ಬೆಂಗಳೂರು: ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ (BJP Ticket Surprise) ಕಾಂಗ್ರೆಸ್ ಇಬ್ಬರು ಪ್ರಮುಖ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಬಿಜೆಪಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.
ಕನಕಪುರದಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಕಣಕ್ಕಿಳಿಸಲಾಗಿದೆ. ಆರ್. ಅಶೋಕ್ ಅವರು ತಮ್ಮ ಸಾಂಪ್ರದಾಯಿಕ ಪದ್ಮನಾಭ ನಗರವನ್ನೂ ನೀಡಲಾಗಿದೆ.
ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲಾಗಿದೆ. ಅವರಿಗೆ ಹೆಚ್ಚುವರಿಯಾಗಿ ಚಾಮರಾಜ ನಗರ ಕ್ಷೇತ್ರದಲ್ಲೂ ಅವಕಾಶ ನೀಡಲಾಗಿದೆ.
ಇದನ್ನೂ ಓದಿ : Karnataka Election 2023: ಅವಕಾಶ ಕೊಟ್ಟರೆ ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡ್ತೀನಿ ಎಂದ ರಘು ಆಚಾರ್