bjp karnataka to start helpline to protect hindu activists against govt actionBJP Karnataka: ʼಹಿಂದು ಕಾರ್ಯಕರ್ತರʼ ರಕ್ಷಣೆಗೆ ವಕೀಲರ ಭದ್ರಕೋಟೆ: ಸಿದ್ದರಾಮಯ್ಯ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಬಿಜೆಪಿ! - Vistara News

ಕರ್ನಾಟಕ

BJP Karnataka: ʼಹಿಂದು ಕಾರ್ಯಕರ್ತರʼ ರಕ್ಷಣೆಗೆ ವಕೀಲರ ಭದ್ರಕೋಟೆ: ಸಿದ್ದರಾಮಯ್ಯ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಬಿಜೆಪಿ!

ಈ ಹಿಂದೆ ಸಿದ್ದರಾಮಯ್ಯ ಅವಧಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಇನ್ನಿತರೆ ಹಿಂದು ಕಾರ್ಯಕರ್ತರ ವಿರುದ್ಧ ವಿರುದ್ಧ ಪ್ರಕರಣ ದಾಖಲಾಗಿದ್ದವು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೆ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಮೊಕದ್ದಮೆ ಹೂಡುವುದರಿಂದ ರಕ್ಷಿಸಲು ಬಿಜೆಪಿ ಮುಂದಾಗಿದೆ. ಇದಕ್ಕಾಗಿ ರಾಜ್ಯದ ಮೂರು ಕಡೆಗಳಲ್ಲಿ ಒಟ್ಟು 50 ವಕೀಲರ ತಂಡವನ್ನು ಸಿದ್ಧಪಡಿಸಲಾಗಿದೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾನೂನು ಪ್ರಕೋಷ್ಠ ಸಭೆ ಶನಿವಾರ ನಡೆದಿದೆ. ರಾಜ್ಯದ ಬೇರೆಬೇರೆ ಕಡೆಗಳಿಂದ 50 ವಕೀಲರು ಸಭೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಪಕ್ಷದ ಮುಖಂಡರರು ನಮ್ಮ ಕಾರ್ಯಕರ್ತರಿಗೆ ದಮ್ಕಿ ಹಾಕುತ್ತಿದ್ದಾರೆ, ಕಾರ್ಯಕರ್ತರಿಗೆ ಕಿರುಕುಳ ಕೊಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಸಭೆಯಲ್ಲಿ ವಕೀಲರು ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿಂದೆ ಸಿದ್ದರಾಮಯ್ಯ ಅವಧಿಯಲ್ಲಿ ಅನೇಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ಕಾರ್ಯಕರ್ತರಷ್ಟೆ ಅಲ್ಲದೆ, ಹಿಂದು ಪರ, ಬಿಜೆಪಿ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಳ್ಳುವವರ ವಿರುದ್ಧ ಸುಖಾಸುಮ್ಮನೆ ದೂರು ದಾಖಲಿಸಿಕೊಂಡು ರೌಡಿಶೀಟರ್‌ ಪಟ್ಟಿ ತೆರೆಯಲಾಗುತ್ತಿತ್ತು. ಕಾಂಗ್ರೆಸ್ ಪಕ್ಷದ ಕಾನೂನಿನ ದೌರ್ಜನ್ಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಸಭೆಯ ಕುರಿತು ಮಾಹಿತಿ ನೀಡಿದ ಸಂಸದ ತೇಜಸ್ವಿ ಸೂರ್ಯ, ಮುಂದೆ ನಮ್ಮ ಕಾರ್ಯಕರ್ತರ ಉಪಯೋಗಕ್ಕೆ ಹೆಲ್ಪ್ ಲೈನ್ ಬರಲಿದೆ. ಈ ಹೆಲ್ಪ್ ಲೈನ್ 24 ಗಂಟೆ ಕೆಲಸ ಮಾಡಲಿದೆ. ಕಾರ್ಯಕರ್ತರು ರಾಜ್ಯದ ಯಾವ ಭಾಗದಿಂದಲೂ ಪೋನ್ ಮಾಡಬಹುದು. ಕರ್ನಾಟಕದ ಮೂರು ಭಾಗದಲ್ಲಿ ಅಂದರೆ ಬೆಂಗಳೂರು, ಧಾರವಾಡ ಹಾಗೂ ಕಲಬುರಗಿಯಲ್ಲಿ ವಕೀಲರ ತಂಡ ಇರಲಿದೆ.

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸುವ, ಧಮಕಿ ಹಾಕುವ, ಸುಳ್ಳು ಅಪಾದನೆಗಳ ಮೂಲಕ ಕೇಸ್ ದಾಖಲಿಸುವುದು ನಮ್ಮ ಗಮನಕ್ಕೆ ಬಂದಿದೆ. ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಇದೇ ರೀತಿ ದ್ವೇಷದ ರಾಜಕಾರಣ ಮಾಡಲಾಗಿತ್ತು. ನಮ್ಮ ಕಾರ್ಯಕರ್ತರ ಮೇಲೆ‌ ಅಂದು ರೌಡಿ ಶೀಟ್ ಓಪನ್ ಮಾಡುವ ಕೆಲಸ ಆಗಿತ್ತು.

ಹಿಂದೂ ಕಾರ್ಯಕರ್ತರ ಹತ್ಯೆ ಆದಾಗ ಸರಿಯಾಗಿ ಕೇಸ್ ನಡೆಸದೇ ಇದ್ದಿದ್ದೂ ನಮ್ಮ ಗಮನಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರದ ಕಾನೂನಾತ್ಮಕ ದೌರ್ಜನ್ಯಗಳನ್ನು ಎದುರಿಸಲು ಹೆಲ್ಪ್ ಲೈನ್ ನಂಬರ್ ಅನ್ನು ರಾಜ್ಯದಲ್ಲಿ ಘೋಷಣೆ ಮಾಡುತ್ತೇವೆ. ಗಣಪತಿ ಪೆಂಡಾಲ್‌ ಹಾಕಲೂ ಅನುಮತಿಗಾಗಿ ಕಾಯುವ ದೈನೇಸಿ ಸ್ಥಿತಿ ಬಂದಿತ್ತು. ಆ ಸ್ಥಿತಿ ಮತ್ತೆ ಬರದಂತೆ ಕೋರ್ಟ್‌ನಲ್ಲಿ ಪಿಐಎಲ್, ರಿಟ್ ಹಾಕಲು ಬೆಂಗಳೂರು, ಧಾರವಾಡ ಮತ್ತು ಕಲ್ಬುರ್ಗಿಯಲ್ಲಿ ವಕೀಲರ ತಂಡ ಇರಲಿದೆ ಎಂದರು.

ಇದನ್ನೂ ಓದಿ: Odisha Train Accident: ಕನ್ನಡಿಗರ ರಕ್ಷಣೆಗೆ 2013ರಲ್ಲಿದ್ದ ಸಚಿವರನ್ನೇ ನಿಯೋಜಿಸಿದ ಸಿದ್ದರಾಮಯ್ಯ: ಅಪಘಾತ ಸ್ಥಳಕ್ಕೆ ಹೊರಟ ಕರ್ನಾಟಕದ ತಂಡ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

Prajwal Revanna Case: ಏಳು ದಿನಗಳ ಕಾಲ ಸಮಯ ಕೇಳಿ ನೀಡಿರುವ ಅರ್ಜಿಗೆ ಮಾನ್ಯತೆ ಕೊಡಲಾಗುವುದಿಲ್ಲ. ಸಮಯ ಕೊಡಲು ಸಾಧ್ಯವಿಲ್ಲ. ಕೂಡಲೇ ಹಾಜರಾಗಿ ಎಂದು ಇಂದು (ಗುರುವಾರ – ಮೇ 2) ಮತ್ತೊಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಈಗಾಗಲೇ ಕರ್ನಾಟಕ ಸರ್ಕಾರದಿಂದ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ತನಿಖೆಗೆ ಕೂಡಲೇ ಹಾಜರಾಗಿ ಎಂದು ಮತ್ತೊಂದು ನೋಟಿಸ್‌ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಾಗುತ್ತಿದೆ.

VISTARANEWS.COM


on

Prajwal Revanna Case Application seeking exemption from appearing before SIT rejected
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಲು 7 ದಿನಗಳ ವಿನಾಯಿತಿ ಕೋರಿ ಸಲ್ಲಿಸಿರುವ ಅರ್ಜಿ ತಿರಸ್ಕಾರ ಆಗಿದೆ ಎಂದು ಹೇಳಲಾಗುತ್ತಿದೆ.

ಏಳು ದಿನಗಳ ಕಾಲ ಸಮಯ ಕೇಳಿ ನೀಡಿರುವ ಅರ್ಜಿಗೆ ಮಾನ್ಯತೆ ಕೊಡಲಾಗುವುದಿಲ್ಲ. ಸಮಯ ಕೊಡಲು ಸಾಧ್ಯವಿಲ್ಲ. ಕೂಡಲೇ ಹಾಜರಾಗಿ ಎಂದು ಇಂದು (ಗುರುವಾರ – ಮೇ 2) ಮತ್ತೊಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಈಗಾಗಲೇ ಕರ್ನಾಟಕ ಸರ್ಕಾರದಿಂದ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ತನಿಖೆಗೆ ಕೂಡಲೇ ಹಾಜರಾಗಿ ಎಂದು ಮತ್ತೊಂದು ನೋಟಿಸ್‌ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಾಗುತ್ತಿದೆ.

ವಕೀಲರಿಗೂ ನೋಟಿಸ್‌?

ಇನ್ನು ಪ್ರಜ್ವಲ್ ರೇವಣ್ಣ ಪರ ವಕೀಲರಿಗೂ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ. ನಿಮ್ಮ ಕಕ್ಷಿದಾರನಿಗೆ ಬಂದು ವಿಚಾರಣೆಗೆ ಹಾಜರಾಗಲು ತಿಳಿಸಿ ಎಂದು ನೋಟಿಸ್‌ ಮೂಲಕ ಸೂಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ನೋಟಿಸ್‌ ಅನ್ನು ಪ್ರಜ್ವಲ್ ಮನೆ ಮತ್ತು ಕಚೇರಿಗೆ ತೆರಳಿ ಅಂಟಿಸುವ ಬಗ್ಗೆ ಚಿಂತನೆ ನಡೆದಿದೆ. ಎನ್ನಲಾಗಿದೆ. ಪ್ರಜ್ವಲ್ ಎಸ್ಕೇಪ್ ಆಟಕ್ಕೆ ಎಸ್ಐಟಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಹೈಪ್ರೊಫೈಲ್‌ ಕೇಸ್‌ ಆಗಿರುವ ಕಾರಣ ತನಿಖೆಯನ್ನು ಮತ್ತಷ್ಟು ಚುರುಕು ಮಾಡಲು ಸಿದ್ಧತೆ ನಡೆಸಲಾಗಿದೆ.

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಪಕ್ಕಾ?

ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಿದ್ದಲ್ಲದೆ, ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಿರುವ ಹಿನ್ನೆಲೆಯಲ್ಲಿ ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಪಕ್ಕಾ ಎನ್ನಲಾಗಿದೆ. ಈ ನಡುವೆ ಎಸ್ಐಟಿ ಅಧಿಕಾರಿಗಳು ಸಹ ಅವರ ವಿಚಾರಣೆಗೆ ಆತುರ ತೋರುತ್ತಿದ್ದಾರೆ. ಕಾರಣ, ಪ್ರಜ್ವಲ್‌ ಒಬ್ಬರು ಸಂಸದರು ಹಾಗೂ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಇನ್ನು ಅವರ ಕುಟುಂಬದಲ್ಲಿ ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಸಚಿವರು, ಹಾಲಿ ವಿಧಾನ ಪರಿಷತ್‌ ಸದಸ್ಯರು ಇದ್ದಾರೆ. ಹೀಗಿರುವಾಗ ಆರೋಪಿಗೆ ಸಮಯ ಕೊಟ್ಟರೆ ಪ್ರಭಾವ ಬಳಸಿ ಸಾಕ್ಷಿ ನಾಶ ಮಾಡಬಹುದು ಎಂಬ ಹಿನ್ನೆಲೆಯಲ್ಲಿ ಪ್ರಜ್ವಲ್‌ ಬಂಧನಕ್ಕೆ ಮತ್ತಷ್ಟು ಕಸರತ್ತು ನಡೆಸಲಾಗತ್ತಿದೆ.

ಇನ್ನು ಆರೋಪಿ ಪ್ರಜ್ವಲ್‌ ಬಳಿ ಒರಿಜಿನಲ್ ವಿಡಿಯೊಗಳು ಇವೆ. ಹೀಗಾಗಿ ಅವರು ಸಾಕ್ಷಿದಾರರು ಮತ್ತು ಸಂತ್ರಸ್ತರಿಗೆ ಬೆದರಿಸಬಹುದು, ಸಮಯ ಕೊಟ್ಟರೆ ಎಲ್ಲವನ್ನೂ ನಾಶ ಮಾಡಿ ಕೇಸ್ ತಮಗೆ ಅನುಕೂಲ ಆಗುವಂತೆ ಮಾಡಿಕೊಳ್ಳಬಹುದು ಎಂದು ಎಸ್‌ಐಟಿ ಚಿಂತಿಸಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ (Diplomatic Passport) ಅನ್ನು ರದ್ದು ಮಾಡಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಪಾಸ್‌ಪೋರ್ಟ್‌ ರದ್ದು ಮಾಡದೇ ಇದ್ದರೆ ಪ್ರಜ್ವಲ್‌ ಬಂಧನ ಅಸಾಧ್ಯವಾಗಿದ್ದು, ಅವರು ದೇಶದಿಂದ ದೇಶಕ್ಕೆ ಆರಾಮವಾಗಿ ಸಂಚಾರ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನ‌ು ಸಂಕಷ್ಟಕ್ಕೆ ದೂಡಲು ಸಿದ್ದರಾಮಯ್ಯ ಪ್ಲ್ಯಾನ್‌ ಮಾಡಿದ್ದು, ಚೆಂಡನ್ನು ಕೇಂದ್ರ ಸರ್ಕಾರದ ಅಂಗಳಕ್ಕೆ ಹಾಕಿದ್ದಾರೆ.

ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ: Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಅರೆಸ್ಟ್‌ ಮಾಡುವುದು ಸಾಧ್ಯವೇ ಇಲ್ಲ

ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ

ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ.

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಶುರು

ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದಾದರೆ ಕೂಡಲೇ ಬಂಧನ!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅಂತಾರಾಷ್ಟ್ರೀಯ ಕಾನೂನಿನ ಮಾನ್ಯತೆ ಇರುತ್ತದೆ. ಇದನ್ನು ಹೊಂದಿರುವವರು ಗಣ್ಯ ವ್ಯಕ್ತಿಗಳಾಗಿರುತ್ತಾರೆ. ಹೀಗಾಗಿ ಅವರು ಯಾವ ದೇಶದಲ್ಲಿದ್ದರೂ ಆತಿಥೇಯ ರಾಷ್ಟ್ರಗಳಲ್ಲಿ ಬಂಧನ ಮಾಡುವುದು, ವಶಕ್ಕೆ ತೆಗೆದುಕೊಳ್ಳುವಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರವು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಅಂತಹ ವ್ಯಕ್ತಿಯ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ, ಕ್ರಮಕ್ಕೆ ಆ ರಾಷ್ಟ್ರಗಳಿಗೆ ಮನವಿ ಮಾಡಿದಲ್ಲಿ ಬಂಧನ ಸಾಧ್ಯವಿದೆ. ಹೀಗಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಪ್ರಜ್ವಲ್‌ ಭವಿಷ್ಯ ನಿಂತಿದೆ.

Continue Reading

ರಾಯಚೂರು

Temperature Warning : ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

Heat wave : ಹೊರಗೆ ಕಾಲಿಡಲು ಆಗದಷ್ಟು ವಾತಾವರಣ ಕಾದ ಕೆಂಡವಾಗುತ್ತಿದೆ. ಬಿಸಿಲಿನ ಶಾಖಕ್ಕೆ (Temperature Warning) ರಾಯಚೂರು ಯುವಕರು ಬೆಂಕಿ ಇಲ್ಲದೆ ಮೊಟ್ಟೆಯಿಂದ ಆಮ್ಲೆಟ್​ ಮಾಡಿ ತಿಂದಿದ್ದಾರೆ. ಮತ್ತೊಂದು ಕಡೆ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ.

VISTARANEWS.COM


on

By

Temperature Warning
Koo

ರಾಯಚೂರು: ಬಿಸಿಲಿನ ತಾಪ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದು ಜಸ್ಟ್‌ ಸ್ಯಾಂಪಲ್‌ ಇನ್ನೂ ತಾಪಮಾನ (Temperature Warning ) ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಮನೆಯಲ್ಲಿ, ಆಫೀಸ್‌ನಲ್ಲಿ ಎಸಿ ಹಾಕಿಕೊಂಡು ಕುಳಿತುಕೊಳ್ಳುವವರೂ ಕೂಡ ಈ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ಉರಿಯುತ್ತಿರುವ ಸೂರ್ಯನ ಶಾಖಕ್ಕೆ (Heat wave) ಸ್ವಲ್ಪ ಹೊತ್ತು ಮೈಒಡ್ಡಿದ್ರೆ ಸಾಕು ಸುಟ್ಟು ಹೋಗುವಷ್ಟು ತೀವ್ರತೆ ಇದೆ. ಸದ್ಯ ಈ ಉರಿ ಬಿಸಿಲಿನಲ್ಲೇ ರಾಯಚೂರು ಮಂದಿ ಪ್ರಯೋಗವನ್ನು ಮಾಡಿದ್ದಾರೆ. ಬೆಂಕಿ ಇಲ್ಲದೆ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ತಿಂದಿದ್ದಾರೆ.

ಜನರು ಈಗಾಗಲೇ ಬಿಸಿಲಿನ ಶಾಖದಿಂದ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಗೆ ಬರಲು ಆಗದಷ್ಟು ತಾಪಮಾನ ಹೆಚ್ಚಿದೆ. ಆದರೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಯುವಕರು ಪ್ರಯೋಗ ಮಾಡಿದ್ದಾರೆ. ಬಿಸಿಲಿನಿಂದಲೇ ಮೊಟ್ಟೆಯ ಆಮ್ಲೆಟ್ ಮಾಡಿದ್ದಾರೆ.

ಬಿಸಿಲು ಅದ್ಯಾವ ಪರಿ ಇದೆ ಎಂಬ ಕುತೂಹಲಕ್ಕಾಗಿ ಬೆಂಕಿ ಇಲ್ಲದೆ ಬಿಸಿಲಿನಲ್ಲಿ ಒಂದೂವರೆ ಗಂಟೆವರೆಗೆ ಕಬ್ಬಿಣದ ತವಾ ಇಟ್ಟಿದ್ದಾರೆ. ಅದು ಕಾದ ನಂತರ ಮೊಟ್ಟೆ ಒಡೆದು ಆಮ್ಲೆಟ್ ತಯಾರಿಸಿ ತಿಂದಿದ್ದಾರೆ. ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿ ದಿನ 44 ರಿಂದ 45 ಡಿಗ್ರಿ ಸೆಲ್ಸಿಯಸ್‍ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವಿದ್ಯುತ್‌ ಕಂಬದ ಲೈನ್‌ಗಳಲ್ಲಿ ಶಾರ್ಟ್‌ ಸರ್ಕ್ಯೂಟ್‌

ಇತ್ತ ರಾಯಚೂರಿನಲ್ಲಿ ದಿನೇದಿನೆ ಬಿಸಿಲು ಹೆಚ್ಚಳವಾಗುತ್ತಿದ್ದು, ಏರ್ ಕೂಲರ್ ಮತ್ತು ಎಸಿ ಬಳಕೆ ಅಧಿಕವಾಗಿದೆ. ರಾಯಚೂರು ನಗರದ ಗಾಂಧಿ ಚೌಕ್ ಬಳಿಯ ಖಾಸಗಿ ಆಸ್ಪತ್ರೆ ಪಕ್ಕದಲ್ಲಿ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದೆ.

ವಿದ್ಯುತ್ ಕಂಬದಲ್ಲಿದ್ದ ಲೈನ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿನಿಮಾ ಸ್ಟೈಲ್‌ನಲ್ಲಿ ಸ್ಪಾರ್ಕ್ ಉಂಟಾಗಿತ್ತು. ಕೆಲ ಹೊತ್ತು ಸ್ಪಾರ್ಕ್ ನೋಡಿದ ಜನರು ಗಾಬರಿ ಆದರು. ಸದರ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Gangadhar Puttur : ವೇಷ ಕಳಚುತ್ತಿರುವಾಗಲೇ ಯಕ್ಷಗಾನ ಕಲಾವಿದ (Yakshagana Artist) ಗಂಗಾಧರ ಪುತ್ತೂರು ಇಹಲೋಕ ತ್ಯಜಿಸಿದ್ದಾರೆ. ಮುಖದ ಬಣ್ಣವನ್ನು ಅಳಿಸುತ್ತಿರುವಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

VISTARANEWS.COM


on

By

Yakshagana Artist No more
Koo

ಮಂಗಳೂರು: ವೇಷ ಕಳಚುತ್ತಿರುವಾಗಲೇ ಹೃದಯಾಘಾತದಿಂದ (Heart attack) ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ (Yakshagana Artist) ಗಂಗಾಧರ ಪುತ್ತೂರು(60) ಅವರು ಇಹಲೋಕ ತ್ಯಜಿಸಿದ್ದಾರೆ.

ನಿನ್ನೆ ಬುಧವಾರ (ಮೇ 1) ರಾತ್ರಿ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು, ಮುಖದ ಬಣ್ಣವನ್ನು ಅಳಿಸುತ್ತಿರುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪುತ್ತೂರಿನ ಸೇಡಿಯಾಪು ನಿವಾಸಿಯಾಗಿರುವ ಇವರು ಏಳನೇ ತರಗತಿಯವರೆಗೆ ವಿದ್ಯಾಭ್ಯಾಸ ಹೊಂದಿದ್ದರು. ತಮ್ಮ 18ನೇ ವಯಸ್ಸಿಗೆ ಯಕ್ಷಗಾನ ತಿರುಗಾಟ ಆರಂಭಿಸಿದ ಗಂಗಾಧರ ಪುತ್ತೂರು ಸುದೀರ್ಘ 40 ವರ್ಷಗಳಷ್ಟು ಕಾಲ ಯಕ್ಷಗಾನ ರಂಗದಲ್ಲಿ ವ್ಯವಸಾಯ ಮಾಡಿದ್ದರು. ಕರ್ಗಲ್ಲು ವಿಶ್ವೇಶ್ವರ ಭಟ್ ಹಾಗೂ ಕೆ.ಗೋವಿಂದ ಭಟ್ ಅವರಿಂದ ನಾಟ್ಯಾಭ್ಯಾಸ ಮಾಡಿದರು.

ಯಕ್ಷಗಾನ ರಂಗದ ಸವ್ಯಸಾಚಿ ಕಲಾವಿದರಾದ ಇವರು ಸ್ತ್ರೀವೇಷದಿಂದ ಹಿಡಿದು ಪುಂಡುವೇಷ, ರಾಜವೇಷ, ಹೆಣ್ಣುಬಣ್ಣ ಸಮರ್ಥವಾಗಿ ನಿರ್ವಹಿಸುತ್ತಿದ್ದರು. 30 ವರ್ಷಗಳಿಗಿಂತಲೂ ಅಧಿಕ ಕಾಲದಿಂದ ಗಂಗಾಧರ ಪುತ್ತೂರು ಧರ್ಮಸ್ಥಳ ಮೇಳದಲ್ಲಿಯೇ ಕಲಾವಿದರಾಗಿ ತಿರುಗಾಟ ಮಾಡಿದ್ದರು.

ಇದನ್ನೂ ಓದಿ: Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) (Srinivas Prasad) ಅವರು ತೀವ್ರ ಹೃದಯಾಘಾತದಿಂದ (Heart Aattack) ವಿಧಿವಶರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ 1:20ಕ್ಕೆ (Manipal Hospital ) ಅವರು ನಿಧನರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಅವರು ಏಪ್ರಿಲ್ 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎನ್ನಲಾಗಿದೆ.

ಇನ್ನು ಈ ಬಗ್ಗೆ ಶ್ರೀನಿವಾಸ್ ಪ್ರಸಾದ್ ಅಳಿಯ ಹರ್ಷವರ್ಧನ್ ಮಾಹಿತಿ ನೀಡಿದ್ದು, ಶ್ರೀನಿವಾಸ್ ಪ್ರಸಾದ್ ಅವರು ರಾತ್ರಿ 1:20ರ ಸುಮಾರಿಗೆ ತೀವ್ರವಾದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ರೀತಿಯಲ್ಲಿ ಪ್ರಯತ್ನ ಮಾಡಿದ್ದರು. ಅವರ ಈ ಅಗಲಿಕೆ ಇಡೀ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟ. ನನಗೆ ರಾಜಕೀಯಕ್ಕೆ ಜನ್ಮ ಕೊಟ್ಟಂತವರು. ರಾಜಕೀಯದಲ್ಲಿ ಏಕಾಂಗಿಯಾಗಿ ಹೋರಾಟ ಮಾಡೋದಕ್ಕೆ ಬಿಟ್ಟು ಹೋಗಿದ್ದಾರೆ. ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡಿದ್ದಾರೆ, ಹೋರಾಟದ ಜೀವಿ ಅವರು. ಐದು ವರ್ಷದ ಹಿಂದೆ ನಾನು ನಂಜನಗೂಡಿನಲ್ಲಿ ಗೆದ್ದಾಗ ಅವರು ಲೋಕಸಭೆಯಲ್ಲಿ ಸ್ಪರ್ಧೆ ಮಾಡ್ತಿನಿ ಅಂದರು. ನನ್ನನ್ನು ಅವರು ತಂದೆ ಸ್ಥಾನದಲ್ಲಿ ನಿಂತು ರಾಜಕೀಯವಾಗಿ ಬೆಳೆಸಿದ್ದಾರೆ ಯಾವುದೆ ವಿಚಾರ ಆಗಿದ್ದರೂ ಅವರ ಜೊತೆ ಚರ್ಚೆ ಮಾಡಿಯೇ ನಿರ್ಧಾರಕ್ಕೆ ಬರುತ್ತಿದೆ. ಈಗ ಯಾರ ಬಳಿ ಹೋಗಿ ಕೇಳಲಿ ಎಂದು ಅನಿಸಿ ಬಿಟ್ಟಿದೆ ಎಂದು ಭಾವುಕರಾಗಿ ಮಾತನಾಡಿದರು.

ಇದನ್ನೂ ಓದಿ:Raja Marga Column :‌ ಕಣ್ಣೇ ಕಾಣದ ಆಕೆ ಎರಡು ಬಾರಿ ಐಎಎಸ್‌ ಪಾಸ್‌ ಮಾಡಿದ್ದರು!

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

Prajwal Revanna case: ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಎಸ್‌ಐಟಿ (SIT) A2 ಆಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ತನಿಖೆಗೊಳಪಡಿಸುವುದು ಅಗತ್ಯವಾಗಿದ್ದು, ಅವರನ್ನು ಜರ್ಮನಿಯಿಂದ ಕರೆತರಬೇಕಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್‌ ವಿಭಾಗಕ್ಕೆ ಲುಕೌಟ್‌ ನೋಟೀಸ್‌ ಸರ್ವ್‌ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣಗಳ ಇಮಿಗ್ರೇಷನ್‍ಗೆ ಎಸ್‍ಐಟಿ ಅಧಿಕಾರಿಗಳು ಲುಕೌಟ್‌ ನೋಟಿಸ್ ನೀಡಿದ್ದಾರೆ .

VISTARANEWS.COM


on

prajwal revanna case look out notice
Koo

ಬೆಂಗಳೂರು: ಹಾಸನದ ಅಶ್ಲೀಲ ವೀಡಿಯೋ (Obscene video) ಪ್ರಕರಣ ಸಂಬಂಧ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna case) ಅವರಿಗೆ ಕರ್ನಾಟಕ ಸರ್ಕಾರದಿಂದ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ.

ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಎಸ್‌ಐಟಿ (SIT) A2 ಆಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ತನಿಖೆಗೊಳಪಡಿಸುವುದು ಅಗತ್ಯವಾಗಿದ್ದು, ಅವರನ್ನು ಜರ್ಮನಿಯಿಂದ ಕರೆತರಬೇಕಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್‌ ವಿಭಾಗಕ್ಕೆ ಲುಕೌಟ್‌ ನೋಟೀಸ್‌ ಸರ್ವ್‌ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣಗಳ ಇಮಿಗ್ರೇಷನ್‍ಗೆ ಎಸ್‍ಐಟಿ ಅಧಿಕಾರಿಗಳು ಲುಕೌಟ್‌ ನೋಟಿಸ್ ನೀಡಿದ್ದಾರೆ ಎನ್ನಲಾಗಿದ್ದು, ಆ ಮೂಲಕ ಪ್ರಜ್ವಲ್‌ ರೇವಣ್ಣ ಕಾಣಿಸಿಕೊಂಡ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಈ ನಡುವೆ ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ. ಅವರು ಎಸ್‍ಐಟಿ ಮುಖ್ಯಸ್ಥ ರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಇದರಲ್ಲಿ ಪ್ರಜ್ವಲ್ ಅವರು ಮೇ 15ರಂದು ಭಾರತಕ್ಕೆ ವಾಪಸ್ಸು ಬರುವ ಬಗ್ಗೆ ಮಾಹಿತಿ ದೊರಕಿದೆ. ಆದರೆ ಲುಫ್ತಾನ್ಸಾ ಏರ್ಲೈನ್ಸ್‌ನಲ್ಲಿ ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ಬೆಂಗಳೂರಿಗೆ ಪ್ರಜ್ವಲ್‌ ಬುಕ್‌ ಮಾಡಿದ ಟಿಕೆಟ್‌ನ ಪ್ರತಿ ಲಭ್ಯವಾಗಿದ್ದು, ಮೇ 15ರಂದು ಬುಕ್‌ ಮಾಡಿದ್ದಾರೆ.

ಏನಿದು ಲುಕ್ಔಟ್‌ ನೋಟಿಸ್?

ತಲೆಮರೆಸಿಕೊಂಡಿರುವ ಅಥವಾ ಕಾನೂನು ಜಾರಿ ಸಂಸ್ಥೆಗಳಿಗೆ ಬೇಕಾಗಿರುವ ವ್ಯಕ್ತಿಯು ದೇಶವನ್ನು ತೊರೆಯಲು ಸಾಧ್ಯವಾಗಂತೆ ಖಚಿತಪಡಿಸಿಕೊಳ್ಳಲು ಎಲ್ಒಸಿ ನೀಡಲಾಗುತ್ತದೆ. ಇದನ್ನು ಹೆಚ್ಚಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿನ ವಲಸೆ ತಪಾಸಣಾ ಕೇಂದ್ರಗಳಲ್ಲಿ ತಪಾಸಣೆಗೆ ಬಳಸಲಾಗುತ್ತದೆ. ಆದರೆ ಪ್ರಜ್ವಲ್‌ ಈಗಾಗಲೇ ಜರ್ಮನಿಯಲ್ಲಿದ್ದು, ವಿಮಾನ ನಿಲ್ದಾಣದಲ್ಲಿ ಮರಳುವ ಹೊತ್ತಿಗೆ ಬಂಧಿಸಲು ಚಿಂತಿಸಲಾಗಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಈ ಮೂಲಕ ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ಸೃಷ್ಟಿಸುವ ತಂತ್ರ ಇದೆಂದು ಹೇಳಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಏಪ್ರಿಲ್ 27-28ರಂದು ರಾತ್ರೋರಾತ್ರಿ ಬೆಂಗಳೂರಿನಿಂದ ಜರ್ಮನಿಗೆ ತೆರಳಿದ್ದಾರೆ. ಆಪಾದಿತ ಲೈಂಗಿಕ ಹಗರಣದ ತನಿಖೆಗೆ ಎಸ್‌ಐಟಿಯನ್ನು ಸ್ಥಾಪಿಸುವ ಕೆಲವೇ ಗಂಟೆಗಳ ಮೊದಲು ಅವರು ಪರಾರಿಯಾಗಿದ್ದಾರೆ. ಮೇ 1ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಮಧ್ಯಪ್ರವೇಶಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕೇಂದ್ರ ಸರ್ಕಾರದ ಕಚೇರಿಗಳನ್ನು ಬಳಸಿಕೊಂಡು ಪರಾರಿಯಾದ ಸಂಸದರನ್ನು ಭಾರತಕ್ಕೆ ಕರೆತರಲು ಖಚಿತಪಡಿಸಿಕೊಳ್ಳುವಂತೆ ಕೋರಿದ್ದರು.

ತನಿಖೆಗೆ ಅಗತ್ಯವಾದಾಗ ಪ್ರಜ್ವಲ್‌ ಭಾರತಕ್ಕೆ ಮರಳಲಿದ್ದಾನೆ ಎಂದು ಎಚ್‌ ಡಿ ರೇವಣ್ಣ ಹೇಳಿದ್ದಾರೆ. A1 ಆಗಿರುವ ರೇವಣ್ಣ ಅವರೂ ಎಸ್‌ಐಟಿ ಮುಂದೆ ತನಿಖೆಗೆ ಒಳಗಾಗಬೇಕಿದೆ. ಅವರಿಗೂ ನೋಟೀಸ್‌ ಜಾರಿ ಮಾಡಲಾಗಿದೆ. ಇಂದು ಅಥವಾ ನಾಳೆ ಅವರು ತನಿಖೆಗೆ ಹಾಜರಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

Continue Reading
Advertisement
Prajwal Revanna Case Application seeking exemption from appearing before SIT rejected
ಕ್ರೈಂ8 seconds ago

Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

IPL 2024
ಕ್ರೀಡೆ16 seconds ago

IPL 2024: ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ಪಡೆದ ಗಾಯಕ್ವಾಡ್​; ಪರ್ಪಲ್​ ಕ್ಯಾಪ್​ ಹೋಲ್ಡರ್​ ಯಾರು?

Temperature Warning
ರಾಯಚೂರು2 mins ago

Temperature Warning : ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

Swara Bhasker reveals big difference between Kangana Ranaut and herself
ಬಾಲಿವುಡ್3 mins ago

Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Yakshagana Artist No more
ದಕ್ಷಿಣ ಕನ್ನಡ22 mins ago

Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

prajwal revanna case look out notice
ಪ್ರಮುಖ ಸುದ್ದಿ29 mins ago

Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

Star Suvarna Kannada Janaki Samsara
ಕಿರುತೆರೆ40 mins ago

Star Suvarna Kannada: ಪ್ರೀತಿಯ ಸ್ವಾದವನ್ನು ಹೊತ್ತು ಬರುತ್ತಿದೆ ಈ ಹೊಸ ಕಥೆ! ʻಜಾನಕಿ ಸಂಸಾರʼ ಯಾವಾಗ?

T20 World Cup
ಕ್ರಿಕೆಟ್47 mins ago

T20 World Cup: ಟಿ20 ವಿಶ್ವಕಪ್​ ತಂಡ ಸೇರಲು ರಾಹುಲ್​ಗೆ ಇನ್ನೂ ಇದೆ ಅವಕಾಶ

Health Tips
ಆರೋಗ್ಯ52 mins ago

Health Tips: ಕಿಡ್ನಿಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡನ್ನು ಹೀಗೆ ಬಳಸಿ…

Gangster Goldy Brar
ವಿದೇಶ59 mins ago

Gangster Goldy Brar:”ಶೂಟೌಟ್‌ನಲ್ಲಿ ಸತ್ತಿದ್ದು ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಅಲ್ಲ”…ವದಂತಿಗೆ ತೆರೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌