ಬೆಂಗಳೂರು: ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ, ಅನ್ನ ಭಾಗ್ಯ ಸೇರಿ ವಿವಿಧ ಸರ್ಕಾರಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಹಣ ಜಮೆ ಆಗುವಲ್ಲಿ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್‌ನಲ್ಲಿ (Ration Card) ಫಲಾನುಭವಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮಾಡಲು ಅ.5ರಿಂದ ಅವಕಾಶ ನೀಡಲಾಗಿದೆ.
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ಬಿಪಿಎಲ್ ಕಾರ್ಡ್ ತಿದ್ದುಪಡಿ ಮಾಡಿಸಬಹುದಾಗಿದೆ. ತಿದ್ದುಪಡಿಗೆ ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ವೇಳಾಪಟ್ಟಿ ನಿಗದಿಪಡಿಸಲಾಗಿದೆ.
ಇದನ್ನೂ ಓದಿ | LPG Price Cut: ಮೋದಿ ದಸರಾ ಕೊಡುಗೆ; ಉಜ್ವಲ ಫಲಾನುಭವಿಗಳ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿ 300 ರೂ.ಗೆ ಏರಿಕೆ!
ಮೂರು ಹಂತಗಳಲ್ಲಿ ಅವಕಾಶ
ಮೊದಲ ಹಂತ: ಅ.5 ರಿಂದ 7ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು
ಎರಡನೇ ಹಂತ: ಅ.8 ರಿಂದ ಅ.10 ರವರೆಗೆ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿ ಒಟ್ಟು 15 ಜಿಲ್ಲೆಗಳಲ್ಲಿ ಅವಕಾಶ.
3ನೇ ಹಂತ: ಅ.11 ರಿಂದ ಅ.13ರವರೆಗೆ ಕಲಬುರಗಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅವಕಾಶ.
ಇದನ್ನೂ ಓದಿ | KPSC Recruitment: 230 ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
ಕಳೆದ ತಿಂಗಳು ಒಂದೊಂದು ಜಿಲ್ಲೆಯಲ್ಲೂ ಸಮಯ ನಿಗದಿ ಮಾಡಲಾಗಿದೆ. ಈ ತಿಂಗಳು ಎಲ್ಲಾ ಜಿಲ್ಲೆಗಳಲ್ಲೂ ಮೂರು ದಿನ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಏನೇನು ತಿದ್ದುಪಡಿ?
- ಫಲಾನುಭವಿ ಹೆಸರು ಬದಲಾವಣೆ
- ಪಡಿತರ ಕೇಂದ್ರ ಬದಲಾವಣೆ
- ಕಾರ್ಡ್ ಸದಸ್ಯರ ಹೆಸರು ರದ್ದು, ಸೇರ್ಪಡೆ
- ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ
- ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ