ಬಿಜೆಪಿಯ OBC ನಾಯಕನಾಗಿ ವಿ. ಸುನಿಲ್‌ ಕುಮಾರ್‌: ಕಲಬುರ್ಗಿ ಸಮಾವೇಶದಿಂದ ಪ್ರಯತ್ನ ಆರಂಭ - Vistara News

ಕರ್ನಾಟಕ

ಬಿಜೆಪಿಯ OBC ನಾಯಕನಾಗಿ ವಿ. ಸುನಿಲ್‌ ಕುಮಾರ್‌: ಕಲಬುರ್ಗಿ ಸಮಾವೇಶದಿಂದ ಪ್ರಯತ್ನ ಆರಂಭ

ಕರ್ನಾಟಕದ ಬಿಜೆಪಿ ವತಿಯಿಂದ ಮುಂದಿನ 2 ತಿಂಗಳುಗಳಲ್ಲಿ ವಿವಿಧ ರೀತಿಯ ಜನಜಾಗೃತಿ ಸಮಾವೇಶಗಳನ್ನು ಬೇರೆಬೇರೆ ಭಾಗಗಳಲ್ಲಿ ನಡೆಸಲಾಗುತ್ತಿದೆ ಎಂದು ಸುನಿಲ್‌ ಕುಮಾರ್‌ ತಿಳಿಸಿದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈಗಾಗಲೆ ಎಸ್‌ಸಿಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್‌ ಮತ ಬ್ಯಾಂಕ್‌ಗೆ ಪೆಟ್ಟು ನೀಡಲು ಮುಂದಾಗಿರುವ ಬಿಜೆಪಿ, ಒಬಿಸಿ ಸಮುದಾಯವನ್ನು ಮತ್ತಷ್ಟು ಸೆಳೆಯಲು ಪ್ರಯತ್ನ ಆರಂಭಿಸಿದೆ.

ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಅಕ್ಟೋಬರ್‌ 30ರಂದು ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶವನ್ನು ಕಲ್ಬುರ್ಗಿಯಲ್ಲಿ ಆಚರಿಸಲಾಗುತ್ತದೆ. ಇದೇ ವೇಳೆ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಅವರನ್ನು ಒಬಿಸಿ ಸಮುದಾಯದ ನಾಯಕನನ್ನಾಗಿ ಮುನ್ನೆಲೆಗೆ ತರುವ ಪ್ರಯತ್ನ ನಡೆಸಲಾಗುತ್ತಿದೆ.

ಕಲ್ಬುರ್ಗಿಯ ನಾಗನಹಳ್ಳಿ ಪೊಲೀಸ್ ಕೇಂದ್ರದ ಹತ್ತಿರ ರದ್ದೇವಾಡಗಿ ಬಡಾವಣೆಯಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಜನರ ನಿರೀಕ್ಷೆ ಇದೆ. ಈ ಕುರಿತು ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುನಿಲ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ನೆ. ಲ. ನರೇಂದ್ರ ಬಾಬು ಸುದ್ದಿಗೋಷ್ಠಿಯಲ್ಲಿ ಇದ್ದರಾದರೂ ಸುನಿಲ್‌ ಕುಮಾರ್‌ ನೇತೃತ್ವ ವಹಿಸಿದ್ದರು. ಸಮಾವೇಶದಲ್ಲಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭಾಗವಹಿಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರಬಾಬು, ಹಿಂದುಳಿದ ವರ್ಗಗಳ ಸಚಿವರು, ಶಾಸಕರು, ಸಂಸದರು ಇತರ ಗಣ್ಯರು ಪಾಲ್ಗೊಳ್ಳುವರು ಎಂದು ಸುನಿಲ್‌ ಕುಮಾರ್‌ ತಿಳಿಸಿದರು.

ಓಬಿಸಿ ಪ್ರವರ್ಗಕ್ಕೆ ಸೇರಿದ ಈಡಿಗ ಸಮುದಾಯದ ಸುನಿಲ್‌ ಕುಮಾರ್‌ ರಾಜ್ಯದ ವಿವಿಧೆಡೆ ಪ್ರಮುಖವಾಗಿ ಯುವ ಹಾಗೂ ಹಿಂದುತ್ವದ ಮುಖವಾಗಿಯೇ ಗುರುತಿಸಿಕೊಂಡಿದ್ದಾರೆ. ಆದರೆ ಬಿಜೆಪಿಯ ʼಸೋಷಿಯಲ್‌ ಇಂಜಿನಿಯರಿಂಗ್‌ʼ ಸೂತ್ರಕ್ಕೆ ಅನುಗುಣವಾಗಿ ಇದೀಗ ವಿವಿಧ ಸಮುದಾಯಗಳಲ್ಲಿ ಯುವ ನಾಯಕರ ಅಗತ್ಯವಿದೆ. ಹಾಗಾಗಿ ಒಬಿಸಿ ಸಮುದಾಯಕ್ಕೆ ಸುನಿಲ್‌ ಕುಮಾರ್‌ ಅವರನ್ನು ನಾಯಕರನ್ನಾಗಿ ಬಿಂಬಿಸುವುದು ಸೂಕ್ತ ಎಂದು ಪಕ್ಷದ ವಲಯದಲ್ಲಿ ಮಾತುಗಳು ಕೇಳಿಬರುತ್ತಿವೆ.

ಸಮಾವೇಶದ ಕುರಿತು ಮಾಹಿತಿ ನೀಡಿದ ಸುನಿಲ್‌ ಕುಮಾರ್‌, ಕರ್ನಾಟಕದ ಬಿಜೆಪಿ ವತಿಯಿಂದ ಮುಂದಿನ 2 ತಿಂಗಳುಗಳಲ್ಲಿ ವಿವಿಧ ರೀತಿಯ ಜನಜಾಗೃತಿ ಸಮಾವೇಶಗಳನ್ನು ಬೇರೆಬೇರೆ ಭಾಗಗಳಲ್ಲಿ ನಡೆಸಲಾಗುತ್ತಿದೆ. ನವ ಭಾರತ ನಿರ್ಮಾಣಕ್ಕೆ ನವ ಕರ್ನಾಟಕದ ಸಿದ್ಧತೆ ಎಂಬ ಕಲ್ಪನೆಯೊಂದಿಗೆ ರಾಜ್ಯಾದ್ಯಂತ ಎಲ್ಲ ಸಮುದಾಯ- ಎಲ್ಲ ವ್ಯಕ್ತಿಗಳನ್ನು ಜೋಡಿಸುವ ಕಾರ್ಯ ನಡೆದಿದೆ. ಕೇಂದ್ರ- ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಹಿಂದುಳಿದ ವರ್ಗಗಳ ಚಟುವಟಿಕೆಗಳು- ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಟ್ಟಿವೆ. ಹಿಂದುಳಿದ ವರ್ಗಗಳ ಜಾತಿಗಳ ಆಯೋಗಕ್ಕೆ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಸಾಂವಿಧಾನಿಕ ಮಾನ್ಯತೆ ಕೊಟ್ಟಿದೆ. ಹಿಂದಿನ ಸರ್ಕಾರಗಳು ಈ ಕುರಿತು ಕೇವಲ ಮಾತನ್ನಷ್ಟೇ ಆಡಿದ್ದವು ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ 250 ಕೋಟಿ ನೀಡಿದ್ದು, ಸಣ್ಣಸಣ್ಣ ಸಮುದಾಯಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಅವರನ್ನು ಮುಖ್ಯವಾಹಿನಿಗೆ ತರಲಾಗುತ್ತಿದೆ. ಹಾಸ್ಟೆಲ್‍ಗಳ ನಿರ್ಮಾಣ, ಶೈಕ್ಷಣಿಕ ಚಟುವಟಿಕೆಗೆ ಉತ್ತೇಜನ, ಗಂಗಾ ಕಲ್ಯಾಣ ಯೋಜನೆ ವಿಸ್ತರಣೆ ಮೂಲಕ ಈ ಸಮುದಾಯಗಳ ಕಲ್ಯಾಣಕ್ಕೆ ಶ್ರಮಿಸಲಾಗುತ್ತಿದೆ ಎಂದು ವಿವರಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಸುನಿಲ್‌ ಕುಮಾ, ಕೇವಲ ಹಿಂದುಳಿದ ವರ್ಗಗಳ ಧ್ವನಿ ಎಂದು ಭಾಷಣದಲ್ಲಷ್ಟೇ ಅವರು ತಿಳಿಸಿದ್ದರು. ಅದನ್ನು ಕಾರ್ಯರೂಪಕ್ಕೆ ತರಲಿಲ್ಲ ಎಂದು ಟೀಕಿಸಿದರು.

ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು ಮಾತನಾಡಿ, ರದ್ದೇವಾಡಗಿ ಬಡಾವಣೆಯಲ್ಲಿ ಸಮಾವೇಶ ನಡೆಯಲಿದ್ದು, 224 ಕ್ಷೇತ್ರ, 312 ಮಂಡಲಗಳಿಂದ ಜನರು ಭಾಗವಹಿಸಲಿದ್ದಾರೆ. 205 ಒಬಿಸಿ ಸಮುದಾಯಗಳ ಪ್ರಮುಖರನ್ನು ಆಹ್ವಾನಿಸಿದ್ದೇವೆ ಎಂದು ತಿಳಿಸಿದರು.
ಸಂಸದ ಪಿ.ಸಿ.ಮೋಹನ್ ಮಾತನಾಡಿ, ಮಾಜಿ ಸಚಿವ ಈಶ್ವರಪ್ಪ ಅವರ ನೇತೃತ್ವದಲ್ಲಿ 5 ತಂಡಗಳ ಪ್ರವಾಸ ನಡೆಸಲಾಗಿದೆ. ಕೇಂದ್ರದ ಬಿಜೆಪಿ ಸರ್ಕಾರದಿಂದ ವೈದ್ಯಕೀಯ ಸೀಟ್, ಪಿಜಿ ಸೀಟು, ವೈದ್ಯಕೀಯ ಕಾಲೇಜಿನ ಹೆಚ್ಚಳದಿಂದ ಒಬಿಸಿ ಸಮುದಾಯಕ್ಕೆ ಹೆಚ್ಚಿನ ಪ್ರಯೋಜನ ಸಿಕ್ಕಿದೆ ಎಂದು ತಿಳಿಸಿದರು. ಒಬಿಸಿ ಸಮಾವೇಶ ಕುರಿತ ಹಾಡನ್ನು ಬಿಡುಗಡೆ ಮಾಡಲಾಯಿತು. ವಿಶ್ವಕರ್ಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಾಬು ಪತ್ತಾರ್, ಬೆಂಗಳೂರು ಉತ್ತರ ಜಿಲ್ಲೆ ಒಬಿಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ | ನೆಲ-ಜಲ-ಆಕಾಶದಲ್ಲಿ ‘ಕೋಟಿ ಕಂಠ ಗಾಯನ’: ಸಚಿವ ವಿ. ಸುನಿಲ್‌ ಕುಮಾರ್‌ ಬಣ್ಣನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Police Firing: ದರೋಡೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

Police Firing: ದರೋಡೆ ಪ್ರಕರಣದ (Robbery Case) ಆರೋಪಿ ಸೋನು ನಾಯಕ್ ಗುಂಡೇಟು ತಿಂದು ಗಾಯಗೊಂಡವನು. ಹುಬ್ಬಳ್ಳಿ ಉಪನಗರದ ಠಾಣೆ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ್ ಅವರಿಂದ ಫೈರಿಂಗ್ ನಡೆದಿದೆ.

VISTARANEWS.COM


on

police firing hubli robber
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubli News) ಮತ್ತೆ ಪೊಲೀಸ್ ರಿವಾಲ್ವರ್ ಸದ್ದು ಮಾಡಿದೆ. ತಪ್ಪಿಸಿಕೊಂಡು ಓಡಲು ಯತ್ನಿಸಿದ ದರೋಡೆಕೋರನ ಕಾಲಿಗೆ ಪೊಲೀಸರು ಗುಂಡೇಟು ಹಾರಿಸಿ (Police Firing) ಬಂಧಿಸಿದ್ದಾರೆ.

ದರೋಡೆ ಪ್ರಕರಣದ (Robbery Case) ಆರೋಪಿ ಸೋನು ನಾಯಕ್ ಗುಂಡೇಟು ತಿಂದು ಗಾಯಗೊಂಡವನು. ಹುಬ್ಬಳ್ಳಿ ಉಪನಗರದ ಠಾಣೆ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ್ ಅವರಿಂದ ಫೈರಿಂಗ್ ನಡೆದಿದೆ. ಹುಬ್ಬಳ್ಳಿಯ ಎಂಟಿಎಸ್‌ ಕಾಲೊನಿ ಬಳಿ ಘಟನೆ ನಡೆದಿದೆ. ಕಳ್ಳತನ, ದರೋಡೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಸೋನು ನಾಯಕ್ ಮೇಲೆ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಸ್ಥಳಕ್ಕೆ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿದ್ದಾರೆ. ಗಾಯಾಳು ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗದಗದಲ್ಲಿ ರೌಡಿಶೀಟರ್‌ಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ (Assault Case) ಎಸ್ಕೇಪ್ ಆಗಲು ಯತ್ನಿಸಿದ ರೌಡಿ ಶೀಟರ್ (Rowdy Sheeter) ಮೇಲೆ ಪೊಲೀಸರು ಗುಂಡು ಹಾರಿಸಿ (Police Firing) ಬಂಧಿಸಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಘಟನೆ ನಡೆದಿದೆ.

ರಾಬರಿ‌ ಕೇಸ್‌ಗೆ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಬಂದಿದ್ದ ಪೊಲೀಸರ ಮೇಲೆ ರೌಡಿ ಶೀಟರ್‌ ಸಂಜಯ್ ಕೊಪ್ಪದ ಹಲ್ಲೆಗೆ ಯತ್ನಿಸಿದ್ದ. ಪೊಲೀಸರ ಮೇಲೆ ಕಲ್ಲು ಎಸೆದು ಪರಾರಿಯಾಗಲು ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಆರೋಪಿ ಸಂಜಯ್ ಮೇಲೆ ಪಿಎಸ್‌ಐ ಸಂಗಮೇಶ್ ಶಿವಯೋಗಿ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಪ್ರಕಾಶ್ ಗಾಣಿಗೇರ್ ಕೈ, ಕಾಲಿಗೆ ಗಾಯಗಳಾಗಿವೆ. ಸಂಜಯ್ ವಿರುದ್ಧ ರಾಬರಿ, ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ 12 ಕೇಸ್ ದಾಖಲಾಗಿವೆ. ಗಾಯಗೊಂಡ ಆರೋಪಿ ಸಂಜಯ್ ಕೊಪ್ಪದ್ ಹಾಗೂ ಪಿಸಿ ಪ್ರಕಾಶ್‌ಗೆ ಜಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೊಲೆ ಆರೋಪಿಯ ಕಾಲಿಗೆ ಫೈರ್‌ ಮಾಡಿ ಬಂಧಿಸಿದ ಪೊಲೀಸರು

ಆನೇಕಲ್: ಪುರಸಭೆ ಸದಸ್ಯನನ್ನು ಕೊಂದಿದ್ದ ಕುಖ್ಯಾತ ರೌಡಿ ಶೀಟರ್‌ನನ್ನು (Rowdy Sheeter) ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು (Assault) ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿ (Murder Culprit).

ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

ಈತ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಳೆದ 24ನೇ ತಾರೀಕು ಬುಧವಾರ ಕೊಲೆ ನಡೆದಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು.

ಆರೋಪಿಗಳ ಬಂಧನಕ್ಕೆ ಪೊಲೀಸರ ಎರಡು ತಂಡ ರಚಿಸಲಾಗಿತ್ತು. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ: Instagram Love Story: ಮೂವರು ಗಂಡರ ಮುದ್ದಿನ ಹೆಂಡತಿ ಮೇಲೆ 2ನೇ ಗಂಡನ ದೂರು

Continue Reading

ಪ್ರಮುಖ ಸುದ್ದಿ

KEA Exams Time Table: ಪಿಎಸ್‌ಐ ಸೇರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

KEA Exams Time Table: ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Exams Time Table) ಪ್ರಕಟಿಸಿದೆ. ಆ ಪ್ರಕಾರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಕೋರಲಾಗಿದೆ.

VISTARANEWS.COM


on

KEA exams time table
Koo

ಬೆಂಗಳೂರು: ಪಿಎಸ್‌ಐ (PSI posts) ಹುದ್ದೆಗಳು ಸೇರಿದಂತೆ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Exams Time Table) ಪ್ರಕಟಿಸಿದೆ. ಆ ಪ್ರಕಾರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಕೋರಲಾಗಿದೆ.

ಪೊಲೀಸ್‌ ಇಲಾಖೆಯಲ್ಲಿ ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು, ಬಿಎಂಟಿಸಿಯಲ್ಲಿ ಕಂಡಕ್ಟರ್‌ ಹುದ್ದೆಗಳಿಗೆ ಸೆ.1ರಂದು, ಕೆಯುಡಬ್ಲ್ಯುಎಸ್‌ಡಿಬಿಯಲ್ಲಿ ಅಸಿಸ್ಟೆಂಟ್‌ ಇಂಜಿನಿಯರ್‌ ಹುದ್ದೆಗಳಿಗೆ ಆಗಸ್ಟ್‌ 11ರಂದು, ಕಂದಾಯ ಇಲಾಖೆಯಲ್ಲಿ ವಿಲೇಜ್‌ ಅಡ್ಮಿನಿಸ್ಟ್ರೇಟಿವ್‌ ಆಫೀಸರ್‌ ಹುದ್ದೆಗಳಿಗೆ ಸೆ.29ರಂದು, ಜಿಟಿಟಿಸಿಯಲ್ಲಿ ಲೆಕ್ಟರರ್‌ ಮತ್ತಿತರ ಹುದ್ದೆಗಳಿಗೆ ಸೆ.29ರಂದು, ಕಂದಾಯ ಇಲಾಖೆಯಲ್ಲಿ ವಿಎ ಹುದ್ದೆಗಳಿಗೆ ಅಕ್ಟೋಬರ್‌ 27ರಂದು ಪರೀಕ್ಷೆಗಳು ನಡೆಯಲಿವೆ.

ಇಂದಿನಿಂದ SSLC ಪರೀಕ್ಷೆ-3 ಆರಂಭ; ಎಕ್ಸಾಮ್‌ ತೆಗೆದುಕೊಳ್ಳಲಿರುವ 97,933 ವಿದ್ಯಾರ್ಥಿಗಳು

ಬೆಂಗಳೂರುಎಸ್ಎಸ್ಎಲ್‌ಸಿ ಪರೀಕ್ಷೆ-3 (SSLC Exam- 3) ಇಂದು (ಆಗಸ್ಟ್ 2) ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾದ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ದಿನಾಂಕ 02-08-2024ರಿಂದ ದಿನಾಂಕ:09-08-2024 ರವರೆಗೆ ನಡೆಯಲಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 67,716 ಬಾಲಕರು ಮತ್ತು 30,217 ಬಾಲಕಿಯರು ಸೇರಿದ್ದಾರೆ.

ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದೆ.

ಜಿಲ್ಲಾ ಮತ್ತು ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ. ಪ್ರತಿ ಕೇಂದ್ರದಲ್ಲಿಯೂ ಸಿ.ಸಿ.ಟಿ.ವಿ. ಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುವುದು ಎಂದು ಹೇಳಿದೆ.

ಯಾರ್ಯಾರಿಗೆ ಪರೀಕ್ಷೆ?

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗದವರು, ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸಿದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಅದರಂತೆ ಆಗಸ್ಟ್‌ 2ರಿಂದ 9ರವರೆಗೆ ಪರೀಕ್ಷೆ ನಡೆಯಲಿದೆ. ಇದೀಗ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಶಾಲಾ ಮುಖ್ಯೋಪಾಧ್ಯಾಯರು ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬೇಕು. ಒಂದು ವೇಳೆ ಏನಾದರೂ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಪರಿಶೀಲನಾ ಶಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆ ಸರಿ ಹೊಂದುತ್ತಿವೆಯೇ ಎಂದು ತಪ್ಪದೇ ಪರಿಶೀಲಿಸಬೇಕು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ ಆ ವಿವರವನ್ನು ದಾಖಲೆಗಳೊಂದಿಗೆ ಮಂಡಳಿಗೆ ಕೂಡಲೇ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

Continue Reading

ಕ್ರೈಂ

Instagram Love Story: ಮೂವರು ಗಂಡರ ಮುದ್ದಿನ ಹೆಂಡತಿ ಮೇಲೆ 2ನೇ ಗಂಡನ ದೂರು

Instagram Love Story: ಬೆಳಗಾವಿಯಲ್ಲಿ ಯುವತಿ ಇನ್‌ಸ್ಟಾಗ್ರಾಮ್‌ನಲ್ಲಿ ಲವ್ ಮಾಡಿ ಇನ್ನೊಬ್ಬನನ್ನು ಮದುವೆ ಆದ ಪ್ರಕರಣದಲ್ಲಿ ಇದೀಗ ಎರಡನೇ ಗಂಡನೇ ಪೋಲೀಸರಿಗೆ ದೂರು ನೀಡಿದ್ದಾನೆ. ಶಿಡ್ಲಘಟ್ಟದಲ್ಲಿ ದೂರು ದಾಖಲಾಗಿದೆ.

VISTARANEWS.COM


on

instagram love story
Koo

ಚಿಕ್ಕಬಳ್ಳಾಪುರ: ಇನ್‌ಸ್ಟಾಗ್ರಾಂನಲ್ಲಿ ಲವ್‌ (Instagram Love Story) ಆಗಿ ಓಡಿಹೋಗುವ, ಇರುವ ಗಂಡನ/ಹೆಂಡತಿಯ ಬಿಟ್ಟು ಇನ್ನೊಬ್ಬನ/ಳ ಜೊತೆ ಪರಾರಿಯಾಗುವ (Elope) ಪ್ರಕರಣಗಳು ಹೆಚ್ಚುತ್ತಿವೆ. ಇದು ಅಂಥದೇ ಇನ್ನೊಂದು ಪ್ರಕರಣ. ಇದೂ ಕೂಡ ಇನ್‌ಸ್ಟಗ್ರಾಂನಲ್ಲಿ ಹುಟ್ಟಿಕೊಂಡ ಪ್ರೀತಿ ದಾಂಪತ್ಯವನ್ನು (Marriage) ಹಾಳು ಮಾಡಿದ ಕಥೆ. ಮೂವರು ಗಂಡರ ಮುದ್ದಿನ ಹೆಂಡತಿಯ ಪ್ರಕರಣದಲ್ಲಿ ಎರಡನೇ ಗಂಡ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾನೆ.

ಬೆಳಗಾವಿಯಲ್ಲಿ (Belagavi news) ಯುವತಿ ಇನ್‌ಸ್ಟಾಗ್ರಾಮ್‌ನಲ್ಲಿ ಲವ್ ಮಾಡಿ ಇನ್ನೊಬ್ಬನನ್ನು ಮದುವೆ ಆದ ಪ್ರಕರಣದಲ್ಲಿ ಇದೀಗ ಎರಡನೇ ಗಂಡನೇ ಪೋಲೀಸರಿಗೆ ದೂರು ನೀಡಿದ್ದಾನೆ. ಶಿಡ್ಲಘಟ್ಟದಲ್ಲಿ ದೂರು ದಾಖಲಾಗಿದೆ. ಯುವತಿ ಪ್ರಿಯಾಂಕ ಸುಳ್ಳು ಆರೋಪ ಮಾಡಿ ನನ್ನ ತೇಜೋವಧೆ ಮಾಡುತ್ತಿದ್ದಾಳೆ. ಆಕೆ ಕಾರು ಬಾಡಿಗೆ ಹೋಗಿದ್ದ ವೇಳೆ ಪರಿಚಯವಾಗಿದ್ದಳು. ಒಂದು ವಾರ ಫೋನ್‌ನಲ್ಲಿ ಮಾತನಾಡಿ ನಂತರ ನನ್ನ ಜೊತೆಯಲ್ಲಿ ಬಂದಳು. 8 ತಿಂಗಳಿನಿಂದ ನನ್ನ ಜೊತೆಯಲ್ಲಿ ಇದ್ದಳು ಎಂದು ಎರಡನೇ ಗಂಡ ದೂರಿದ್ದಾನೆ.

ಬೆಳಗಾವಿಗೆ ಸ್ನೇಹಿತೆಯ ಮದುವೆಯಿದೆ ಎಂದು ಹೇಳಿ ಹೋದಳು. ಸ್ವಂತ ಮಾವ ನನ್ನ ಕೂಡಿ ಹಾಕಿ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಮಾಡಿದ್ದಾಳೆ‌. ಆ ಆರೋಪ‌ ಸುಳ್ಳು, ನಾನು ಅವರ ಸೋದರ ಮಾವ ಅಲ್ಲ. ನಮಗೂ ಅವರಿಗೂ ಯಾವುದೇ ರೀತಿ ಸಂಬಂಧ ಇಲ್ಲ. ನನ್ನ ಮದುವೆಗೂ ಮುನ್ನ ಆಕೆಯ ಮೊದಲೇ ಮದುವೆ ಆಗಿತ್ತು. ನನ್ನ ಜೊತೆಯಲ್ಲಿ ಬಂದಾಗ ಅವಳ ಮೊದಲನೇ ಗಂಡ ಮುನಿರಾಜು ಬಂದು ವಾಪಸ್ ಕರೆದುಕೊಂಡು ಹೋಗಿದ್ದರು. ಆಕೆ ಮತ್ತೆ ನಾನೇ ಬೇಕು ಎಂದು ವಾಪಸ್ ಬಂದಳು. ಆರೋಪ ಎಲ್ಲಾ ಸುಳ್ಳು ಎಂದು ಪ್ರಿಯಾಂಕ ವಿರುದ್ಧ ಎರಡನೇ ಗಂಡ ದೂರು ನೀಡಿದ್ದಾನೆ.

ಈಕೆ ಮೊದಲು ಚಿಕ್ಕಬಳ್ಳಾಪುರದ ಮುನಿರಾಜು ಎಂಬವರನ್ನು ಮದುವೆಯಾಗಿದ್ದಳು. ನಂತರ ಶಿಡ್ಲಘಟ್ಟದ ಸುಧಾಕರ್‌ ಜೊತೆಗೆ ಎರಡನೇ ಮದುವೆಯಾಗಿದ್ದಳು. ಈತನ ಜೊತೆಗೆ ಪ್ರೀತಿ ಇನ್‌ಸ್ಟಗ್ರಾಂ ಮೂಲಕ ಹುಟ್ಟಿಕೊಂಡದ್ದು ಎನ್ನಲಾಗಿತ್ತು. ಇದೀಗ ಬೆಳಗಾವಿ ಮೂಲದ ರೋಹಿತ್‌ ಎಂಬಾತನ ಜೊತೆಗೆ ಮೂರನೇ ಮದುವೆಯಾಗಿದೆ ಎನ್ನಲಾಗಿದೆ. ಈ ಪ್ರಕರಣದ ಬೆನ್ನು ಬಿದ್ದಿರುವ ಪೊಲೀಸರಿಗೆ ತಲೆ ಕೆಡುವ ಹಾಗೆ ಆಗುತ್ತಿದೆ.

ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್‌ ಕೊಲೆ

ಬೆಂಗಳೂರು: ಹಾಡಹಗಲೆ ಯುವಕನ ಬರ್ಬರ ಹತ್ಯೆ (Murder case) ನಡೆದಿದೆ. ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ಘಟನೆ ನಡೆದಿದೆ. ಅಜಿತ್ ಕುಮಾರ್‌ (25) ಕೊಲೆಯಾದವನು.

ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್‌ನಲ್ಲಿ ಅಜಿತ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಂತಕರಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು, ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಲೆ ಕೇಸ್‌ನಲ್ಲಿ ಆರೋಪಿಯಾಗಿದ್ದ ಅಜಿತ್‌

ಬ್ಲಡ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಅಜಿತ್‌, 2022ರಲ್ಲಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸಂಜೆ 4:15ರ ವೇಳೆಗೆ ಮನೆಯಿಂದ ಊಟ ಮುಗಿಸಿ ಹೊರಬಂದಿದ್ದ ಅಜಿತ್ ಮೇಲೆ ಏಕಾಏಕಿ ಹಂತಕರ ಗ್ಯಾಂಗ್‌ ಅಟ್ಯಾಕ್‌ ಮಾಡಿದೆ. ಮಚ್ಚು ಬೀಸಿದ ರಭಸಕ್ಕೆ ಅಜಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶೇಷಾದ್ರಿಪುರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಜಿತ್ ಹಾಗೂ ಸೋದರ ಕಾರ್ತಿಕ್ ಇಬ್ಬರು ಗಣೇಶ್ ಎಂಬಾತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಏರಿಯಾದಲ್ಲಿ ನಾನೇ ಡಾನ್ ಎಂದು ಅಜಿತ್‌ ಮೆರೆಯುತ್ತಿದ್ದ. ಸಮಯ ಕಾದು ನೋಡಿ ಎದುರಾಳಿಗಳು ಸೇಡು ತೀರಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಬೆಂಗಳೂರಲ್ಲಿ ಮಳೆಗೆ ಬೈಕ್‌ ಸವಾರ ಬಲಿ; ಕಂಟ್ರೋಲ್‌ ತಪ್ಪಿ ಬಿದ್ದವನ ಮೇಲೆ ಹರಿದ ವಾಹನಗಳು!

Continue Reading

ಮಳೆ

Karnataka Rain News: ಮಳೆ ಆರ್ಭಟ, ಇಂದು ಶಾಲೆ ಕಾಲೇಜುಗಳಿಗೆ ರಜೆ

Karnataka Rain: ಭಾರಿ ಮಳೆ ಹಿನ್ನೆಲೆ ಆಗಸ್ಟ್ 2ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲೂ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Karnataka Rain news) ಅಬ್ಬರಿಸುತ್ತಿದ್ದು, ಹಲವು ಕಡೆ ಪ್ರವಾಹ ಪರಿಸ್ಥಿತಿ (Flood situation) ಉಂಟಾಗಿದೆ. ಕಾವೇರಿ (Kaveri river), ಕೃಷ್ಣಾ (Krishna River), ಘಟಪ್ರಭಾ ನದಿ ತೀರಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಹಲವಾರು ಗ್ರಾಮಗಳನ್ನು ತೆರವು ಮಾಡಲಾಗಿದೆ. ಮುಂಜಾಗರೂಕತಾ ಕ್ರಮವಾಗಿ ಕರ್ನಾಟಕದ ಹಲವು ಜಿಲ್ಲೆಗಳ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ (School holiday) ಮಾಡಲಾಗಿದೆ.

2024ರ ಜುಲೈ ತಿಂಗಳು ಪೂರ್ತಿ ಭರ್ಜರಿ ಮಳೆಯಾದ ಕಾರಣಕ್ಕೆ ಇದೀಗ ಕರ್ನಾಟಕದ ಬಹುತೇಕ ಡ್ಯಾಂಗಳು ತುಂಬಿ ತುಳುಕುತ್ತಿವೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಬರುವ ಮುನ್ಸೂಚನೆ ನೀಡಲಾಗಿದ್ದು ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು- ಮಂಗಳೂರು ನಡುವಿನ ಹಲವು ಸಂಪರ್ಕ ರಸ್ತೆಗಳು ಭೂಕುಸಿತ ಸಮಸ್ಯೆಯಿಂದ ಬಳಲುತ್ತಿದ್ದು, ಈ ಘಾಟಿ ಮಾರ್ಗಗಳಲ್ಲಿ ವಾಹನಗಳ ಸಂಚಾರ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭೀಕರ ಮಳೆ ಮುಂದುವರಿದಿದೆ. ಮುಂಗಾರು ಮಳೆ ಅಬ್ಬರಕ್ಕೆ ಪಶ್ಚಿಮ ಘಟ್ಟಗಳು ನಲುಗಿ ಹೋಗಿವೆ. ಭಾರಿ ಮಳೆ ಕಾರಣ ಹಲವೆಡೆ ಭೂಕುಸಿತ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಬೆಟ್ಟ ಗುಡ್ಡ, ಭೂಮಿ ಕುಸಿದು ಬೀಳುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳಿಗೆ ಆಗಸ್ಟ್ 2ರಂದು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆ ಹಿನ್ನೆಲೆ ಆಗಸ್ಟ್ 2ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲೂ ರಜೆ ಘೋಷಣೆ ಮಾಡಲಾಗಿದೆ. ಮಲೆನಾಡು ಭಾಗದಲ್ಲಿ ಕೂಡ ಮಳೆ ಜೋರಾಗಿ ಸುರಿಯುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿ ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಜನರು ನೆರೆ ಮತ್ತು ಪ್ರವಾಹದ ಭೀತಿಯಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ತೀರದ ಹತ್ತಾರು ಗ್ರಾಮಗಳು ಮುಳುಗಡೆಯಾಗಿವೆ.

ಇದನ್ನೂ ಓದಿ: Karnataka Weather : 7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ತಜ್ಞರು

Continue Reading
Advertisement
Paris Olympics
ಕ್ರೀಡೆ4 mins ago

Paris Olympic: ಒಲಿಂಪಿಕ್ಸ್​ ಪದಕ ವಿಜೇತರಿಗೆ ಸಿಗಲಿದೆ ದುಬಾರಿ ಬೆಲೆಯ ಕಾರು

Wayanad Landslide
ದೇಶ5 mins ago

Wayanad Landslide: ವಯನಾಡಿನ ಭೀಕರ ದೃಶ್ಯ ಸೆರೆ ಹಿಡಿದ ಇಸ್ರೋ; ಭೂಕುಸಿತಕ್ಕೂ ಮುನ್ನ ಮತ್ತು ನಂತರ ಫೋಟೋ ರಿಲೀಸ್‌

14 hours work it jobs
ಪ್ರಮುಖ ಸುದ್ದಿ11 mins ago

14 Hours Work: ಒಂದೆಡೆ ಐಟಿ ಉದ್ಯೋಗಿಗಳಿಂದ ಬೃಹತ್ ಪ್ರತಿಭಟನೆ, ಇನ್ನೊಂದೆಡೆ ಐಟಿ ಕಂಪನಿಗಳ ಮುಂದೆ ಕೆಲಸಕ್ಕಾಗಿ ಮೈಲುಗಟ್ಟಲೆ ಕ್ಯೂ!

India vs Sri Lanka
ಕ್ರೀಡೆ33 mins ago

India vs Sri Lanka: ಲಂಕಾ ಸರಣಿಯಲ್ಲಿ ವಿಶೇಷ ದಾಖಲೆ ಮೇಲೆ ಕಣ್ಣಿಟ್ಟ ಕೊಹ್ಲಿ, ರೋಹಿತ್​

police firing hubli robber
ಕ್ರೈಂ53 mins ago

Police Firing: ದರೋಡೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

Phone Storage Issue
ಗ್ಯಾಜೆಟ್ಸ್1 hour ago

Phone Storage Issue: ನಿಮ್ಮ ಮೊಬೈಲ್ ಸ್ಟೋರೇಜ್ ಸಮಸ್ಯೆಗೆ ಇಲ್ಲಿದೆ ಸರಳ ಪರಿಹಾರ!

IND vs SL: When and where to watch ODI, squads, predicted XI, venues
ಕ್ರೀಡೆ1 hour ago

IND vs SL: ಇಂದು ಭಾರತ-ಲಂಕಾ ಮೊದಲ ಏಕದಿನ ಹಣಾಹಣಿ; ಎಷ್ಟು ಗಂಟೆಗೆ ಪಂದ್ಯ ಆರಂಭ?

NEET-UG 2024
ದೇಶ1 hour ago

NEET UG 2024: ನೀಟ್ ಅಕ್ರಮ; ಇಂದು ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು-CBI ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ

KEA exams time table
ಪ್ರಮುಖ ಸುದ್ದಿ2 hours ago

KEA Exams Time Table: ಪಿಎಸ್‌ಐ ಸೇರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

instagram love story
ಕ್ರೈಂ2 hours ago

Instagram Love Story: ಮೂವರು ಗಂಡರ ಮುದ್ದಿನ ಹೆಂಡತಿ ಮೇಲೆ 2ನೇ ಗಂಡನ ದೂರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ20 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ21 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ21 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌