Karnataka Politics : ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ; ಕೃಷಿ ನೀತಿ ಖಂಡಿಸಿ ಜನಾಂದೋಲನ - Vistara News

ಕರ್ನಾಟಕ

Karnataka Politics : ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ; ಕೃಷಿ ನೀತಿ ಖಂಡಿಸಿ ಜನಾಂದೋಲನ

Karnataka Politics : ಕೃಷಿ ಸುಧಾರಣಾ ಕಾಯ್ದೆ ವಾಪಸ್, ಎಪಿಎಂಸಿ ಕಾಯ್ದೆ ವಾಪಸ್ ಸೇರಿ ರೈತ ಸಂಬಂಧಿ ಯೋಜನೆಗಳನ್ನು ರಾಜ್ಯ ಸರ್ಕಾರ ಬಜೆಟ್‌ನಿಂದ ಕೈಬಿಟ್ಟಿದ್ದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ರೈತ ಸಮ್ಮಾನ್‌ ನಿಧಿಯ ರಾಜ್ಯದ ಪಾಲನ್ನು ನಿಲ್ಲಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

VISTARANEWS.COM


on

BJP Protest Against congress government regarding agriculture policy Ex ministres CT Ravi and Ashwathnarayan attend in this protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ಬಾರಿ ಗ್ಯಾರಂಟಿ ಯೋಜನೆಗಳ (Congress Guarantee Scheme) ಮೂಲಕ ಜನರ ಮನಸ್ಸನ್ನು ಗೆದ್ದು 135 ಸೀಟುಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿದ ಕಾಂಗ್ರೆಸ್‌ಗೆ ಹೆಜ್ಜೆ ಹೆಜ್ಜೆಗೂ ಮುಳ್ಳಾಗುವ ನಿಟ್ಟಿನಲ್ಲಿ ಬಿಜೆಪಿ ರಾಜಕೀಯ ರಣತಂತ್ರವನ್ನು (BJP Karnataka Politics) ಹೆಣೆಯುತ್ತಿದೆ. ಈಗಾಗಲೇ ಉಡುಪಿ ವಿಡಿಯೊ, ಎಸ್‌‌‌ಸಿ-ಎಸ್‌‌ಟಿ ನಿಧಿ (SC ST Fund) ವಿಷಯವಾಗಿ ಸರ್ಕಾರದ ವಿರುದ್ಧ ಜನಾಂದೋಲನ ಮಾಡುತ್ತಿರುವ ಬಿಜೆಪಿ ಈಗ ರೈತರ ವಿಷಯವನ್ನು ಕೈಗೆತ್ತಿಕೊಂಡಿದೆ. ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಕೈಗೊಂಡಿದೆ ಎಂದು ಆರೋಪಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಗಿದ್ದು, ಮಾಜಿ ಸಚಿವರಾದ ಸಿ.ಟಿ. ರವಿ, ಅಶ್ವತ್ಥನಾರಾಯಣ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ರೈತ ಮೋರ್ಚಾದ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಮತ್ತಿತರರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೃಷಿ ಸುಧಾರಣಾ ಕಾಯ್ದೆ ವಾಪಸ್, ಎಪಿಎಂಸಿ ಕಾಯ್ದೆ ವಾಪಸ್ ಸೇರಿ ರೈತ ಸಂಬಂಧಿ ಯೋಜನೆಗಳನ್ನು ರಾಜ್ಯ ಸರ್ಕಾರ ಬಜೆಟ್‌ನಿಂದ ಕೈಬಿಟ್ಟಿದ್ದನ್ನು ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿದೆ.

ಇದನ್ನೂ ಓದಿ: Arecanut Price : ಭೂತಾನ್‌ ಅಡಿಕೆಯಿಂದ ಬೆಳೆಗಾರರು ಹೆದರಬೇಕಿಲ್ಲ; ಆರಗ ಜ್ಞಾನೇಂದ್ರ ಹೇಳಿದ್ದೇನು?

ಈ ವೇಳೆ ಮಾತನಾಡಿ ಮಾಜಿ ಸಚಿವ ಸಿ.ಟಿ. ರವಿ, ಕೇಂದ್ರ ಸರ್ಕಾರಕ್ಕೆ ಪೈಪೋಟಿ ನೀಡಬೇಕು ಎಂದಿದ್ದರೆ ಹೆಚ್ಚಿನ ಹಣ ನೀಡಿ. ಅದು ಬಿಟ್ಟು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರಾಜ್ಯ ಸರ್ಕಾರ ನೀಡುತ್ತಿದ್ದ ಹಣವನ್ನು ಏಕೆ ನಿಲ್ಲಿಸಿದಿರಿ? ಈಗ ತಮಿಳುನಾಡಿನ ರೈತರಿಗೆ ಕದ್ದುಮುಚ್ಚಿ ನೀರು ಬಿಡುತ್ತಿದ್ದೀರಿ. ಮೊದಲು ಮಂಡ್ಯ ರೈತರ ನಾಲೆಗಳಿಗೆ ನೀರು ಕೊಡಿ ಎಂದು ಆಗ್ರಹಿಸಿದರು.

ಇಂದು ಕಾಂಟ್ರ್ಯಾಕ್ಟರ್ ಕೆಂಪಣ್ಣ ಪೇಚಾಡುತ್ತಿದ್ದಾರೆ. ಬಾಣಲೆಯಿಂದ ಬೆಂಕಿಗೆ ಬಿದ್ದೆವು ಎನ್ನುತ್ತಿದ್ದಾರೆ. ಇವತ್ತು ಚುನಾವಣೆ ನಡೆದರೂ ಕಾಂಗ್ರೆಸ್ ಸೋಲುತ್ತದೆ. ಸಿಎಂ ಸಿದ್ದರಾಮಯ್ಯ ಸೇರಿ ಅನೇಕರು ಸೋಲಲಿದ್ದಾರೆ. ಇದು ರೈತ ವಿರೋಧಿ ಸರ್ಕಾರವಾಗಿದೆ ಎಂದು ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇವಲ ರೈತ ವಿರೋಧಿ ನಿಲುವನ್ನು ತಳೆದಿದೆ. ನಮ್ಮ ಸರ್ಕಾರವು ರೈತರು ತಮ್ಮ ಬೆಳೆಯನ್ನು ಯಾವುದೇ ಅಡೆತಡೆಯಿಲ್ಲದೆ, ಎಲ್ಲಿ ಬೇಕಿದ್ದರೂ ಮಾರಾಟ ಮಾಡಲು ಅನುಕೂಲ ಮಾಡಿಕೊಡಲಾಗಿತ್ತು. ಮಧ್ಯವರ್ತಿಗಳ ಹಾವಳಿ ತಪ್ಪಿಸಲಾಗಿತ್ತು. ಆದರೆ, ಈ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರ ಕಲ್ಲು ಹಾಕಿದೆ. ಸಣ್ಣ ನೀರಾವರಿ ಯೋಜನೆಯಲ್ಲಿ ಕುಂಠಿತ ಆಗಿದೆ. ಜನವಿರೋಧಿ ಸರ್ಕಾರದಿಂದ ಏನನ್ನು ಬಯಸಬಹುದು? ಎಂದು ಪ್ರಶ್ನೆ ಮಾಡಿದರು.

ಈ ಸರ್ಕಾರ ಬಂದ ನಂತರ 137 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇವಲ ಒಬ್ಬರಿಗೆ ಪರಿಹಾರ ನೀಡಿದ್ದಾರೆ. 37 ಅರ್ಜಿಗಳ ವಿಲೇವಾರಿ ಆಗಿದೆ. 135 ಜನ ಗೆದ್ದಿದ್ದಾರೆ ಎನ್ನುವ ಡಿಸಿಎಂ ಒಬ್ಬರೇ ಒಬ್ಬ ರೈತರ ಮನೆಗೆ ಹೋಗಿದ್ದಾರಾ? ಎಲ್ಲ ಅಧಿಕಾರಿಗಳಿಂದ ವಸೂಲಿ ಮಾಡುತ್ತಿದ್ದಾರೆ. ಈ ಸರ್ಕಾರ ಪ್ರತಿ ವಿಚಾರದಲ್ಲಿ ಭ್ರಷ್ಟಾಚಾರ ಮಾಡುತ್ತಿದೆ. ರೈತ ಕುಟುಂಬಗಳ ಮೇಲೆ ಎಷ್ಟು ಅನ್ಯಾಯ ಮಾಡಲು ಹೊರಟಿದ್ದೀರ? ಎಂದು ಅಶ್ವತ್ಥನಾರಾಯಣ ಪ್ರಶ್ನೆ ಮಾಡಿದರು. ಈ ವೇಳೆ ಬಿಜೆಪಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.

ಇದನ್ನೂ ಓದಿ: Weather Report : ಇಂದಿನಿಂದ ಅರ್ಧ ಕರ್ನಾಟಕದಲ್ಲಿ ವರ್ಷಧಾರೆ; ಬೆಂಗಳೂರು ಸ್ವಲ್ಪ ಕೂಲ್!

ಕೈಬಿಡಲಾಗಿರುವ ಯೋಜನೆ, ಕಾರ್ಯಕ್ರಮಗಳೇನು?

ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನೆಗಳನ್ನು ಕಾಂಗ್ರೆಸ್‌‌‌ ಕೈಬಿಟ್ಟಿದೆ. ಎಪಿಎಂಸಿ ಕಾನೂನು ರದ್ದತಿ, ವಿದ್ಯುತ್ ದರ ಏರಿಕೆ, ರೈತ ವಿದ್ಯಾನಿಧಿ ಸ್ಥಗಿತ, ಜಿಲ್ಲೆಗೊಂದು ಗೋಶಾಲೆ ಸ್ಥಗಿತ, ಕಿಸಾನ್‌ ಸಮ್ಮಾನ್‌‌‌‌‌‌ ನಿಧಿಗಾಗಿ ರಾಜ್ಯ ಸರ್ಕಾರ ನೀಡುತ್ತಿದ್ದ 4 ಸಾವಿರ ರೂಪಾಯಿಯನ್ನು ಸ್ಥಗಿತ ಮಾಡಿದೆ. ಇನ್ನು ಕೃಷಿ ಭೂಮಿ ಮಾರಾಟ ಕಾಯ್ದೆಯನ್ನು ಬಿಗಿ ಮಾಡಿದೆ, ನೀರಾವರಿ ಯೋಜನೆಗಳ ನಿರ್ಲಕ್ಷ್ಯ ಮಾಡುತ್ತಿದೆ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರದ್ದು, ಜೀವನ್ ಜ್ಯೋತಿ ವಿಮಾ ಯೋಜನೆಯನ್ನೂ ರದ್ದು, ರೈತ ಸಂಪದ ಯೋಜನೆ ರದ್ದು, ಸಹಸ್ರ ಸರೋವರ ಮತ್ತು ಸಹ್ಯಾದ್ರಿ ಸಿರಿ ಯೋಜನೆ ರದ್ದು, ಮೀನುಗಾರರಿಗೆ ವಸತಿ ಯೋಜನೆ ರದ್ದು ಸೇರಿದಂತೆ ಕಲ್ಯಾಣ ಕರ್ನಾಟಕದ ಕೃಷಿ ಕ್ಲಸ್ಟರ್ ಅನ್ನು ಸಹ ಕೈಬಿಡಲಾಗಿದೆ ಎಂಬ ಸಂಗತಿಯನ್ನು ಹೋರಾಟದ ಮೂಲಕ ಜನರಿಗೆ ತಿಳಿಸಲು ಬಿಜೆಪಿ ಮುಂದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

Rameshwaram Cafe Blast: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ.

VISTARANEWS.COM


on

NIA raid rameshwaram cafe blast
Koo

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ನ (Whitefield) ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು (NIA Raid) ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ದೇಶಾದ್ಯಂತ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ಮಾತ್ರವಲ್ಲ ಕೊಯಮತ್ತೂರಿನಲ್ಲಿಯೂ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಯಮತ್ತೂರ್ ವೈದ್ಯ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮತೀನ್‌, ಶಾಜಿಬ್‌ ಜೊತೆ ಶಾಮೀಲು

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಆರೋಪಿಗಳಾದ ಮತೀನ್ ಮತ್ತು ಶಾಜಿಬ್‌ಗೆ ಸಹಾಯ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಹಾಗೂ ಬನಶಂಕರಿಯಲ್ಲಿ ಒಟ್ಟು ನಾಲ್ಕು ಸ್ಥಳದಲ್ಲಿ ಎನ್ಐಎ ದಾಳಿ ಮಾಡಿ ದಾಖಲೆಗಳನ್ನು ಪಡೆದುಕೊಂಡಿದೆ. ಶಂಕಿತ ಉಗ್ರ ಮತೀನ್ ಬೆಂಗಳೂರಿಗೆ ಬಂದಾಗ ಸಹಾಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆತನೊಂದಿಗೆ ಸಂಪರ್ಕಕ್ಕೆ ಬಂದಿದ್ದವರ ಮನೆ ಹಾಗೂ ವಾಸಸ್ಥಳದ ಮೇಲೆ ದಾಳಿ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್‌ ಮೈಂಡ್‌ ಅಬ್ದುಲ್‌ ಮತೀನ್‌ ತಾಹ ಹಾಗೂ ಬಾಂಬ್‌ ಇರಿಸಿದ್ದ ಮುಸಾವಿರ್‌ ಹುಸೇನ್‌ ಶಾಜಿಬ್‌ರನ್ನು ಎನ್‌ಐಎ ಈಗಾಗಲೇ ಬಂಧಿಸಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಿ ಕೋಲ್ಕತ್ತಾದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದರು. ಬಂಧನದಿಂದ ಬಚಾವ್‌ ಆಗಲು ಇಬ್ಬರೂ ಕೂಡ ಸಾಕಷ್ಟು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದರು ಎನ್ನುವ ವಿವರ ಕೂಡ ಪತ್ತೆಯಾಗಿದೆ. ಬೇರೆ ಹೆಸರಿನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ಶಂಕಿತರು ಅಡಗಿದ್ದರು. ಎನ್ಐಎ ತನಿಖೆ ವೇಳೆ ನಕಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಅಬ್ದುಲ್‌ ಮತೀನ್‌ ತಾಹ, ಯಶ್‌ ಶಹನವಾಜ್‌ ಪಟೇಲ್‌ ಹೆಸರಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಂಡಿದ್ದರೆ, ಮುಸಾವಿರ್‌ ಹುಸೇನ್‌ ಶಾಜಿಬ್‌, ಅನ್ಮೋಲ್‌ ಕುಲಕರ್ಣಿ ಎನ್ನುವ ಹಿಂದು ಹೆಸರಲ್ಲಿ ಆಧಾರ್‌ ಕಾರ್ಡ್‌ ರಚಿಸಿಕೊಂಡಿದ್ದ.

ಇಬ್ಬರೂ ಕೂಡ ಕೋಲ್ಕತ್ತಾದ ಪ್ಯಾರಡೈಸ್ ಹೋಟೆಲ್‌ಗೆ ನಕಲಿ ದಾಖಲೆ ನೀಡಿ ವಾಸ್ತವ್ಯ ಮಾಡಿದ್ದರು. ದಾಳಿ ವೇಳೆ ನಕಲಿ ದಾಖಲೆಗಳನ್ನು ಎನ್‌ಐಎ ವಶಕ್ಕೆ ಪಡೆದಾಗ ಈ ಮಾಹಿತಿ ಪತ್ತೆಯಾಗಿದೆ. ನಕಲಿ ದಾಖಲೆಗಳನ್ನು ಎನ್‌ಐಎ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ್ದಾರೆ. ಉಗ್ರರು ತಲೆಮರೆಸಿಕೊಂಡಿದ್ದ ಸಂಪೂರ್ಣ ಮಾಹಿತಿ ಸಂಗ್ರಹವನ್ನೂ ಮಾಡಿದ್ದಾರೆ. 12 ದಿನ ಕೋಲ್ಕತ್ತದಲ್ಲಿದ್ದ ಇಬ್ಬರೂ ಉಗ್ರರು, ಮೂರು ನಾಲ್ಕು ದಿನಕ್ಕೊಮ್ಮೆ ಸ್ಥಳವನ್ನು ಬದಲಾವಣೆ ಮಾಡುತ್ತಿದ್ದರು.

ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಇಬ್ಬರು ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾದ ಬಳಿಕ ಪುನಃ 7 ದಿನ ಕಸ್ಟಡಿಗೆ ಪಡೆಯಲಾಗಿತ್ತು. ನಂತರ ಮತ್ತೆ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾರ್ಚ್ 1ರಂದು ವೈಟ್‌ಫೀಲ್ಡ್‌ನ ಬ್ರೂಕ್‌ಫೀಲ್ಡ್‌ನ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರಸಹಿತ 9 ಜನರು ಗಾಯಗೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಹಲವೆಡೆ ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಸುಮಾರು 40 ದಿನಗಳ ಬಳಿಕ ಕೋಲ್ಕೊತಾದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

Continue Reading

ಕೊಡಗು

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Love Case : ಮಗಳನ್ನು ಪ್ರೀತಿಸುತ್ತಿದ್ದ ಯುವಕ ಮನೆಗೆ ಬಂದಿದ್ದಕ್ಕೆ ಮುಖಕ್ಕೆ ಬಿಸಿ ನೀರು ಎರಚಿ ಯುವತಿ ತಂದೆ ವಿಕೃತಿ ಮೆರೆದಿದ್ದಾರೆ. ಸುಟ್ಟ ಗಾಯಗಳಿಂದ ಯುವ ಪ್ರೇಮಿ ಆಸ್ಪತ್ರೆ ಪಾಲಾಗಿದ್ದಾನೆ.

VISTARANEWS.COM


on

By

Love Case Father throws hot water on man who loved his daughter for coming home
Koo

ಕೊಡಗು: ಮಗಳನ್ನು ಪ್ರೀತಿಸುತ್ತಿದ್ದ (Love Case) ಯುವಕನಿಗೆ ಬಿಸಿ ನೀರು ಎರಚಿ ಯುವತಿ ತಂದೆ ವಿಕೃತಿ ಮೆರೆದಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಮದೆನಾಡಿನಲ್ಲಿ ಘಟನೆ ನಡೆದಿದೆ. ಗಣಪತಿ ಬೀದಿ ನಿವಾಸಿ ಸುಹೇಲ್ ಎಂಬಾತ ಆಸ್ಪತ್ರೆಗೆ ದಾಖಲಾದ ಪ್ರೇಮಿಯಾಗಿದ್ದಾನೆ.

ಸುಹೇಲ್‌ಗೆ ಮದೆನಾಡಿನ ಯುವತಿಯೊಂದಿಗೆ ಪ್ರೇಮಾಂಕುರವಾಗಿತ್ತು. ಇಬ್ಬರು ಕೈ-ಕೈ ಹಿಡಿದು ಊರೆಲ್ಲ ಓಡಾಡಿದ್ದರು. ಇವರಿಬ್ಬರ ಪ್ರೀತಿ ವಿಚಾರವು ಯುವತಿ ಮನೆಯವರಿಗೆ ತಿಳಿದುಹೋಗಿತ್ತು. ಇವರಿಬ್ಬರ ಪ್ರೀತಿಗೆ ನಿರಾಕರಿಸಿದ್ದರು. ಇತ್ತ ಯುವತಿ ಸುಹೇಲ್‌ಗೆ ಫೋನ್‌ ಮಾಡಿ ಮನೆಯಲ್ಲಿ ಹಿಂಸೆಯಾಗುತ್ತಿದೆ. ಮನೆಗೆ ಬಂದು ನನ್ನನ್ನು ಕರೆದುಕೊಂಡು ಹೋಗು ಎಂದಿದ್ದಾಳೆ.

ಪ್ರೀತಿಸಿದವಳು ಈ ಪರಿ ಹಿಂಸೆ ಪಡುತ್ತಿರುವ ವಿಷಯ ತಿಳಿದ ಸುಹೇಲ್‌ ಗಟ್ಟಿ ಮನಸ್ಸು ಮಾಡಿ, ಆಕೆಯ ಮನೆಗೆ ಹೋಗಿದ್ದಾನೆ. ಸುಹೇಲ್‌ ಮನೆಯೊಳಗೆ ಕಾಲಿಡುತ್ತಿದ್ದಂತೆ ಸಿಟ್ಟಾದ ಯುವತಿ ತಂದೆ ಏಕಾಏಕಿ ಕೊತ ಕೊತ ಅಂತ ಕುದಿಯುತ್ತಿದ್ದ ನೀರನ್ನು ಎರಚಿದ್ದಾರೆ. ಬಿಸಿ ನೀರು ಎರಚಿದ್ದರಿಂದ ಸುಹೇಲ್‌ನ ಮುಖ ಹಾಗೂ ಕುತ್ತಿಗೆ ಭಾಗವೆಲ್ಲ ಸುಟ್ಟು ಹೋಗಿದೆ.

ಸದ್ಯ ಸುಹೇಲ್‌ಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಾಶತ್‌ ಸುಹೇಲ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಟ್ಟುಗಾಯಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸದ್ಯ ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌

ಉತ್ತರಪ್ರದೇಶ: ಸೊಸೆ ಮೇಲೆ ಅತ್ತೆ ಮತ್ತು ನಾದಿನಿ ಸೇರಿಕೊಂಡು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶ(Uttar Pradesh)ದ ಇಟಾ ಪ್ರದೇಶದಲ್ಲಿ ನಡೆದಿದೆ. ವಿಚಿತ್ರವೆಂದರೆ ಮಹಿಳೆಯ ಪತಿ, ತನ್ನ ತಾಯಿ ಮತ್ತು ತಂಗಿಯನ್ನು ತಡೆಯುವ ಬದಲು ವಿಡಿಯೋ ರೆಕಾರ್ಡ್‌(Video record) ಮಾಡಿದ್ದಾನೆ. ಬಿಟ್ಟು ಬಿಡುವಂತೆ ಎಷ್ಟೇ ಗೋಗರೆದರೂ ಕೇಳದೆ ಮಹಿಳೆ ಮೇಲೆ ಬಹಳ ಕ್ರೂರವಾಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌(Viral Video) ಆಗಿದೆ.

ಇಟಾದಲ್ಲಿ ಈ ಘಟನೆ ನಡೆದಿದ್ದು, ಸೊಸೆಯನ್ನು ಅತ್ತೆ ಮತ್ತು ನಾದಿನಿ ಸೇರಿಕೊಂಡು ಚೆನ್ನಾಗಿ ಥಳಿಸಿದ್ದು, ಬಳಿಕ ಆಕೆಯನ್ನು ನೆಲದಲ್ಲಿ ಎಳೆದಾಡಿದ್ದಾರೆ. ಅಲ್ಲೇ ಇದ್ದ ಪತಿ ಮತ್ತು ಮಾವನ ಬಳಿ ಸಹಾಯಕ್ಕಾಗಿ ಆಕೆ ಎಷ್ಟೇ ಅಂಗಲಾಚಿದರೂ ಆಕೆ ಮೇಲೆ ನಡೆಯುತ್ತಿದ್ದ ಮಾರಣಾಂತಿಕ ಹಲ್ಲೆ ಮಾತ್ರ ನಿಲ್ಲುವುದೇ ಇಲ್ಲ. ಮಹಿಳೆಯ ಜೋರಾಗಿ ಕಿರುಚಿಕೊಂಡು ಬಿಟ್ಟು ಬಿಡಿ ಎಂದು ಬೇಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಕೈಹಿಡಿದು ರಕ್ಷಿಸಬೇಕಿದ್ದ ಪತಿಯೇ ಆಕೆಯ ಸಹಾಯಕ್ಕೆ ಬಾರದೇ ಬರೀ ವಿಡಿಯೋ ಮಾಡುತ್ತಾ ನಿಂತಿದ್ದ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ. ಇಂತಹ ಕ್ರೂರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪೊಲೀಸರು ಸ್ವಯಂಪ್ರೇರಿತರಾಗಿ ದೂರ ದಾಖಲಿಸಿಕೊಂಡು ಆರೋಪಿಗಳನ್ನು ತಕ್ಷಣ ಅರೆಸ್ಟ್‌ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

CM Siddaramaiah: ಖರ್ಗೆಯೂ ಪಿಎಂ ಆಗಲ್ಲ! ಸಿದ್ದರಾಮಯ್ಯ ಯಾಕಿಂಥಾ ಮಾತಾಡಿದ್ರು?

CM Siddaramaiah: ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ರಾಜ್ಯದಿಂದ ಯಾರೂ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ. ನಾನು ಪಿಎಂ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅಲ್ಲ , ನಮ್ಮ ರಾಜ್ಯದಲ್ಲಿ ಯಾರೂ ಸಹ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ” ಎಂದು ಹೇಳಿದ್ದಾರೆ. ಇದರ ಮೂಲಕ, ಖರ್ಗೆ ಕೂಡ ಪಿಎಂ ಆಗುವುದಿಲ್ಲ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ.

VISTARANEWS.COM


on

Mallikarjuna Kharge siddaramaiah
Koo

ಬೆಂಗಳೂರು: ಈ ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶದಲ್ಲಿ ಕಾಂಗ್ರೆಸ್ (congress) ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President Mallikarjun Kharge) ಪ್ರಧಾನ ಮಂತ್ರಿ (Prime minister) ಆಗಬಹುದು ಎಂಬ ಒಂದು ಸಣ್ಣ ಆಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಚಿವುಟಿ ಹಾಕಿದ್ದಾರೆ. “ರಾಜ್ಯದ ಯಾವ ನಾಯಕನೂ ಪಿಎಂ ಆಗಲ್ಲ” ಎನ್ನುವ ಮೂಲಕ ಅವರು ಈ ಚರ್ಚೆಗೆ ತೆರೆ ಎಳೆದಿದ್ದಾರೆ.

ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ರಾಜ್ಯದಿಂದ ಯಾರೂ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ. ನಾನು ಪಿಎಂ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅಲ್ಲ , ನಮ್ಮ ರಾಜ್ಯದಲ್ಲಿ ಯಾರೂ ಸಹ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ” ಎಂದು ಹೇಳಿದ್ದಾರೆ. ಇದರ ಮೂಲಕ, ಖರ್ಗೆ ಕೂಡ ಪಿಎಂ ಆಗುವುದಿಲ್ಲ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ.

ಹಾಗಾದರೆ ರಾಜ್ಯದಿಂದ ಪಿಎಂ ಸ್ಥಾನದ ಅರ್ಹರು, ಆಕಾಂಕ್ಷಿಗಳು ಕಾಂಗ್ರೆಸ್‌ನಲ್ಲಿ ಯಾರು ಇಲ್ಲವೇ? ಸ್ವತಃ ಎಐಸಿಸಿ ಅಧ್ಯಕ್ಷರೇ ಇದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಬಾರಿ ಕಾಂಗ್ರೆಸ್ ಲೋಕಸಭಾ ಚುನಾವಣೆ ಎದುರಿಸಿದೆ. ಕಾಂಗ್ರೆಸ್ ಒಕ್ಕೂಟ ಅಧಿಕ ಸ್ಥಾನ ಗೆದ್ದರೆ ಪಿಎಂ ರೇಸ್‌ನಲ್ಲಿ‌‌ ಖರ್ಗೆಯೂ ಪರಿಗಣನೆಗೆ ಒಳಗಾಗುವವರೇ. ರೇಸ್‌ನಲ್ಲಿ ನಾನಿಲ್ಲ ಎಂದು ಅವರು ಹೇಳಿಲ್ಲ. ಆದರೆ ರಾಹುಲ್‌ ಗಾಂಧಿಯವರನ್ನು ಓವರ್‌ಟೇಕ್‌ ಮಾಡಿ ಮುಂದೆ ಹೋಗಲು ಸ್ವತಃ ಖರ್ಗೆಯವರೇ ತಯಾರಿಲ್ಲ.

ಇನ್ನು ಸಿದ್ದರಾಮಯ್ಯ. ಸ್ವತಃ ಅವರು ರಾಜ್ಯದ ರಾಜಕಾರಣ ಬಿಟ್ಟು ಹೋಗಲು ತಯಾರಿಲ್ಲ. ಬೇರೆ ರಾಜ್ಯಗಳಿಗೆ ಚುನಾವಣಾ ಪ್ರಚಾರಕ್ಕೆ ಹೋಗುವುದು ಕೂಡ ನನ್ನಿಂದ ಸಾಧ್ಯವಿಲ್ಲ ಎಂದು ಅವರು ಇತ್ತೀಚೆಗೆ ಹೇಳಿದ್ದರು. ಸ್ವತಃ ರಾಜ್ಯದ ಕಾಂಗ್ರೆಸ್‌ ನಾಯಕತ್ವವನ್ನು ಗಟ್ಟಿಯಾಗಿ ಹಿಡಿದಿರುವ ಸಿದ್ದರಾಮಯ್ಯ, ಅದನ್ನು ಸುತರಾಂ ಬಿಟ್ಟುಕೊಡಲು ಸಿದ್ಧರಿಲ್ಲ. ಇದನ್ನೇ ಅವರು ʼನಾನು ಪಿಎಂ ಸ್ಥಾನ ಆಕಾಂಕ್ಷಿಯಲ್ಲʼ ಎನ್ನುವ ಮೂಲಕ ತಿಳಿಸಿದ್ದಾರೆ.

ಸಿದ್ದು ಹೇಳಿಕೆ ಮಲ್ಲಿಕಾರ್ಜುನ ಖರ್ಗೆಯವರಿಗೆ ನೀಡಿದ ಚೆಕ್‌ಮೇಟ್‌ ಕೂಡ ಎಂದು ವಿಶ್ಲೇಷಿಸಲಾಗುತ್ತಿದೆ. ಪಿಎಂ ಸ್ಥಾನಕ್ಕೆ ಹೋಗಬಹುದಾದ ಖರ್ಗೆಯವರನ್ನು ಹೆಸರಿಸಿ, ಆ ಮೂಲಕ ಇನ್ನೊಂದು ಶಕ್ತಿ ಕೇಂದ್ರವನ್ನು ಪಕ್ಷದೊಳಗೆ ಬೆಂಬಲಿಸಲು ಸಿದ್ದು ಸಿದ್ಧರಿಲ್ಲ. ಹಾಗೆಯೇ ಅವರು ಈ ಮಾತು ರಾಹುಲ್ ಗಾಂಧಿಗೆ ಬೆಂಬಲ ಕೂಡ ಇರಬಹುದು ಅಂತಿದಾರೆ ವಿಶ್ಲೇಷಕರು. ಯಾಕೆಂದರೆ ಸದ್ಯ ಕಾಂಗ್ರೆಸ್‌ನಲ್ಲಿ ರಾಷ್ಟ್ರಮಟ್ಟದ ಹಲವು ನಾಯಕರು ರಾಹುಲ್‌ ಅವರನ್ನೇ ಬೆಂಬಲಿಸುತ್ತಿದ್ದಾರೆ.

ಇದನ್ನೂ ಓದಿ: CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Continue Reading

ವಿಜಯಪುರ

Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

Murder case : ಕುಡಿದ ಅಮಲಿನಲ್ಲಿ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪಾಪಿ ಪತಿಯೊಬ್ಬ, ನಂತರ ಶವದ ಪಕ್ಕದಲ್ಲೇ ಮಲಗಿ ರಾತ್ರಿ ಕಳೆದಿದ್ದಾನೆ.

VISTARANEWS.COM


on

By

murder Case in Vijayapura
Koo

ವಿಜಯಪುರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಪಾಪಿ ಪತಿ (Murder Case) ಹತ್ಯೆಗೈದಿದ್ದಾನೆ. ಕಮಲಾಬಾಯಿ ಇಂಚಗೇರಿ ಕೊಲೆಯಾದವರು. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಢವಳಾರ ಗ್ರಾಮದಲ್ಲಿ ನಿನ್ನೆ ಸೋಮವಾರ ತಡ ರಾತ್ರಿ ಘಟನೆ ನಡೆದಿದೆ.

ಗೊಲ್ಲಾಳಪ್ಪ ಇಂಚಗೇರಿ ಎಂಬಾತ ಕುಡಿದ ಮತ್ತಿನಲ್ಲಿ ಪತ್ನಿಯೊಂದಿಗೆ ಜಗವಾಡಿದ್ದ. ಜಗಳ ವಿಕೋಪಕ್ಕೆ ಹೋದಾಗ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿದ್ದಾನೆ. ಗಂಭೀರ ಗಾಯಗೊಂಡ ಕಮಲಾಬಾಯಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೂ ಪತ್ನಿಯನ್ನು ಕೊಂದು ಅದೇ ಸ್ಥಳದಲ್ಲಿಯೇ ಮಲಗಿದ್ದ. ಮುಂಜಾನೆ ಸ್ಥಳೀಯರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕಲಕೇರಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಕುಡಿದ ಅಮಲಿನಲ್ಲಿ ತೇಲಾಡುತ್ತಿದ್ದ ಗೊಲ್ಲಾಳಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಕಲಕೇರಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು

ಮಧ್ಯಪ್ರದೇಶ: ಕೆಲವೊಮ್ಮೆ ಅತಿಯಾದ ಮೋಜು ಪ್ರಾಣಕ್ಕೆ ಸಂಚು ತಂದು ಬಿಡುತ್ತದೆ. ಮೋಜಿಗೆಂದು ಮಾಡಿದ ಕಾರ್ಯದಿಂದ ಎದುರಿಗಿರುವವರ ಪ್ರಾಣವನ್ನೇ ಬಲಿ ಪಡೆದಂತಹ ಘಟನೆಗಳು ಆಗಾಗ ಕಣ್ಣ ಮುಂದೆ ಬರುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಮಧ್ಯಪ್ರದೇಶ(Madya Pradesh)ದ ರತ್ಲಮ್‌ನಲ್ಲಿ ನಡೆದಿದೆ. ಈಜುಕೊಳ(Swimming pool) ದಲ್ಲಿ ಯುವಕನೊರ್ವ ಸ್ಟಂಟ್‌ ಮಾಡಲು ಹೋಗಿ ಮತ್ತೊರ್ವ ಯುವಕನ ಪ್ರಾಣಕ್ಕೆ ಕುತ್ತು ತಂದಿದ್ದಾನೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video)ಆಗಿದೆ.

ಘಟನೆ ವಿವರ:

ರತ್ಲಮ್‌ನಲ್ಲಿರುವ ಡಾಲ್ಫಿನ್‌ ಈಜುಕೊಳದಲ್ಲಿ ಈ ಘಟನೆ ನಡೆದಿದ್ದು, ಅನೇಕ ಯುವಕರು ಸ್ವಿಮ್ಮಿಂಗ್‌ ಮಾಡುತ್ತಿರುತ್ತಾರೆ. ಇನ್ನೇ ಒಬ್ಬ ಯುವಕ ಮೇಲೆ ಹತ್ತಲು ಮುದಾಗುತ್ತಿದ್ದಾಗ ಮತ್ತೊರ್ವ ಯುವಕ ಸ್ವಿಮ್ಮಿಂಗ್‌ಪೂಲ್‌ಗೆ ಸ್ಟಂಟ್‌ ಮಾಡಿ ಜಂಪ್‌ ಹೊಡೆಯುತ್ತಾನೆ. ಆಗ ಇದ್ದ ಮೇಲೆ ಹತ್ತುತ್ತಿದ್ದ ಯುವಕನ ತಲೆಗೆ ಅವನ ಕಾಲಿನಿಂದ ಗಂಭೀರವಾಗಿ ಏಟಾಗುತ್ತದೆ. ಇದ್ದಕ್ಕಿದ್ದಂತೆ ಆ ಯುವಕ ಸ್ವಿಮ್ಮಿಂಗ್‌ಪೂಲ್‌ ಒಳಗೆ ಬೀಳುತ್ತಾನೆ. ತಕ್ಷಣ ಪ್ರಜ್ಞೆ ತಪ್ಪುತ್ತಾನೆ. ಅನೇಕರು ಅಲ್ಲೇ ಇದ್ದರೂ ತಕ್ಷಣ ಅವರ ಸಹಾಯಕ್ಕೆ ಯಾದೂ ಧಾವಿಸಲಿಲ್ಲ. ಅದಾದ ಬಳಿಕ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಲ್ಲಿ ಆತ ಕೊನೆಯುಸಿರೆಳೆದಿದ್ದ.

ಇದನ್ನೂ ಓದಿ:ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

ಮೃತ ಯುವಕನನ್ನು ಅನಿಕೇತ್‌ ಎಂದು ಗುರುತಿಸಲಾಗಿದೆ. ಇಂತಹದ್ದೇ ಒಂದು ಘಟನೆ ಈ ಹಿಂದೆಯೂ ನಡೆದಿತ್ತು. ಇದಾದ ಬಳಿಕ ಸ್ವಿಮ್ಮಿಂಗ್‌ ಪೂಲ್‌ ನಿರ್ವಾಹಕರಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೆ ಇದೀಗ ಮತ್ತೆ ಇಂತಹದ್ದೇ ಮತ್ತೊಂದು ಘಟನೆ ನಡೆದಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಈಜುಕೊಳವನ್ನು ಸೀಲ್‌ಡೌನ್‌ ಮಾಡಲಾಗಿದೆ.

ಕಳೆದ ವರ್ಷ ಬೆಂಗಳೂರಿನಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಜೆಪಿ ನಗರ 7 ನೇ ಹಂತದಲ್ಲಿರುವ ಖಾಸಗಿ ಈಜುಕೊಳದಲ್ಲಿ 13 ವರ್ಷದ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿದ್ದರು. ಮೃತ ವಿದ್ಯಾರ್ಥಿಗಳನ್ನು ಜರಗನಹಳ್ಳಿ ನಿವಾಸಿಗಳಾದ ಮೋಹನ್ ಮತ್ತು ಜಯಂತ್ ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರು ತಮ್ಮ ಶಾಲೆಯಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿತ್ತು. ಬಳಿಕ ಇಬ್ಬರ ಮೃತದೇಹಗಳು ಈಜುಕೊಳದಲ್ಲಿ ಕಂಡುಬಂದಿದ್ದವು.

ಈಜುಕೊಳದ ತರಬೇತುದಾರ ಬಾಲಕರನ್ನು ಈಜುಕೊಳಕ್ಕೆ ಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ., ಆದರೆ ದುರಂತ ನಡೆದ ಸಮಯದಲ್ಲಿ ಅವರು ಇರಲಿಲ್ಲ ಎಂಬುದು ಆನಂತರ ಬಯಲಾಗಿತ್ತು. ಪೊಲೀಸರ ಪ್ರಕಾರ, ಇಬ್ಬರು ಬಾಲಕರು ತರಗತಿಗಳನ್ನು ಬಿಟ್ಟು ಜೆಪಿ ನಗರದಲ್ಲಿರುವ ಎಂಎನ್‌ಸಿ ಸ್ಪೋರ್ಟ್ಸ್ ಅಕಾಡೆಮಿಗೆ ಭೇಟಿ ನೀಡಿ, ಈಜುಕೊಳದಲ್ಲಿ ಆಟವಾಡಿದ್ದಾರೆ. ಈಜುಕೊಳದ ಸರಿಯಾದ ಬಳಕೆಯ ಬಗ್ಗೆ ಬಾಲಕರಿಗೆ ಸೂಚನೆಗಳು ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Anant Ambani Radhika 2nd pre wedding bash
ಬಾಲಿವುಡ್5 mins ago

Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

NIA raid rameshwaram cafe blast
ಪ್ರಮುಖ ಸುದ್ದಿ12 mins ago

Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

Viral Video
ವೈರಲ್ ನ್ಯೂಸ್21 mins ago

Viral Video: ಮದುವೆಗೆ ಬಂದ ಮಾಜಿ ಪ್ರಿಯಕರ; ಆಮೇಲೆ ನಡೆದಿದ್ದೇ ಬೇರೆ- ಸಿನಿಮಾ ಸ್ಟೈಲ್‌ನಲ್ಲಿ ಟ್ವಿಸ್ಟ್‌ ಎಂದ ನೆಟ್ಟಿಗರು

Love Case Father throws hot water on man who loved his daughter for coming home
ಕೊಡಗು30 mins ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

RCB IPL Records
ಕ್ರೀಡೆ37 mins ago

RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

Emirates Flight
ದೇಶ38 mins ago

Emirates Flight: ವಿಮಾನ ಡಿಕ್ಕಿ ಹೊಡೆದು 36 ಫ್ಲೆಮಿಂಗೊ ಪಕ್ಷಿಗಳಿಗೆ ದಾರುಣ ಅಂತ್ಯ

Actress Nayanthara twin sons on auto ride
ಕಾಲಿವುಡ್53 mins ago

Actress Nayanthara: ನಯನತಾರಾ ಅವಳಿ ಮಕ್ಕಳ ಭರ್ಜರಿ ಆಟೋ ಸವಾರಿ!

Mallikarjuna Kharge siddaramaiah
ಪ್ರಮುಖ ಸುದ್ದಿ55 mins ago

CM Siddaramaiah: ಖರ್ಗೆಯೂ ಪಿಎಂ ಆಗಲ್ಲ! ಸಿದ್ದರಾಮಯ್ಯ ಯಾಕಿಂಥಾ ಮಾತಾಡಿದ್ರು?

murder Case in Vijayapura
ವಿಜಯಪುರ1 hour ago

Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

Jayant Sinha
ದೇಶ1 hour ago

Jayant Sinha: ವೋಟೂ ಹಾಕಿಲ್ಲ..ಪ್ರಚಾರಕ್ಕೂ ಬಂದಿಲ್ಲ; ಜಯಂತ್‌ ಸಿನ್ಹಾಗೆ ಬಿಜೆಪಿ ಶೋಕಾಸ್‌ ನೊಟೀಸ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ24 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌