ಚಿಕ್ಕಮಗಳೂರು: ಶೃಂಗೇರಿ ಮಠದ ಜಗದ್ಗುರುಗಳ ಭೇಟಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J P Nadda) ಅವರು ಅವಕಾಶ ಕೇಳಿದ್ದಾರೆ. ಶೃಂಗೇರಿ ಮಠ ಒಡೆದ ಬ್ರಾಹ್ಮಣ ಸಮುದಾಯದವರನ್ನು ರಾಜ್ಯದಲ್ಲಿ ಸಿಎಂ ಮಾಡಲು ಆರ್‌ಎಸ್‌ಎಸ್ ಹುನ್ನಾರ ನಡೆಸಿದೆ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬೆನ್ನಲ್ಲೇ ಜೆ.ಪಿ.ನಡ್ಡಾ ಅವರು, ಶೃಂಗೇರಿ ಮಠಕ್ಕೆ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಫೆ. 20ರಂದು ಕೊಪ್ಪ ಪಟ್ಟಣದಲ್ಲಿ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಲು ಜೆ.ಪಿ.ನಡ್ಡಾ ಜಿಲ್ಲೆಗೆ ಆಗಮಿಸಲಿದ್ದಾರೆ. ಸಮಾವೇಶದ ನಂತರ ಸಂಜೆ ಶೃಂಗೇರಿ ಮಠಕ್ಕೆ ಭೇಟಿ ನೀಡಿ, ಶಾರದಾ ದೇವಿ ದರ್ಶನ ಪಡೆಯಲಿದ್ದಾರೆ. ಈ ವೇಳೆ ಶೃಂಗೇರಿಯ ದೇವಾಲಯದ ವಿವಿಐಪಿ ಗೆಸ್ಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡಲಿರುವ ಜೆಪಿ ನಡ್ಡಾ ಅವರು, ಶೃಂಗೇರಿ ಮಠದ ಶ್ರೀಗಳನ್ನು ಭೇಟಿಯಾಗಲು 20 ಕಾಲಾವಕಾಶ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಶೃಂಗೇರಿ ಮಠ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ.
ಇದನ್ನೂ ಓದಿ | Karnataka Election: ಟಿಪ್ಪುನನ್ನು ಹೊಡೆದು ಹಾಕಿದಂತೆಯೇ ಸಿದ್ದರಾಮಯ್ಯರನ್ನೂ ಹೊಡೆದು ಹಾಕಬೇಕು: ಅಶ್ವತ್ಥನಾರಾಯಣ
ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕಡೆ ಬಿಜೆಪಿ ಗೆದ್ದಿದೆ. ಆದರೆ, ಶೃಂಗೇರಿ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆಲುವು ಪಡೆದಿದೆ. ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಕ್ಷೇತ್ರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಈ ಭೇಟಿ ಮಹತ್ವ ಪಡೆದಿದೆ.