ಬೆಂಗಳೂರು: ಹುಚ್ಚ ವೆಂಕಟ್ ಹೆಸರಿನಲ್ಲಿ ಭಾನುವಾರ ಸಂಜೆ 6.30ಕ್ಕೆ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯರ ಇಮೇಲ್ ವಿಳಾಸಕ್ಕೆ ಬಂದಿದ್ದ ಬಾಂಬ್ ಬೆದರಿಕೆ ಮಸೇಜ್ ಮಾಡಿರುವುದು ಯಾರು ಎಂಬ ವಿಷಯ ಕೊನೆಗೂ ಬೆಳಕಿಗೆ ಬಂದಿದೆ. ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಮಾಡಿರುವುದು ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಶಾಲೆಯಲ್ಲಿ 10ನೇ ತರಗತಿಯ ಮೊದಲನೆಯ ಸೆಮಿಸ್ಟರ್ ಪರೀಕ್ಷೆ ಮುಂದೂಡುವುದರ ಜತೆಗೆ ಶಾಲೆಗೆ ರಜೆ ಸಿಗಲಿದೆ ಎಂಬ ಕಾರಣಕ್ಕೆ ಈ ವಿದ್ಯಾರ್ಥಿಯು ಭಾನುವಾರ ರಾತ್ರಿ ಹೊಸ ಇ- ಮೇಲ್ ಐಡಿಯನ್ನು ಕ್ರಿಯೇಟ್ ಮಾಡಿದ್ದಾನೆ. ಬಳಿಕ ಹುಚ್ಚ ವೆಂಕಟ್ ಹೆಸರಿನಲ್ಲಿ ಇ-ಮೇಲ್ ಮಾಡಿದ್ದಾನೆ. ಬಳಿಕ ತನಿಖೆ ಕೈಗೊಂಡ ಪೊಲೀಸರು ಐಪಿ ಅಡ್ರೆಸ್ ಪತ್ತೆ ಹಚ್ಚಿದಾಗ ವಿದ್ಯಾರ್ಥಿ ಸಿಕ್ಕಿ ಬಿದಿದ್ದಾನೆ. ಪ್ರಕರಣ ಸಂಬಂಧ ಆರ್.ಆರ್.ನಗರ ಪೊಲೀಸರು ತನಿಖೆ ನಡೆಸುತ್ತಿದ್ದು, ಹುಡುಗನನ್ನು ವಿಚಾರಣೆ ನಡೆಸಿ ಬಾಲ ಅಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.
ಇದನ್ನೂ ಓದಿ | ಹುಚ್ಚ ವೆಂಕಟ್ ಹೆಸರಿನಲ್ಲಿ ಶಾಲೆಗೆ ಬಾಂಬ್ ಬೆದರಿಕೆ: ಎರಡು ಇಮೇಲ್ ಮಾಡಿರುವ ದುಷ್ಕರ್ಮಿಗಳು