ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿದ್ದ ಬಿಎಂಟಿಸಿ ನಿಗಮಕ್ಕೆ ಈ ಹೊಸ ವರ್ಷ ಕೊಂಚ ಹರ್ಷ ತಂದಿದೆ. ವರ್ಷದ ಮೊದಲ ದಿನ ಬಿಎಂಟಿಸಿಗೆ ಬಂಪರ್ ಆದಾಯ (BMTC Income) ಗಳಿಸಿದೆ. ಹೊಸ ವರ್ಷಕ್ಕೆಂದು ಸುಮಾರು 87 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ನಡೆಸಿತ್ತು. ಮೊದಲೇ ಆರ್ಥಿಕವಾಗಿ ಕುಗ್ಗಿದ್ದ ಬಿಎಂಟಿಸಿಗೆ ವರ್ಷದ ಮೊದಲ ದಿನವೇ ಬಂದ ಆದಾಯದ ಕಿಕ್ ಹೆಚ್ಚಿಸಿದೆ.
ಒಂದೇ ದಿನ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಯಿಂದ ₹1,99,983 ಹೆಚ್ಚಿನ ಆದಾಯ ಬಂದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಡಿ.31 ಹಾಗೂ ಜ.1ರ ಮಧ್ಯರಾತ್ರಿವರೆಗೂ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಿತ್ತು. ಹೆಚ್ಚುವರಿ ಬಸ್‌ಗಳು ಸುಮಾರು 4443.9 ಕಿ.ಮೀ ನಷ್ಟು ಸಂಚಾರ ಮಾಡಿವೆ. ವರ್ಷದ ಮೊದಲ ದಿನ ಹೆಚ್ಚುವರಿ ಕಾರ್ಯಾಚರಣೆ ಮಾಡಿದ ಬಸ್‌ಗಳಲ್ಲಿ ಸುಮಾರು 13,332 ಮಂದಿ ಪ್ರಯಾಣಿಸಿರುವುದಾಗಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಿಬ್ಬಂದಿ ಮುಷ್ಕರ-ಕೋವಿಡ್‌ನಿಂದ ಕುಗ್ಗಿದ್ದ ಬಿಎಂಟಿಸಿ
ಮೊದಲೇ ಮುಳುಗುವ ಹಡುಗು ಆಗಿದ್ದ ಬಿಎಂಟಿಸಿ ನಿಗಮಕ್ಕೆ ನೌಕರರ ಸಾಲು ಸಾಲು ಮುಷ್ಕರ ಹಾಗೂ ಸಾಂಕ್ರಾಮಿಕ ಕೊರೊನಾ ಹೊಡೆತದಿಂದಾಗಿ ಬಸ್ ಓಡಾಟ ಇಲ್ಲದೆ ನಷ್ಟನ ಸುಳಿಯಲ್ಲಿ ಸಿಲುಕಿತು. ಜತೆಗೆ ತೈಲ ಬೆಲೆ ಏರಿಕೆಯಿಂದಾಗಿ ಬಸ್ ಓಡಿಸಿದರೂ ಕಷ್ಟ, ಸುಮ್ಮನೆ ನಿಲ್ಲಿಸಿದರೂ ನಷ್ಟ ಎಂಬ ಪರಿಸ್ಥಿತಿ ಉದ್ಭವಿಸಿತ್ತು. ಸಿಬ್ಬಂದಿಯ ಸಂಬಳವನ್ನು ನೀಡಲು ಆಗದೆ ನಿಗಮವು ಸರ್ಕಾರದ ಸಹಾಯಹಸ್ತ ಚಾಚಿತ್ತು. ಹಾಗೆ ನೌಕರರ ಪಿಎಫ್ ಹಣವನ್ನು ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಹೊತ್ತಿತ್ತು. ಇವೆಲ್ಲದರ ನಡುವೆ ಇದೀಗ ನಿಧಾನವಾಗಿ ಆರ್ಥಿಕ ಚೇತರಿಕೆಯನ್ನು ಕಂಡುಕೊಳ್ಳುತ್ತಿದೆ.
ಇದನ್ನೂ ಓದಿ | Siddheshwar Swamiji | ಸಿದ್ದೇಶ್ವರ ಶ್ರೀಗಳ ಮಣ್ಣಿನ ಮೂರ್ತಿ; ಕಲಾವಿದನಿಂದ ವಿಶೇಷ ಗೌರವ