Site icon Vistara News

Assembly Elections 2023: ಮೂರು ರಾಜ್ಯಗಳಲ್ಲಿ ಜಯಭೇರಿ; ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

Bjp Leaders celebration

ಬೆಂಗಳೂರು: ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ (Assembly Elections 2023) ಬಿಜೆಪಿ ಗೆಲುವು ಪಡೆದ ಹಿನ್ನೆಲೆಯಲ್ಲಿ ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ (BJP office) ಬಿಜೆಪಿ ನಾಯಕರು, ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಬಿಜೆಪಿ ಮುಖಂಡ ನಂದೀಶ್ ರೆಡ್ಡಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

ಕಾಂಗ್ರೆಸ್ ಗ್ಯಾರಂಟಿಗಳಿಗೆ ವಿಜಯೇಂದ್ರ ಟೀಕೆ! | B Y Vijayendra | Election Result | Vistara News

ಇದನ್ನೂ ಓದಿ | Assembly Elections 2023 : ರಾಜ್ಯದಿಂದ ಹೋದ ಹಣದ ಥೈಲಿಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಿಸಿವೆ: ಎಚ್‌ಡಿಕೆ

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧೆಡೆ ಬಿಜೆಪಿಯಿಂದ ವಿಜಯೋತ್ಸವ ಆಚರಿಸಲಾಗಿದೆ. ಕೊಪ್ಪಳ, ಹಾವೇರಿ, ಬಳ್ಳಾರಿ, ಮಂಡ್ಯ, ಕೊಡಗಿನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ವಿಜಯಯಾತ್ರೆ ಲೋಕಸಭೆ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದ ವಿಜಯೇಂದ್ರ

ನವದೆಹಲಿ: ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ವಿರೋಧಪಕ್ಷಗಳು ಬೊಬ್ಬೆ ಹೊಡೆಯುತ್ತಿದ್ದವು. ಆದರೆ, ದೇಶದಲ್ಲಿ ವಾತಾವರಣ ಬಿಜೆಪಿ ಪರವಾಗಿದ್ದು, ಮೋದಿ ಪರವಾದ ಬಯಕೆ ಇದೆ ಎಂದು ಜನತೆ ಉತ್ತರ ಕೊಟ್ಟಿದ್ದಾರೆ. ಐದು ರಾಜ್ಯಗಳ ಚುನಾವಣೆ ಸೆಮಿಫೈನಲ್ಸ್ ಎನ್ನುವಂತೆ ವ್ಯಾಖ್ಯಾನವಿತ್ತು, ಅಲೆಯಲ್ಲ, ಸುನಾಮಿ ರೀತಿಯಲ್ಲಿ ಬಿಜೆಪಿ ಪರವಾಗಿ ಜನ ಮತನೀಡಿದ್ದಾರೆ. ವಿಜಯಯಾತ್ರೆ ಇಲ್ಲಿಗೆ ನಿಲ್ಲುವುದಿಲ್ಲ, ಲೋಕಸಭೆ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನ ದೇಶ ರಕ್ಷಣೆಯ ಗ್ಯಾರಂಟಿ ಬಯಸುತ್ತಿದ್ದಾರೆ. ಅಧಿಕಾರ ಕಬಳಿಸುವ ಆಮಿಷದ ಗ್ಯಾರಂಟಿ ಅಲ್ಲ ಎನ್ನುವುದು ಗೊತ್ತಾಗಿದೆ. ಕಳೆದ ವಿಧಾನಸಭಾ ಚುನಾವಣೆ ಕರ್ನಾಟಕದಲ್ಲಿ ಗ್ಯಾರಂಟಿ ಆಮಿಷ ಒಡ್ಡಲಾಗಿತ್ತು, ರಾಜ್ಯದ ಜನ ಪಶ್ಚಾತ್ತಾಪ ಪಡ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸ ಕುಂಟಿತವಾಗಿದೆ. ಕಳೆದ 6 ತಿಂಗಳ ಕಾರ್ಯವೈಖರಿಗೆ ಜನ ಬೇಸತ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ರಾಜ್ಯದ ಎಲ್ಲಾ 28 ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇವತ್ತಿನ ಫಲಿತಾಂಶ ತುಂಬಾ ಸಂತೋಷ ಕೊಟ್ಟಿದೆ. ಮೂರನೇ ಬಾರಿ ಮೋದಿ ಪ್ರಧಾನಿಯಾಗಲಿದ್ದಾರೆ. ತೆಲಂಗಾಣದಲ್ಲಿ ಬಹಳ ನಿರೀಕ್ಷೆ ಇರಲಿಲ್ಲ, ಕರ್ನಾಟಕ ಫಲಿತಾಂಶದಿಂದ‌ ನಮ್ಮಗೆ ಹಿನ್ನಡೆಯಾಗಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಗ್ಯಾರಂಟಿ ಎಲ್ಲ ಕಡೆ ವರ್ಕ್ ಆಗಿಲ್ಲ. ಕರ್ನಾಟಕದಲ್ಲಿ ಮತದಾರರ ಕಣ್ಣಿಗೆ ಬೂದಿ ಎರಚಿದಂತೆ, ತೆಲಂಗಾಣದಲ್ಲೂ ಬೂದಿ ಎರಚಿ ಗೆದ್ದಿದ್ದಾರೆ. ಬಿಆರ್‌ಎಸ್ ಆಡಳಿತ ವಿರೋಧಿ ಅಲೆ ಬಳಸಿಕೊಳ್ಳಲು ನಮಗೆ ಸಾಧ್ಯವಾಗಲಿಲ್ಲ ಎಂದು ಹೇಳಿದರು.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Exit mobile version