Site icon Vistara News

ಸರ್ಕಾರದ ವಿರುದ್ಧವೇ ಪ್ರತಿಭಟನೆ: 50 ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

ಕಪ್ಪು ಪಟ್ಟಿ

ಹಾವೇರಿ: ವಕೀಲರ ಸಂಘ ಕಟ್ಟಡ ಉದ್ಘಾಟನೆಗೆ ಬಿಜೆಪಿ ಶಾಸಕ ನೆಹರು ಓಲೇಕಾರಗೆ ಆಹ್ವಾನ ನೀಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಸ್ವಪಕ್ಷೀಯ ಕಾರ್ಯಕರ್ತರೇ ಪ್ರತಿಭಟಿಸಿ, ಕಪ್ಪು ಪಟ್ಟಿ ಪ್ರದರ್ಶಿಸಿದ ಘಟನೆ ಭಾನುವಾರ ನಡೆದಿದೆ. ಈ ರೀತಿ ಪ್ರತಿಭಟಿಸಿದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ನ್ಯಾಯಾಲಯ ಆವರಣದಲ್ಲಿ ವಕೀಲರ ಸಂಘ ಕಟ್ಟಡ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಗಮಿಸುವುದಕ್ಕೂ ಮೊದಲು ನಗರದ ತಾಲೂಕು ಪಂಚಾಯಿತಿ ಕಚೇರಿ ಎದುರು ನೂರಾರು ಬಿಜೆಪಿ ಕಾರ್ಯರ್ತರು ಜಮಾಯಿಸಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುಂಜಾಗ್ರತಾ ಕ್ರಮವಾಗಿ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಆದರೆ, ಸಂಚಾರಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ ಭಾಗವಹಿಸಿದ್ದ ಶಾಸಕ ನೆಹರು ಓಲೇಕಾರ, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶಾಲು ಹಾಕಿ ಸನ್ಮಾನ ಮಾಡಿದ್ದು ಕಂಡುಬಂತು. ವಕೀಲರ ಸಂಘದ ಕಟ್ಟಡ ಉದ್ಘಾಟನೆಗೆ ಆಹ್ವಾನ ನೀಡಿಲ್ಲ ಎಂದು ಪಕ್ಷದ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | ಬಿಡುಗಡೆಗಾಗಿ ಸಾವರ್ಕರ್‌ ಭಿಕ್ಷೆ ಬೇಡಿದ್ದರು: ಕಾಂಗ್ರೆಸ್‌ ಶಾಸಕ ಯು.ಟಿ. ಖಾದರ್‌

Exit mobile version