BJP leaders from Aurad taluk resign from the party en masse Karnataka election 2023 Updates Karnataka election 2023: ಔರಾದ್ ತಾಲೂಕಿನ ಬಿಜೆಪಿ ಮುಖಂಡರಿಂದ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ - Vistara News

ಕರ್ನಾಟಕ

Karnataka election 2023: ಔರಾದ್ ತಾಲೂಕಿನ ಬಿಜೆಪಿ ಮುಖಂಡರಿಂದ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ

Assembly Election: ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಸರ್ವಾಧಿಕಾರಿ ಧೋರಣೆ, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ಔರಾದ್ ತಾಲೂಕಿನ ಬಿಜೆಪಿಯ ಹಲವು ಮುಖಂಡರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.

VISTARANEWS.COM


on

Karnataka election 2023 BJP leaders from Aurad taluk resign from the party en masse
ಔರಾದ್ ತಾಲೂಕಿನ ಬಿಜೆಪಿಯ ಹಲವು ಮುಖಂಡರು ರಾಜೀನಾಮೆಗೆ ಮುನ್ನ ಕಮಲನಗರ ಪಟ್ಟಣದ ಫಂಕ್ಷನ್ ಹಾಲ್‍ನಲ್ಲಿ ಸಭೆಯನ್ನು ನಡೆಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಮಲನಗರ: ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ವಿರುದ್ಧ ಸಿಡಿದೆದ್ದಿರುವ ಔರಾದ್ ತಾಲೂಕಿನ ಬಿಜೆಪಿಯ ಹಲವು ಮುಖಂಡರು ಮಂಗಳವಾರ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ (Resign) ಸಲ್ಲಿಸಿದ್ದಾರೆ. ಚುನಾವಣೆ (Karnataka election 2023) ಹೊತ್ತಿನಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದು ಬಿಜೆಪಿಗೆ ಆಘಾತವನ್ನುಂಟು ಮಾಡಿದೆ.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ ಟೊಣ್ಣೆ, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಬಂಡೆಪ್ಪ ಕಂಟೆ, ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಚಂದ್ರಶೇಖರ ದೇಶಮುಖ, ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಸುಚಿತ್ರಾ ಹಂಗರಗಿ, ಜಿಲ್ಲಾ ಮಾಜಿ ಕಾರ್ಯಕಾರಿಣಿ ಸದಸ್ಯ, ಚಾಂದೋರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೀಪಕ ಪಾಟೀಲ ಚಾಂದೋರಿ, ಔರಾದ್ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀರಂಗ ಪರಿಹಾರ, ಔರಾದ್ ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜ್ಞಾನೇಶ್ವರ ಪಾಟೀಲ, ಮುಖಂಡ ವಸಂತ ದೇಸಾಯಿ ಮೊದಲಾದವರು ಬಿಜೆಪಿಗೆ ರಾಜೀನಾಮೆ ನೀಡಿದವರಲ್ಲಿ ಸೇರಿದ್ದಾರೆ.

ಇ-ಮೇಲ್ ಮೂಲಕ ರಾಜೀನಾಮೆ

ಬಿಜೆಪಿ ವರಿಷ್ಠರಿಗೆ ಇ-ಮೇಲ್ ಮೂಲಕ ರಾಜೀನಾಮೆ ಪತ್ರದ ಪ್ರತಿಯನ್ನು ಕಳಿಸಿಕೊಟ್ಟಿದ್ದಾಗಿ ಕಮಲನಗರ ಪಟ್ಟಣದಲ್ಲಿ ಈ ಮುಖಂಡರು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ: Congress Manifesto : ಮೀಸಲಾತಿ ಪ್ರಮಾಣ ಶೇ. 50 ರಿಂದ ಶೇ. 75 ಕ್ಕೆ ಹೆಚ್ಚಳ; ಮುಸ್ಲಿಮರ ಶೇ.4 ಮೀಸಲು ಮರುಸ್ಥಾಪನೆ

ಚೌವ್ಹಾಣ್ ಮುಕ್ತ ಔರಾದ್ ತಾಲೂಕು ನಮ್ಮ ಗುರಿ

ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರ ಸರ್ವಾಧಿಕಾರಿ ಧೋರಣೆಯಿಂದಾಗಿ ಪಕ್ಷ ತೊರೆದಿದ್ದೇವೆ. ಪಕ್ಷ ಹಾಗೂ ವರಿಷ್ಠರ ಬಗ್ಗೆ ಗೌರವ ಇದೆ. ಬೇರೆ ಯಾವ ಪಕ್ಷಕ್ಕೂ ಸೇರುತ್ತಿಲ್ಲ. ಪ್ರಭು ಚೌವಾಣ್ ಮುಕ್ತ ಔರಾದ್ ತಾಲೂಕು ಮಾಡುವುದೇ ತಮ್ಮ ಗುರಿಯಾಗಿದೆ ಎಂದು ಹೇಳಿದರು.

ಅಸಮಾಧಾನದ ಹೊಗೆ

2008 ರಲ್ಲಿ ಪ್ರಭು ಚೌವ್ಹಾಣ್ ಅವರನ್ನು ಕ್ಷೇತ್ರಕ್ಕೆ ಕರೆ ತಂದು, ಕ್ಷೇತ್ರದಾದ್ಯಂತ ಸಂಚರಿಸಿ, ಸಂಘಟನೆ ಬಲಪಡಿಸಿ, ಅವರನ್ನು ಸತತ ಮೂರು ಬಾರಿ ಗೆಲ್ಲಿಸಿದ್ದೇವೆ. ಆದರೆ, ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಕೊಡದ ಕಾರಣ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಲ್ಲೇ ಪ್ರಭು ಚೌವಾಣ್ ಅವರ ವಿರುದ್ಧ ಅಸಮಾಧಾನದ ಹೊಗೆಯಾಗುಡುತ್ತಿದೆ ಎಂದು ತಿಳಿಸಿದರು.

ಹಿರಿತನ, ಪಕ್ಷ ನಿಷ್ಠೆ ಪರಿಗಣಿಸಿ ಪಕ್ಷ ಅಥವಾ ಸರ್ಕಾರದ ನಿಗಮ, ಮಂಡಳಿಗಳಲ್ಲಿ ಪ್ರಾತಿನಿಧ್ಯ ಕೊಡಿಸಿಲ್ಲ. ಮೂರು-ನಾಲ್ಕು ಜನರಿಗೆ ಮಾತ್ರ ಕಾಮಗಾರಿಗಳ ಗುತ್ತಿಗೆ ಕೊಡಿಸುತ್ತಿದ್ದಾರೆ. ಅದರಲ್ಲಿ ಅವರ ಪಾಲು ಇರುವುದೇ ಇದಕ್ಕೆ ಕಾರಣ. ಕಾರ್ಯಕರ್ತರ ಹಿತದ ಬಗ್ಗೆ ಚಿಂತಿಸುತ್ತಿಲ್ಲ. ಗೌರವವನ್ನೂ ಕೊಡುತ್ತಿಲ್ಲ ಎಂದು ಬೇಸರ ಹೊರಹಾಕಿದರು.

ವಿಧಾನಸಭೆ ಚುನಾವಣೆ ಪ್ರಕ್ರಿಯೆ ಆರಂಭವಾದ ನಂತರ ಬೇರೆ ಪಕ್ಷದವರಿಗೆ ಕರೆ ತಂದು ಮಣೆ ಹಾಕಿದ್ದಾರೆ. ಆದರೆ, ಮೂಲ ಬಿಜೆಪಿಗರಿಗೆ ಈವರೆಗೂ ಆಹ್ವಾನ ನೀಡಿಲ್ಲ. ಹೀಗಾಗಿ ನಮ್ಮ ಸ್ವಾಭಿಮಾನಕ್ಕಾಗಿ ಕ್ಷೇತ್ರದಲ್ಲಿ ಬೆಳೆಸಿದ ಪಕ್ಷಕ್ಕೆ ಭಾರದ ಮನಸ್ಸಿನಿಂದ ರಾಜೀನಾಮೆ ಕೊಟ್ಟಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Congress Manifesto : ದ್ವೇಷ ಬಿತ್ತಿದರೆ ಬಜರಂಗ ದಳ ನಿಷೇಧ; ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಎಚ್ಚರಿಕೆ

ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ

ಪ್ರಭು ಚೌವ್ಹಾಣ್ ಅವರು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಪ್ರತಿ ಚುನಾವಣೆಯಲ್ಲಿ ಅವರ ಗೆಲುವಿನ ಅಂತರ ಕಡಿಮೆಯಾಗುತ್ತ ನಡೆದಿದೆ. ಈ ಬಾರಿಯ ಚುನಾವಣೆಯಲ್ಲಿ ಅವರು ಗೆಲ್ಲುವುದು ಕಷ್ಟ. ಹೀಗಾಗಿ ಬೇರೆ ಅಭ್ಯರ್ಥಿಗೆ ಟಿಕೆಟ್ ಕೊಡಬೇಕೆಂದು ಬೆಂಗಳೂರಿನಲ್ಲಿ ನಿಯೋಗದಲ್ಲಿ ವರಿಷ್ಠರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ಆದರೆ, ಅವರಿಗೇ ಟಿಕೆಟ್ ಕೊಡಲಾಗಿದೆ. ಹೀಗಾಗಿ ಪಕ್ಷ ಔರಾದ್ ಸ್ಥಾನ ಕಳೆದುಕೊಳ್ಳಲಿದೆ ಎಂದು ತಿಳಿಸಿದರು.

ಪಕ್ಷ ವಿರೋಧಿ ಚಟುವಟಿಕೆ

ಪ್ರಭು ಚೌವಾಣ್ ಅವರು ಸ್ವತಃ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದು ಔರಾದ್ ಕ್ಷೇತ್ರದಲ್ಲಿ ಬಿಜೆಪಿ ದುರ್ಬಲವಾಗಲು ಕಾರಣವಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ಪ್ರಸ್ತಾವ ಸಂದರ್ಭದಲ್ಲಿ ಅವರ ಸಹೋದರ ಮಾರುತಿ ಚೌವಾಣ್ ಕಾಂಗ್ರೆಸ್ ಪರ ಮತ ಚಲಾಯಿಸಿದ್ದರು. ಕಳೆದ ಚುನಾವಣೆಯಲ್ಲಿ ಏಕಂಬಾ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಪ್ರಭು ಚೌವ್ಹಾಣ್ ಪಕ್ಷ ವಿರೋಧಿ ಚಟುವಟಿಕೆ ಮಾಡಿದರು. ಪರಿಣಾಮವಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದರು. ಚೌವ್ಹಾಣ್ ಈಗ ಅವರನ್ನು ಜತೆಗೆ ತೆಗೆದುಕೊಂಡು ಓಡಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Congress Manifesto : ಪಂಚ ಉಚಿತ ಘೋಷಣೆಗೆ ಇನ್ನೆರಡು ಸೇರ್ಪಡೆ; ಹಳೆ ಪಿಂಚಣಿ ಜಾರಿ, ನಂದಿನಿ ರಕ್ಷಣೆ ಭರವಸೆ

ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡಲು ಔರಾದ್ ತಾಲೂಕಿನ ಸಾವರಗಾಂವ್-ಹಂಗರಗಾದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುತ್ತಿದ್ದಾರೆ. ಜನರ ತೆರಿಗೆಯ ರೂ. 70 ಕೋಟಿ ಪೋಲು ಮಾಡುತ್ತಿದ್ದಾರೆ. ಜನರಿಗೆ ಇದರಿಂದ ಯಾವುದೇ ಲಾಭವಿಲ್ಲ. ಬಲ್ಲೂರದಲ್ಲಿ ಇಂಧಿರಾಗಾಂಧಿ ವಸತಿ ಶಾಲೆ ಕಾಮಗಾರಿ ಆರಂಭಿಸಿಲ್ಲ. ಜಲ ಜೀವನ ಮಿಷನ್ ಯೋಜನೆಯಲ್ಲಿ ಔರಾದ್ ರಾಜ್ಯದಲ್ಲೇ ಕೊನೆಯ ಸ್ಥಾನದಲ್ಲಿದೆ. ಕ್ಷೇತ್ರದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ದೂರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Lok Sabha Election 2024: ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನವರೆಗೂ ಈ ವಿಚಾರವನ್ನು ಪ್ರಸ್ತಾಪ ಮಾಡಲು ತಂತ್ರಗಾರಿಕೆ ಹೆಣೆಯಲಾಗಿದೆ. ಮಾಸ್ ಮತದಾರರನ್ನು ಟಾರ್ಗೆಟ್ ಮಾಡಿ ಈ ವಿಚಾರವನ್ನು ಬಿಜೆಪಿ ಪ್ರಸ್ತಾಪ ಮಾಡುತ್ತಿದೆ. ದಿನೇ ದಿನೇ ಬಿಜೆಪಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಂತೆ ಕಾಂಗ್ರೆಸ್‌ಗೆ ಇದರ ಡ್ಯಾಮೇಜ್‌ನ ಅರಿವಾಗಿದೆ. ಚುನಾವಣೆಯಲ್ಲಿ ಇದು ದೊಡ್ಡ ಹೊಡೆತವನ್ನು ಕೊಡಬಹುದು ಎಂದು ಅಂದಾಜಿಸಿದೆ. ಈ ಕಾರಣಕ್ಕೆ ಎಚ್ಚೆತ್ತುಕೊಂಡ ಕೈಪಡೆ ಈಗ ಸ್ಯಾಮ್‌ ಪಿತ್ರೋಡ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ.

VISTARANEWS.COM


on

Lok Sabha Election 2024 BJP rejects Sam Pitroda statement
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಆಡುವ ಒಂದೊಂದು ಮಾತುಗಳೂ ಪ್ರಾಮುಖ್ಯತೆಯನ್ನು ಪಡೆಯುತ್ತವೆ. ಕೆಲವು ಮಾತುಗಳು ಪ್ಲಸ್‌ ಮಾಡಿದರೆ, ಮತ್ತೆ ಕೆಲವು ಭಾರಿ ಡ್ಯಾಮೇಜ್‌ ಮಾಡುತ್ತವೆ. ಈಗ ಉದ್ಯಮಿ ಸ್ಯಾಮ್‌ ಪಿತ್ರೋಡ (Sam Pitroda) ಕಾಂಗ್ರೆಸ್‌ ಪರವಾಗಿ ಆಡಿದ ಮಾತುಗಳು ಕೈಪಡೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. “ಪಿತ್ರಾರ್ಜಿತ ಆಸ್ತಿಗಳನ್ನು (Ancestral property) ಮಕ್ಕಳಿಗೆ ಹಸ್ತಾಂತರಿಸುವ ಸಂದರ್ಭದಲ್ಲಿ ಅಮೆರಿಕದಲ್ಲಿ ಜಾರಿಯಲ್ಲಿರುವ ಕಾನೂನನ್ನು ಭಾರತದಲ್ಲಿಯೂ ಅನುಷ್ಠಾನಕ್ಕೆ ತರಬೇಕು. ಪಿತ್ರಾರ್ಜಿತ ಆಸ್ತಿಗೂ ತೆರಿಗೆ ವಿಧಿಸಬೇಕು. ಇದರಲ್ಲಿ ಶೇಕಡಾ 55ರಷ್ಟು ಪಾಲನ್ನು ಸರ್ಕಾರಕ್ಕೆ ಕೊಡಬೇಕು” ಎಂಬ ಸ್ಯಾಮ್ ‌ಪಿತ್ರೋಡ ಹೇಳಿಕೆಯು ಈಗ ಭಾರಿ ವಿವಾದವನ್ನು ಸೃಷ್ಟಿಸಿದೆ. ಇದನ್ನು ಬಿಜೆಪಿ ಚುನಾವಣಾ ಅಸ್ತ್ರ ಮಾಡಿಕೊಂಡಿದ್ದು, ಕಾಂಗ್ರೆಸ್‌ ಇಕ್ಕಟ್ಟಿಗೆ ಸಿಲುಕಿದೆ. ಈ ಹೇಳಿಕೆಗೂ ನಮಗೂ ಸಂಬಂಧವೇ ಇಲ್ಲವೆಂದು ಸ್ಪಷ್ಟೀಕರಣ ಕೊಡುತ್ತಿದೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಸಹ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಡಿಕೆಶಿ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ, ಈ ರೀತಿ ಮಾಡಲು ಕಾನೂನಿನಲ್ಲಿ ಅವಕಾಶವೇ ಇಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಶುರುವಾಗುವ ಮುನ್ನ ಕಾಂಗ್ರೆಸ್‌ಗೆ ಸ್ಯಾಮ್‌ ಪಿತ್ರೋಡ ಹೇಳಿಕೆ ನುಂಗಲಾರದ ತುತ್ತಾಗಿದೆ. ಕಾರಣ, ಈ ಹೇಳಿಕೆಯನ್ನು ಸರಿಯಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿದೆ. “ಪಿತ್ರಾರ್ಜಿತ ಆಸ್ತಿಗೆ ಕಾಂಗ್ರೆಸ್ ಕೊಕ್ಕೆ” ಎಂಬ ಅಭಿಯಾನವನ್ನೂ ಬಿಜೆಪಿ ಶುರು ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನವರೆಗೂ ಈ ವಿಚಾರವನ್ನು ಪ್ರಸ್ತಾಪ ಮಾಡಲು ತಂತ್ರಗಾರಿಕೆ ಹೆಣೆಯಲಾಗಿದೆ. ಮಾಸ್ ಮತದಾರರನ್ನು ಟಾರ್ಗೆಟ್ ಮಾಡಿ ಈ ವಿಚಾರವನ್ನು ಬಿಜೆಪಿ ಪ್ರಸ್ತಾಪ ಮಾಡುತ್ತಿದೆ. ದಿನೇ ದಿನೇ ಬಿಜೆಪಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಂತೆ ಕಾಂಗ್ರೆಸ್‌ಗೆ ಇದರ ಡ್ಯಾಮೇಜ್‌ನ ಅರಿವಾಗಿದೆ. ಚುನಾವಣೆಯಲ್ಲಿ ಇದು ದೊಡ್ಡ ಹೊಡೆತವನ್ನು ಕೊಡಬಹುದು ಎಂದು ಅಂದಾಜಿಸಿದೆ. ಈ ಕಾರಣಕ್ಕೆ ಎಚ್ಚೆತ್ತುಕೊಂಡ ಕೈಪಡೆ ಈಗ ಸ್ಯಾಮ್‌ ಪಿತ್ರೋಡ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಮಟ್ಟದಲ್ಲಿಯೂ ಸ್ಪಷ್ಟೀಕರಣವನ್ನು ನೀಡಲಾಗಿದೆ. ಆದರೆ, ಬಿಜೆಪಿ ಮಾತ್ರ ಇದನ್ನೂ ಹಳ್ಳಿ ಹಳ್ಳಿಗೂ ಕೊಂಡೊಯ್ಯಲು ಪ್ಲ್ಯಾನ್‌ ಮಾಡಿಕೊಂಡಿದೆ.

ಇದನ್ನೂ ಓದಿ: Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಇಂತಹ ಕಾನೂನನ್ನು ತರಲು ಸಾಧ್ಯವೇ ಇಲ್ಲ. ನಮ್ಮದು ಕೂಡಾ ಆಸ್ತಿ ಇದೆ. ಸ್ಯಾಮ್‌ ಪಿತ್ರೋಡ ಅವರ ಹೇಳಿಕೆಯನ್ನು ತಿರುಚುವ ಕೆಲಸ ಆಗುತ್ತಿದೆ ಎಂದು ಹೇಳಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಸಹ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಣೆ ಮಾಡಿದ್ದಾರೆ.

Continue Reading

ಬಳ್ಳಾರಿ

Lok Sabha Election 2024: ತಾಯಿ ನಾನು ನಿಮ್ಮ ಮಗನಂತೆ, ಮತ ನೀಡಿ ಗೆಲ್ಲಿಸಿ ಎಂದ ಈ. ತುಕಾರಾಂ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಬಳ್ಳಾರಿ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಗುರುವಾರ ಬೆಳಿಗ್ಗೆ ಮತಯಾಚನೆ ನಡೆಸಿದರು.

VISTARANEWS.COM


on

Ballari Lok Sabha constituency Congress candidate e Tukaram election campaign at apmc market
Koo

ಬಳ್ಳಾರಿ: ತಾಯಿ ನಾನು ನಿಮ್ಮ ಮಗನಂತೆ. ಮತ ನೀಡಿ, ಈ ಬಾರಿ ಗೆಲ್ಲಿಸಿ, ನಿಮಗಾಗಿ ಕೆಲಸ ಮಾಡುತ್ತೇನೆ. ನಿಮ್ಮ ಆಶೀರ್ವಾದ ಇರಲಿ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಮನವಿ (Lok Sabha Election 2024) ಮಾಡಿದರು.

ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಗುರುವಾರ ಬೆಳಿಗ್ಗೆ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಮತಯಾಚನೆ ನಡೆಸಿ, ಮನವಿ ಮಾಡಿದರು.

ಈ ವೇಳೆ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಮಾತನಾಡಿಸಿ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ, ಬೆಂಬಲಿಸಿ, ತಮ್ಮನ್ನು ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ಇದನ್ನೂ ಓದಿ: Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ಎಲ್. ಸ್ವಾಮಿ, ಮುಖಂಡರಾದ ಪದ್ಮಾವತಿ, ಬಿ.ಎಂ.ಪಾಟೀಲ್ ಹಾಗೂ ಕಾರ್ಯಕರ್ತರು, ಇತರರು ಉಪಸ್ಥಿತರಿದ್ದರು.

Continue Reading

ದಾವಣಗೆರೆ

Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!

Murder Case : ಚೆನ್ನಾಗಿದ್ದ ಕುಟುಂಬವೊಂದು ಒಂದೇ ಗಂಟೆಯಲ್ಲಿ ಸರ್ವನಾಶವಾಗಿದೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಸಾವಿಗೆ, ತಂದೆಯೇ ಕಾರಣವೆಂದು ಸಿಟ್ಟಾದ ಮಗನೊಬ್ಬ ತಂದೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈದಿದ್ದಾನೆ.

VISTARANEWS.COM


on

By

Murder case In davanagere
Koo

ದಾವಣಗೆರೆ: ಕುಡಿತದ ಚಟವೊಂದು ಮನೆಯನ್ನೆ ಹಾಳು ಮಾಡಿದೆ. ಕುಡುಕ ಪತಿಯ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು (Self Harming) ಮೃತಪಟ್ಟಿದ್ದರು. ತಾಯಿ ಸಾವಿಗೆ ತಂದೆಯೇ ಕಾರಣವೆಂದು ಸಿಟ್ಟಾದ ಮಗ ಕಲ್ಲು ಎತ್ತಿ ಹಾಕಿ ತಂದೆಯನ್ನೇ (Murder Case) ಕೊಂದಿದ್ದಾನೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ‌ ಲಕ್ಕಿಂಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಕೇವಲ ಒಂದು ಗಂಟೆಯಲ್ಲಿ ಇಡೀ ಕುಟುಂಬವೇ ಸರ್ವ ನಾಶವಾಗಿದೆ. ತಿಪ್ಪಮ್ಮ (52) ಎಂಬಾಕೆ ಆತ್ಮಹತ್ಯೆಗೆ ಶರಣಾದರೆ, ಅಂಜನಪ್ಪ (60) ಪುತ್ರನಿಂದಲೇ ಕೊಲೆಯಾಗಿದ್ದಾರೆ. ರಮೇಶ್‌ (30) ಕೊಲೆ ಮಾಡಿ ಜೈಲು ಸೇರಿದ್ದಾನೆ.

ರಮೇಶ್‌ ತಂದೆ ಅಂಜನಪ್ಪ ಕಟ್ಟಡ ಕೆಲಸ ಮಾಡುತ್ತಿದ್ದರು. ಕುಡಿತದ ದಾಸರಾಗಿದ್ದ ಅಂಜನಪ್ಪ, ನಿತ್ಯ ಕುಡಿದು ಬಂದು ಮನೆಯಲ್ಲಿ ಜಗಳವಾಡುತ್ತಿದ್ದರು. ದಿನ ಬೆಳಗಾದರೆ ಪತ್ನಿಯೊಂದಿಗೆ ಜಗಳಕ್ಕಿಳಿಯುತ್ತಿದ್ದರು. ಪತಿ ಕಿರುಕುಳ ತಾಳಲಾರದೆ ಬುಧವಾರ ತಡರಾತ್ರಿ ತಿಪ್ಪಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ: Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ತಾಯಿ ಸಾವಿನ ಸುದ್ದಿ ಕೇಳಿ ಆಘಾತಕ್ಕೆ ಒಳಗಾದ ರಮೇಶ್‌, ತಂದೆ ಕಿರುಕುಳಕ್ಕೆ ತಾಯಿ ಮೃತಪಟ್ಟಿದ್ದಾಳೆಂದು ಸಿಟ್ಟಾಗಿದ್ದ. ನೇರವಾಗಿ ಮನೆಗೆ ಬಂದವನೇ ತಂದೆಯ‌ ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ಕೊಲೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ‌ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿ ರಮೇಶ್‌ನನ್ನು ವಶಕ್ಕೆ ಪಡೆದು ತನಿಖೆಯನ್ನು ಮುಂದುವರಿಸಿದ್ದಾರೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ತಂದೆಯ ಕುಡುತದ ಚಟ, ತಾಯಿಯ ದುಡುಕುತನ, ಕೋಪದ ಕೈಗೆ ಬುದ್ಧಿ ಕೊಟ್ಟ ಮಗನಿಂದ ಇಡೀ ಕುಟುಂಬವು ಸರ್ವನಾಶವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Neha Murder Case : ರಾಜ್ಯ ಸರ್ಕಾರವು ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿದ್ದು, ಅಧಿಕಾರಿಗಳು ತನಿಖೆಯನ್ನು ಚುರುಕುಗೊಳ್ಳಿಸಿದ್ದಾರೆ. ಕಾರಾಗೃಹದಲ್ಲಿದ್ದ ಆರೋಪಿ ಫಯಾಜ್‌ ಕರೆತಂದು ನಿನ್ನೆ ಸ್ಥಳ ಮಹಜರು ಮಾಡಲಾಗಿದೆ. ಇಂದು ಗುರುವಾರ ಸಿಐಡಿ ಅಧಿಕಾರಿಗಳು ನೇಹಾ ತಂದೆ-ತಾಯಿಗಳ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ.

VISTARANEWS.COM


on

By

Neha Murder case CID Officer
Koo

ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ (Neha Murder Case) ಸಂಬಂಧ ಸಿಐಡಿ ಅಧಿಕಾರಿಗಳ ತನಿಖೆ ಮುಂದುವರಿದಿದ್ದು, ಗುರುವಾರ (ಏ.25) ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ಭೇಟಿ ನೀಡಿದರು. ಸಿಐಡಿ ಎಡಿಜಿಪಿ ಬಿಕೆ‌ ಸಿಂಗ್, ಎಸ್‌ಪಿ ವೆಂಕಟೇಶ ನೇತೃತ್ವದ ತಂಡ ಸುಮಾರು ಒಂದು ಗಂಟೆಗಳ ಸುದೀರ್ಘ ವಿಚಾರಣೆಯನ್ನು ನಡೆಸಿದರು. ನಂತರ ನೇಹಾ ತಂದೆ ನಿರಂಜನ್‌ ಹಿರೇಮಠ್‌, ತಾಯಿ ಗೀತಾರಿಂದ ಹೇಳಿಕೆಯನ್ನು ಪಡೆದರು.

ಇನ್ನೂ ನೇಹಾ ಹತ್ಯೆ ಪ್ರಕರಣ (Neha Murder Case) ಸಂಬಂಧ ಹುಬ್ಬಳ್ಳಿಯ ಬಿವಿಬಿ ಕಾಲೇಜಿಗೆ ಆರೋಪಿ ಫಯಾಜ್‌ನನ್ನು ಸಿಐಡಿ ಅಧಿಕಾರಿಗಳು ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದರು. ಆರು ದಿನಗಳ‌ ಕಾಲ‌ ಕಸ್ಟಡಿಗೆ ನೀಡಿದ ಹಿನ್ನೆಲೆ ಆರೋಪಿಯನ್ನು ಧಾರವಾಡದ ಕಾರಾಗೃಹದಿಂದ ಕರೆದೊಯ್ದು ಸ್ಥಳ ಮಹಜರು ನಡೆಸಲಾಗಿತ್ತು. ಇದೀಗ ನೇಹಾ ತಂದೆ- ತಾಯಿಯಿಂದ ಮತ್ತಷ್ಟು ಮಾಹಿತಿಯನ್ನು ಕಲೆಹಾಕಿರುವ ಸಿಐಡಿ ಅಧಿಕಾರಿಗಳು 1 ಗಂಟೆಯ ವಿಚಾರಣೆ ನಡೆಸಿ ವಾಪಸ್‌ ಆದರು.

ರಹಸ್ಯ ಸ್ಥಳದಲ್ಲಿ ಆರೋಪಿ ಫಯಾಜ್‌ ವಿಚಾರಣೆ

ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಧಾರವಾಡದಲ್ಲಿ ಬೀಡು ಬಿಟ್ಟಿದೆ. ಆರೋಪಿ ಫಯಾಜ್‌ನನ್ನು ಧಾರವಾಡದ ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಸಿಐಡಿ ಅಧಿಕಾರಿಗಳು ನಿನ್ನೆ ಬುಧವಾರ ಸ್ಥಳ ಮಹಜರು ಜತೆಗೆ ಪ್ರಾಥಮಿಕ ಹಂತದ ವಿಚಾರಣೆ ಪೂರ್ಣಗೊಳಿಸಿದ್ದಾರೆ.

ಸ್ಥಳ ಮಹಜರು ವೇಳೆ ಕಾಲೇಜು ಬಳಿ ಎವಿಬಿಪಿ ಪ್ರತಿಭಟನೆ ನಡೆಸಿತ್ತು. ಇದೀಗ ಧಾರವಾಡದಲ್ಲಿಯೂ ಪ್ರತಿಭಟನೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಫಯಾಜ್‌ನನ್ನು ರಹಸ್ಯ ಸ್ಥಳದಲ್ಲಿಟ್ಟಿದ್ದಾರೆ. ಫಯಾಜ್‌ ನೇಹಾಳನ್ನು ಹತ್ಯೆ ಮಾಡಲು ಧಾರವಾಡದಲ್ಲೇ ಚಾಕು ಖರೀದಿ ಮಾಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಾಕು ಖರೀದಿಸಿದ ಸ್ಥಳ, ಸ್ನೇಹಿತರ ಭೇಟಿಯಾದ ಸ್ಥಳಗಳಿಗೆ ಸಿಐಡಿ ಟೀಂ ಭೇಟಿ ನೀಡುವ ಸಾಧ್ಯತೆ ಇದೆ.

ಏನಿದು ನೇಹಾ ಹತ್ಯೆ ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌ ಎಂಬಾತ ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದು ಎಸ್ಕೇಪ್‌ ಆಗಲು ಯತ್ನಿಸಿದ್ದ. ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಈ ಹತ್ಯೆ ನಡೆದಿತ್ತು. ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ ಕೊಲೆಯಾಗಿದ್ದಳು.

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಳು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಏ.18ರ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದ, ಆದರೆ ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ.

ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿ ಫಯಾಜ್‌ ಏಕಾಏಕಿ ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದ. ಆತನಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ನೇಹಾಳನ್ನು ಹಿಡಿದುಕೊಂಡ ಪಾಗಲ್‌ ಪ್ರೇಮಿ, ಮನಬಂದಂತೆ ಚಾಕುವಿನಿಂದ ಇರಿದಿದ್ದ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದರಿಂದ ನೇಹಾಳಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಅಲ್ಲಿದ್ದವರು ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದರು. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದರು. ಇತ್ತ ಹತ್ಯೆ ಮಾಡಿ ಎಸ್ಕೇಪ್‌ ಆಗುತ್ತಿದ್ದ ಫಯಾಜ್‌ನನ್ನು ವಿದ್ಯಾರ್ಥಿಗಳೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
World Malaria Day
ಆರೋಗ್ಯ17 mins ago

World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

supreme court wealth redistribution
ಪ್ರಮುಖ ಸುದ್ದಿ23 mins ago

ವಿಸ್ತಾರ Explainer: Wealth redistribution: ನಿಮ್ಮ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬಹುದಾ? ಸುಪ್ರೀಂ ಕೋರ್ಟ್ ಮುಂದಿದೆ ಕೇಸ್‌

Lok Sabha Election 2024 BJP rejects Sam Pitroda statement
Lok Sabha Election 202426 mins ago

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Anant-Radhika wedding
ವಾಣಿಜ್ಯ31 mins ago

Anant- Radhika  wedding: 1,500 ಕೋಟಿ ರೂ. ದಾಟಲಿದೆ ಅಂಬಾನಿ ಮಗನ ಮದುವೆ ಖರ್ಚು!

Ballari Lok Sabha constituency Congress candidate e Tukaram election campaign at apmc market
ಬಳ್ಳಾರಿ37 mins ago

Lok Sabha Election 2024: ತಾಯಿ ನಾನು ನಿಮ್ಮ ಮಗನಂತೆ, ಮತ ನೀಡಿ ಗೆಲ್ಲಿಸಿ ಎಂದ ಈ. ತುಕಾರಾಂ

Rahul Gandhi
ದೇಶ53 mins ago

Rahul Gandhi: ಅಮೇಥಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಖಚಿತ; ಸ್ಮೃತಿ ಇರಾನಿಗೆ ಕೈ ನಾಯಕ ಸವಾಲು!

DC vs GT
ಕ್ರೀಡೆ1 hour ago

DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

Heeramandi Premiere Farida Jalal rare public appearance
ಬಾಲಿವುಡ್1 hour ago

Heeramandi Premiere: ʻಹೀರಾಮಂಡಿʼ ಪ್ರೀಮಿಯರ್‌ನಲ್ಲಿ ಅಪರೂಪವಾಗಿ ಕಂಡ ʻಕಭಿ ಖುಷಿ ಕಭಿ ಗಮ್ʼ ಸಿನಿಮಾ ನಟಿ!

Murder case In davanagere
ದಾವಣಗೆರೆ1 hour ago

Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!

Election Commission
ದೇಶ1 hour ago

ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ2 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20243 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌