ಬೆಂಗಳೂರು: ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಆ ಸಮುದಾಯದ ಜನರು ಪಕ್ಷದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಹಾಗಾಗಿ ಟಿಕೆಟ್ ಹಂಚಿಕೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ.
ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾರಾಯಣಸ್ವಾಮಿ, ಗುರುವಾರ ನಾಮಪತ್ರ ಸಲ್ಲಿಕೆ ಮುಗಿದಿದೆ. ಬಿಜೆಪಿಯಿಂದ 224ಕ್ಷೇತ್ರಗಳಿಗೂ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಎಲ್ಲ ಅಭ್ಯರ್ಥಿಗಳೂ ಗೆಲ್ಲಬೇಕು, ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡಬೇಕು.
ಮೋದಿಯವರು ಕೈಗೊಂಡ ಅಭಿವೃದ್ಧಿ ಕೆಲಸ, ರಾಜ್ಯದ ಅಭಿವೃದ್ಧಿ ಕೆಲಸವನ್ನು ಜನರ ಮುಂದಿಡಲಾಗಿದೆ. ರಾಜ್ಯದಲ್ಲಿ ವಿಶೇಷವಾಗಿ ವೀರಶೈವ ಸಮಾಜ ಹೆಚ್ಚಿದೆ. ಆ ಜನ ಬಿಜೆಪಿಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಅವರಿಗೆ ಹೆಚ್ಚು ಪ್ರಾತಿನಿಧ್ಯ ಕೊಡಲಾಗಿದೆ ಎಂದರು.
ಎಲ್ಲಾ ಸಮುದಾಯಗಳಿಗೂ ಟಿಕೆಟ್ ಹಂಚಲಾಗಿದೆ. ಎಲ್ಲ ಸಮುದಾಯಗಳಿಂದ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಎಲ್ಲ ಬಿಜೆಪಿ ಕಾರ್ಯಕರ್ತರೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಡಬಲ್ ಎಂಜಿನ್ ಸರ್ಕಾರ ರಚನೆ ಮಾಡಬೇಕು. ಕಾರ್ಯಕರ್ತರು ಉತ್ಸುಕರಾಗಿರಬೇಕು ಎಂದರು.
ಕಾಂಗ್ರೆಸ್ ಕೆಲವು ಸ್ಟೇಟ್ಮೆಂಟ್ ಕೊಟ್ಟು, ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಬಿಜೆಪಿ ಕೇಂದ್ರ, ರಾಜ್ಯ ಡಬಲ್ ಎಂಜಿನ್ ಸರ್ಕಾರ ಉತ್ತಮ ಕೆಲಸ ಮಾಡಿದೆ. ಹಾಗಾಗಿ ಜನರಿಗೆ ನಮ್ಮ ಯೋಜನೆ ಬಗ್ಗೆ ತಿಳಿಸಬೇಕು. ಬಿಜೆಪಿ ಕೊಟ್ಟಿರುವ ಮೀಸಲಾತಿಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತೆಗೆದುಹಾಕ್ತೀವಿ ಅಂತ ಹೇಳ್ತಿದ್ದಾರೆ. ಮೀಸಲಾತಿ ಅನುಗುಣವಾಗಿ ಈಗಾಗಲೇ ಜಾರಿಗೆ ತರಲಾಗಿದೆ. ಅದರಂತೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಲಾಗಿದೆ. ಯಾವ ಮೀಸಲಾತಿ ತೆಗೆಯುತ್ತೇವೆ ಅಂತ ಕಾಂಗ್ರೆಸ್ ಹೇಳಲಿ. ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಒಕ್ಕಲಿಗರಿಗೆ ಮೀಸಲಾತಿ ಕೊಡಬೇಡಿ ಅಂತ ನೇರವಾಗಿ ಹೇಳಿ ಎಂದು ಕಾಂಗ್ರೆಸ್‌ಗೆ ಸವಾಲು ಹಾಕಿದರು.
ಇದನ್ನೂ ಓದಿ: Inside Story: ಬಿಜೆಪಿ ಅಧಿಕಾರಕ್ಕೆ ಬಂದರೆ ಲಿಂಗಾಯತ ಸಿಎಂ ಎಂಬ ವಾಗ್ದಾನ: ಹಾಗಾದರೆ ಮುಖ್ಯಮಂತ್ರಿ ಆಗುವವರು ಯಾರು?