರೆ. ದಿನಾಂಕ 13-09-2023 ರಂದೇ ಬರ ಪೀಡಿತ ತಾಲೂಕುಗಳನ್ನು ಪೋಷಣೆ ಮಾಡಲಾಗಿದೆ. ಹೀಗಿದ್ದರೂ ಸರ್ಕಾರ ಕಳೆದೆರಡು ದಿನಗಳ ಹಿಂದಷ್ಟೇ ಕೇವಲ 2000 ರೂ. ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ.

ಜಾನುವಾರುಗಳಿಗೆ ಮೇವಿಗೆ ತೊಂದರೆಯಾಗದಂತೆ ಮೇವು ಬ್ಯಾಂಕ್ ಸ್ಥಾಪಿಸಿ, ಗೋಶಾಲೆಗಳನ್ನು ತೆರೆಯಲು ಅಗತ್ಯ ಕ್ರಮ ಕೈಗೊಂಡಿಲ್ಲ. ಜತೆಗೆ ಜನಸಾಮಾನ್ಯರಿಗೆ ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿಲ್ಲ. ರಾಜ್ಯವು ಬರಗಾಲಕ್ಕೆ ತುತ್ತಾಗುವ ಸ್ಪಷ್ಟ ಸೂಚನೆ ಇದ್ದರೂ ಬರ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾಗಿದ್ದ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳದ ಸರ್ಕಾರ ವಿಫಲವಾಗಿದೆ. ಈ ಕುರಿತು ಸದನದಲ್ಲಿ ಚರ್ಚಿಸಲು ಅವಕಾಶ ನೀಡಬೇಕೆಂದು ಕೋರುತ್ತೇವೆ” ಎಂದು ಬಿಜೆಪಿ ಹಾಗೂ ಜೆಡಿಎಸ್‌ ತನ್ನ ನಿಲುವಳಿ ಸೂಚನೆ ಪತ್ರದಲ್ಲಿ ಉಲ್ಲೇಖಿಸಿವೆ.

ಇದನ್ನೂ ಓದಿ: Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

ಉತ್ತರ ಕೊಡಲಿವೆಯೇ ಸರ್ಕಾರ?

ಈ ಸಂಬಂಧ ಸದನದಲ್ಲಿ ಈ ಬಾರಿ ಬರ ನಿರ್ವಹಣೆ ಬಗ್ಗೆ ತೀವ್ರವಾಗಿ ಚರ್ಚೆ ನಡೆಸಲು, ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮುಂದಾಗಿದೆ. ಅಲ್ಲದೆ, ಈಗಾಗಲೇ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಬರ ಅಧ್ಯಯನ ನಡೆಸಿವೆ. ಅದರಲ್ಲೂ ಜೆಡಿಎಸ್‌ ಬರ ಅಧ್ಯಯನ ನಡೆಸಿ ಅದರ ವರದಿಯನ್ನು ಭಾನುವಾರ (ಡಿ. 3) ರಾಜ್ಯಪಾಲರಿಗೆ ಸಲ್ಲಿಸಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಎಲ್ಲ ಪ್ರಶ್ನೆಗಳಿಗೂ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿ ಬನ್ನಿ ಎಂದು ಸಚಿವರಿಗೆ ಸೂಚನೆ ನೀಡಿದ್ದಾರೆ. ಇದರ ಜತೆಗೆ ಕೇಂದ್ರ ಸರ್ಕಾರದಿಂದ ಇನ್ನೂ ಅನುದಾನ ಬಂದಿಲ್ಲ ಎಂಬ ವಾದವನ್ನೂ ಮುಂದಿಡಲು ಮುಂದಾಗಲಾಗಿದೆ ಎನ್ನಲಾಗಿದೆ.

Continue Reading

ಕರ್ನಾಟಕ

Gold Rate Today: ಚಿನ್ನದ ಬೆಲೆ ದಿಢೀರನೆ 40 ರೂ. ಏರಿಕೆ; ಇಷ್ಟಿದೆ ಇಂದಿನ ದರ

Gold Rate Today: ಬೆಂಗಳೂರಿನಲ್ಲಿ ಸೋಮವಾರ ಚಿನ್ನದ ಬೆಲೆ ದಿಢೀರನೆ ಜಾಸ್ತಿಯಾಗಿದೆ. ಹಾಗಾಗಿ, ಇಂದು ಚಿನ್ನ ಖರೀದಿಸುವವರಿಗೆ ಬೆಲೆಯು ತುಸು ಹೆಚ್ಚೇ ಹೊರೆಯಾಗಲಿದೆ.

VISTARANEWS.COM


on

Ashika Ranganath
Koo

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸೋಮವಾರ (ಡಿಸೆಂಬರ್‌ 4) (Gold Rate Today) ಚಿನ್ನದ ಬೆಲೆ ಏಕಾಏಕಿ ಜಾಸ್ತಿಯಾಗಿದೆ. ನಗರದಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂ. ಹಾಗೂ 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 44 ರೂ. ಏರಿಕೆಯಾಗಿದೆ. ಇಂದರೊಂದಿಗೆ 22 ಕ್ಯಾರಟ್‌ನ ಒಂದು ಗ್ರಾಂಗೆ 5,885 ರೂ. ಆದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನಕ್ಕೆ 6,420 ರೂ. ಆಗಿದೆ.

ಭಾನುವಾರ (ಡಿಸೆಂಬರ್‌ 3) ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. 22 ಕ್ಯಾರಟ್‌ನ ಚಿನ್ನವು ಗ್ರಾಂಗೆ 5,845 ರೂ. ಹಾಗೂ 24 ಕ್ಯಾರಟ್‌ನ ಚಿನ್ನದ ಬೆಲೆ ಒಂದು ಗ್ರಾಂಗೆ 6,380 ರೂ. ಇತ್ತು. ಶನಿವಾರ (ಡಿಸೆಂಬರ್‌ 2) ಹಾಗೂ ಶುಕ್ರವಾರ (ಡಿಸೆಂಬರ್‌ 1) ಕೂಡ ಬೆಲೆ ಏರಿಕೆಯಾಗಿತ್ತು. ಕೆಲ ದಿನಗಳಿಂದ ಚಿನ್ನದ ಬೆಲೆಯು ಸತತವಾಗಿ ಏರಿಕೆಯಾಗುತ್ತಿರುವ ಕಾರಣ ಖರೀದಿದಾರರ ಜೇಬಿಗೆ ಕತ್ತರಿ ಬೀಳುತ್ತಿದೆ.

gold rate

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲಾ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

ಇದನ್ನೂ ಓದಿ: Namma Metro : ಮೆಟ್ರೋದಲ್ಲಿ ಮಿಸ್‌ ಆದ ಚಿನ್ನದುಂಗುರ ಮರಳಿಸಿದ ಗೋಲ್ಡನ್‌ ಗರ್ಲ್ಸ್‌ !‌

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Aircraft Crash
ದೇಶ3 mins ago

Aircraft Crash: ತೆಲಂಗಾಣದಲ್ಲಿ ವಾಯುಪಡೆ ವಿಮಾನ ಪತನ, ಇಬ್ಬರು ಪೈಲಟ್‌ಗಳ ಸಾವು

Tukali Santosh Imitate Sangeetha Sringeri
ಬಿಗ್ ಬಾಸ್3 mins ago

BBK SEASON 10: ʻಎಲ್ಲೇ ಹೋದ್ರೂ ಗುಂಡಿ ತೋಡೇ ಬರೋದು; ಸಂಗೀತಾಳ ಅನುಕರಣೆ ಮಾಡಿದ ತುಕಾಲಿ!

Murder Case Ballary
ಕ್ರೈಂ14 mins ago

Murder Case : ಸರಿಯಾಗಿ ನೋಡಿಕೊಳ್ತಿಲ್ಲ ಎಂದು ಪತ್ನಿಯನ್ನೇ ಕೊಂದ ಮಧುಮೇಹ ರೋಗಿ!

karnataka live news kannada today december 4
Live News31 mins ago

Karnataka Live News : ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

snehith sangeetha namratha bbk 10
ಬಿಗ್ ಬಾಸ್33 mins ago

BBK SEASON 10: ಸಂಗೀತಾ ಜಾಗದಲ್ಲಿ ನಮ್ರತಾ ಇದ್ದಿದ್ದರೆ ʻಪನೀರ್‌ʼ ಕಥೆ ಏನಾಗ್ತಿತ್ತು? ಸ್ನೇಹಿತ್‌ಗೆ ಚಿವುಟಿದ ಸುದೀಪ್‌!

Belagavi Winter Session
ಕರ್ನಾಟಕ38 mins ago

Belagavi Winter Session: ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

Narendra Modi
ದೇಶ50 mins ago

ಜನರಿಂದ ನಕಾರಾತ್ಮಕತೆಯ ತಿರಸ್ಕಾರ, ಸಂಸತ್ತಲ್ಲಿ ಹತಾಶೆ ಪ್ರದರ್ಶಿಸದಿರಿ; ಪ್ರತಿಪಕ್ಷಗಳಿಗೆ ಮೋದಿ ಮನವಿ

Rocking star Yash gave sweet news new cinema Title Announcement date Fix
South Cinema1 hour ago

Actor Yash: ಸಿಹಿ ಸುದ್ದಿ ಕೊಟ್ಟೇ ಬಿಟ್ರು ರಾಕಿಂಗ್‌ ಸ್ಟಾರ್‌ ಯಶ್‌; ಟೈಟಲ್ ಅನೌನ್ಸ್‌ಗೆ ಮುಹೂರ್ತ ಫಿಕ್ಸ್!

Ashika Ranganath
ಕರ್ನಾಟಕ2 hours ago

Gold Rate Today: ಚಿನ್ನದ ಬೆಲೆ ದಿಢೀರನೆ 40 ರೂ. ಏರಿಕೆ; ಇಷ್ಟಿದೆ ಇಂದಿನ ದರ

Mani Ratnam-Kamal Haasan film Thug Life
South Cinema2 hours ago

Thug Life Movie: ಕಮಲ್ ಹಾಸನ್ ಸಿನಿಮಾದಲ್ಲಿ ಎಂಟ್ರಿ ಕೊಟ್ಟ ಗೌತಮ್ ಕಾರ್ತಿಕ್!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ8 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌