Site icon Vistara News

BMTC Bus: ಬಿಎಂ‌ಟಿಸಿ ಬಸ್‌ನಲ್ಲಿ ಹಿಂದಿ ಬೋರ್ಡ್; ಕನ್ನಡ ಮಾಯವಾಗಿದ್ದಕ್ಕೆ ಸಾರ್ವಜನಿಕರ ಆಕ್ರೋಶ!

BMTC Bus

ಬೆಂಗಳೂರು: ಬಿಎಂ‌ಟಿಸಿ ಬಸ್‌ನಲ್ಲಿ ಹಿಂದಿ ಬೋರ್ಡ್ ಹಾಕಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಎಂಟಿಸಿಗೆ (BMTC Bus) ಹಿಂದಿ ಮೇಲಿನ ಪ್ರೇಮ ಹೆಚ್ಚಾಗಿದ್ಯಾ? ಈ ಹಿಂದಿ ಭಾಷೆ ಬೋರ್ಡ್‌ ಹಿಂದಿರುವ ವಿಜ್ಞಾನಿ‌ ಯಾರು ಎಂದು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬಿಎಂಟಿಸಿಯನ್ನು ಟ್ಯಾಗ್ ಮಾಡಿ ಪೋಸ್ಟ್‌ ಮಾಡಿರುವ ನೆಟ್ಟಿಗರು, ಹಿಂದಿ ಹೇರಿಕೆ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ. ಎಕ್ಸ್ ಖಾತೆಯಲ್ಲಿ ವೈರಲ್ ಆಗಿರುವ ವಿಡಿಯೊ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ವಿಡಿಯೊ ರಿ ಪೋಸ್ಟ್ ಮಾಡಿ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಬಗ್ಗೆ ಹಾಲಸ್ವಾಮಿ ಡಿ.ಎಂ. ಎಂಬುವವರು ಎಕ್ಸ್‌ ವೇದಿಕೆಯಲ್ಲಿ ವಿಡಿಯೊ ಹಂಚಿಕೊಂಡಿದ್ದು, ಬನಶಂಕರಿ ಬಸ್‌ ನಿಲ್ದಾಣದ ಬಳಿ ಎಲ್‌ಕ್ಟ್ರಿಕ್‌ ಬಸ್‌ ಮೇಲೆ ಹಿಂದಿ ಬೋರ್ಡ್‌ ನೋಡಿದೆ. ಈ ಹಿಂದಿ ಭಾಷೆ ಬಳಕೆಯ ಹಿಂದಿನ ವಿಜ್ಞಾನಿ ಯಾರು ಎಂಬುವುದು ನನಗೆ ತಿಳಿಯಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆಗೆ ಹಲವು ವರ್ಷಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ಬಂದಿದೆ. ಇದೀಗ ಬಿಎಂಟಿಸಿಯಲ್ಲಿ ಹಿಂದಿ ಬಳಕೆ ಮಾಡಿರುವುದಕ್ಕೆ ಪ್ರಯಾಣಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಸ್ಕೂಟರ್‌ಗೆ ಅಪ್ಪಳಿಸಿದ ಕಾರು; 10 ಅಡಿ ಮೇಲಕ್ಕೆ ಹಾರಿ ಬಿದ್ದ ತಾಯಿ, ಮಗ

Viral Video

ಗಾಜಿಯಾಬಾದ್‌: ಕಾರು ಮತ್ತು ಸ್ಕೂಟರ್ ಡಿಕ್ಕಿಯಾದ (car and Scooter accident) ಪರಿಣಾಮ ತಾಯಿ ಮಗ ಸಾವನ್ನಪ್ಪಿರುವ ದುರಂತ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ (Delhi-Meerut Expressway) ನಡೆದಿದೆ. ಇದರ ಭೀಕರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಹರಿದ್ವಾರದ ಗಂಗಾ ನದಿಯಲ್ಲಿ ಸ್ನಾನ ಮುಗಿಸಿ ದೆಹಲಿಗೆ ಸ್ಕೂಟರ್ ನಲ್ಲಿ ತಾಯಿ ಮಗ ಹಿಂದಿರುಗುತ್ತಿದ್ದರು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿರುವ ಭೀಕರ ಅಪಘಾತವನ್ನು ತೋರಿಸುವ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾದ ಇದರ ವಿಡಿಯೋದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿಯಾದ ನಿಖರವಾದ ಕ್ಷಣವನ್ನು ತೋರಿಸಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಸ್ಕೂಟರ್‌ ನಲ್ಲಿ ಕುಳಿತಿದ್ದ ಮಹಿಳೆ ಗಾಳಿಯಲ್ಲಿ 10 ಅಡಿ ಎತ್ತರಕ್ಕೆ ಹಾರಿ, ರಸ್ತೆಯ ಮೇಲೆ ಬಿದ್ದಿದ್ದಾರೆ.


ಶನಿವಾರ ರಾತ್ರಿ ಗಾಜಿಯಾಬಾದ್‌ನ ಮೆಹ್ರಾಲಿ ಅಂಡರ್‌ಪಾಸ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು, ಗಾಯಗೊಂಡ ಸ್ಕೂಟರ್ ಸವಾರರನ್ನು ತಕ್ಷಣವೇ ಹತ್ತಿರದ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ಇದನ್ನೂ ಓದಿ: Viral News: ಮಕ್ಕಳ ಹಸಿವು ನೀಗಿಸಲು ಸೈನಿಕರೆದುರು ಬೆತ್ತಲಾಗುತ್ತಿರುವ ಮಹಿಳೆಯರು!

ಮೃತರನ್ನು 20 ವರ್ಷದ ಯಶ್ ಗೌತಮ್ ಮತ್ತು ಆತನ 40 ವರ್ಷದ ತಾಯಿ ಮಂಜು ದೇವಿ ಎಂದು ಗುರುತಿಸಲಾಗಿದೆ. ಇಬ್ಬರೂ ದೆಹಲಿಯ ಪಶ್ಚಿಮ ವಿನೋದ್ ನಗರದ ನಿವಾಸಿಗಳಾಗಿದ್ದರು.

ಘಟನೆಯ ವೇಳೆ ಯಶ್ ಹೆಲ್ಮೆಟ್ ಧರಿಸಿದ್ದು, ಅವರ ತಾಯಿ ಹೆಲ್ಮೆಟ್ ಧರಿಸಿರಲಿಲ್ಲ. ಇದಲ್ಲದೆ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನಗಳನ್ನು ಓಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Exit mobile version