Site icon Vistara News

Border Dispute | ರಾಜ್ಯದ ನೀತಿ-ನಿಲುವನ್ನು ಸ್ಪಷ್ಟಪಡಿಸಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

cm basavaraja bommai ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಎಂಇಎಸ್‌ ಪುಂಡರಿಗೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ (Border Dispute) ಸಂಬಂಧಿಸಿದಂತೆ ಕರ್ನಾಟಕದ ನೀತಿಯನ್ನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಗುರುವಾರ (ಡಿ.೮) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ-ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದು, ಮಹಾರಾಷ್ಟ್ರ ಡಿಜಿಪಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇವೆ ಎಂದು ತಿಳಿಸಿದರು.

ಕರ್ನಾಟಕದಲ್ಲಿಯೂ ಕೂಡ ಸಂಪೂರ್ಣ ಬಂದೋಬಸ್ತ್‌ ಮಾಡಲಾಗಿದೆ. ನಾನೂ ಕೂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕನ್ನಡ ನಾಡಿನ ನಿಲುವನ್ನು ಸ್ಪಷ್ಟಪಡಿಸಿದ್ದೇನೆ. ಅವರೂ ಸಹ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಎರಡೂ ಕಡೆ ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಹೇಳಿದ್ದಾರೆ. ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿದೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆಯಾಗಕೂಡದು ಎಂದು ಆಗ್ರಹಿಸಲಾಗಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬೇರೆ ಯಾರೂ ಸಹ ಮಧ್ಯ ಪ್ರವೇಶ ಮಾಡಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ | Border Dispute | ಕರ್ನಾಟಕಕ್ಕೆ ಸಂಘರ್ಷವೇ ಬೇಕೆಂದರೆ ನಾವೂ ಸಿದ್ಧ: ರಾಜ್‌ ಠಾಕ್ರೆ ಸುದೀರ್ಘ ಪತ್ರ

Exit mobile version