Site icon Vistara News

Sedition Case: ಪಾಕ್‌ ಪರ ಘೋಷಣೆಗೆ ಆಕ್ರೋಶ; ರಾಜ್ಯದ ವಿವಿಧೆಡೆ ಬಿಜೆಪಿ, ಹಿಂದು ಪರ ಕಾರ್ಯಕರ್ತರ ಪ್ರತಿಭಟನೆ

Bjp, pro-Hindu activists protest

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಪ್ರಕರಣ (Pro Pak Slogan) ವಿರೋಧಿಸಿ ಚಿಕ್ಕಮಗಳೂರು, ಕೋಲಾರ, ದಾವಣಗೆರೆ ಸೇರಿ ರಾಜ್ಯದ ವಿವಿಧೆಡೆ ಬಿಜೆಪಿ ಮತ್ತು ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಪಾಕಿಸ್ತಾನ್‌ ಜಿಂದಾಬಾದ್‌ (Sedition Case) ಎಂದು ಕೂಗಿದ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಚಿಕ್ಕಮಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣ ಖಂಡಿಸಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ದೇಶ ವಿರೋಧಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ಕೋಲಾರದಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ

ಕೋಲಾರದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕೆ ಖಂಡನೆ ವ್ಯಕ್ತಪಡಿಸಿ ಕಾರ್ಯಕರ್ತರು, ಕೂಡಲೆ ಕಾಂಗ್ರೆಸ್ ಸರ್ಕಾರವು ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ | Sedition Case: ಪಾಕ್‌ ಪರ ಘೋಷಣೆ ಖಂಡಿಸಿ ಕೆಪಿಸಿಸಿ ಕಚೇರಿಗೆ ಮುತ್ತಿಗೆ; 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ವಶಕ್ಕೆ

ದಾವಣಗೆರೆಯಲ್ಲಿ ಬಿಜೆಪಿ ಮುಖಂಡರ ಆಕ್ರೋಶ

ದಾವಣಗೆರೆ: ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ವಿಚಾರಕ್ಕೆ ದಾವಣಗೆರೆಯಲ್ಲಿ ಬಿಜೆಪಿ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಂಡನೀಯ, ಇದು ದೇಶ ದ್ರೋಹದ ಕೆಲಸ. ರಾಜ್ಯಸಭೆಗೆ ನಾಸಿರ್ ಹುಸೇನ್‌ ಅವರನ್ನು ಆಯ್ಕೆ ಮಾಡಿರುವ ಶಾಸಕರು, ಕನ್ನಡಿಗರಿಗೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. ನಾಸಿರ್ ಹುಸೇನ್ ಮತ್ತು ಅವರ ಬೆಂಬಲಿಗರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಪಾಕಿಸ್ತಾನ ಘೋಷಣೆ ಕೂಗಿದ ಹರಾಮ್ ಕೋರರು ಈ ಭೂಮಿ ಮೇಲೆ ಇರಲು ಅಧಿಕಾರ ಇಲ್ಲ ಕಿಡಿಕಾರಿದರು.

ಪಾಕಿಸ್ತಾನ್ ಜಿಂದಾಬಾದ್ ಎಂದವರನ್ನು ಒದ್ದು ಒಳಗೆ ಹಾಕಿ: ಪ್ರಲ್ಹಾದ್ ಜೋಶಿ ‌

ಹುಬ್ಬಳ್ಳಿ: ಕರ್ನಾಟಕ ವಿಧಾನ ಸೌಧದೊಳಗೆ ರಾಜ್ಯಸಭಾ ಚನಾವಣೆ ಫಲಿತಾಂಶದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಸರ್ಕಾರ ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆ, ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು. ದೇಶದಲ್ಲಿ ಯಾವಾಗಲೆಲ್ಲ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ, ಆಗ ದೇಶ ದ್ರೋಹಿಗಳಿಗೆ ಮತ್ತು ಪಾಕಿಸ್ತಾನ ಸಮರ್ಥಕರಿಗೆ ಬಲ ಬಂದಂತೆ ಆಗುತ್ತಿದೆ. ವಿಧಾನಸೌಧದಲ್ಲಿ ಕೇಳಿಬಂದಿರುವ ಪಾಕಿಸ್ತಾನ ಜಿಂದಾಬಾದ್ ಜೈಕಾರಕ್ಕೆ ಕಾಂಗ್ರೆಸ್ ಈವರೆಗೆ ಮಾಡಿರುವ ತುಷ್ಟೀಕರಣದ ರಾಜಕಾರಣವೇ ಕಾರಣ ಅತ್ಯುಗ್ರವಾಗಿ ಖಂಡಿಸಿದ್ದಾರೆ.

ಇದನ್ನೂ ಓದಿ | Sedition Case: ಪಾಕ್‌ ಪರ ಘೋಷಣೆ; ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಲಗಿ ಎಂದು ಗುಡುಗಿದ ಬಿ.ವೈ. ವಿಜಯೇಂದ್ರ

ಈ ಕೂಡಲೇ ರಾಜ್ಯ ಪೊಲೀಸ್ ಇಲಾಖೆ ಮಾತು ಗೃಹ ಇಲಾಖೆ ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಸಾಮಾನ್ಯ ಸಂಗತಿಯಲ್ಲ. ದೇಶ ದ್ರೋಹಕ್ಕೆ ಕುಮ್ಮಕ್ಕು ಕೊಡುವ ರೀತಿ ನಡೆದುಕೊಳ್ಳುತ್ತಿದೆ. ಈ ಬಗ್ಗೆ ರಾಹುಲ್ ಗಾಂಧಿ ಏನು ಹೇಳುತ್ತಾರೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ ಮುಖ್ಯಮಂತ್ರಿಗೆ ದೇಶ, ದೇಶಭಕ್ತಿ, ಭಾರತ ಮಾತೆ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ಮೊದಲು ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ ಎಂದು ಕಿಡಿಕಾರಿದರು.

Exit mobile version