BJP Karnataka : ಜ. 27ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ, 900ಕ್ಕೂ ಹೆಚ್ಚು ಅಪೇಕ್ಷಿತರು ಭಾಗಿ - Vistara News

ಕರ್ನಾಟಕ

BJP Karnataka : ಜ. 27ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ, 900ಕ್ಕೂ ಹೆಚ್ಚು ಅಪೇಕ್ಷಿತರು ಭಾಗಿ

BJP Karnataka : ಮುಂದಿನ ಲೋಕಸಭಾ ಚುನಾವಣಾ ಸಿದ್ಧತೆಯಲ್ಲಿರುವ ಬಿಜೆಪಿ ಇದೀಗ ಮಹತ್ವದ ರಾಜ್ಯ ಕಾರ್ಯಕಾರಿಣಿಯನ್ನು ಆಯೋಜಿಸಿದೆ. ಜನವರಿ 27ರಂದು ಬೆಂಗಳೂರಿನಲ್ಲಿ ಕಾರ್ಯಕಾರಿಣಿ ನಡೆಯಲಿದೆ.

VISTARANEWS.COM


on

Preetam Gowda BJP State Secretary
ಪ್ರೀತಂ ಗೌಡ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿ.ವೈ.ವಿಜಯೇಂದ್ರ (BY Vijayendra) ಅವರು ರಾಜ್ಯ ಅಧ್ಯಕ್ಷರಾದ ಬಳಿಕ ಬಿಜೆಪಿಯ ಪ್ರಥಮ ರಾಜ್ಯ ಕಾರ್ಯಕಾರಿಣಿ (BJP Executive Meet) ಸಭೆಯು ಇದೇ 27ರಂದು ಬೆಂಗಳೂರಿನ ಗಾಯತ್ರಿ ವಿಹಾರ, ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ (BJP Karnataka) ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಮೂಲೆಮೂಲೆಗಳಿಂದ ಈ ಕಾರ್ಯಕಾರಿಣಿಯ ಅಪೇಕ್ಷಿತರು ಬರಲಿದ್ದಾರೆ. ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ನಮ್ಮ ಮುಂದಿನ ಕಾರ್ಯಯೋಜನೆ ಕುರಿತು ಚರ್ಚೆ ನಡೆಯಲಿದೆ ಎಂದರು.

ಶಾಶಕರು, ಸಂಸದರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು ಸೇರಿದಂತೆ 900ಕ್ಕೂ ಹೆಚ್ಚು ಅಪೇಕ್ಷಿತರು ಈ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ಆ ನಿಟ್ಟಿನಲ್ಲಿ ಬಿಜೆಪಿ ರಾಜ್ಯ ಘಟಕವು 10 ದಿನಗಳಿಂದ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದೆ. ಬೆಂಗಳೂರಿನ 3 ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರಾದ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ, ಶಾಸಕ ಕೆ.ಸಿ. ರಾಮಮೂರ್ತಿ, ಮಾಜಿ ಉಪ ಮೇಯರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪದಾಧಿಕಾರಿಗಳು, ಶಾಸಕರ ಮಾರ್ಗದರ್ಶನದಲ್ಲಿ ಸಭೆಯ ಯಶಸ್ಸಿಗೆ ಪೂರ್ವತಯಾರಿ ನಡೆದಿದೆ ಎಂದು ತಿಳಿಸಿದರು.

25ಕ್ಕೂ ಹೆಚ್ಚು ವೃತ್ತಗಳಲ್ಲಿ ಪ್ರಮುಖರಿಗೆ ಸ್ವಾಗತ ಕೋರುತ್ತಿದ್ದಾರೆ. ಅಪೇಕ್ಷಿತರಿಗೆ ವ್ಯವಸ್ಥಿತವಾಗಿ ವಾಹನ ವ್ಯವಸ್ಥೆ, ಕೊಠಡಿ ವ್ಯವಸ್ಥೆ ಸೇರಿ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ ಎಂದು ವಿವರಿಸಿದರು. ರಾಜ್ಯ ಸರಕಾರದ ಧೋರಣೆ, ಹಿಂದೂ ವಿರೋಧಿ ನೀತಿ, ಅಭಿವೃದ್ಧಿ ಕುಂಠಿತವಾದುದನ್ನು ಚರ್ಚೆ ಮಾಡಲಾಗುವುದು ಎಂದರು. ಅನೇಕ ವಿಷಯಗಳನ್ನು ಚರ್ಚಿಸಿ ನಿರ್ಣಯ ಕೈಗೊಳ್ಳುವುದಾಗಿ ಹೇಳಿದರು.

ಕೇಂದ್ರದ ಜನಪರ ಯೋಜನೆಗಳ ಚರ್ಚೆ ನಡೆಯಲಿದೆ. ಅಯೋಧ್ಯೆಯ ಪ್ರಭು ಶ್ರೀರಾಮಚಂದ್ರನ ಕುರಿತ ಪ್ರದರ್ಶಿನಿ ವ್ಯವಸ್ಥೆಯನ್ನೂ ಮಾಡಲಾಗಿದೆ. ಡಿಜಿಟಲ್ ಎಂಟ್ರಿ ಮೂಲಕ ನೋಂದಣಿ ನಡೆಯಲಿದೆ. ಅಪೇಕ್ಷಿತರಿಗೆ ಹೊಸ ಅನುಭವ ಆಗುವ ಮಾದರಿಯಲ್ಲಿ ಅಚ್ಚುಕಟ್ಟಾಗಿ ಈ ಕಾರ್ಯಕಾರಿಣಿ ನಡೆಯಲಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡ ಸಂಘಟನಾತ್ಮಕ ಸಭೆ ಇದಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: BY Vijayendra: ಕಾಂಗ್ರೆಸ್‌ಗೆ ಕೈಕೊಟ್ಟ ಶೆಟ್ಟರ್; ಬಿ.ವೈ. ವಿಜಯೇಂದ್ರ ಮೊದಲ ಆಪರೇಷನ್‌ ಸಕ್ಸಸ್‌

ಗ್ರಾಮ ಪಂಚಾಯತ್ ಮಟ್ಟದಿಂದ ಆರಂಭಿಸಿ ವಿಧಾನಸೌಧದಲ್ಲಿ ಆಡಳಿತ ನಡೆಸಿರುವ ಅನೇಕ ಹಿರಿಯರಿಗೆ ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನಿ ಆಗಬೇಕೆಂಬ ಆಶಯವಿದೆ. ಅಂಥವರು ಸಹಸ್ರಾರು ಸಂಖ್ಯೆಯಲ್ಲಿ ಇದ್ದಾರೆ. ಆ ನಿಟ್ಟಿನಲ್ಲಿ ಬಿಜೆಪಿಗೆ ಬರುವವರಿಗೆ ಪಕ್ಷವು ಮುಕ್ತ ಆಹ್ವಾನ ನೀಡಿದೆ. ಅನೇಕರು ಈಗಾಗಲೇ ಪಕ್ಷ ಸೇರಿದ್ದಾರೆ. ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿ ಖಂಡಿಸಿ ಸ್ಥಳೀಯವಾಗಿ, ಗ್ರಾಮ, ನಗರ ಮಟ್ಟಗಳಲ್ಲಿ ಬಿಜೆಪಿ ಕಡೆ ಮುಖ ಮಾಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಕೆ.ಸಿ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!

Lok Sabha Election 2024: ಚುನಾವಣಾ ಕೆಲಸಕ್ಕೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೆಲವರಿಗೆ ನಿಯೋಜನೆಗೊಂಡ ಮತಗಟ್ಟೆಯಲ್ಲಿಯೇ ಮತ ಹಾಕಲು ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ, ಎಚ್ಎಸ್ಆರ್ ಲೇಔಟ್ ಬಳಿ ಇರುವ ಜೆಎಸ್‌ಎಸ್ ಶಾಲೆ ಮತಗಟ್ಟೆಯಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ಹೆಸರು ವೋಟರ್‌ ಲಿಸ್ಟ್‌ನಲ್ಲಿಯೇ ಇಲ್ಲ. ಇದು ಅಧಿಕಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರು ವೋಟಿಂಗ್ ನಡೆಯುವ ಶಾಲೆ ಮುಂದೆಯೇ ಧರಣಿ ಕುಳಿತಿದ್ದಾರೆ.

VISTARANEWS.COM


on

Lok Sabha Election 2024 No names of election officials in voter list Protest in front of the polling booth
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಏಪ್ರಿಲ್‌ 26ರ ಶುಕ್ರವಾರ ಬೆಂಗಳೂರಿನಲ್ಲಿ ಮೊದಲ ಹಂತದ ಮತದಾನ (First phase of polling) ನಡೆಯಲಿದೆ. ಈಗಾಗಲೇ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ನಡೆಸಿದೆ. ಚುನಾವಣಾ ಪ್ರಕ್ರಿಯೆಗೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಆದರೆ, ಬೆಂಗಳೂರಲ್ಲಿ ಚುನಾವಣಾ ಸೇವೆಗೆ ನಿಯೋಜನೆಗೊಂಡ ಅಧಿಕಾರಿಗಳ ಹೆಸರೇ ವೋಟರ್‌ ಲಿಸ್ಟ್‌ನಲ್ಲಿ (Voter List) ಇಲ್ಲದಿರುವುದು ಗೊತ್ತಾಗಿದೆ. ಈ ಸಂಬಂಧ ಆ ಅಧಿಕಾರಿಗಳು ಮತಗಟ್ಟೆ ಎದುರೇ ಧರಣಿ ಕುಳಿತಿದ್ದಾರೆ.

ಚುನಾವಣಾ ಕೆಲಸಕ್ಕೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೆಲವರಿಗೆ ನಿಯೋಜನೆಗೊಂಡ ಮತಗಟ್ಟೆಯಲ್ಲಿಯೇ ಮತ ಹಾಕಲು ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ, ಎಚ್ಎಸ್ಆರ್ ಲೇಔಟ್ ಬಳಿ ಇರುವ ಜೆಎಸ್‌ಎಸ್ ಶಾಲೆ ಮತಗಟ್ಟೆಯಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ಹೆಸರು ವೋಟರ್‌ ಲಿಸ್ಟ್‌ನಲ್ಲಿಯೇ ಇಲ್ಲ. ಇದು ಅಧಿಕಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರು ವೋಟಿಂಗ್ ನಡೆಯುವ ಶಾಲೆ ಮುಂದೆಯೇ ಧರಣಿ ಕುಳಿತಿದ್ದಾರೆ. ಹಲವು ಅಧಿಕಾರಿಗಳ ಹೆಸರು ಮಿಸ್‌ ಆಗಿರುವುದು ಗೊಂದಲಕ್ಕೆ ಕಾರಣವಾಗಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಈ ಬಗ್ಗೆ ಚುನಾವಣಾ ಆಯೋಗವು ಇನ್ನೂ ಯಾವುದೇ ರೀತಿಯ ಸ್ಪಷ್ಟನೆಯನ್ನು ನೀಡಿಲ್ಲ. ಈ ಅಧಿಕಾರಿಗಳಿಗೆ ಪರ್ಯಾಯವಾಗಿ ಯಾವ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಇನ್ನೂ ಮಾಹಿತಿ ಗೊತ್ತಾಗಿಲ್ಲ.

Continue Reading

ಬೆಂಗಳೂರು

Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ಸಾವು; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಇದು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎಂಬುದು ತಿಳಿದುಬಂದಿಲ್ಲ. ಮೂವರ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

VISTARANEWS.COM


on

By

Self Harming in Bengaluru
Koo

ಬೆಂಗಳೂರು: ಆಂಧ್ರಪ್ರದೇಶದ ಮೂವರು ಯುವಕರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಬುಧವಾರ (ಏ.25) ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಘಟನೆ ನಡೆದಿದೆ.

ಗುರುವಾರ ಬೆಳಗ್ಗೆ ಸ್ಥಳೀಯರು ಆಗಮನಿಸಿ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದವರೆಂದು ತಿಳಿದು ಬಂದಿದೆ. ಶಶಿಕುಮಾರ್ (23), ಲೋಕೇಶ್ (25) ಮೃತ ದುರ್ದೈವಿಗಳು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.

ರೈಲ್ವೆ ಟ್ರ್ಯಾಕ್‌ ಇರುವ ಕಾರಣ ರಾತ್ರಿಯಲ್ಲಿ ಯುವಕರು ಮೊಬೈಲ್ ಹಾಗೂ ಹೆಡ್‌ಫೋನ್‌ ಹಾಕಿಕೊಂಡು ಟ್ರ್ಯಾಕ್ ಮೇಲೆ ಕುಳಿತುಕೊಳ್ಳುತ್ತಾರೆ. ಪೊಲೀಸರು ಬಂದಾಗ ಇಲ್ಲಿಂದ ತೆರಳುತ್ತಾರೆ, ನಂತರ ಮತ್ತೆ ವಾಪಸ್ ಬಂದು ಇಲ್ಲೇ ಕೂರುತ್ತಾರೆ ಎಂದು ಸ್ಥಳೀಯ ನಿವಾಸಿ ಮಲ್ಲೇಶ್ ಆರೋಪಿಸಿದ್ದಾರೆ. ನಿನ್ನೆ ರಾತ್ರಿ 8:30ಕ್ಕೆ ಈ ಘಟನೆ ನಡೆದಿರಬಹುದು. ಕೆಲಸಕ್ಕೆ ಹೋಗಿ ಬರುವವರು ಈ ಹಳಿಯನ್ನು ದಾಟಿ ಓಡಾಡುತ್ತಾರೆ.

ಇದನ್ನೂ ಓದಿ: Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!

Road Accident : ಶಾಸಕ ಎಆರ್ ಕೃಷ್ಣಮೂರ್ತಿ ಕಾರು ಅಪಘಾತ; ಚಲಿಸುತ್ತಿದ್ದಾಗಲೇ ಕಾರ್‌ ಟೈರ್‌ ಸ್ಫೋಟ

ಚಾಮರಾಜನಗರ/ತುಮಕೂರು: ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು (Road Accident) ಸಂಭವಿಸಿವೆ. ಮೈಸೂರಿನ ಹೊರವಲಯದ ನಾಡನಹಳ್ಳಿಯಲ್ಲಿ ಶಾಸಕ ಎಆರ್ ಕೃಷ್ಣಮೂರ್ತಿ (MLA A R Krishnamurthy) ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Road Accident

ಕೊಳ್ಳೆಗಾಲದ ಕಾಂಗ್ರೆಸ್ ಶಾಸಕ ಎಆರ್ ಕೃಷ್ಣಮೂರ್ತಿ ಬುಧವಾರ ತಡರಾತ್ರಿ ಚಾಮರಾಜನಗರದಿಂದ ಮೈಸೂರಿನ ಮನೆಗೆ ಹೋಗುವ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದಾಗಲೇ ಕಾರಿನ ಟೈರ್ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣಕ್ಕೆ ಸಿಗದೇ ಕಾರು ರಸ್ತೆ ಬಿಟ್ಟು ಪಕ್ಕಕ್ಕೆ ಇಳಿದಿದೆ.

Road Accident in Chamarajnagar

ಇದನ್ನೂ ಓದಿ: IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿ, ಇಬ್ಬರು ಸಾವು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಯ ಹಿಂಬದಿಗೆ ಬುಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಂದೆ ಸಾಗುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಗೆ ಹಿಂಬದಿಯಿಂದ ಬೊಲೆರೋ ವಾಹನ ಡಿಕ್ಕಿಯಾಗಿದೆ. ಪರಿಣಾಮ ಬೊಲೆರೋ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಮೃತ ದುರ್ದೈವಿ. ಮೃತರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಎನ್ನಲಾಗಿದೆ.

Road Accident in Tumkur

ದ್ರಾಕ್ಷಿ ತುಂಬಿಸಿಕೊಂಡು ಬೆಂಗಳೂರು ಕಡೆ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ. ಬೊಲೆರೋ ವಾಹನ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಶಿರಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಆರತಕ್ಷತೆಯಲ್ಲಿ ವಧು-ವರರಿಂದ ಮತದಾನ ಜಾಗೃತಿ

Lok Sabha Election 2024: ಗಂಗಾವತಿ ನಗರದ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ ಬುಧವಾರ ನಡೆದ ಮದುವೆ ಆರತಕ್ಷತೆಯಲ್ಲಿ ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು-ವರರು ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಗಮನ ಸೆಳೆದರು.

VISTARANEWS.COM


on

Voting awareness by the newly married couple at the reception
Koo

ಗಂಗಾವತಿ: ನಗರದ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನದ ಸಮುದಾಯ ಭವನದಲ್ಲಿ ಬುಧವಾರ ನಡೆದ ಮದುವೆ ಆರತಕ್ಷತೆಯಲ್ಲಿ ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು-ವರರು, ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ (Lok Sabha Election 2024) ಮತದಾನದ ಬಗ್ಗೆ ಜಾಗೃತಿ (Voting Awareness) ಮೂಡಿಸಿ ಗಮನ ಸೆಳೆದರು.

ನಗರಸಭೆ ಮಾಜಿ ಸದಸ್ಯ ಬಿ. ಅಶೋಕ್ ಟೈಗರ್ ಅವರ ಪುತ್ರಿ ಐಶ್ವರ್ಯ ಅವರ ವಿವಾಹವು ಆದೋನಿಯ ವೀರಾಂಜನೇಯ ಜತೆ ನಡೆದಿದ್ದು, ಇಲ್ಲಿನ ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಆರತಕ್ಷತೆಯಲ್ಲಿ ನೂತನ ವಧು-ವರರು ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.

ಇದನ್ನೂ ಓದಿ: Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

ನಮ್ಮ ದೇಶದ ಭವಿಷ್ಯವು ಮತದಾನದಲ್ಲಿ ಅಡಗಿದೆ, ದೇಶದ ನಿಜವಾದ ಪ್ರಜೆಯಾಗಿ ಮತಚಲಾಯಿಸಿ, ನಿಮ್ಮ ಮತ, ನಿಮ್ಮ ಧ್ವನಿ ಎಂಬಿತ್ಯಾದಿ ಫಲಕಗಳನ್ನು ಹಿಡಿದು ಮದುವೆ ಆರತಕ್ಷತೆಗೆ ಬಂದಿದ್ದ ಆಪ್ತರು, ಹಿತೈಷಿಗಳು, ಬಂಧು-ಬಳಗ, ಸ್ನೇಹಿತರಿಗೆ ಜಾಗೃತಿ ಮೂಡಿಸಲಾಯಿತು.

ಇದನ್ನೂ ಓದಿ: DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

ಕೊಪ್ಪಳ ಜಿಲ್ಲಾ ಮತದಾನ ಜಾಗೃತಿ ರಾಯಭಾರಿ ಡಾ. ಶಿವಕುಮಾರ್ ಮಾಲಿಪಾಟೀಲ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡಹಬ್ಬ ಚುನಾವಣೆ. ಹಬ್ಬದಲ್ಲಿ ಮತದಾನ ಮಾಡುವ ಮೂಲಕ ನಮ್ಮ ಕರ್ತವ್ಯ, ಜವಾಬ್ದಾರಿಗಳನ್ನು ನಿಭಾಯಿಸಬೇಕು. ಪ್ರತಿಯೊಬ್ಬ ಅರ್ಹ ಮತದಾರರರು ತಪ್ಪದೇ ಮತ ಚಲಾಯಿಸಬೇಕು ಎಂದು ತಿಳಿಸಿದರು.

Continue Reading

Lok Sabha Election 2024

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Lok Sabha Election 2024: ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನವರೆಗೂ ಈ ವಿಚಾರವನ್ನು ಪ್ರಸ್ತಾಪ ಮಾಡಲು ತಂತ್ರಗಾರಿಕೆ ಹೆಣೆಯಲಾಗಿದೆ. ಮಾಸ್ ಮತದಾರರನ್ನು ಟಾರ್ಗೆಟ್ ಮಾಡಿ ಈ ವಿಚಾರವನ್ನು ಬಿಜೆಪಿ ಪ್ರಸ್ತಾಪ ಮಾಡುತ್ತಿದೆ. ದಿನೇ ದಿನೇ ಬಿಜೆಪಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಂತೆ ಕಾಂಗ್ರೆಸ್‌ಗೆ ಇದರ ಡ್ಯಾಮೇಜ್‌ನ ಅರಿವಾಗಿದೆ. ಚುನಾವಣೆಯಲ್ಲಿ ಇದು ದೊಡ್ಡ ಹೊಡೆತವನ್ನು ಕೊಡಬಹುದು ಎಂದು ಅಂದಾಜಿಸಿದೆ. ಈ ಕಾರಣಕ್ಕೆ ಎಚ್ಚೆತ್ತುಕೊಂಡ ಕೈಪಡೆ ಈಗ ಸ್ಯಾಮ್‌ ಪಿತ್ರೋಡ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ.

VISTARANEWS.COM


on

Lok Sabha Election 2024 BJP rejects Sam Pitroda statement
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಆಡುವ ಒಂದೊಂದು ಮಾತುಗಳೂ ಪ್ರಾಮುಖ್ಯತೆಯನ್ನು ಪಡೆಯುತ್ತವೆ. ಕೆಲವು ಮಾತುಗಳು ಪ್ಲಸ್‌ ಮಾಡಿದರೆ, ಮತ್ತೆ ಕೆಲವು ಭಾರಿ ಡ್ಯಾಮೇಜ್‌ ಮಾಡುತ್ತವೆ. ಈಗ ಉದ್ಯಮಿ ಸ್ಯಾಮ್‌ ಪಿತ್ರೋಡ (Sam Pitroda) ಕಾಂಗ್ರೆಸ್‌ ಪರವಾಗಿ ಆಡಿದ ಮಾತುಗಳು ಕೈಪಡೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. “ಪಿತ್ರಾರ್ಜಿತ ಆಸ್ತಿಗಳನ್ನು (Ancestral property) ಮಕ್ಕಳಿಗೆ ಹಸ್ತಾಂತರಿಸುವ ಸಂದರ್ಭದಲ್ಲಿ ಅಮೆರಿಕದಲ್ಲಿ ಜಾರಿಯಲ್ಲಿರುವ ಕಾನೂನನ್ನು ಭಾರತದಲ್ಲಿಯೂ ಅನುಷ್ಠಾನಕ್ಕೆ ತರಬೇಕು. ಪಿತ್ರಾರ್ಜಿತ ಆಸ್ತಿಗೂ ತೆರಿಗೆ ವಿಧಿಸಬೇಕು. ಇದರಲ್ಲಿ ಶೇಕಡಾ 55ರಷ್ಟು ಪಾಲನ್ನು ಸರ್ಕಾರಕ್ಕೆ ಕೊಡಬೇಕು” ಎಂಬ ಸ್ಯಾಮ್ ‌ಪಿತ್ರೋಡ ಹೇಳಿಕೆಯು ಈಗ ಭಾರಿ ವಿವಾದವನ್ನು ಸೃಷ್ಟಿಸಿದೆ. ಇದನ್ನು ಬಿಜೆಪಿ ಚುನಾವಣಾ ಅಸ್ತ್ರ ಮಾಡಿಕೊಂಡಿದ್ದು, ಕಾಂಗ್ರೆಸ್‌ ಇಕ್ಕಟ್ಟಿಗೆ ಸಿಲುಕಿದೆ. ಈ ಹೇಳಿಕೆಗೂ ನಮಗೂ ಸಂಬಂಧವೇ ಇಲ್ಲವೆಂದು ಸ್ಪಷ್ಟೀಕರಣ ಕೊಡುತ್ತಿದೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಸಹ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಡಿಕೆಶಿ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ, ಈ ರೀತಿ ಮಾಡಲು ಕಾನೂನಿನಲ್ಲಿ ಅವಕಾಶವೇ ಇಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಶುರುವಾಗುವ ಮುನ್ನ ಕಾಂಗ್ರೆಸ್‌ಗೆ ಸ್ಯಾಮ್‌ ಪಿತ್ರೋಡ ಹೇಳಿಕೆ ನುಂಗಲಾರದ ತುತ್ತಾಗಿದೆ. ಕಾರಣ, ಈ ಹೇಳಿಕೆಯನ್ನು ಸರಿಯಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿದೆ. “ಪಿತ್ರಾರ್ಜಿತ ಆಸ್ತಿಗೆ ಕಾಂಗ್ರೆಸ್ ಕೊಕ್ಕೆ” ಎಂಬ ಅಭಿಯಾನವನ್ನೂ ಬಿಜೆಪಿ ಶುರು ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನವರೆಗೂ ಈ ವಿಚಾರವನ್ನು ಪ್ರಸ್ತಾಪ ಮಾಡಲು ತಂತ್ರಗಾರಿಕೆ ಹೆಣೆಯಲಾಗಿದೆ. ಮಾಸ್ ಮತದಾರರನ್ನು ಟಾರ್ಗೆಟ್ ಮಾಡಿ ಈ ವಿಚಾರವನ್ನು ಬಿಜೆಪಿ ಪ್ರಸ್ತಾಪ ಮಾಡುತ್ತಿದೆ. ದಿನೇ ದಿನೇ ಬಿಜೆಪಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಂತೆ ಕಾಂಗ್ರೆಸ್‌ಗೆ ಇದರ ಡ್ಯಾಮೇಜ್‌ನ ಅರಿವಾಗಿದೆ. ಚುನಾವಣೆಯಲ್ಲಿ ಇದು ದೊಡ್ಡ ಹೊಡೆತವನ್ನು ಕೊಡಬಹುದು ಎಂದು ಅಂದಾಜಿಸಿದೆ. ಈ ಕಾರಣಕ್ಕೆ ಎಚ್ಚೆತ್ತುಕೊಂಡ ಕೈಪಡೆ ಈಗ ಸ್ಯಾಮ್‌ ಪಿತ್ರೋಡ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಮಟ್ಟದಲ್ಲಿಯೂ ಸ್ಪಷ್ಟೀಕರಣವನ್ನು ನೀಡಲಾಗಿದೆ. ಆದರೆ, ಬಿಜೆಪಿ ಮಾತ್ರ ಇದನ್ನೂ ಹಳ್ಳಿ ಹಳ್ಳಿಗೂ ಕೊಂಡೊಯ್ಯಲು ಪ್ಲ್ಯಾನ್‌ ಮಾಡಿಕೊಂಡಿದೆ.

ಇದನ್ನೂ ಓದಿ: Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಇಂತಹ ಕಾನೂನನ್ನು ತರಲು ಸಾಧ್ಯವೇ ಇಲ್ಲ. ನಮ್ಮದು ಕೂಡಾ ಆಸ್ತಿ ಇದೆ. ಸ್ಯಾಮ್‌ ಪಿತ್ರೋಡ ಅವರ ಹೇಳಿಕೆಯನ್ನು ತಿರುಚುವ ಕೆಲಸ ಆಗುತ್ತಿದೆ ಎಂದು ಹೇಳಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಸಹ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಣೆ ಮಾಡಿದ್ದಾರೆ.

Continue Reading
Advertisement
Kannada Serials TRP Lakshmi Nivasa In Top Amruthadhaare in Top 5
ಕಿರುತೆರೆ6 mins ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

Lok Sabha Election 2024 No names of election officials in voter list Protest in front of the polling booth
Lok Sabha Election 20249 mins ago

Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!

Reliance Smart Bazar
ವಾಣಿಜ್ಯ19 mins ago

Reliance Smart Bazar: ರಿಲಯನ್ಸ್ ಸ್ಮಾರ್ಟ್ ಬಜಾರ್ ಗ್ರಾಹಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಯಾವೆಲ್ಲ ವಸ್ತುಗಳಿಗೆ ಹೆಚ್ಚಿನ ಬೇಡಿಕೆ?

Ethnic Collection
ಫ್ಯಾಷನ್43 mins ago

Ethnic Collection: ‘ಹೀರಾಮಂಡಿ’ ವೆಬ್ ಸೀರಿಸ್‌ ಪ್ರೇರಿತ ಸಾಂಪ್ರದಾಯಿಕ ಫ್ಯಾಷನ್ ಕಲೆಕ್ಷನ್‌ ಬಿಡುಗಡೆ ಮಾಡಿದ ಅಜಿಯೋ

Self Harming in Bengaluru
ಬೆಂಗಳೂರು44 mins ago

Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ಸಾವು; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

Voting awareness by the newly married couple at the reception
ಕರ್ನಾಟಕ50 mins ago

Lok Sabha Election 2024: ಆರತಕ್ಷತೆಯಲ್ಲಿ ವಧು-ವರರಿಂದ ಮತದಾನ ಜಾಗೃತಿ

Tamannaah Bhatia and Sanjay Dutt
ಕ್ರೀಡೆ55 mins ago

IPL Streaming Case: ಏನಿದು ಐಪಿಎಲ್​ ಲೈವ್ ಸ್ಟ್ರೀಮಿಂಗ್ ಕೇಸ್​; ತಮನ್ನಾ,ಜಾಕ್ವೆಲಿನ್, ಸಂಜಯ್​ ದತ್​ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದೇಕೆ?

World Malaria Day
ಆರೋಗ್ಯ2 hours ago

World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

supreme court wealth redistribution
ಪ್ರಮುಖ ಸುದ್ದಿ2 hours ago

ವಿಸ್ತಾರ Explainer: Wealth redistribution: ನಿಮ್ಮ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬಹುದಾ? ಸುಪ್ರೀಂ ಕೋರ್ಟ್ ಮುಂದಿದೆ ಕೇಸ್‌

Lok Sabha Election 2024 BJP rejects Sam Pitroda statement
Lok Sabha Election 20242 hours ago

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ3 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20245 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌