Karanataka Elections : ಮಾಡಾಳ್‌ ಮುಜುಗರ; ಅಮಿತ್‌ ಶಾ ಕಾರ್ಯಕ್ರಮ ಹೊನ್ನಾಳಿಯಿಂದ ಚಿತ್ರದುರ್ಗಕ್ಕೆ ಶಿಫ್ಟ್‌ ಮಾಡಿದ ಬಿಜೆಪಿ! - Vistara News

ಕರ್ನಾಟಕ

Karanataka Elections : ಮಾಡಾಳ್‌ ಮುಜುಗರ; ಅಮಿತ್‌ ಶಾ ಕಾರ್ಯಕ್ರಮ ಹೊನ್ನಾಳಿಯಿಂದ ಚಿತ್ರದುರ್ಗಕ್ಕೆ ಶಿಫ್ಟ್‌ ಮಾಡಿದ ಬಿಜೆಪಿ!

ಮಾಡಾಳು ವಿರೂಪಾಕ್ಷಪ್ಪ ಮೇಲಿನ ಲಂಚದ ಆರೋಪ ಬಿಜೆಪಿಗೆ ಭಾರಿ ಮುಜುಗರ ತಂದಿರುವುದು ಸ್ಪಷ್ಟವಾಗಿದೆ. ಹೀಗಾಗಿಯೇ ಹೊನ್ನಾಳಿಯಲ್ಲಿ ನಿಗದಿಯಾಗಿದ್ದ (Karanataka Elections) ಬಿಜೆಪಿ ಸಮಾವೇಶವನ್ನು ಚಿತ್ರದುರ್ಗಕ್ಕೆ ಶಿಫ್ಟ್‌ ಮಾಡಲಾಗಿದೆ.

VISTARANEWS.COM


on

Amit shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಚೆನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರು ಕೆಎಸ್‌ಡಿಎಲ್‌ ಲಂಚ ಪ್ರಕರಣದಲ್ಲಿ ಸಿಲುಕಿರುವುದು ಬಿಜೆಪಿಗೆ ಭಾರಿ ಮುಜುಗರ (Karanataka Elections) ಉಂಟು ಮಾಡಿದೆ. ಈ ಕಾರಣಕ್ಕಾಗಿ ಅದು ಮಾರ್ಚ್‌ 27ರಂದು ಹೊನ್ನಾಳಿಯಲ್ಲಿ ಆಯೋಜನೆಯಾಗಿದ್ದ ಫಲಾನುಭವಿಗಳ ಬೃಹತ್‌ ಸಮಾವೇಶವನ್ನು ಚಿತ್ರದುರ್ಗಕ್ಕೆ ಶಿಫ್ಟ್‌ ಮಾಡಲಾಗಿದೆ.

ಮಾರ್ಚ್ 27ಕ್ಕೆ ದಾವಣಗೆರೆಯ ಹೊನ್ನಾಳಿಯಲ್ಲಿ ಬೃಹತ್ ಫಲಾನುಭವಿಗಳ ಸಮಾವೇಶದಲ್ಲಿ ಆಯೋಜಿಸಲಾಗಿತ್ತು. ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗುತ್ತಿದ್ದಾರೆ. ಆದರೆ, ಹೊನ್ನಾಳಿಯ ಪಕ್ಕದ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಮಾಡಾಳು ವಿರೂಪಾಕ್ಷಪ್ಪ ಅವರು ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವುದರಿಂದ ಸಮಾವೇಶ ನಡೆಸಲು ಬಿಜೆಪಿ ಹಿಂದೇಟು ಹಾಕಿದೆ. ಪ್ರತಿಪಕ್ಷಗಳು ಇದನ್ನೇ ದೊಡ್ಡ ವಿಷಯವಾಗಿ ಪ್ರಸ್ತಾಪಿಸಿ ಮುಜುಗರ ಉಂಟು ಮಾಡಬಹುದು ಎಂಬ ಭಯ ಬಿಜೆಪಿಯನ್ನು ಕಾಡುತ್ತಿದೆ. ಹೀಗಾಗಿ ಹೊನ್ನಾಳಿಯಲ್ಲಿ ನಡೆಯಬೇಕಿದ್ದ ಬೃಹತ್ ಕಾರ್ಯಕ್ರಮವನ್ನು ಚಿತ್ರದುರ್ಗಕ್ಕೆ ಕಾರ್ಯಕ್ರಮ ಶಿಫ್ಟ್ ಮಾಡಲಾಗಿದೆ.

ಬದಲಾದ ಕಾರ್ಯಕ್ರಮದಂತೆ ಚಿತ್ರದುರ್ಗದ ಹರ್ತಿಕೋಟೆಯಲ್ಲಿ ಬೃಹತ್ ಫಲಾನುಭವಿಗಳ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಅಮಿತ್‌ ಶಾ ಅವರ ಜತೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಬರುವ ಸಾಧ್ಯತೆ ಇದೆ. ಈಗಾಗಲೇ ಯೋಗಿ ಆದಿತ್ಯನಾಥ್‌ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಬಿಜೆಪಿ ಹೇಳಿದೆ.

10 ಲಕ್ಷ ಜನರನ್ನು ಸೇರಿಸಲು ಪ್ಲ್ಯಾನ್‌

ಸಮಾವೇಶದಲ್ಲಿ ಸುತ್ತ ಮುತ್ತಲಿನ ಜಿಲ್ಲೆಗಳ ಫಲಾನುಭವಿಗಳು ಭಾಗಿಯಾಗಲಿದ್ದು, 10 ಲಕ್ಷ ಜನ ಸೇರಿಸಲು ಬಿಜೆಪಿ ಪ್ಲ್ಯಾನ್‌ ಮಾಡಿದ್ದಾರೆ. ಸಮಾವೇಶದಲ್ಲಿ ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ನಡೆಯಲಿದೆ.

ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ, ಬಿಎಸ್‌ವೈ ಸೇರಿದಂತೆ ಬಿಜೆಪಿ ಘಟಾನುಘಟಿಗಳು ನಾಯಕರು ಭಾಗವಹಿಸಲಿದ್ದಾರೆ.

ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ ಹೆಚ್ಚಿಸಲು ಈ ಸಮಾವೇಶ ಆಯೋಜಿಸಲಾಗಿದ್ದು, ಚಿತ್ರದುರ್ಗದಲ್ಲಿ ಈ ಬಾರಿ ಆರಕ್ಕೆ ಆರು ಕ್ಷೇತ್ರ ಗೆಲ್ಲಲು ತಂತ್ರ ರೂಪಿಸಿದೆ ಎನ್ನಲಾಗಿದೆ.

ಇದನ್ನೂ ಓದಿ : Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಇದುವರೆಗೂ ಯಾರನ್ನೂ ಬಂಧಿಸಿಲ್ಲ

Blast In Bengaluru : ದಿ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ (rameshwaram cafe blast) ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ನಗರ ಪೊಲೀಸ್‌ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

By

Rameswaram cafe bomb blast case No one has been arrested
Koo

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ (rameshwaram cafe blast) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಆದರೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ ಸ್ಪಷ್ಟಪಡಿಸಿದ್ದಾರೆ.

ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ. ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿದೆ. ಹೀಗಾಗಿ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಜತೆಗೆ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.

ರಾಮೇಶ್ವರಂ ಬ್ರಾಂಚ್‌ಗಳ ಪರಿಶೀಲನೆ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ರಾಮೇಶ್ವರಂ ಮತ್ತೊಂದು ಬ್ರಾಂಚ್‌ಗಳಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ. ಇಂದಿರಾನಗರದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಿಸಿಟಿವಿ ದೃಶ್ಯಾವಳಿಯಲ್ಲಿ ಶಂಕಿತರ ಚಲನವಲನ ಇದೇಯಾ ಎಂದು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

ಸಂಶಯ ಬಂದರೆ ಇಲ್ಲಿಗೆ ಕಾಲ್‌ ಮಾಡಿ

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ (Blast In Bengaluru) ಬ್ಲಾಸ್ಟ್‌ ಪ್ರಕರಣದ ಬಳಿಕ ಬೆಂಗಳೂರಲ್ಲಿ ಹೈ ಅಲರ್ಟ್ ಆಗಿರುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ (rameshwaram cafe blast) ನೀಡಿದ್ದಾರೆ. ಜತೆಗೆ ಜನರು ಇಂತಹ ಸಮಯದಲ್ಲಿ ಆತಂಕಕ್ಕೆ ಒಳಗಾಗದೇ, ಅನುಮಾನಾಸ್ಪದ ವ್ಯಕ್ತಿಯನ್ನು ಕಂಡರೆ, ಯಾವುದಾರೂ ವಸ್ತು ಅಥವಾ ಬ್ಯಾಗ್‌ ಇರುವುದು ಕಂಡರೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ.

ಯಾರ ಮೇಲಾದರೂ ಸಂಶಯ ಬಂದರೆ ಕೂಡಲೇ 122ಗೆ ಸಂಖ್ಯೆಗೆ ಕರೆ ಮಾಡಿ, ಪೊಲೀಸರಿಗೆ ವಿಚಾರವನ್ನು ಮುಟ್ಟಿಸಿ. ನಾವು ನಿಮ್ಮನ್ನು ತ್ವರಿತವಾಗಿ ತಲುಪುತ್ತೇವೆ ಎಂದು ಕರ್ನಾಟಕ ರಾಜ್ಯ ಪೊಲೀಸ್‌ನ ಎಕ್ಸ್‌ ಖಾತೆಯಿಂದ ಮಾಹಿತಿ ನೀಡಿದ್ದಾರೆ.

ದಿ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಬಾಂಬ್‌ ಅನ್ನು ಸ್ಫೋಟಿಸಿರುವುದು ಹಲವು ಅನುಮಾನವನ್ನು ಮೂಡಿಸಿದೆ. ಪಕ್ಕಾ ನುರಿತ ಟೆರರಿಸ್ಟ್‌ಗಳಿಂದಲೇ ಈ ಕೃತ್ಯ ನಡೆದಿರುವ ಶಂಕೆ ಇದೆ. ನಗರ ಪೊಲೀಸರ ಗಮನವನ್ನು ಒಂದೇ ಕಡೆ ಕೇಂದ್ರಿಕೃತವಾಗುವಂತೆ ಈ ರೀತಿ ಹುನ್ನಾರ ಮಾಡಿದ್ದರಾ ಎಂಬ ಪ್ರಶ್ನೆ ಉದ್ಭವಿಸಿದೆ. ಕಡಿಮೆ ತೀವ್ರತೆಯ ಬಾಂಬ್‌ ಬಳಸಿ ಗಮನ ಈ ಕಡೆ ಇರು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Gadag News: ಗದಗ ಶಿವಾನಂದ ಮಠದ ಪೀಠಾಧಿಪತಿ ವಿವಾದಕ್ಕೆ ತಾತ್ಕಾಲಿಕ ತೆರೆ; ಇಬ್ಬರೂ ಸ್ವಾಮೀಜಿಗಳಿಂದ ಧ್ವಜಾರೋಹಣ

ಗದಗದ ಶಿವಾನಂದ ಮಠದ ಕಿರಿಯ ಶ್ರೀಗಳನ್ನು ಹೊರಗಿಟ್ಟು ಹಿರಿಯ ಶ್ರೀಗಳು ಜಾತ್ರೆಗೆ ಸಿದ್ಧತೆ‌‌ ಮಾಡಿಕೊಳ್ಳುತ್ತಿದ್ದರು. ಇದಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರಿಂದ, ಕಿರಿಯ ಶ್ರೀಗಳ‌ ಜತೆಗೂಡಿ ಹಿರಿಯ ಶ್ರೀಗಳು ಧ್ವಜಾರೋಹಣ ಮಾಡಿದ್ದಾರೆ.

VISTARANEWS.COM


on

Gadag Shivananda Mutt seer's appointment issue temporarily closed
Koo

ಗದಗ: ನಗರದ ಶಿವಾನಂದ ಮಠದ ಪೀಠಾಧಿಪತಿ ನೇಮಕ ವಿವಾದಕ್ಕೆ ಸದ್ಯ ತಾತ್ಕಾಲಿಕ ತೆರೆ ಬಿದ್ದಿದೆ. ಕಿರಿಯ ಶ್ರೀಗಳನ್ನು ಹೊರಗಿಟ್ಟು ಹಿರಿಯ ಶ್ರೀಗಳು ಜಾತ್ರೆಗೆ ಸಿದ್ಧತೆ‌‌ ಮಾಡಿಕೊಳ್ಳುತ್ತಿದ್ದರು. ಇದು ಕಿರಿಯ ಶ್ರೀಗಳು ಹಾಗೂ ಅವರ ಭಕ್ತರ‌ ಆಕ್ರೋಶಕ್ಕೆ ಕಾರಣವಾಗಿತ್ತು. ಕೋರ್ಟ್ ಆದೇಶದಂತೆ ಕಿರಿಯ ಶ್ರೀಗಳ‌ ಜತೆಗೂಡಿಯೇ ಜಾತ್ರೆ ಮಾಡಬೇಕು ಎಂದು ಭಕ್ತರು ಆಗ್ರಹಿಸಿದ್ದರು. ಹೀಗಾಗಿ ಇಬ್ಬರೂ ಸ್ವಾಮೀಜಿಗಳಿಂದ ಶ್ರೀಮಠದಲ್ಲಿ ಧ್ವಜಾರೋಹಣ ನಡೆದಿದೆ.

ಜಾತ್ರೆ ಪ್ರಯುಕ್ತ ಶ್ರೀಮಠದ ಗದ್ದುಗೆ ಮುಂಭಾಗದಲ್ಲಿ ಹಿರಿಯ ಶ್ರೀ ಅಭಿನವ ಶಿವಾನಂದ ಸ್ವಾಮೀಜಿ ಹಾಗೂ ಕಿರಿಯ ಶ್ರೀ ಸದಾಶಿವಾನಂದ ಭಾರತಿ ಸ್ವಾಮೀಜಿ ಅವರು ಪ್ರಣವ ಧ್ವಜಾರೋಹಣ ಮಾಡಿದ್ದಾರೆ. ಮೊದಲಿಗೆ ಇದಕ್ಕೆ ಒಪ್ಪದೇ ಭಕ್ತರ ಜತೆ ಹಿರಿಯ ಶ್ರೀಗಳು ವಾಗ್ವಾದ ನಡೆಸಿದ್ದರು. ಆದರೆ, ಶುಕ್ರವಾರ ಗದಗ ಎಸ್‌ಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ನಡೆದ ಶಾಂತಿ ಸಭೆಯಲ್ಲಿ ಸಂಧಾನ ಮಾಡಲಾಗಿತ್ತು. ಇಬ್ಬರೂ ಸ್ವಾಮಿಜಿಗಳ ಭಕ್ತರೊಂದಿಗೆ ಶಾಂತಿ ಸಭೆ ನಡೆಸಿದ ಪರಿಣಾಮ ಜಾತ್ರಾ ಪ್ರಯುಕ್ತ ಧ್ವಜಾರೋಹಣದಲ್ಲಿ ಇಬ್ಬರೂ ಸ್ವಾಮಿಜಿಗಳು ಹಾಜರಾಗಿದ್ದರು.

ಇದನ್ನೂ ಓದಿ | Raja Marga Column : ಬ್ರಿಟಿಷ್ ವಿಜ್ಞಾನಿಗಳು ವಿಷ ಎಂದು ಕೊಟ್ಟ ದ್ರಾವಣವನ್ನು ಆ ವಿಜ್ಞಾನಿ ಗಟಗಟ ಕುಡಿದಿದ್ದರು!

ಈ ಹಿಂದೆ ಜಗದ್ಗುರು ಶಿವಾನಂದ ಮಠದ ಉತ್ತರಾಧಿಕಾರಿಯನ್ನು ಪದಚ್ಯುತಿಗೊಳಿಸಿದ ಹಿನ್ನೆಲೆಯಲ್ಲಿ ಶ್ರೀಮಠದ ಮೊದಲ ಹಿರಿಯ ಪೀಠಾಧಿಪತಿ ಶ್ರೀ ಅಭಿನವ ಶಿವಾನಂದ ಮಹಾಸ್ವಾಮೀಜಿ ವಿರುದ್ಧ ಪದಚ್ಯುತಗೊಂಡ ಉತ್ತರಾಧಿಕಾರಿ ಸದಾಶಿವಾನಂದ ಭಾರತಿ ಸ್ವಾಮೀಜಿ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

2018ರ ಮೇ 25ರಂದು ಮಠದ ಉತ್ತರಾಧಿಕಾರಿಯಾಗಿ ಸದಾಶಿವಾನಂದ ಭಾರತಿ ಸ್ವಾಮೀಜಿ(30) (ಮೂಲ ಹೆಸರು ಘೋಡಗೇರಿಯ ಕೈವಲ್ಯಾನಂದ ಗುರು ಮಲ್ಲಯ್ಯಸ್ವಾಮಿ) ಅವರನ್ನು ನೇಮಿಸಲಾಗಿತ್ತು. ಆದರೆ ಮಠದ ಹಿರಿಯ ಪೀಠಾಧಿಪತಿ ಅಭಿನವ ಶಿವಾನಂದ ಮಹಾಸ್ವಾಮೀಜಿ ಅವರು, ಸದಾಶಿವಾನಂದ ಭಾರತಿ ಸ್ವಾಮೀಜಿ ಅವರನ್ನು ಉತ್ತರಾಧಿಕಾರಿ ಸ್ಥಾನದಿಂದ ಪದಚ್ಯುತಗೊಳಿಸಿದ್ದರು. ಹೀಗಾಗಿ ಕಿರಿಯ ಶ್ರೀಗಳ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದರು.

ಹಲವು ವರ್ಷಗಳಿಂದ ಇಬ್ಬರು ಸ್ವಾಮೀಜಿಗಳ ನಡುವೆ ಭಿನ್ನಾಭಿಪ್ರಾಯ ಮುಂದುವರಿದಿತ್ತು. ಈ ನಡುವೆ ಮಾರ್ಚ್ 8ರಂದು ಶಿವರಾತ್ರಿ ದಿನ ಶಿವಾನಂದ ಮಠದ ಜಾತ್ರಾಮಹೋತ್ಸವ ನಡೆಸಲು ನಿರ್ಧರಿಸಲಾಗಿತ್ತು. ಹೀಗಾಗಿ ಕಿರಿಯ ಶ್ರೀಗಳನ್ನು ಹೊರಗಿಟ್ಟು ಹಿರಿಯ ಶ್ರೀಗಳು ಜಾತ್ರಾಮಹೋತ್ಸವ ನಡೆಸಲು ಸಜ್ಜಾಗಿದ್ದರು. ಇದಕ್ಕೆ ಕಿರಿಯ ಶ್ರೀಗಳ ಭಕ್ತರು ಆಕ್ರೋಶ ವ್ಯಕ್ತವಾದ ಕಾರಣ, ಕಿರಿಯ ಶ್ರೀಗಳೊಂದಿಗೆ ಸೇರಿ ಹಿರಿಯ ಶ್ರೀಗಳು ಧ್ವಜಾರೋಹಣ ನೆರವೇರಿಸಿದ್ದಾರೆ.

Continue Reading

ಬೆಂಗಳೂರು

Blast In Bengaluru: ಬೆಂಗಳೂರಿಗರೇ Be alert; ಸಂಶಯ ಬಂದರೆ ಇಲ್ಲಿಗೆ ಕಾಲ್‌ ಮಾಡಿ

rameshwaram cafe blast : ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟದ ರೀತಿ ಗಮನಿಸಿದರೆ ನುರಿತ ಟೆರರಿಸ್ಟ್‌ಗಳಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಮಧ್ಯೆ ಸಾರ್ವಜನಿಕರಿಗೆ ಸಂಶಯಾ ಬಂದರೆ ಕೂಡಲೆ 122 ನಂಬರ್‌ಗೆ ಕರೆ ಮಾಡಿ ವಿಚಾರ ಮುಟ್ಟಿಸುವಂತೆ ಪೊಲೀಸರು ಮನವಿ (Blast In Bengaluru) ಮಾಡಿದ್ದಾರೆ.

VISTARANEWS.COM


on

By

rameshwaram cafe bengaluru incident
Koo

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ (Blast In Bengaluru) ಬ್ಲಾಸ್ಟ್‌ ಪ್ರಕರಣದ ಬಳಿಕ ಬೆಂಗಳೂರಲ್ಲಿ ಹೈ ಅಲರ್ಟ್ ಆಗಿರುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ (rameshwaram cafe blast) ನೀಡಿದ್ದಾರೆ. ಜತೆಗೆ ಜನರು ಇಂತಹ ಸಮಯದಲ್ಲಿ ಆತಂಕಕ್ಕೆ ಒಳಗಾಗದೇ, ಅನುಮಾನಾಸ್ಪದ ವ್ಯಕ್ತಿಯನ್ನು ಕಂಡರೆ, ಯಾವುದಾರೂ ವಸ್ತು ಅಥವಾ ಬ್ಯಾಗ್‌ ಇರುವುದು ಕಂಡರೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ.

ಯಾರ ಮೇಲಾದರೂ ಸಂಶಯ ಬಂದರೆ ಕೂಡಲೇ 122ಗೆ ಸಂಖ್ಯೆಗೆ ಕರೆ ಮಾಡಿ, ಪೊಲೀಸರಿಗೆ ವಿಚಾರವನ್ನು ಮುಟ್ಟಿಸಿ. ನಾವು ನಿಮ್ಮನ್ನು ತ್ವರಿತವಾಗಿ ತಲುಪುತ್ತೇವೆ ಎಂದು ಕರ್ನಾಟಕ ರಾಜ್ಯ ಪೊಲೀಸ್‌ನ ಎಕ್ಸ್‌ ಖಾತೆಯಿಂದ ಮಾಹಿತಿ ನೀಡಿದ್ದಾರೆ.

ದಿ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಬಾಂಬ್‌ ಅನ್ನು ಸ್ಫೋಟಿಸಿರುವುದು ಹಲವು ಅನುಮಾನವನ್ನು ಮೂಡಿಸಿದೆ. ಪಕ್ಕಾ ನುರಿತ ಟೆರರಿಸ್ಟ್‌ಗಳಿಂದಲೇ ಈ ಕೃತ್ಯ ನಡೆದಿರುವ ಶಂಕೆ ಇದೆ. ನಗರ ಪೊಲೀಸರ ಗಮನವನ್ನು ಒಂದೇ ಕಡೆ ಕೇಂದ್ರಿಕೃತವಾಗುವಂತೆ ಈ ರೀತಿ ಹುನ್ನಾರ ಮಾಡಿದ್ದರಾ ಎಂಬ ಪ್ರಶ್ನೆ ಉದ್ಭವಿಸಿದೆ. ಕಡಿಮೆ ತೀವ್ರತೆಯ ಬಾಂಬ್‌ ಬಳಸಿ ಗಮನ ಈ ಕಡೆ ಇರುವಂತೆ ನೋಡಿಕೊಂಡು ನಂತರ ದೊಡ್ಡ ಬ್ಲಾಸ್ಟ್‌ಗೆ ಪ್ಲಾನ್‌ ಮಾಡಿರುವ ಶಂಕೆ ಇದೆ.

ಇದನ್ನೂ ಓದಿ: Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ 3 ತಿಂಗಳಿಂದಲೇ ಸ್ಕೆಚ್‌? ಮೊಬೈಲ್‌ ಬಳಸದೇ ಕೃತ್ಯ!

ಟ್ರಯಲ್‌ ಬ್ಲಾಸ್ಟ್‌ ಶಂಕೆ

ದಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಕ್ಕೂ ಮುನ್ನ ಟ್ರಯಲ್ ಬ್ಲಾಸ್ಟ್ ಮಾಡಿರುವ ಸಾಧ್ಯತೆ ಇದೆ. ಶಂಕಿತ ಬಾಂಬರ್ ತಂಡದಿಂದ ನಿರ್ಜನ ಹಾಗೂ ಕಾಡಿನಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಿರುವ ಶಂಕೆ ಇದೆ. ಆತ್ಯಾಧುನಿಕ ಟೈಮರ್, ತಂತಿ, ನಟ್‌ ಹಾಗೂ ಬೋಲ್ಟ್, ಡಿಟೋನೇಡರ್ ಬಳಸಿ. ಎಲ್ಲ ರೀತಿಯ ಪರೀಕ್ಷೆಯನ್ನು ನಡೆಸಿಯೇ ಕೆಫೆಯಲ್ಲಿ ಸ್ಫೋಟ ಮಾಡಿರಬಹುದು ಎನ್ನಲಾಗಿದೆ. ಬಾಂಬ್‌ ಪರೀಕ್ಷೆ ಇಲ್ಲದೇ ಏಕಾ ಏಕಿ ತಂದಿಟ್ಟಿರುವ ಸಾಧ್ಯತೆ ಕಡಿಮೆ ಇದೆ.

ಬ್ಲಾಸ್ಟ್ ಟೈಮ್ ಲೈನ್ ಹೀಗಿದೆ.

ಮಾರ್ಚ್‌ 1 2024ರ ಬೆಳಗ್ಗೆ 11:30ಕ್ಕೆ ಕೆಫೆಯೊಳಗೆ ಶಂಕಿತ ಪ್ರವೇಶಿಸಿದ್ದ. ನಂತರ 11:37ಕ್ಕೆ ರವೆ ಇಡ್ಲಿ ಪಡೆದಿದ್ದ.
11:44ಕ್ಕೆ ಹ್ಯಾಂಡ್ ವಾಶ್ ಬೆಸನ್‌ ಬಳಿ ಬಾಂಬ್ ಇದ್ದ ಬ್ಯಾಗ್‌ ಇಟ್ಟಿದ್ದ.
11:45ಕ್ಕೆ ಕೆಫೆಯಿಂದ ಹೊರಟ ಶಂಕಿತ
11:50ಕ್ಕೆ ಕೆಫೆ ಪಕ್ಕದಲ್ಲೇ ಇರುವ ಸಿಸಿ ಕ್ಯಾಮೆರಾದಲ್ಲಿ ಸೆರೆ
11:51ಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಹತ್ತಿ ಪರಾರಿ
12:56ಕ್ಕೆ ಕೆಫೆಯಲ್ಲಿ ಬಾಂಬ್‌ ಬ್ಲಾಸ್ಟ್

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Blast in Bengaluru: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕವಾಗುತ್ತಿದೆ ಉಗ್ರರ ಸ್ವರ್ಗ: ಪ್ರಲ್ಹಾದ್‌ ಜೋಶಿ

Blast in Bengaluru: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೇ ನೇರ ಹೊಣೆಗಾರರು ಎಂದು ಪ್ರಲ್ಹಾದ್‌ ಜೋಶಿ ವಾಗ್ದಾಳಿ ನಡೆಸಿದರು.

VISTARANEWS.COM


on

Blast in Bengaluru Karnataka is becoming a haven for terrorists under Congress rule says Pralhad Joshi
Koo

ಹುಬ್ಬಳ್ಳಿ: ವಿಧಾನಸೌಧದೊಳಗೆ ಪಾಕಿಸ್ತಾನ ಪರ ಘೋಷಣೆ, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಬ್ಲಾಸ್ಟ್‌ ಪ್ರಕರಣಗಳನ್ನು ಗಮನಿಸಿದರೆ ಕಾಂಗ್ರೆಸ್ ಆಡಳಿತದಲ್ಲಿ ಇಂದು ಉಗ್ರ ಚಟುವಟಿಕೆ ನಡೆಸಲು ಭಯೋತ್ಪಾದಕರಿಗೆ ಕರ್ನಾಟಕವು ಸ್ವರ್ಗವಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ ಕಳವಳ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್‌ ಜೋಶಿ, ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೇ ನೇರ ಹೊಣೆಗಾರರು ಎಂದು ವಾಗ್ದಾಳಿ ನಡೆಸಿದರು.

ದೇಶದಲ್ಲಿ ಶೇ.90ರಷ್ಟು ಉಗ್ರ ಚಟುವಟಿಕೆ ನಿಗ್ರಹವಾಗಿದೆ. ಆದರೆ, ಈಗ ತಮಗೆ ಬೆಂಬಲ ಸಿಗಬಹುದಾದಂತಹ ರಾಜ್ಯಗಳಲ್ಲಿ ಮತ್ತೆ ತಲೆ ಎತ್ತುತ್ತಿದೆ. ಕಾಂಗ್ರೆಸ್ ಆಡಳಿತ ಇರುವುದರಿಂದ ಭಯೋತ್ಪಾದಕರಿಗೆ ದಾಳಿ ನಡೆಸಲು ಇಂದು ಕರ್ನಾಟಕ ಸುರಕ್ಷಿತ ತಾಣ ಎನಿಸಿದೆ. ಕೇವಲ ವೋಟ್ ಬ್ಯಾಂಕ್‌ಗಾಗಿ ಕರ್ನಾಟಕವನ್ನು ಉಗ್ರರ ತಾಣವನ್ನಾಗಿ ಮಾಡಬೇಡಿ. ಸಿಎಂ ಸಿದ್ದರಾಮಯ್ಯ ಅವರೇ ಮೊದಲು ಇದನ್ನು ನಿಲ್ಲಿಸಿ ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

ರಾಜ್ಯದಲ್ಲಿ ಆಡಳಿತ- ಆಂತರಿಕ ಭದ್ರತೆ ವೈಫಲ್ಯ

ವಿಧಾನ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಬಾಂಬ್ ಸ್ಫೋಟ ಎರಡೂ ಘಟನೆ ರಾಜ್ಯದಲ್ಲಿ ಆಡಳಿತ ಮತ್ತು ಆಂತರಿಕ ಭದ್ರತೆ ವೈಫಲ್ಯಕ್ಕೆ ನಿದರ್ಶನವಾಗಿದೆ ಎಂದು ಪ್ರಲ್ಹಾದ್‌ ಜೋಶಿ ಆರೋಪಿಸಿದರು.

ಎನ್ಐಎ ತನಿಖೆಗೆ ವಹಿಸಲು ಪಟ್ಟು

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಗಳನ್ನು ರಾಜ್ಯ ಸರ್ಕಾರವು ಕೂಡಲೇ ಎನ್ಐಎ ತನಿಖೆಗೆ (NIA Investigation) ವಹಿಸಬೇಕು ಎಂದು ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದರು.

ಎಫ್‌ಎಸ್‌ಎಲ್ ವರದಿ ದೃಢಪಟ್ಟರೂ ಏಕಿಲ್ಲ ಕ್ರಮ?

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಎಫ್‌ಎಸ್‌ಎಲ್ ವರದಿಯಲ್ಲಿ (FSL Report) ದೃಢಪಟ್ಟಿದೆ. ಹಾಗಿದ್ದರೂ ಕ್ರಮ ಕೈಗೊಂಡಿಲ್ಲ ಏಕೆ? ಸಾಲದ್ದಕ್ಕೆ ಮತ್ತಷ್ಟು ವಿಡಿಯೊ ಕಳಿಸಿ ತೀರ್ಮಾನಿಸುತ್ತೇವೆ ಎಂದಿದ್ದೀರಿ. ಅಪರಾಧಿಗಳನ್ನು ಇನ್ನೂ ಎಷ್ಟು ರಕ್ಷಿಸಿಕೊಳ್ಳುತ್ತೀರಿ? ಮಿಸ್ಟರ್ ಸಿಎಂ ಸಿದ್ದರಾಮಯ್ಯ ಎಂದು ಸಚಿವ ಪ್ರಲ್ಹಾದ್ ಜೋಶಿ ತರಾಟೆಗೆ ತೆಗೆದುಕೊಂಡರು.

ರಾಮೇಶ್ವರಂ ಕೆಫೆ ಸ್ಫೋಟವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಎಸ್‌ಡಿಪಿ ಮತ್ತು ಪಿಎಫ್‌ಐ ಮೇಲಿನ ಕೇಸ್ ವಾಪಸ್‌ ಪಡೆದು ಕಾಂಗ್ರೆಸ್ ಸರ್ಕಾರ ಅವರ ಪರವಾಗಿ ಇದೆ ಎಂಬ ಸಂದೇಶ ಕೊಟ್ಟ ಪರಿಣಾಮ ಇದೆಲ್ಲವೂ ಆಗುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಕಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ. ಪರಿಣಾಮ ರಾಜ್ಯದ ಸಾಮಾನ್ಯ ಜನರ ಬದಕು ಅಸುರಕ್ಷಿತವಾಗಿದೆ. ಇದಕ್ಕೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಆರೋಪಿಸಿದರು.

ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಗೆ ನಾಚಿಕೆ ಆಗಬೇಕು. ಪಾಕಿಸ್ತಾನ ಜಿಂದಾಬಾದ್ ಘೋಷಣೆಗೆ ಕುಮ್ಮಕ್ಕು ನೀಡಿದ್ದಲ್ಲದೆ ಮಾಧ್ಯಮದವರನ್ನೇ ಬೆದರಿಸಿ ಕಳಿಸಿದ್ದಾರೆ ಎಂದು ಸಚಿವ ಜೋಶಿ ಕಿಡಿಕಾರಿದರು.

ಇದನ್ನೂ ಓದಿ: Blast in Bengaluru: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್ ಕೇಸ್‌ ತನಿಖೆ NIA ಹೆಗಲಿಗೆ? ಇಂದೇ ಹಸ್ತಾಂತರ!

ಜಿಹಾದಿ ರಾಜಕಾರಣಕ್ಕೆ ಬೆಂಬಲ ನೀಡಬೇಕೆ?

ಕಾಂಗ್ರೆಸ್ ವೋಟ್ ಬ್ಯಾಂಕ್‌ಗಾಗಿ ದೇಶವನ್ನು ಅಭದ್ರ ಮಾಡುತ್ತಿದೆ. ಇಂಥ ಜಿಹಾದಿ ರಾಜಕೀಯಕ್ಕೆ ನಾವು ಬೆಂಬಲ ನೀಡಬೇಕಾ? ಎಂದು ಪ್ರಶ್ನಿಸಿದ ಜೋಶಿ, ಇದು ಅತ್ಯಂತ ಅಯೋಗ್ಯ ಸರ್ಕಾರ. ಈ ರೀತಿಯ ಚಿಲ್ಲರೆ, ತುಷ್ಟ ರಾಜಕೀಯ ನಿಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಪ್ರಲ್ಹಾದ್‌ ಜೋಶಿ ಆಗ್ರಹಿಸಿದರು.

Continue Reading
Advertisement
Rameswaram cafe bomb blast case No one has been arrested
ಬೆಂಗಳೂರು54 seconds ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಇದುವರೆಗೂ ಯಾರನ್ನೂ ಬಂಧಿಸಿಲ್ಲ

thdc
ಉದ್ಯೋಗ6 mins ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಇಂದೇ ಅಪ್ಲೈ ಮಾಡಿ

Gadag Shivananda Mutt seer's appointment issue temporarily closed
ಕರ್ನಾಟಕ13 mins ago

Gadag News: ಗದಗ ಶಿವಾನಂದ ಮಠದ ಪೀಠಾಧಿಪತಿ ವಿವಾದಕ್ಕೆ ತಾತ್ಕಾಲಿಕ ತೆರೆ; ಇಬ್ಬರೂ ಸ್ವಾಮೀಜಿಗಳಿಂದ ಧ್ವಜಾರೋಹಣ

vrinda dinesh injury
ಕ್ರೀಡೆ26 mins ago

WPL 2024: ಭುಜದ ಗಾಯ; ಟೂರ್ನಿಯಿಂದಲ್ಲೇ ಹೊರಬಿದ್ದ ಕನ್ನಡತಿ ವೃಂದಾ

rameshwaram cafe bengaluru incident
ಬೆಂಗಳೂರು30 mins ago

Blast In Bengaluru: ಬೆಂಗಳೂರಿಗರೇ Be alert; ಸಂಶಯ ಬಂದರೆ ಇಲ್ಲಿಗೆ ಕಾಲ್‌ ಮಾಡಿ

Blast in Bengaluru Karnataka is becoming a haven for terrorists under Congress rule says Pralhad Joshi
ಕ್ರೈಂ30 mins ago

Blast in Bengaluru: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕವಾಗುತ್ತಿದೆ ಉಗ್ರರ ಸ್ವರ್ಗ: ಪ್ರಲ್ಹಾದ್‌ ಜೋಶಿ

Narendra Modi
ದೇಶ38 mins ago

ಮ್ಯಾಟ್ರಿಮೋನಿ ಸೇರಿ ಹಲವು ಆ್ಯಪ್‌ಗಳಿಗೆ ಗೂಗಲ್‌ ಕೊಕ್;‌ ಕೇಂದ್ರದ ಮುಂದಿನ ನಡೆ ಏನು?

Yuvraj Singh
ಕ್ರೀಡೆ1 hour ago

Yuvraj Singh: ಲೋಕಸಭಾ ಸ್ಪರ್ಧೆ ಬಗ್ಗೆ ಅಧಿಕೃತ ಮಾಹಿತಿ ನೀಡಿದ ಯುವರಾಜ್​ ಸಿಂಗ್​

Anant Ambani wedding bollywood celebrities Pose
ಬಾಲಿವುಡ್1 hour ago

Anant Ambani: ಅಂಬಾನಿ ಫ್ಯಾಮಿಲಿಯ ಪ್ರಿ-ವೆಡ್ಡಿಂಗ್‌ಗೆ ಬಾಲಿವುಡ್‌ ಸೆಲೆಬ್ರಿಟಿಗಳು ಪೋಸ್‌ ಕೊಟ್ಟಿದ್ದು ಹೀಗೆ!

Share Market
ದೇಶ1 hour ago

Stock Market: ರಜಾ ದಿನವೂ ಸ್ಪೆಷಲ್‌ ಟ್ರೇಡಿಂಗ್, ಸೆನ್ಸೆಕ್ಸ್‌, ನಿಫ್ಟಿ ಅಬ್ಬರ ಜೋರು

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rameswaram Cafe Blast Suspected travels in BMTC Volvo bus
ಬೆಂಗಳೂರು3 hours ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು22 hours ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು1 day ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ1 day ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ1 day ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ2 days ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ4 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ4 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ4 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

ಟ್ರೆಂಡಿಂಗ್‌