ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿದ್ದ ತಂದೆಯಿಂದ ತೀವ್ರ ಹಲ್ಲೆಗೊಳಗಾಗಿದ್ದ ಧಾರವಾಡ ಜಿಲ್ಲೆಯ ಸುಳ್ಳ ಗ್ರಾಮದ ಶ್ರೇಯಸ್ (6), ಸೃಷ್ಟಿ (4), ಶ್ರಾವಣಿ (8) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪಕ್ಕೀರಪ್ಪ ಮಾದರ ಎಂಬಾತ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ | Crime News : ಕುಡಿತದ ಮತ್ತಿನಲ್ಲಿ ಪತ್ನಿ ಮತ್ತು ಮಕ್ಕಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ನೇಣಿಗೆ ಶರಣಾದ!
ಕುಡಿತದ ಮತ್ತಿನಲ್ಲಿ ಪಕ್ಕೀರಪ್ಪ ಮಾದರ ಎಂಬಾತ ಹೆಂಡತಿ ಮುದುಕವ್ವ, ಮಕ್ಕಳಾದ ಶ್ರಾವಣಿ (8), ಶ್ರೇಯಸ್ (6), ಸೃಷ್ಟಿ (4) ಎಂಬುವವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶ್ರೇಯಸ್, ಸೃಷ್ಟಿ ಹಾಗೂ ಶ್ರಾವಣಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಪಕ್ಕೀರಪ್ಪ ಮಾದರ ಪತ್ನಿ ಮುದುಕವ್ವಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇವರ ಸ್ಥಿತಿಯೂ ಗಂಭೀರವಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.