ಬೆಂಗಳೂರು, ಕರ್ನಾಟಕ: ಸರ್ಕಾರಿ ವಾಹನವನ್ನು ಸ್ವಂತ ಕೆಲಸಕ್ಕಾಗಿ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯ ನಾಯಕಿ, ನಟಿ ತಾರಾ (Tara) ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎಲೆಕ್ಷನ್ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಸಿದ್ದರಾಯ ತಾವರೆಕೇಡ್ ಅವರ ದೂರಿನ ಅನ್ವಯ ಪ್ರಕರಣವನ್ನು ದಾಖಲಿಸಲಾಗಿದೆ(Karnataka Election 2023).
ನಟಿ ತಾರಾ ವಿರುದ್ಧ ದಾಖಲಾದ ಎಫ್ಐಆರ್ ಪ್ರತಿ
ನಟಿ ತಾರಾ ಅವರು ಕೆಎ -04 ಎಂ ವಿ 1977 ನಂಬರಿನ ಸರ್ಕಾರಿ ವಾಹನವನ್ನು ಬಳಕೆ ಮಾಡುತ್ತಿದ್ದರು. ಈ ಬಗ್ಗೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ವಿಡಿಯೋ ಚಿತ್ರಿಕರಣ ಮಾಡಿ, ಫ್ಲೈಯಿಂಗ್ ಸ್ಕ್ವಾಡ್ ಗಮನಕ್ಕೆ ತಂದಿದ್ದರು. ಈ ದೂರು ಸ್ವೀಕರಿಸಿದ ಅಧಿಕಾರಿಗಳು, ಪರಿಶೀಲನೆ ನಡೆಸಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: Karnataka Election : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ; ಸೊರಬದ ಎಸ್‍ಪಿ ಅಭ್ಯರ್ಥಿ ಪರಶುರಾಮ್ ವಿರುದ್ಧ ಪ್ರಕರಣ ದಾಖಲು
ಮೊದಲು ಎನ್‌ಸಿಆರ್ ದಾಖಲಿಸಿ ನಂತರ ನ್ಯಾಯಾಲಯದ ಅನುಮತಿ ಪಡೆದು ಎಫ್ಐಆರ್ ದಾಖಲು ಮಾಡಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಸರ್ಕಾರದ ರಾಜಕೀಯ ಹುದ್ದೆಗಳಲ್ಲಿ ಇರುವವರು ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತಿಲ್ಲ. ತಾರಾ ಅವರು ಸರ್ಕಾರಿ ವಾಹನವನ್ನು ತಮ್ಮ ಸ್ವಂತ ಕೆಲಸಕ್ಕೆ ಬಳಸಿರುವುದು ಪ್ರಕರಣ ದಾಖಲಾಗಿದೆ.