ಬೊಮ್ಮಾಯಿ ಆಡಳಿತಕ್ಕೆ ವರ್ಷ: ಸವಾಲುಗಳನ್ನು ಮೆಟ್ಟಿ ನಿಂತು ಸಾಲು ಸಾಲು ಸಾಧನೆಯ ಹರ್ಷ - Vistara News

ಕರ್ನಾಟಕ

ಬೊಮ್ಮಾಯಿ ಆಡಳಿತಕ್ಕೆ ವರ್ಷ: ಸವಾಲುಗಳನ್ನು ಮೆಟ್ಟಿ ನಿಂತು ಸಾಲು ಸಾಲು ಸಾಧನೆಯ ಹರ್ಷ

ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಇಂದಿಗೆ ಒಂದು ವರ್ಷ! ರಾಜಕೀಯ ಹಿರಿಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ರಾಜಿನಾಮೆ ಬಳಿಕ ರಾಜ್ಯದಲ್ಲಿ ಅದಾಗಲೇ ಇದ್ದ ಸಮಸ್ಯೆಗಳನ್ನ ಯಶಸ್ವಿಯಾಗಿ ನಿಭಾಯಿಸಬಲ್ಲ ನಾಯಕ ಯಾರು ಎಂಬ ಪ್ರಶ್ನೆ ಜನರಲ್ಲಿತ್ತು. ಈ ಎಲ್ಲ ಸಂಶಯಗಳಿಗೆ ತಮ್ಮ ಕಾರ್ಯವೈಖರಿ ಮೂಲಕವೇ ಉತ್ತರ ನೀಡಿದ್ದಾರೆ ಬಸವರಾಜ ಬೊಮ್ಮಾಯಿ. ಅವರು ನಡೆದು ಬಂದ ಹಾದಿಯ ರಿಪೋರ್ಟ್ ಇಲ್ಲಿದೆ ನೋಡಿ..

VISTARANEWS.COM


on

raith vidyanidhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್ಯ ರಾಜಕಾರಣದಲ್ಲಾದ ದಿಢೀರ್ ಬೆಳವಣಿಗೆಗಳ ನಡುವೆ,  ಜ್ವಲಂತ ಸಮಸ್ಯೆಗಳ ಗೂಡಾಗಿದ್ದ ರಾಜ್ಯದ ಜವಾಬ್ದಾರಿಯನ್ನು ಹೆಗಲಿನ ಮೇಲೆ ಹೊತ್ತವರು ಬಸವರಾಜ ಬೊಮ್ಮಾಯಿ. 2021ರ ಜುಲೈ 27ರಂದು ರಾಜ್ಯದ 23ನೇ ಸಿಎಂ ಆಗಿ ನೇಮಕಗೊಂಡಾಗ ಅವರ ಮುಂದಿದ್ದದ್ದು ಬರೀ ಸವಾಲುಗಳೇ. ಒಂದೆಡೆ ಕೊರೊನಾ ಬಿಕ್ಕಟ್ಟು, ಮತ್ತೊಂದೆಡೆ ನೆರೆ ಪರಿಸ್ಥಿತಿ. ಈ ವೇಳೆ ಸಿಎಂ ಬಗ್ಗೆ ಜನರಿಗಿದ್ದ ನಿರೀಕ್ಷೆಯೂ ಹೆಚ್ಚು, ಅನುಮಾನವೂ ಹೆಚ್ಚು… ಆದರೆ, ಎಲ್ಲರ ಸಂಶಯಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರಕೊಟ್ಟರು ಬೊಮ್ಮಾಯಿ. ಅವರಿಗೆ ಪದವಿ ಅನಿರೀಕ್ಷಿತವಾದರೂ, ರಾಜ್ಯದ ಪರಿಸ್ಥಿತಿಯ ಬಗ್ಗೆ ದೀರ್ಘ ಮುನ್ನೋಟವಿತ್ತು ಎಂಬುದಕ್ಕೆ ಈ ವರ್ಷ ಪೂರೈಸಿದ ಸಾಧನೆಯೇ ಸಾಕ್ಷಿ.

ತಂದೆ ಎಸ್‌.ಆರ್‌ ಬೊಮ್ಮಾಯಿ ಜತೆ ಬಸವರಾಜ ಬೊಮ್ಮಾಯಿ

ಮನೆಯಲ್ಲೇ ಶುರುವಾಗಿತ್ತು ರಾಜಕೀಯ ಪಾಠ

ಹುಬ್ಬಳ್ಳಿ ಮೂಲದವರಾದ ಬೊಮ್ಮಾಯಿ, ರಾಜಕಾರಣಿಗಳೆಂದರೆ ಮಾಸ್ ಲೀಡರ್, ಡೈನಾಮಿಕ್ ಎನ್ನುವ ಕಲ್ಪನೆಗಳಿಗಿಂತ ತೀರ ಭಿನ್ನ. ಮೃದುಭಾಷಿ, ಸಜ್ಜನ ರಾಜಕಾರಣಿಯಾಗಿರುವ ಇವರು, ನಡುವಳಿಕೆಯಲ್ಲೂ, ಅಭಿವೃದ್ಧಿಯಲ್ಲೂ ಕ್ಲಾಸ್..

ಬೊಮ್ಮಾಯಿ ಅವರ  ಹೆಸರು ರಾಜಕಾರಣದಲ್ಲಿ ಹೊಸದೇನಲ್ಲ, ಹಾಗೆ ರಾಜಕೀಯ ಕಲಿಯೋಕೆ ಹೊಸಲು ದಾಟಿ ಬರೋ ಅಗತ್ಯವೂ ಅವರಿಗಿರಲಿಲ್ಲ.. ಕಾರಣ, ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್ .ಆರ್. ಬೊಮ್ಮಾಯಿ ಸ್ವತಃ ನಾಡು ಕಂಡ ಹಿರಿಯ ಮುತ್ಸದ್ಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ.  ಮನೆಯ ಅಂಗಳದಿಂದಲೇ ರಾಜಕೀಯದ  ಆಳ, ಅಗಲವನ್ನರಿತ ಬೊಮ್ಮಾಯಿ ಅವರು   ವಿಧಾನಸಭೆಯ ಪಡಸಾಲೆಗೆ ಬರುವಷ್ಟರಲ್ಲಿ ರಾಜಕಾರಣದ ಪಟ್ಟುಗಳನ್ನು ಕರಗತ ಮಾಡಿಕೊಂಡವರು.

ಜೆ ಎಚ್ ಪಟೇಲ್ ಅವರು ಸಿಎಂ ಆಗಿದ್ದಾಗ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗುವ ಮೂಲಕ ಅಧಿಕೃತ ಜವಾಬ್ದಾರಿಯನ್ನು ವಹಿಸಿಕೊಂಡರು. ಆ ನಂತರದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ಮುಂದೆ ಸರ್ಕಾರ ರಚನೆಯಾದಾಗ ಜಲಸಂಪನ್ಮೂಲದಂತಹ ಪ್ರಬಲ ಖಾತೆಯನ್ನು ನಿಭಾಯಿಸಿದರು. ಸಹಕಾರ, ಸಂಸದೀಯ ವ್ಯವಹಾರ ಹಾಗೂ ಗೃಹ ಇಲಾಖೆಗಳನ್ನು ನಿಭಾಯಿಸಿದ ಬಸವರಾಜ ಬೊಮ್ಮಾಯಿಯವರು ರಾಜಕಾರಣದ ಒಳಗುಟ್ಟುಗಳನ್ನು ಪಟ್ಟಾಗಿ ಕಲಿತವರು. ತಮ್ಮ ತಂದೆಯವರಿಂದ ಕಲಿತ ರಾಜಕೀಯ ಪಾಠ, ಅನುಭವಗಳನ್ನೆಲ್ಲ ಒಟ್ಟುಗೂಡಿಸಿದ್ದ ಕಾರಣವೋ, ಏನೋ ಸಮಸ್ಯೆಗಳ ಮೇಲೆ ನಡೆಯುತ್ತಿದ್ದ ಸರ್ಕಾರ ಮುಗ್ಗರಿಸಬಹುದೆಂಬ ಮಾತುಗಳನ್ನೆಲ್ಲ ಬೊಮ್ಮಾಯಿ ತಮ್ಮ ಕಾರ್ಯಶೈಲಿಯ ಮೂಲಕವೇ ಸುಳ್ಳಾಗಿಸಿದ್ದಾರೆ.

ಕೊರೋನಾದಿಂದ ಜನರ ಜೀವ ರಕ್ಷಣೆ

ರಾಜ್ಯದಲ್ಲಿ ಕೊರೊನಾ 1 ಮತ್ತು 2ನೇ ಅಲೆಯಲ್ಲಿ ಲಾಕ್ಡೌನ್ ನಂತಹ ಹಲವು ನೀತಿಗಳಿಂದ ಬೇಸತ್ತಿದ್ದ ಜನರು ಸರ್ಕಾರದ ವಿರುದ್ಧವೂ ಬೇಸರಗೊಂಡಿದ್ದರು.. ಜನರ ಈ ಮನಸ್ಥಿತಿಯ ನಡುವೆಯೇ ಪರಿಸ್ಥಿತಿಯನ್ನು ಹತೋಟಿಗೆ ತರಬೇಕಿರುವುದು ಬೊಮ್ಮಾಯಿ ಸರ್ಕಾರಕ್ಕಿದ್ದ ದೊಡ್ಡ ಸವಾಲು. ಜನರ ನಾಡಿಮಿಡಿತದ ಅರಿವಿದ್ದ ಬೊಮ್ಮಾಯಿ ಸರ್ಕಾರ, ಜನರ ಆಕ್ರೋಶ, ಬೇಸರಗಳನ್ನು ಬದಿಗಿರಿಸಿ, ಸಾಂತ್ವನ ನೀಡಿತು. ಲಸಿಕೆ ವಿತರಣೆ ಕ್ಷಿಪ್ರಗೊಳಿಸುವ ನೀತಿ ಸೇರಿದಂತೆ ಹಲವು ಕ್ರಮಗಳ ಮೂಲಕ 3ನೇ ಅವಧಿಯಲ್ಲಿ ಹೆಚ್ಚಿನ ಸಾವು-ನೋವು ಸಂಭವಿಸದಂತೆ ಎಚ್ಚರ ವಹಿಸಿ, ಸವಾಲನ್ನು ಹಿಮ್ಮೆಟ್ಟಿಸಿದ್ದು ಬೊಮ್ಮಾಯಿ ಸರ್ಕಾರಕ್ಕೆ ಸಿಕ್ಕ ಮೊದಲ ಜಯ..

ರೈತರ ಮಕ್ಕಳಿಗೆ ಶಿಕ್ಷಣ ನೆರವು
ಅಧಿಕಾರಕ್ಕೆ ಬರುತ್ತಿದ್ದಂತೆ ರೈತರ ಸಮಸ್ಯೆಗಳತ್ತ ಗಮನಹರಿಸಿದ ಸರ್ಕಾರ, ಹಲವು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದೆ. ಸಿಎಂ ಆದ ಮೊದಲ ದಿನವೇ ರೈತ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ನೀಡುವ ರೈತ ವಿದ್ಯಾ ನಿಧಿ ಯೋಜನೆ ಘೋಷಿಸಿದರು ಬೊಮ್ಮಾಯಿ. ಪ್ರೌಢಶಾಲೆಯಿಂದ, ಸ್ನಾತಕೋತ್ತರ ವಿದ್ಯಾಭ್ಯಾಸದವರೆಗೆ ರೈತರ ಮಕ್ಕಳು ವಿದ್ಯಾರ್ಥಿ ವೇತನ ಪಡೆಯಲು ಈ ಯೋಜನೆ ಸಂಜೀವಿನಿಯಾಯಿತು. ಈ ಮೂಲಕ, ಕಳೆದ ವರ್ಷ 7.13 ಲಕ್ಷ ವಿದ್ಯಾರ್ಥಿಗಳಿಗೆ 261 ಕೋಟಿ ರೂ. ನೆರವು ನೀಡಲಾಯಿತು.

ನೆರೆ ಸಂತ್ರಸ್ತರಿಗೂ ಕ್ಷಿಪ್ರ ಪರಿಹಾರ

ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಅಪವಾದವನ್ನು ಬೊಮ್ಮಾಯಿ ಸರ್ಕಾರ ಅಳಿಸಿಹಾಕಿದ್ದು, ಸಮಾಜದ ಎಲ್ಲ ಸ್ತರದ ಎಲ್ಲ, ವರ್ಗದ ಜನರಿಗೂ ಸೇವೆಯನ್ನು ತಲುಪುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ನೆರೆಯಿಂದಾಗಿ ಬೆಳೆ ಕಳೆದುಕೊಂಡ ಸಂತ್ರಸ್ತರಿಗೆ ಕ್ಷಿಪ್ರಗತಿಯಲ್ಲಿ ಪರಿಹಾರ ಒದಗಿಸುವ ಮೂಲಕ ತನ್ನ ಬದ್ಧತೆಯನ್ನು ಸರ್ಕಾರ ಪುನರುಚ್ಛರಿಸಿತ್ತು. ಅದರಂತೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯಿಂದ 48 ಲಕ್ಷ ರೈತರಿಗೆ ನೆರವು ಲಭಿಸಿದೆ. ಬೆಳೆ ವಿಮೆಯಲ್ಲಿ 5.29 ಲಕ್ಷ ರೈತರು 695 ಕೋಟಿ  ರೂ. ನೆರವು ಪಡೆದುಕೊಂಡಿದ್ದಾರೆ. ಅಕಾಲಿಕ ಮಳೆಯಿಂದ ಬೆಳೆ ಕಳೆದುಕೊಂಡವರು ಕೂಡ 1 ಕೋಟಿ ರೂ. ಪರಿಹಾರ ಪಡೆದುಕೊಂಡಿದ್ದಾರೆ.

ಸರ್ವರಂಗದಲ್ಲೂ ಯಶಸ್ಸಿನ ಹೆಜ್ಜೆ

ಕೊರೊನಾ ಬಿಕ್ಕಟ್ಟಿನಿಂದ ನೆಲಕಚ್ಚಿದ್ದ ಆರ್ಥಿಕತೆಯನ್ನು ಸರಿದೂಗಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಸರ್ಕಾರ ಮಾಡುತ್ತಿದ್ದು, ಬಹುತೇಕ ಯಶಸ್ವಿಯೂ ಆಗಿದೆ. ಕೃಷಿ, ಕೈಗಾರಿಕೆ, ಸೇವಾ ಕ್ಷೇತ್ರಗಳ ಕೊಡುಗೆ ಹಿಮ್ಮುಖವಾದ ಸಂದರ್ಭದಲ್ಲೂ ಧೃತಿಗೆಡದೆ,  ಸರ್ಕಾರ ತನ್ನ ಪ್ರಯತ್ನಗಳನ್ನುಮುಂದುವರಿಸಿದೆ. ಐಟಿ ಕ್ಷೇತ್ರಗಳಿಗೆ ನೀಡಿದ ಉತ್ತೇಜನ, ವಿದ್ಯುತ್ ಪೂರೈಕೆ ಖಚಿತಪಡಿಸಿಕೊಳ್ಳುವಂತಹ ಕ್ರಮಗಳಿಂದಾಗಿ ಎದುರಾಗಿದ್ದ ಆರ್ಥಿಕ ಬಿಕ್ಕಟ್ಟನ್ನು ಬಹುಮಟ್ಟಿಗೆ ಪರಿಹರಿಸಲಾಗಿದೆ. ಇದಲ್ಲದೇ, ವಿಧವಾ ವೇತನ, ಪಿಂಚಣಿ ನಿಯಮಗಳ ಪರಿಷ್ಕರಣೆ ಜತೆಗೆ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯ ಧನ ನೀಡುವಂತಹ ಬೊಮ್ಮಾಯಿ ಸರ್ಕಾರದ ನಿರ್ಣಯಗಳು ಗ್ರಾಮೀಣ ಮಹಿಳೆಯರನ್ನೂ ಸ್ವಾವಲಂಬನೆಯತ್ತ ಮುನ್ನಡೆಸಿದೆ.

ಯುವ ಸಮೂಹದ ಆತ್ಮನಿರ್ಭರತೆಗೆ ಪ್ರೋತ್ಸಾಹ

ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಉದ್ಯೋಗಕ್ಕಾಗಿ ಯುವಜನತೆ ಅಲೆದಾಡುವ ಬದಲು, ಅವರೇ ಉದ್ಯೋಗ ನೀಡುವಂತಾಗಬೇಕು ಎಂಬುದು ಬೊಮ್ಮಾಯಿ ಅವರ ಆಶಯ. ಈ ನಿಟ್ಟಿನಲ್ಲಿ  ಉದ್ಯಮಿಯಾಗು, ಉದ್ಯೋಗ ನೀಡು ಎಂಬ ಯೋಜನೆಯನ್ನು ರೂಪಿಸಿದ್ದರು. ಯೋಜನೆ ಅನ್ವಯ ಬೆಂಗಳೂರು, ಕಲಬುರಗಿ,ಮೈಸೂರು, ಬೆಳಗಾವಿಯಲ್ಲಿ ವಿವಿಧೆಡೆ ಕೈಗಾರಿಕಾ ಕಾರ್ಯಗಾರಗಳನ್ನು ನಡೆಸಿ, ಸಾವಿರಾರು ಸಂಖ್ಯೆಯಲ್ಲಿ ಯುವಜನರಿಗೆ ತರಬೇತಿ ನೀಡಲಾಗಿದೆ. ಉದ್ಯೋಗ ಆರಂಭಿಸುವ ಮಂದಿಗೆ ಅಗತ್ಯ ನೆರವು ನೀಡುವುದಾಗಿಯೂ ಬೊಮ್ಮಾಯಿ ಘೋಷಿಸಿದ್ದರು. ಅಲ್ಲದೇ, ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆಂದು ಕೇಂದ್ರಸರ್ಕಾರ ರೂಪಿಸಿದ ಇ-ಶ್ರಮ ಯೋಜನೆಯನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದ್ದರು. ಈ ಮೂಲಕ ದುಡಿವ ಕೈಗಳಿಗೆ ಸುರಕ್ಷತೆಯನ್ನೂ ಒದಗಿಸಿ, ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಸೆಮಿಕಂಡಕ್ಟರ್ ಒಪ್ಪಂದದಿಂದ 11,500 ಉದ್ಯೋಗ ಸೃಷ್ಟಿ

ಕರ್ನಾಟಕದಲ್ಲಿ ವಿದೇಶಿ ಹೂಡಿಕೆಗಳನ್ನು ಉತ್ತೇಜಿಸುವುದಕ್ಕೆ ಪೂರಕವಾದ ಕ್ರಮಗಳನ್ನೂ, ಬೊಮ್ಮಾಯಿ ಅವರು ತೆಗೆದುಕೊಂಡಿದ್ದು, ಇತ್ತೀಚೆಗಷ್ಟೇ ದಾವೋಸ್‌ನಲ್ಲಿ  ನಡೆದ ಆರ್ಥಿಕ ಶೃಂಗಸಭೆಯಲ್ಲೂ ತಮ್ಮ ನೈಪುಣ್ಯತೆ  ತೋರಿದ್ದರು ಎರಡು  ಪ್ರಭಾವಿ ಸಂಸ್ಥೆಗಳ ಜತೆಗೆ ಮಾತುಕತೆ ನಡೆಸುವ ಮೂಲಕ ಕರ್ನಾಟಕದಲ್ಲಿ 52 ಸಾವಿರ ರೂ.ಗಳ ಹೂಡಿಕೆಯನ್ನು ಖಚಿತಪಡಿಸಿಕೊಂಡಿದ್ದರು. ಇದಲ್ಲದೇ, 22,900 ಕೋಟಿ ರೂ.ವೆಚ್ಚದಲ್ಲಿ ರಾಜ್ಯದಲ್ಲಿ ಸೆಮಿಕಂಡಕ್ಟರ್ ತಯಾರಿಕೆ ಉದ್ದಿಮೆ ಸ್ಥಾಪಿಸಲು ಕೂಡ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಇದರಿಂದ 11, 500 ಉದ್ಯೋಗ ಸೃಷ್ಟಿಯಾಗಲಿದೆ.

438 ನಮ್ಮ ಕ್ಲಿನಿಕ್‌ಗಳ ಸ್ಥಾಪನೆ

ಸಾರ್ವಜನಿಕ ಹಿತಾಸಕ್ತಿಯೇ ಬೊಮ್ಮಾಯಿ ಅವರ ಪ್ರಥಮ ಆದ್ಯತೆಯಾಗಿದ್ದು, ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಸಹಾಯಧನವನ್ನೂ ಘೋಷಿಸಿದ್ದರು. ಅಲ್ಲದೇ, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಸಿಗುವ ಸೌಲಭ್ಯದ ಜತೆಗೆ ರಾಜ್ಯದಿಂದಲೂ ಉತ್ತಮ ಸೌಲಭ್ಯ ನೀಡುವುದನ್ನು ಖಚಿತ ಪಡಿಸಿಕೊಂಡಿದ್ದರು. ಇದಲ್ಲದೇ, ಕೊರೋನಾ ಸಂಕಷ್ಟದ ನಡುವೆಯೂ ಸಮಾಜಮುಖಿ ಯೋಜನೆಯ ಭಾಗವಾಗಿ, ಯಶಸ್ವಿನಿ ಯೋಜನೆಯನ್ನು ಘೋಷಿಸಲಾಗಿತ್ತು. ಇದರ ಅನ್ವಯ ಫಲಾನುಭವಿಗಳು ವೈದ್ಯಕೀಯ ಕ್ಷೇತ್ರದ 14 ವಿಭಾಗಗಳಲ್ಲಿ  823  ಶಸ್ತ್ರ ಚಿಕಿತ್ಸೆಗೆ ನಗದು ರಹಿತ ಸೌಲಭ್ಯಪಡೆಬಹುದಾಗಿದೆ. (ಗ್ರಾಫಿಕ್ಸ್: ವೈದ್ಯಕೀಯ ಕ್ಷೇತ್ರದ 14 ವಿಭಾಗಗಳಲ್ಲಿ  823  ಶಸ್ತ್ರ ಚಿಕಿತ್ಸೆಗೆ ನಗದು ರಹಿತ ಸೌಲಭ್ಯ) ಇದರೊಂದಿಗೆ ರೋಗ ತಪಾಸಣೆ, ಸಣ್ಣ ಪ್ರಮಾಣದ ಚಿಕಿತ್ಸೆಗೆ ಜನರು ಪರದಾಡುವುದನ್ನು ತಪ್ಪಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ  438 ನಮ್ಮ ಕ್ಲಿನಿಕ್ ಯೋಜನೆಯನ್ನು ಘೋಷಿಸಿದ್ದಾರೆ.

750 ಗ್ರಾಮಗಳಿಗೆ ಅಮೃತ ಹರ್ಷ

ಇನ್ನು ಗ್ರಾಮಗಳ ಅಭಿವೃದ್ಧಿಗೂ ಬೊಮ್ಮಾಯಿ ಅವರು ಆದ್ಯತೆ ನೀಡಿದ್ದು, ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಗ್ರಾಮ ಪಂಚಾಯ್ತಿ  ಯೋಜನೆಯನ್ನೂ ಘೋಷಿಸಿದ್ದರು. ಇದರ ಅನ್ವಯ 750 ಗ್ರಾಮಗಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದ್ದು, ಆಯ್ಕೆಯಾಗಿರುವ ಗ್ರಾಮಗಳಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ. ಗ್ರಾಮಗಳಿಗೆ ಪ್ರೋತ್ಸಾಹ ಧನವಾಗಿ 25 ಲಕ್ಷ ರೂ.ಗಳನ್ನು ನೀಡುವುದಾಗಿಯೂ ಘೋಷಿಸಲಾಗಿದೆ. ಗ್ರಾಮೀಣ ಆರ್ಥಿಕ ಚಟುವಟಿಕೆ ಉತ್ತೇಜಿಸುವ ಸಲುವಾಗಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಅನ್ನೂ ಉದ್ಘಾಟಿಸಲಾಗಿದ್ದು, ಬ್ಯಾಂಕಿಗೆ ರಾಜ್ಯ ಸರ್ಕಾರದಿಂದಲೇ 100 ಕೋಟಿ ರೂ. ಮೂಲ ಬಂಡವಾಳ ನೀಡುವುದಾಗಿಯೂ ತಿಳಿಸಿದ್ದಾರೆ. ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ, ವಿವಿಧ ಇಲಾಖೆಗಳ  ಸೇವೆಯನ್ನು ಒಂದೆಡೆ ಒದಗಿಸುವ ಉದ್ದೇಶದಿಂದ ಗ್ರಾಮ ಒನ್ ಯೋಜನೆ ಜಾರಿಗೊಳಿಸಿದೆ. ಇದು ಬೆಂಗಳೂರ್ ಒನ್ ನಂತೆಯೇ ಕಾರ್ಯನಿರ್ವಹಿಸಲಿದೆ.

ಹೀಗೆ ರಾಜ್ಯದ ಸರ್ವ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತಾ ಹೊಸ  ಹಾದಿಯಲ್ಲಿ ರಾಜ್ಯವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟಿಬದ್ಧರಾಗಿ ಮುಂದುವರಿಯುತ್ತಿರುವುದು ಸತ್ಯ.
ಇದನ್ನೂ ಓದಿ| ಬೊಮ್ಮಾಯಿ ಆಡಳಿತಕ್ಕೆ ವರ್ಷ | ವರಿಷ್ಠರ ಮನಗೆದ್ದ ಕಾಮನ್‌ಮ್ಯಾನ್​​ ಸಿಎಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Kannada New Movie: “ಫ್ಯಾಮಿಲಿ ಡ್ರಾಮ” ಚಿತ್ರದ ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.

VISTARANEWS.COM


on

Family drama Kannada movie song
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾಗಳಲ್ಲಿ ‘ಫ್ಯಾಮಿಲಿ ಡ್ರಾಮ’ ಕೂಡ ಒಂದು. ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿರುವ ಫ್ಯಾಮಿಲಿ ಡ್ರಾಮ ಸದ್ಯ ಇಂಟ್ರೆಸ್ಟಿಂಗ್ ಟೈಟಲ್ ಟ್ರ್ಯಾಕ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಯುವ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ‘ಫ್ಯಾಮಿಲಿ ಡ್ರಾಮಾ’ ಹಾಡು ಕೂಡ ಚಿತ್ರದ (Kannada New Movie) ಮೇಲಿನ ಕುತೂಹಲ ಹೆಚ್ಚಿಸಿದೆ. ಇತ್ತೀಚಿಗಷ್ಟೇ ರಿಲೀಸ್ ಆಗಿದ್ದ ಟ್ರೈಲರ್ ಸಖತ್ ಕ್ರಿಯೇಟಿವ್‌ ಆಗಿದ್ದು, ಇದೊಂದು ಮಾಮೂಲಿ ಸಿನಿಮಾವಲ್ಲ, ವಿನೂತನ ಮತ್ತು ವಿಭಿನ್ನವಾದ ಸಿನಿಮಾ ಎನ್ನುವುದನ್ನು ಹೇಳುತ್ತಿದೆ.

ಫ್ಯಾಮಿಲಿ ಡ್ರಾಮಾ, ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ಅಭಯ್, ಅನನ್ಯಾ ಅಮರ್, ಸಿಂಧು ಶ್ರೀನಿವಾಸ್ ಮೂರ್ತಿ, ರೇಖಾ, ಪೂರ್ಣಚಂದ್ರ ಮೈಸೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

ಬಹುತೇಕ ಹೊಸ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ಈ ಸಿನಿಮಾಗೆ ಡಬ್ಬುಗುಡಿ ಮುರಳಿಕೃಷ್ಣ ಅವರು ತಮ್ಮ ಡಿಎಂಕೆ (DMK) ಎಂಟರ್ಟೈನ್ಮೆಂಟ್ ಮೂಲಕ ಬಂಡವಾಳ ಹೂಡಿದ್ದಾರೆ.

ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.

ಅಂದಹಾಗೆ ಈ ಹಾಡಿಗೆ ಚೇತನ್ ಅಮ್ಮಯ್ಯ ಸಂಗೀತ ಸಂಯೋಜನೆ ಮಾಡಿದ್ದು, ಶರತ್ ವಶಿಷ್ಠ ಹಾಗೂ ಚೇತನ್ ಅಮ್ಮಯ್ಯ ಜಂಟಿಯಾಗಿ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನಲ್ಲಿ ಪಾರ್ಟಿ ನಡೆಯುತ್ತಿದ್ದು ನಟ ಅಭಯ್, ಸಿಂಧು, ಅನಯ್ಯಾ ಎಂಡ್ ಗ್ಯಾಂಗ್ ಯಾರನ್ನೊ ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರೆ. ಆದರೆ ಹಾಡಿನ ಕೊನೆಯಲ್ಲಿ ಅವರ ಸ್ಕೆಚ್ ಫ್ಲಾಪ್ ಆಗಿರುವ ಹಾಗೆ ಅನ್ನಿಸುತ್ತದೆ. ಆದರೆ ಮುಂದೇನಾಗುತ್ತೆ ಎನ್ನುವುದು ಸಿನಿಮಾದಲ್ಲಿಯೇ ನೋಡಬೇಕು. ಈ ಹಾಡು ಸಿನಿಮಾದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

ಇನ್ನು ನಿರ್ಮಾಪಕ ಮುರಳಿಕೃಷ್ಣ ಅವರು ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅಂದಹಾಗೆ ಮುರಳಿಕೃಷ್ಣ ಅವರು ಯುಎಸ್‌ನಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿದ್ದರೂ ತಮ್ಮ ನೆಲದ ಮೇಲಿನ ಪ್ರೀತಿ, ಸಿನಿಮಾಗಳ ಮೇಲಿನ ಆಸಕ್ತಿ ಕಳೆದುಕೊಂಡಿಲ್ಲ. ಉತ್ತಮ ಸಿನಿಮಾಗಳನ್ನು ಮಾಡಬೇಕು ಎನ್ನುವ ದೊಡ್ಡ ಕನಸು ಹೊತ್ತಿರುವ ಮುರುಳಿಯವರು ಚಿತ್ರರಂಗದ ಬಗ್ಗೆ ಒಂದಷ್ಟು ತಿಳಿದುಕೊಂಡು ‘ಫ್ಯಾಮಿಲಿ ಡ್ರಾಮ’ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

ಕನ್ನಡದ ‘ಫ್ಯಾಮಿಲಿ ಡ್ರಾಮ’ ಸಿನಿಮಾ ರಿಲೀಸ್‌ನ ಬ್ಯುಸಿಯ ಜತೆಗೆ ನಿರ್ಮಾಪಕರು ಈಗಾಗಲೇ ತೆಲುಗಿನಲ್ಲಿ ಮೂರು ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ DMK ಎಂಟರ್ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಮೂಲಕ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಬೇಕು ಹಾಗೂ ದೊಡ್ಡ ಬಜೆಟ್‌ನ ಸ್ಟಾರ್ ಸಿನಿಮಾ ನಿರ್ಮಾಣ ಮಾಡುವ ದೊಡ್ಡ ಕನಸನ್ನು ಕಂಡಿದ್ದಾರೆ. ಅವರ ಮುಂದಿನ ಎಲ್ಲಾ ಯೋಜನೆಗಳಿಗೆ ‘ಫ್ಯಾಮಿಲಿ ಡ್ರಾಮ’ ಉತ್ತಮ ವೇದಿಕೆಯಾಗಲಿದೆ ಎನ್ನುವ ಭರವಸೆ ಹೊಂದಿದ್ದಾರೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

ಫ್ಯಾಮಿಲಿ ಡ್ರಾಮ ಉತ್ತಮ ಕಂಟೆಂಟ್ ಜತೆಗೆ ಟೆಕ್ನಿಕಲ್ ವಿಚಾರಗಳು ಸಹ ಗಮನ ಸೆಳೆಯುತ್ತಿದೆ. ಡಾರ್ಕ್ ಕಾಮಿಡಿ ಸಿನಿಮಾ ಇದಾಗಿದ್ದು, ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಥೆಯಾಗಿದೆ. ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆ ಮೂಡಿಸಿರುವ ಫ್ಯಾಮಿಲಿ ಡ್ರಾಮ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ.

Continue Reading

ಕರ್ನಾಟಕ

Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

Suraj Revanna Case: 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದಾರೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಂದು ಸಿಐಡಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದಾರೆ. ಇದರಿಂದ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ

ಇನ್ನು ಸೂರಜ್ ರೇವಣ್ಣ ಪರ ವಕೀಲ ನಿಖಿಲ್ ಡಿ ಕಾಮತ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿಗೆ ನ್ಯಾಯಾಧಿಶರು ಸೂಚಿಸಿದ್ದಾರೆ. ಹೀಗಾಗಿ ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ಮಗನ ಬಗ್ಗೆ ಬೇಸರ ವ್ಯಕ್ತಪಡಿಸಿದ ರೇವಣ್ಣ

ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್‌ನ ಮಾಜಿ ಸಚಿವ ಎಚ್.ಡಿ. ರೇವಣ್ಣ ಬುಧವಾರ ಭೇಟಿ ಮಾಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿರುವ ಮಗನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ರೇವಣ್ಣ, ಭವಿಷ್ಯವನ್ನು ಹಾಳು ಮಾಡಿಕೊಂಡೆ. ನಮ್ಮ ಕುಟುಂಬಕ್ಕೂ ಕೆಟ್ಟ ಹೆಸರು ತಂದೆ. ಎಂತಹ ಮಕ್ಕಳು ಹುಟ್ಟಿದ್ದೀರಪ್ಪಾ ನನಗೆ ಎಂದು ಬೇಸರ ಹೊರಹಾಕಿದ್ದಾರೆ ಎನ್ನಲಾಗಿದೆ.

ನಮ್ಮ ಹಣೆಬರಹ ಏನೂ ಮಾಡೋದಿಕ್ಕೆ ಆಗೋದಿಲ್ಲ ಎಂದು ರೇವಣ್ಣ ಬೇಸರ ವ್ಯಕ್ತಪಡಿಸಿದಾಗ, ತಂದೆ ಮಾತಿಗೆ ಮರು ಉತ್ತರ ನೀಡಲಾಗದೆ ಪ್ರಜ್ವಲ್ ಸುಮ್ಮನಾಗಿದ್ದಾರೆ. ನಂತರ ಬಟ್ಟೆ ಮತ್ತು ಹಣ್ಣುಗಳನ್ನು ನೀಡಿ ರೇವಣ್ಣ ವಾಪಸ್ ತೆರಳಿದ್ದಾರೆ ಎಂದು ಜೈಲ್ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

ಬೆಂಗಳೂರು: ನಗರದಲ್ಲಿ ಮತ್ತೊಂದು ರೇಪ್ ಆ್ಯಂಡ್ ಮರ್ಡರ್ ಕೇಸ್‌ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ (Physical Abuse) ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗಳು, ನಂತರ ಕೊಲೆ ಮಾಡಿ ಪಾರ್ಕಿಂಗ್‌ ಪ್ರದೇಶದ ಮರವೊಂದರ ಬಳಿ ಶವ ಎಸೆದಿದ್ದಾರೆ. ರಾತ್ರಿ ವೇಳೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪಾರ್ಕಿಂಗ್ ಲಾಟ್‌ನಲ್ಲಿದ್ದರೂ ಬಾಲಕಿ ಕೊಲೆ ವಿಚಾರ ಬೆಳಕಿಗೆ ಬಂದಿರಲಿಲ್ಲ. ಜನರು ಓಡಾಡುತ್ತಿದ್ದರೂ ಯಾರೂ ಗಮನ ಹರಿಸಿರಲಿಲ್ಲ. ಮೈ ಮೇಲೆ ಪರಚಿದ ಗಾಯಗಳು ಹಾಗು ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಸದ್ಯ ಬಾಲಕಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Actor Darshan: ದರ್ಶನ್‌ ಕೆಟ್ಟ ವ್ಯಕ್ತಿಯಲ್ಲ, ತಪ್ಪು ಮಾಡಿಲ್ಲ ಎಂದ ಕೆ. ಮಂಜು

ಈ ಬಗ್ಗೆ ರೈಲ್ವೆ ಎಸ್ ಪಿ ಡಾ. ಸೌಮ್ಯ ಲತಾ ಅವರು ಪ್ರತಿಕ್ರಿಯಿಸಿ, ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಲ್ಲಿ ಒಂದು ಹೆಣ್ಣು ಮಗವಿನ ಮೃತ ದೇಹ ಸಿಕ್ಕಿದೆ. ನಮ್ಮ ಸಿಬ್ಬಂದಿ ಬಂದು ತಿಳಿಸಿದ್ದು, ಪರಿಶೀಲನೆ ನಡೆಸಲಾಗಿದೆ. ದೇಹದ ಮೇಲೆ ಸಾಕಾಷ್ಟು ಗಾಯಗಳಾಗಿವೆ, ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಮಾಡಿ ಎಲ್ಲಿಂದಲ್ಲೋ ತಂದು ಇಲ್ಲಿ ಎಸೆಯಲಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಮಗು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Koo Shut Down: ‘ಕೂ’ಗು ನಿಲ್ಲಿಸಿದ ಕನ್ನಡಿಗನೇ ಕಟ್ಟಿದ ಆ್ಯಪ್‌; ದೇಶೀಯ ಟ್ವಿಟರ್‌ ಇನ್ನು ನೆನಪು ಮಾತ್ರ!

Koo Shut Down: ಭಾರತದಲ್ಲಿ ಜಾಗತಿಕ ಮಟ್ಟದ ಸಂಸ್ಥೆ, ಅಪ್ಲಿಕೇಶನ್‌ಅನ್ನು ನಿರ್ವಹಣೆ ಮಾಡಲು ಭಾರಿ ಪ್ರಮಾಣದಲ್ಲಿ ಬಂಡವಾಳ ಬೇಕಾಗುತ್ತದೆ. ಕೂ ಅಪ್ಲಿಕೇಶನ್‌ ನಿರ್ವಹಣೆಗೂ ಹೆಚ್ಚಿನ ಬಂಡವಾಳ ಬೇಕಾಗಿದ್ದು, ಇದಕ್ಕೆ ಅಧಿಕ ಪ್ರಮಾಣದಲ್ಲಿ ಹಣ ಹರಿದುಬಂದಿಲ್ಲ. ಬೇರೆ ಕಂಪನಿಗಳಿಗೆ ಮಾರಾಟ ಮಾಡುವ ಅಥವಾ ವಿಲೀನಗೊಳಿಸುವ ದಿಸೆಯಲ್ಲಿ ಸತತ ಪ್ರಯತ್ನ ಮಾಡಿದರೂ ಅದು ಫಲ ಕೊಡಲಿಲ್ಲ ಎಂಬುದಾಗಿ ಕೂ ಸಂಸ್ಥಾಪಕ ರಾಧಾಕೃಷ್ಣ ಅಪ್ರಮೇಯ ತಿಳಿಸಿದ್ದಾರೆ.

VISTARANEWS.COM


on

Koo Shut Down
Koo

ಬೆಂಗಳೂರು: ಜಾಗತಿಕ ಖ್ಯಾತಿಯ ಟ್ವಿಟರ್‌ಗೆ (ಈಗ ಎಕ್ಸ್)‌ ಸೆಡ್ಡು ಹೊಡೆಯುವ ದಿಸೆಯಲ್ಲಿ 2020ರಲ್ಲಿ ಕನ್ನಡಿಗ ಅಪ್ರಮೇಯ ರಾಧಾಕೃಷ್ಣ ಅವರು ಪರಿಚಯಿಸಿದ್ದ ಕೂ ಸೋಷಿಯಲ್‌ ಮೀಡಿಯಾ ಅಪ್ಲಿಕೇಶನ್‌ (Koo Shut Down) ಈಗ ಇತಿಹಾಸದ ಪುಟ ಸೇರಿದೆ. ಹೌದು, ಕೂ ಅಪ್ಲಿಕೇಶನ್‌ (Koo Application) ಸ್ಥಗಿತಗೊಳಿಸುವುದಾಗಿ ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ (Aprameya Radhakrishna) ಹಾಗೂ ಮಯಾಂಕ್‌ ಬಿಡವಟ್ಕ (Mayank Bidawatka) ಅವರು ಘೋಷಣೆ ಮಾಡಿದ್ದು, ಇದರಿಂದ ಕನ್ನಡಿಗರು ಅಭಿವೃದ್ಧಿಪಡಿಸಿದ, ದೇಶಾದ್ಯಂತ ಖ್ಯಾತಿ ಗಳಿಸಿದ್ದ, ಕೋಟ್ಯಂತರ ಜನರು ಬಳಸುತ್ತಿದ್ದ ಕೂ ಈಗ ‘ಕೂ’ಗು ನಿಲ್ಲಿಸಿದಂತಾಗಿದೆ.

ಕೂ ಸ್ಥಗಿತಗೊಳಿಸುವ ಕುರಿತು ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್‌ ಇನ್‌ನಲ್ಲಿ ಬರೆದುಕೊಂಡಿದ್ದಾರೆ. “ಭಾರತದಲ್ಲಿ ಜಾಗತಿಕ ಮಟ್ಟದ ಸಂಸ್ಥೆ, ಅಪ್ಲಿಕೇಶನ್‌ಅನ್ನು ನಿರ್ವಹಣೆ ಮಾಡಲು ಭಾರಿ ಪ್ರಮಾಣದಲ್ಲಿ ಬಂಡವಾಳ ಬೇಕಾಗುತ್ತದೆ. ಕೂ ಅಪ್ಲಿಕೇಶನ್‌ ನಿರ್ವಹಣೆಗೂ ಹೆಚ್ಚಿನ ಬಂಡವಾಳ ಬೇಕಾಗಿದ್ದು, ಇದಕ್ಕೆ ಅಧಿಕ ಪ್ರಮಾಣದಲ್ಲಿ ಹಣ ಹರಿದುಬಂದಿಲ್ಲ. ಬೇರೆ ಕಂಪನಿಗಳಿಗೆ ಮಾರಾಟ ಮಾಡುವ ಅಥವಾ ವಿಲೀನಗೊಳಿಸುವ ದಿಸೆಯಲ್ಲಿ ಸತತ ಪ್ರಯತ್ನ ಮಾಡಿದರೂ ಅದು ಫಲ ಕೊಡಲಿಲ್ಲ. ಹಾಗಾಗಿ, ಕೂ ಅಪ್ಲಿಕೇಶನ್‌ಅನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಕೂ ಅಪ್ಲಿಕೇಶನ್‌ ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ ಹಾಗೂ ಮಯಾಂಕ್‌ ಬಿಡವಟ್ಕ.

“ನಮಗೆ ಕೂ ಅಪ್ಲಿಕೇಶನ್‌ಅನ್ನು ಸ್ಥಗಿತಗೊಳಿಸಲು ಮನಸ್ಸಿರಲಿಲ್ಲ. ಹಾಗಾಗಿ, ಬೃಹತ್‌ ಇಂಟರ್‌ನೆಟ್‌ ಕಂಪನಿಗಳು, ಮೀಡಿಯಾ ಸಂಸ್ಥೆಗಳು ಸೇರಿ ಹತ್ತಾರು ಕಂಪನಿಗಳ ಜತೆ ವಿಲೀನ, ಮಾರಾಟದ ಕುರಿತು ಸತತ ಮಾತುಕತೆ ನಡೆಸಿದೆವು. ಆದರೆ, ಒಂದೇ ಒಂದು ಕಂಪನಿಯ ಜತೆ ನಾವು ವ್ಯವಹಾರ ಮಾಡಲು ಆಗಲಿಲ್ಲ. ಯಾರೂ ಕೂ ಕಂಪನಿಯನ್ನು ಖರೀದಿ ಮಾಡಲಿಲ್ಲ. ಕೂ ಅಪ್ಲಿಕೇಶನ್‌ಅನ್ನು ಇನ್ನಷ್ಟು ಜನಪ್ರಿಯಗೊಳಿಸಲು, ಜಾಗತಿಕ ಕಂಪನಿಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಬದಲಾವಣೆ ತರಲು ಸುಮಾರು 6 ವರ್ಷಗಳ ಅವಧಿಗೆ ಬಂಡವಾಳದ ಅವಶ್ಯಕತೆ ಇತ್ತು. ಆದರೆ, ಅದನ್ನು ನಿರ್ವಹಣೆ ಮಾಡಲು ಆಗದ ಕಾರಣ ಸ್ಥಗಿತಗೊಳಿಸಲು ಮುಂದಾಗಿದ್ದೇವೆ” ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಹಣಕಾಸು ಬಿಕ್ಕಟ್ಟಿನಿಂದಾಗಿ 2023ರಲ್ಲಿ ಕೆಲ ಉದ್ಯೋಗಿಗಳನ್ನೂ ವಜಾಗೊಳಿಸಲಾಗಿತ್ತು.

ಮೋದಿ ಕೂಡ ಬಳಸುತ್ತಿದ್ದರು

2020ರಲ್ಲಿ ಟ್ವಿಟರ್‌ಗೆ ಪರ್ಯಾಯವಾಗಿ ಕೂ ಸಾಮಾಜಿಕ ಜಾಲತಾಣದ ಪರಿಚಯಿಸಿದಾಗ ಅದು ಭಾರಿ ಖ್ಯಾತಿ ಗಳಿಸಿತು. ಕೆಲವೇ ದಿನಗಳಲ್ಲಿ ಲಕ್ಷಾಂತರ ಜನ ಕೂ ಅಪ್ಲಿಕೇಶನ್‌ಅನ್ನು ಡೌನ್‌ಲೋಡ್‌ ಮಾಡಿಕೊಂಡರು. ಅಷ್ಟೇ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ಸಚಿವರು, ಗಣ್ಯರು ಕೂ ಇನ್‌ಸ್ಟಾಲ್‌ ಮಾಡಿಕೊಳ್ಳುವ ಮೂಲಕ ದೇಶೀಯ ಜಾಲತಾಣಕ್ಕೆ ಬೆಂಬಲ ಸೂಚಿಸಿದರು. ದೇಶದ 9 ಸಾವಿರ ವಿಐಪಿಗಳು ಸೇರಿ ಒಂದು ಹಂತದಲ್ಲಿ ಪ್ರತಿದಿನ 21 ಲಕ್ಷ ದೇಶೀಯ ಬಳಕೆದಾರರು ‘ಕೂ’ಗೆ ಇದ್ದರು. ಆದರೆ, ಎಕ್ಸ್‌ ಜಾಲತಾಣಕ್ಕೆ ಸೆಡ್ಡು ಹೊಡೆಯಲು ಆಗದೆ, ಬೇರೆ ಬೇರೆ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಆಗದೆ, ಬಂಡವಾಳ ಸೆಳೆಯಲು ಆಗೆ ಈಗ ಕೂ ತೆರೆಗೆ ಸರಿಯುತ್ತಿದೆ.

ಇದನ್ನೂ ಓದಿ: Elon Musk: ಜಿಮೇಲ್ ಸ್ಥಗಿತ ವದಂತಿ ಮಧ್ಯೆಯೇ ಶೀಘ್ರ ‘ಎಕ್ಸ್‌ಮೇಲ್’ ಲಾಂಚ್!

Continue Reading

ಕಲಬುರಗಿ

Mid Day Meal: ಕಲಬುರಗಿಯಲ್ಲಿ ಬಿಸಿಯೂಟ ಉಂಡ 33 ವಿದ್ಯಾರ್ಥಿಗಳು ಅಸ್ವಸ್ಥ; 3 ದಿನಗಳಲ್ಲಿ ಎರಡನೇ ಘಟನೆ

Mid Day Meal: ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು, ಮಳೆನೀರಿನಿಂದ ಕಲುಷಿತಗೊಂಡಿದ್ದ ಮಧ್ಯಾಹ್ನದ ಬಿಸಿಯೂಟವನ್ನು ಉಂಡ ಪರಿಣಾಮ 33 ವಿದ್ಯಾರ್ಥಿಗಳು ಅಸ್ವಸ್ಥಗೊಂಡರು. ಸೋಮವಾರ ಶಾಲೆಯಲ್ಲಿ ಮಧ್ಯಾಹ್ನದ ಊಟ ಮಾಡಿದ ನಂತರ ಒಟ್ಟು 33 ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಮುಂತಾದ ಲಕ್ಷಣಗಳು ಕಾಣಿಸಿಕೊಂಡವು.

VISTARANEWS.COM


on

kanaganahalli mid day meal
Koo

ಕಲಬುರಗಿ: ಕಲಬುರಗಿ ಜಿಲ್ಲೆಯ (Kalaburagi news) ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ (mid day meal) ಸ್ವೀಕರಿಸಿದ 33 ವಿದ್ಯಾರ್ಥಿಗಳು (children ill) ಅಸ್ವಸ್ಥರಾಗಿದ್ದಾರೆ. ಇದು ಕಲಬುರಗಿ ಜಿಲ್ಲೆಯಲ್ಲಿ ಮೂರು ದಿನಗಳಲ್ಲಿ ನಡೆಯುತ್ತಿರುವ ಎರಡನೇ ಇಂಥ ಘಟನೆ. ಒಂದು ದಿನದ ಹಿಂದೆ ಜೇವರ್ಗಿಯಲ್ಲಿ ಹೀಗಾಗಿತ್ತು.

ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು, ಮಳೆನೀರಿನಿಂದ ಕಲುಷಿತಗೊಂಡಿದ್ದ ಮಧ್ಯಾಹ್ನದ ಬಿಸಿಯೂಟವನ್ನು ಉಂಡ ಪರಿಣಾಮ 33 ವಿದ್ಯಾರ್ಥಿಗಳು ಅಸ್ವಸ್ಥಗೊಂಡರು. ಸೋಮವಾರ ಶಾಲೆಯಲ್ಲಿ ಮಧ್ಯಾಹ್ನದ ಊಟ ಮಾಡಿದ ನಂತರ ಒಟ್ಟು 33 ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಮುಂತಾದ ಲಕ್ಷಣಗಳು ಕಾಣಿಸಿಕೊಂಡವು. ಕೂಡಲೇ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಾಡಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು ಎಂದು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ.ಶರಣಬಸಪ್ಪ ಗಣಜಲಖೇಡ್ ತಿಳಿಸಿದರು.

ಹೆಚ್ಚು ತೀವ್ರವಾಗಿ ಅಸ್ವಸ್ಥಗೊಂಡ ಐದು ವಿದ್ಯಾರ್ಥಿಗಳನ್ನು ವಾಡಿಯ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಕೊಲ್ಲೂರು ಪಿಎಚ್‌ಸಿಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಮಕ್ಕಳು ಚೇತರಿಸಿಕೊಂಡಿದ್ದಾರೆ ಮತ್ತು ಸೋಮವಾರ ರಾತ್ರಿಯ ವೇಳೆಗೆ ಡಿಸ್ಚಾರ್ಜ್ ಆಗಿದ್ದಾರೆ. ಆದರೂ ಹೆಚ್ಚು ಪೀಡಿತರು ಇನ್ನೂ ವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಸುಧಾರಿಸುತ್ತಿದ್ದಾರೆ.

“ನಮಗೆ ಬಡಿಸಿದ ಅನ್ನದೊಂದಿಗೆ ಮಳೆನೀರು ಹೇಗೆ ಮಿಶ್ರವಾಯಿತು ಎಂದು ನಮಗೆ ತಿಳಿದಿಲ್ಲ” ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಮಧ್ಯಾಹ್ನ 3 ಗಂಟೆಯ ವೇಳೆಗೆ ಅನೇಕ ವಿದ್ಯಾರ್ಥಿಗಳು ತೀವ್ರ ಹೊಟ್ಟೆ ನೋವು, ವಾಂತಿ ಮತ್ತು ನಿರ್ಜಲೀಕರಣವನ್ನು ಅನುಭವಿಸಿದರು. ಅಕ್ಕಿ ಹಾಳಾಗಿದ್ದು, ಕೆಟ್ಟ ವಾಸನೆ ಬರುತ್ತಿದೆ ಎಂದು ಕೆಲ ವಿದ್ಯಾರ್ಥಿಗಳು ದೂರಿದ್ದರು.

“ನಾವು ತಕ್ಷಣ ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಮತ್ತು ಬ್ಲಾಕ್ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಮತ್ತು ಸಂತ್ರಸ್ತ ವಿದ್ಯಾರ್ಥಿಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ದಿದ್ದೇವೆ” ಎಂದು ಶಿಕ್ಷಕರು ತಿಳಿಸಿದ್ದಾರೆ.

ಚಿತ್ತಾಪುರ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ತ್ವರಿತವಾಗಿ ಕಾರ್ಯಾಚರಣೆಗಿಳಿದರು. ಅಸ್ವಸ್ಥ ವಿದ್ಯಾರ್ಥಿಗಳನ್ನು ಆಂಬ್ಯುಲೆನ್ಸ್‌ಗಾಗಿ ಕಾಯದೆ ಬೈಕ್ ಮತ್ತು ಟ್ರ್ಯಾಕ್ಟರ್‌ಗಳಲ್ಲಿ ಆಸ್ಪತ್ರೆಗಳಿಗೆ ಸಾಗಿಸಿದರು. ಚಿತ್ತಾಪುರ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ಜಗದೇವಿ ಹತ್ತೂರ್ ಅವರು ಗ್ರಾಮಸ್ಥರು ಮತ್ತು ಎಸ್‌ಡಿಎಂಸಿ ಸದಸ್ಯರು ಕೈಗೊಂಡ ತ್ವರಿತ ಕ್ರಮವನ್ನು ಶ್ಲಾಘಿಸಿದರು. “ಹೆಚ್ಚಿನ ಮಕ್ಕಳು ಬೇಗನೆ ಚೇತರಿಸಿಕೊಂಡರು. ಏಕೆಂದರೆ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಗ್ರಾಮಸ್ಥರು ಮತ್ತು ಎಸ್‌ಡಿಎಂಸಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಹತ್ತೂರು ಹೇಳಿದರು.

ತಹಶೀಲ್ದಾರ್ ಅಂಬರೀಶ್ ಬಿರಾದಾರ್ ಮಾತನಾಡಿ, “ವೈದ್ಯರು ಮುಂಜಾಗ್ರತಾ ಕ್ರಮವಾಗಿ ಎಲ್ಲ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿದ್ದು, ಅದೇ ಊಟ ಸೇವಿಸಿದ ಇತರರಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ” ಎಂದಿದ್ದಾರೆ.

ಒಂದು ದಿನದ ಹಿಂದೆ ಜೇವರ್ಗಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯ 17 ವಿದ್ಯಾರ್ಥಿಗಳು ಉಪಾಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ: Students Fall Sick: ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ವಿಚಾರಿಸಿದ ಶಾಸಕ

Continue Reading
Advertisement
Viral Video
Latest8 mins ago

Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

Ram charan the Indian House on set
ಟಾಲಿವುಡ್14 mins ago

Ram Charan: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಸಿನಿಮಾ!

Family drama Kannada movie song
ಕರ್ನಾಟಕ17 mins ago

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Suraj Revanna Case
ಕರ್ನಾಟಕ18 mins ago

Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

Sexual Harassment
Latest19 mins ago

Sexual Harassment: ಎಲ್ಲಾ ತಂದೆಯರೂ ಹೀಗೇ ಮಾಡುತ್ತಾರೆ ಎನ್ನುತ್ತ ಮಗಳನ್ನೇ ಗರ್ಭಿಣಿ ಮಾಡಿದ್ದ ನೀಚ ತಂದೆಗೆ 101 ವರ್ಷ ಶಿಕ್ಷೆ!

Koo Shut Down
ಕರ್ನಾಟಕ30 mins ago

Koo Shut Down: ‘ಕೂ’ಗು ನಿಲ್ಲಿಸಿದ ಕನ್ನಡಿಗನೇ ಕಟ್ಟಿದ ಆ್ಯಪ್‌; ದೇಶೀಯ ಟ್ವಿಟರ್‌ ಇನ್ನು ನೆನಪು ಮಾತ್ರ!

Ananth Ambani
Latest39 mins ago

Ananth Ambani: ಸಾಮೂಹಿಕ ವಿವಾಹದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಅಂಬಾನಿ ಕುಟುಂಬ

kanaganahalli mid day meal
ಕಲಬುರಗಿ41 mins ago

Mid Day Meal: ಕಲಬುರಗಿಯಲ್ಲಿ ಬಿಸಿಯೂಟ ಉಂಡ 33 ವಿದ್ಯಾರ್ಥಿಗಳು ಅಸ್ವಸ್ಥ; 3 ದಿನಗಳಲ್ಲಿ ಎರಡನೇ ಘಟನೆ

Yakshagana artist Tulsi Hegade added to the world record list
ಕರ್ನಾಟಕ42 mins ago

Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

Hardik Pandya
ಕ್ರೀಡೆ42 mins ago

Hardik Pandya: ಆಲ್​ರೌಂಡರ್​ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ ಹಾರ್ದಿಕ್​ ಪಾಂಡ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌