Site icon Vistara News

BJP-JDS Padayatra: ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

BJP-JDS Padayatra

ಬೆಂಗಳೂರು: ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಮುಖಂಡರು ಸುದೀರ್ಘ ಚರ್ಚೆ ಮಾಡಿ ಆ.3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದೇವೆ. ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣ, ಎಸ್‌ಸಿಎಸ್‌ಪಿ, ಟಿಎಸ್‌ಟಿ ಹಣ ಗ್ಯಾರಂಟಿಗಳಿಗೆ ಬಳಕೆ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೂ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮಾಡಲಿದ್ದೇವೆ. ಆ.3ರಂದು ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಆ.10 ರಂದು ನಡೆಯುವ ಸಮಾರೋಪ ಸಮಾರಂಭಕ್ಕೆ ಕೇಂದ್ರದ ನಾಯಕರು ಬರಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಪಾದಯಾತ್ರೆ ಸಂಬಂಧ ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿದ್ದಾರೆ. ಸಮನ್ವಯ ಸಭೆಗೂ ಮುನ್ನ ಬಿಜೆಪಿ ಪ್ರಮುಖರ ಸಭೆ ನಡೆದಿದ್ದು, ಸಭೆಯಲ್ಲಿ ಅತಿವೃಷ್ಟಿ ಬಗ್ಗೆ ಚರ್ಚೆಯಾಗಿದೆ. ಕಾರವಾರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಹಲವು ಸಮಸ್ಯೆ ಉಂಟಾಗಿವೆ. ಹೀಗಾಗಿ ಪಾದಯಾತ್ರೆಗೂ ಮೊದಲು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಬಿಜೆಪಿ ನಿಯೋಗ ರಚನೆ ಮಾಡಲಾಗಿದೆ.

ಇದನ್ನೂ ಓದಿ | Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಪಾದಯಾತ್ರೆ ಬಗ್ಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪ್ರತಿಕ್ರಿಯಿಸಿ, ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕಾಗಿದೆ. ಬಿಜೆಪಿ-ಜೆಡಿಎಸ್ ಹೋರಾಟಕ್ಕೆ ಹತ್ತಾರು ಸಾವಿರ ಜನ ಬರಲಿದ್ದಾರೆ. ಸಿಎಂ ರಾಜೀನಾಮೆ ಕೊಡುವವರೆಗೆ ವಿರಮಿಸಲ್ಲ. ಸಿಎಂಗೆ ಗೌರವ ಇದ್ದರೆ ತಕ್ಷಣ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿ ನಡೆಸುವಾಗಲೇ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.

ಇದನ್ನೂ ಓದಿ | Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

ಈ ಬಗ್ಗೆ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್‌ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್‌ ಇದೆ, ನಿತ್ಯ ಶುಗರ್‌ ಲೆವೆಲ್‌ ಚೆಕ್‌ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್‌ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ತಿಳಿಸಿದ್ದಾರೆ.

Exit mobile version