Site icon Vistara News

Border Dispute | ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡಿ: ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ

marathi sahitya

ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು, ಇಲ್ಲವಾದರೆ ಮರಾಠಿ ಭಾಷೆಯಲ್ಲಿ ಸರ್ಕಾರಿ ದಾಖಲಾತಿ ನೀಡಬೇಕು ಎಂದು ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಕನ್ನಡ ನೆಲವಾದ ಬೆಳಗಾವಿ ತಾಲೂಕಿನ ಬೆಳಗುಂದಿಯಲ್ಲಿ ನಡೆದ ಮರಾಠಿ ಸಮ್ಮೇಳನದಲ್ಲಿ ಈ ನಾಡದ್ರೋಹಿ ನಿರ್ಣಯ ಅಂಗೀಕರಿಸಲಾಗಿದೆ. ಬೆಳಗುಂದಿಯಲ್ಲಿ ರವಳನಾಥ ಪಂಚಕ್ರೋಶಿ ಸಾಹಿತ್ಯ ಅಕಾಡೆಮಿ ವತಿಯಿಂದ ಮರಾಠಿ ಸಾಹಿತ್ಯ ಸಮ್ಮೇಳನ ನಡೆದಿದ್ದು, ಸಮ್ಮೇಳನಕ್ಕೆ ಎಂಇಎಸ್ ಮುಖಂಡ ಶಿವಾಜಿ ಸುಂಟಕರ್ ಚಾಲನೆ ನೀಡಿದ್ದರು.

ಕೇಂದ್ರ ಸರ್ಕಾರ ಗಡಿಭಾಗವನ್ನು ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಇತ್ಯರ್ಥವಾಗುವವರೆಗೆ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲಿ. ಇಲ್ಲವೇ ಗಡಿಭಾಗದಲ್ಲಿ ಮರಾಠಿ ಭಾಷಿಕರಿಗೆ ಮರಾಠಿ ಭಾಷೆಯಲ್ಲಿ ಸರ್ಕಾರಿ ದಾಖಲಾತಿ ನೀಡಲಿ. ಈ ಸಂಬಂಧ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಿ ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ. ಅಷ್ಟೇ ಅಲ್ಲದೇ ಮಹಾರಾಷ್ಟ್ರ ಸರ್ಕಾರ ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡಲು ಆಗ್ರಹಿಸಿದೆ.

ಮರಾಠಿ ಸಾಹಿತ್ಯ ಸಮ್ಮೇಳನದ ನಿರ್ಣಯಕ್ಕೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಮರಾಠಿ ಸಾಹಿತ್ಯ ಸಮ್ಮೇಳನ ಆಯೋಜಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿವೆ.

ಇದನ್ನೂ ಓದಿ | Border Dispute | ಮರಾಠಿಗರ ಪುಂಡಾಟ ಖಂಡಿಸಿ ವಿವಿಧೆಡೆ ಕರವೇ ಪ್ರತಿಭಟನೆ; ಗೋಕಾಕ್‌ನಲ್ಲಿ ಹೆದ್ದಾರಿ ತಡೆ

Exit mobile version