ಬೆಂಗಳೂರು: ಬಸವೇಶ್ವರ ನಗರದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಬೆನ್ನಲ್ಲೇ ಪಾಕಿಸ್ತಾನದ ಉಗ್ರನೊಬ್ಬ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ (Bomb Threat) ಮಾಡುವುದಾಗಿ ಬೆದರಿಸಿದ್ದಾನೆ ಎಂದು ಪೊಲೀಸ್ ಕಂಟ್ರೋಲ್ ರೂಮ್‌ಗೆ ಮಾಹಿತಿ ನೀಡಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
8137885416 ನಂಬರ್‌ನಿಂದ ಸುನೀಲ್ ಕುಮಾರ್ ಎಂಬಾತ ಪೊಲೀಸ್ ಕಂಟ್ರೋಲ್ ರೂಮ್‌ಗೆ (ಪೊಲೀಸ್ ಸಹಾಯವಾಣಿ-೧೧೨) ಫೋನ್ ಮಾಡಿದ್ದ. ನಂತರ ಆತನನ್ನು ಸಂಪರ್ಕಿಸಲು ಪೊಲೀಸರು ಯತ್ನಿಸಿದಾಗ ಆತ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾನೆ. ಹೀಗಾಗಿ ಕರೆ ಮಾಡಿದ ವ್ಯಕ್ತಿಯ ಉದ್ದೇಶವೇನು ಎಂಬ ಬಗ್ಗೆ ಅನುಮಾನಗಳು ಮೂಡಿದ ಹಿನ್ನೆಲೆಯಲ್ಲಿ ಸುನೀಲ್ ಕುಮಾರ್ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ | Illegal cash found | ವಿಧಾನ ಸೌಧದಲ್ಲಿ ಹಣ ಪತ್ತೆ ಪ್ರಕರಣ: ಎಂಜಿನಿಯರ್‌ಗೆ ರಿಲೀಫ್, ಹಣ ನನ್ನದಲ್ಲ ಎಂದ ಸಿ.ಸಿ. ಪಾಟೀಲ್
ಸುನೀಲ್ ಸಹಾಯವಾಣಿ ೧೧೨ಗೆ ಕರೆಮಾಡಿ, ಪಾಕಿಸ್ತಾನಿ ಟೆರರಿಸ್ಟ್ ಆದ ಪ್ರಶಾಂತ್ ಎಂ. ಬಾಲಕೃಷ್ಣ ಎಂಬಾತ ನನ್ನ ಮೇಲೆ ಅಟ್ಯಾಕ್ ಮಾಡಲು ಬಂದಿದ್ದಾನೆ. ಬೆಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಮಾಡುತ್ತೇನೆ ಎಂದು ಬೆದರಿಕೆಯೊಡ್ಡಿದ್ದಾನೆ. ಆತನ ವಿರುದ್ಧ ದೆಹಲಿ, ಕೊಯಮತ್ತೂರು ಹಾಗೂ ಬೆಂಗಳೂರಿನಲ್ಲೂ ಕೇಸ್‌ಗಳಿವೆ ಎಂದು ಹೇಳಿ ಕಾಲ್ ಕಟ್ ಮಾಡಿದ್ದ. ಮತ್ತೆ ಆ ನಂಬರ್‌ಗೆ ಪೊಲೀಸರು ಕರೆ ಮಾಡಿದಾಗ ಸ್ವಿಚ್ ಆಫ್ ಬಂದಿತ್ತು.
ಯಾವ ಕಾರಣಕ್ಕಾಗಿ ವ್ಯಕ್ತಿ ಪೊಲೀಸರಿಗೆ ಕರೆ ಮಾಡಿದ್ದ, ಆತನ ಉದ್ದೇಶ ಏನು ಎಂಬುದರ ಬಗ್ಗೆ ತನಿಖೆ ನಡೆಸಲು ವಿಧಾನಸೌಧ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ | Bomb threat : ಬಸವೇಶ್ವರ ನಗರದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್; ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ