ಯಾದಗಿರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆ (Karnataka election 2023) ಹಿನ್ನೆಲೆಯಲ್ಲಿ ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಕ್ಷೇತ್ರದ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.
ಜಿಲ್ಲೆಯ ವಡಗೇರಾ ತಾಲೂಕಿನ ಗಡ್ಡೆಸುಗುರು, ಕೋನಹಳ್ಳಿ, ಕಮಲತಾಂಡಾ ಹಾಗೂ ವಡಗೇರಾ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಅಬ್ಬರದ ಪ್ರಚಾರದ ನಡೆಸಿ, ತಮಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಚನ್ನಾರೆಡ್ಡಿ ಪಾಟೀಲ ತುನ್ನೂರು ಮಾತನಾಡಿ, ರಾಜ್ಯದ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿದ್ದು, 40 ಪರ್ಸೆಂಟ್ ಸರ್ಕಾರದ ನಡೆಯಿಂದ ರಾಜ್ಯದ ಜನರು ಬೇಸತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ: ಕೊಹಿನೂರು ವಜ್ರವಿರುವ ಕಿರೀಟ ಧರಿಸಲೊಪ್ಪದ ಬ್ರಿಟನ್ ರಾಣಿ ಕ್ಯಾಮಿಲ್ಲಾ; ವಾಪಸ್ ಕೊಡುವಂತೆ ಭಾರತೀಯರ ಒತ್ತಾಯ
ವಡಗೇರಾ ತಾಲೂಕು ಕೇಂದ್ರದಲ್ಲಿ ಅಗತ್ಯ ಕಚೇರಿಗಳು ಆರಂಭವಾಗಿಲ್ಲ. ಕ್ಷೇತ್ರದ ಜನರು ಆಶೀರ್ವಾದ ಮಾಡಿ ಗೆಲ್ಲಿಸಿದರೆ, ವಡಗೇರಾ ತಾಲೂಕು ಕೇಂದ್ರ ಅಭಿವೃದ್ಧಿ ಮಾಡಲಾಗುತ್ತದೆ. ಕ್ಷೇತ್ರದ ಅಭಿವೃದ್ಧಿ ಮಾಡಲಾಗುತ್ತದೆ. ಮತದಾರರು ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.