Site icon Vistara News

SC ST Reservation: ಬೋವಿ, ಲಂಬಾಣಿ, ಕೊರಮ, ಕೊರಚ ಜನಾಂಗದವರೂ ಎಸ್‌ಸಿ ಪಟ್ಟಿಯಲ್ಲೇ ಇರುತ್ತಾರೆ: ಸಿಎಂ ಬೊಮ್ಮಾಯಿ

C M Basavaraj Bommai at India Today Interview.

ಚಿಕ್ಕಬಳ್ಳಾಪುರ: ಎಸ್‌ಸಿ, ಎಸ್‌ಟಿ ಮೀಸಲಾತಿಗೆ ಸಂಬಂಧಪಟ್ಟಂತೆ ಸದಾಶಿವ ಆಯೋಗದ ಶಿಫಾರಸು ವರದಿಯನ್ನು ನಾವು ಜಾರಿ ಮಾಡಿಲ್ಲ. ಬೋವಿ, ಲಂಬಾಣಿ, ಕೊರಮ, ಕೊರಚ ಎಲ್ಲ ಜನಾಂಗದವರೂ ಎಸ್‌ಸಿ ಪಟ್ಟಿಯಲ್ಲಿ ಇರುತ್ತಾರೆ. ಇವರನ್ನು ಪಟ್ಟಿಯಿಂದ ಕೈಬಿಡುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನೇ ಖುದ್ದು ಆದೇಶ ಮಾಡಿ ಕೇಂದ್ರಕ್ಕೆ ಕಳುಹಿಸಿದ್ದೇನೆ. ಹೀಗಾಗಿ ಯಾವುದೇ ರೀತಿಯಲ್ಲಿ ಗಲಾಟೆ ಮಾಡದೆ ಶಾಂತ ರೀತಿಯಲ್ಲಿ ವರ್ತಿಸಬೇಕು. ಏನೇ ವಿಷಯವಿದ್ದರೂ ಕುಳಿತು ಬಗೆಹರಿಸಿಕೊಳ್ಳೋಣ. ಈ ಬಗ್ಗೆ ಬಂಜಾರ ಸಮುದಾಯದ ಮುಖಂಡರಲ್ಲಿ ನಾನು ವಿನಂತಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸಕ್ಕೆ ಉದ್ರಿಕ್ತರ ಗುಂಪು ಕಲ್ಲು, ಚಪ್ಪಲಿ ತೂರಾಟ ನಡೆಸಿದ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಇರುವ ಮೂರು ಪರ್ಸೆಂಟ್ ಬದಲು ನಾಲ್ಕೂವರೆ ಪರ್ಸೆಂಟ್ ಕೊಟ್ಟಿದ್ದೇವೆ. ಸದಾಶಿವ ಆಯೋಗದ ಶಿಫಾರಸನ್ನು ಜಾರಿಗೆ ತರುವುದು ಬೇಡ ಎಂದು ನಾವು ಸಹ ತೀರ್ಮಾನ ಮಾಡಿದ್ದೇವೆ. ಬೇಡಿಕೆ ಪ್ರಕಾರ ಮಾಡಿದ್ದೇವೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಸಮುದಾಯದ ಹಿತರಕ್ಷಣೆ ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಎಸ್‌ಸಿ ಪಟ್ಟಿಗೆ ದಲಿತ ಕ್ರೈಸ್ತರು, ಎಸ್‌ಟಿ ಕೆಟಗರಿಗೆ ಬೋಯಾ, ವಾಲ್ಮೀಕಿ; ನಿರ್ಣಯ ಅಂಗೀಕರಿಸಿದ ಆಂಧ್ರ ವಿಧಾನಸಭೆ

ಬಂಜಾರ ಸಮುದಾಯದವರು ಪ್ರಚೋದನೆಗೆ ಒಳಗಾಗಬಾರದು

ಲಂಬಾಣಿ ತಾಂಡಾದ ಜನರಿಗೆ ಈಗಾಗಲೇ 2 ಲಕ್ಷದ ಹಕ್ಕು ಪತ್ರಗಳನ್ನು ಕೊಟ್ಟಾಗಿದೆ. ನಿಮ್ಮ ಪರವಾಗಿ ಇರುವ ಸರ್ಕಾರ ಬಿಜೆಪಿ ಎಂಬುದನ್ನು ಮರೆಯಬಾರದು. ತಾಂಡಾ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದವರು ಆಗಿನ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ‌ಅವರು. ಆ ಭಾಗದ ತಾಂಡಾಗಳಿಗೆ ಮೂಲಭೂತ ಸೌಲಭ್ಯಗಳನ್ನು ಕೊಟ್ಟವರು ಯಡಿಯೂರಪ್ಪ ಅವರಾಗಿದ್ದಾರೆ. ಹಿಂಸೆಗೆ ಅವಕಾಶ ಇಲ್ಲ. ಏನೇ ವಿಷಯ ಇದ್ದರೂ ಕುಳಿತು ಬಗೆಹರಿಸಿಕೊಳ್ಳೋಣ. ಈ ಗಲಾಟೆ ಹಿಂದೆ ಕಾಂಗ್ರೆಸ್ ಪ್ರಚೋದನೆ ಇದೆ. ಸ್ಥಳೀಯ ಕಾಂಗ್ರೆಸ್ ನಾಯಕರ ಪ್ರಚೋದನೆ ಇದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯ ನೀಡಿದ ಮೇಲೆ ಅವರಿಗೆ ಸಹಿಸಲು ಆಗದೇ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ. ಆದರೆ, ಬಂಜಾರ ಸಮುದಾಯದವರು ಪ್ರಚೋದನೆಗೆ ಒಳಗಾಗಬಾರದು. ಈ ಸಮುದಾಯದ ರಕ್ಷಣೆಯನ್ನು ಬಿಜೆಪಿ ಹಿಂದೆಯೂ ಮಾಡುತ್ತಿತ್ತು. ಮುಂದೆಯೂ ಮಾಡುತ್ತಿದೆ ಎಂದು ಸಿಎಂ ಭರವಸೆ ನೀಡಿದರು.

ಇದನ್ನೂ ಓದಿ: SC ST Reservation: ಶಿಕಾರಿಪುರದಲ್ಲಿ ಭುಗಿಲೆದ್ದ ಎಸ್‌ಸಿ-ಎಸ್‌ಟಿ ಮೀಸಲಾತಿ ಹೋರಾಟ: ಬಿಎಸ್‌ವೈ ಮನೆ ಮೇಲೆ ಕಲ್ಲು, ಚಪ್ಪಲಿ ತೂರಾಟ

ಬಿ.ಎಸ್.‌ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ವಿಡಿಯೊ

ಕಾಂಗ್ರೆಸ್‌ ಜನರ ಮಧ್ಯೆ ಜಗಳ ಹಚ್ಚುವ ಶಕುನಿ

ತಪ್ಪು ದಾರಿ ಪ್ರಯತ್ನಗಳಿಗೆ ಅವಕಾಶ ಮಾಡಿಕೊಡಬಾರದು. ಕಾಂಗ್ರೆಸ್‌ನವರ ಕುಕೃತ್ಯಕ್ಕೆ ಖಂಡನೆ ಮಾಡುತ್ತೇನೆ. ಸಮಾಜದಲ್ಲಿ ರಾಜಕೀಯ ಲಾಭಕ್ಕಾಗಿ ಹಿಂಸೆಗೆ ಇಳಿಸುವುದು ಶೋಭೆ ತರುವುದಿಲ್ಲ. ಕಾಂಗ್ರೆಸ್‌ ಕ್ಷಮೆಗೆ ಅರ್ಹವಲ್ಲ. ರಾಷ್ಟ್ರೀಯ ಪಕ್ಷ ಮಾಡುವಂತಹ ಕೆಲಸವೂ ಇದಲ್ಲ. ಇದು ಅತ್ಯಂತ ಸಣ್ಣ ಕೆಲಸವಾಗಿದೆ. ಈಗ ಕೆಪಿಸಿಸಿ ರಾಜ್ಯ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲಾ ಏನ್ ಹೇಳುತ್ತಾರೆ. ಜನರ ಮಧ್ಯೆ ಜಗಳ ಹಚ್ಚುವ ಶಕುನಿ ಯಾರು ಅಂದರೆ ಅದುವೇ ಕಾಂಗ್ರೆಸ್ ಎಂದು ಹೇಳಿದರು.

Exit mobile version