ಬೆಂಗಳೂರು: “ಯಡಿಯೂರಪ್ಪನವರ ಮಗ” ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ “ಯಡಿಯೂರಪ್ಪನವರ ಮಗ”ನಿಗೆ (BY Vijayendra) ಅಭಿನಂದನೆಗಳು. “ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ” ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.
ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿರುವುದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ಹೇಳುವ ಮೂಲಕ ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ, ಈಗ ಕುಟುಂಬದವರಿಗೆ ಮಣೆ ಹಾಕಿದೆ ಎಂದು ಪರೋಕ್ಷವಾಗಿ ಟೀಕಿಸಿದೆ.
"ಯಡಿಯೂರಪ್ಪನವರ ಮಗ" ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ "ಯಡಿಯೂರಪ್ಪನವರ ಮಗ"ನಿಗೆ ಅಭಿನಂದನೆಗಳು..
— Karnataka Congress (@INCKarnataka) November 10, 2023
"ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ" ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ!
ಇದನ್ನೂ ಓದಿ | BY Vijayendra : ಸೋತ ಮನೆಗೆ ಸ್ಫೂರ್ತಿ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಿದೆ ಪಂಚ ಸವಾಲು
ರಾಜ್ಯ ಬಿಜೆಪಿ ನಾಯಕರ ಮೇಲೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್
ಬಿಜೆಪಿ ಸಾರಥಿಯಾಗಿ ವಿಜಯೇಂದ್ರ ನೇಮಕ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಕರ್ನಾಟಕಕ್ಕೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ ಅವರಿಂದ ಕರ್ನಾಟಕ ಬಿಜೆಪಿ ರಾಜ್ಯ ನಾಯಕರ ಮೇಲೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಆಗಿದೆ. ಹೆಚ್ಚಿನ ನಾಯಕರು ಈಗ ವಿಆರ್‌ಎಸ್ (ಸ್ವಯಂ ನಿವೃತ್ತಿ) ಆರಿಸಿಕೊಳ್ಳುತ್ತಾರೆಯೇ ಅಥವಾ ಸಾಮೂಹಿಕ ನಿರ್ಗಮನವಿದೆಯೇ ಎಂದು ಪ್ರಶ್ನಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ