Brahmin CM: ಗೋಕರ್ಣದಲ್ಲಿ ಎಚ್‌ಡಿಕೆಗೆ ಅರ್ಚಕರಿಂದ ತರಾಟೆ; ರಾಮಕೃಷ್ಣ ಹೆಗಡೆಯನ್ನು ಸಿಎಂ ಮಾಡಿದ್ದೇ ನಾವು ಎಂದ ಮಾಜಿ ಸಿಎಂ Vistara News

ಉತ್ತರ ಕನ್ನಡ

Brahmin CM: ಗೋಕರ್ಣದಲ್ಲಿ ಎಚ್‌ಡಿಕೆಗೆ ಅರ್ಚಕರಿಂದ ತರಾಟೆ; ರಾಮಕೃಷ್ಣ ಹೆಗಡೆಯನ್ನು ಸಿಎಂ ಮಾಡಿದ್ದೇ ನಾವು ಎಂದ ಮಾಜಿ ಸಿಎಂ

Brahmin CM: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬ್ರಾಹಣ ಮುಖ್ಯಮಂತ್ರಿ ಹೇಳಿಕೆಯು ಸಾಕಷ್ಟು ವಿವಾದವನ್ನು ಹುಟ್ಟುಹಾಕಿದೆ. ಈ ನಡುವೆ ಗೋಕರ್ಣಕ್ಕೆ ಭೇಟಿ ನೀಡಿದ್ದ ಅವರನ್ನು ದೇವಸ್ಥಾನದ ಅರ್ಚಕರು, ಹೇಳಿಕೆ ಬಗ್ಗೆ ಸ್ಪಷ್ಟೀಕರಣವನ್ನು ನೀಡುವಂತೆ ಕೋರಿಕೊಂಡಿದ್ದಾರೆ.

VISTARANEWS.COM


on

Brahmin CM statement by Hd kumaraswamy visit gokarna temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಬಿಜೆಪಿಯವರಿಗೆ ಮತ ನೀಡಿದರೆ ಬ್ರಾಹ್ಮಣರನ್ನು ಮುಖ್ಯಮಂತ್ರಿಯನ್ನಾಗಿ (Brahmin CM) ಮಾಡುತ್ತಾರೆ. ಗಾಂಧೀಜಿಯನ್ನು ಕೊಂದ ಗೋಡ್ಸೆ ಸಹ ಬ್ರಾಹ್ಮಣ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿಕೆಗೆ ಎಲ್ಲ ಕಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ವೇಳೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ (Gokarna Mahabaleshwar Temple) ಮಾಜಿ ಸಿಎಂ ಎಚ್‌ಡಿಕೆ ಭೇಟಿ ನೀಡಿದ ವೇಳೆ ಅವರನ್ನು ಅರ್ಚಕರೊಬ್ಬರು ತರಾಟೆಗೆ ತೆಗೆದುಕೊಂಡಿದ್ದು, ಬ್ರಾಹ್ಮಣ ವಿರೋಧಿ ಹೇಳಿಕೆಯಿಂದ ಮನಸ್ಸಿಗೆ ನೋವಾಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡಿರುವ ಎಚ್‌ಡಿಕೆ, ನಾನು ಬ್ರಾಹ್ಮಣ ವಿರೋಧಿ ಅಲ್ಲ. ನಾನು ಬ್ರಾಹ್ಮಣರ ಜತೆಯಲ್ಲಿಯೇ ಬೆಳೆದಿದ್ದೇನೆ. ಬ್ರಾಹ್ಮಣರಿಗೆ ಗೌರವ ಕೊಡುವ ಸಂಸ್ಕೃತಿ ನಮ್ಮದು. ನಾನು ಹೇಳಿದ್ದು ಪೇಶ್ವೆ ಡಿಎನ್‌ಎ ಹೊಂದಿರುವವರ ಬಗ್ಗೆಯಷ್ಟೇ. ಬ್ರಾಹ್ಮಣ ಸಮುದಾಯದವರ ಮೇಲೆ ಅಪಾರ ಗೌರವವಿದೆ. ರಾಮಕೃಷ್ಣ ಹೆಗಡೆ ಅವರನ್ನು ಸಿಎಂ ಮಾಡಿದ್ದೇ ದೇವೇಗೌಡ ಎಂದು ಹೇಳಿದರು.

ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬುಧವಾರ (ಫೆ. ೮) ಭೇಟಿ ನೀಡಿದ್ದರು. ಈ ವೇಳೆ ದೇವಸ್ಥಾನದ ಅರ್ಚಕರೊಬ್ಬರು ಕುಮಾರಸ್ವಾಮಿಯನ್ನು ತಡೆದು, “ನಿಮ್ಮ ಹೇಳಿಕೆಯಿಂದ ನಮಗೆ ಬೇಸರವಾಗಿದೆ. ನಿಮ್ಮ ಕುಟುಂಬದ ಮೇಲೆ ನಮಗೆ ಬಹಳವೇ ಅಭಿಮಾನವಿದೆ. ನಿಮ್ಮ ಹೇಳಿಕೆ ಬಗ್ಗೆ ಗೋಕರ್ಣದಲ್ಲಿಯೇ ಸ್ಪಷ್ಟೀಕರ‌ಣ ನೀಡಿ ಎಂದು ಕೇಳಿದರು.

Brahmin CM statement by Hd kumaraswamy visit gokarna temple

ಇದಕ್ಕೆ ಸ್ಪಷ್ಟೀಕರಣ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟೀಕರಣ ನೀಡಿದರು.

ಇದನ್ನೂ ಓದಿ: RBI MPC meet 2023: ರೆಪೋ ದರ 6.5%ಕ್ಕೆ ಏರಿಕೆ, ಮತ್ತಷ್ಟು ಏರಲಿದೆ ಸಾಲದ ಇಎಂಐ

ರಾಮಕೃಷ್ಣ ಹೆಗಡೆಯನ್ನು ಸಿಎಂ ಮಾಡಿದ್ದೇ ದೇವೆಗೌಡ

ನಾವು ಬ್ರಾಹ್ಮಣ ವಿರೋಧಿಯಲ್ಲ. ರಾಮಕೃಷ್ಣ ಹೆಗಡೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇ ದೇವೆಗೌಡರು. ನಳಿನ್ ಕಟೀಲ್‌ಗೆ ರಾಜಕೀಯ ಎಲ್ಲಿ ಗೊತ್ತಿದೆ? ಕಟೀಲ್ ಅನ್ನುವ ಹೆಸರು ಬದಲು ಪಿಟೀಲು ಅಂತ ಇಟ್ಟುಕೊಳ್ಳಲಿ. ನಾವು ಎಷ್ಟು ಸ್ಥಾನ ಗೆಲ್ಲುತ್ತೇವೆ ಎನ್ನುವುದನ್ನು ಜನರು ನಿರ್ಧರಿಸುತ್ತಾರೆ. ಬಿಜೆಪಿ ನಾಯಕರು ನಿರ್ಧರಿಸುವುದಲ್ಲ. ನಾವು ಹಿಂದು ಧರ್ಮ ರಕ್ಷಣೆ ಮಾಡುತ್ತೇವೆ. ಹಿಂದು ಧರ್ಮದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಏನು ಮಾಡಿದ್ದಾರೆ ಎನ್ನುವುದು ತಿಳಿದಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಬ್ರಾಹ್ಮಣ ಸಮುದಾಯಕ್ಕೆ ನಾನು ಸಿಎಂ ಆದಾಗ ಬೆಂಗಳೂರಿನಲ್ಲಿ ಸಮುದಾಯ ಭವನಕ್ಕೆ ಜಾಗ ಕೊಟ್ಟಿದ್ದೇನೆ. ಬ್ರಾಹ್ಮಣ ಪ್ರಾಧಿಕಾರ ರಚನೆ ಮಾಡಿದ್ದೆ. ಬ್ರಾಹ್ಮಣ ಸಮುದಾಯಕ್ಕೆ ಬಿಜೆಪಿ ಏನು ಮಾಡಿದೆ ಹೇಳಿಕೊಳ್ಳಲಿ. ನಮಗೆ ಸಾವರ್ಕರ್‌ ಸಂಸ್ಕೃತಿ‌‌ ಬೇಡ. “ಸರ್ವೇ ಜನಃ ಸುಖಿನೋಭವ” ಅನ್ನುವ ಬ್ರಾಹ್ಮಣರು ನಮಗೆ ಬೇಕು ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ರಥಯಾತ್ರೆ ಮಾಡಲಾಗುವುದು. ಜನಗಳ‌ ಉತ್ತೇಜನ ಹಾಗೂ ಪ್ರೋತ್ಸಾಹಗಳು ಈ ಯಾತ್ರೆಗೆ ಇದೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ. ಕೆಲವರು ಪಕ್ಷ ಬಿಟ್ಟು ಹೋಗುತ್ತಾರೆ. ಅದು ಚುನಾವಣಾ ಸಂದರ್ಭದಲ್ಲಿ ಕಾಮನ್ ಆಗಿರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡರಿಂದ ಮೂರು ಸ್ಥಾನವನ್ನು ಜೆಡಿಎಸ್‌ ಗೆಲ್ಲಲಿದೆ ಎಂದು ಮಾಜಿ ಸಿಎಂ ಎಚ್‌ಡಿಕೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ : JDS Politics: ಎಚ್‌.ಡಿ. ಕುಮಾರಸ್ವಾಮಿ ತಂತ್ರವನ್ನೇ ಬಳಸಿ ಹಾಸನ ಟಿಕೆಟ್‌ ಕೇಳಿದ ಎಚ್‌.ಡಿ. ರೇವಣ್ಣ: ಬಿಗ್‌ ಬ್ರದರ್‌ ಹೊಸ ವರಸೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

karnataka Weather Forecast : ಎರಡು ದಿನಗಳ ಕಾಲ ಬ್ರೇಕ್‌ ಕೊಟ್ಟಿದ್ದ ಮಳೆರಾಯ (Rain News) ಮತ್ತೆ ಸಕ್ರಿಯಗೊಂಡಿದ್ದಾನೆ. ದಕ್ಷಿಣ ಒಳನಾಡಲ್ಲಿ ಭಾರಿ ಮಳೆ ಸೂಚನೆ ಇದ್ದು, ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

VISTARANEWS.COM


on

By

Heavy Rain warning In karnataka
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಡಿ.8ರ ಶುಕ್ರವಾರ ಸಂಜೆಯಿಂದಲೇ ಹಲವೆಡೆ ಮಳೆಯಾಗುವ ಸೂಚನೆ (Karnataka Weather Forecast) ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ (Dry weather) ಮೇಲುಗೈ ಸಾಧಿಸಲಿದೆ.

ರಾಮನಗರ-ಮಂಡ್ಯದಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಉಳಿದಂತೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಮೋಡ ಕವಿದ ವಾತಾವರಣವಿರಲಿದೆ.

ಇನ್ನು ಉತ್ತರ ಒಳನಾಡಿನ ಕೊಪ್ಪಳ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ. ಜತೆಗೆ ಮಲೆನಾಡಿನ ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ ಇದ್ದು, ಗುಡುಗು ಸಾಥ್‌ ನೀಡಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 30 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉತ್ತರ ಕನ್ನಡ

Uttara Kannada News: ಕಿರವತ್ತಿ ಭಾಗದ 100ಕ್ಕೂ ಹೆಚ್ಚು ಜನ ಕಾಂಗ್ರೆಸ್‌ಗೆ ಸೇರ್ಪಡೆ

Uttara Kannada News: ಯಲ್ಲಾಪುರ ಪಟ್ಟಣದ ಕಲ್ಮಠದಲ್ಲಿ (ಸೀತಾಪುರ) ಗುರುವಾರ ಬ್ಲಾಕ್ ಕಾಂಗ್ರೆಸ್‌ನ ನೂತನ ಕಾರ್ಯಾಲಯದ ಉದ್ಘಾಟನೆ ಹಾಗೂ ಕಿರವತ್ತಿ ಭಾಗದ ನೂರಕ್ಕೂ ಹೆಚ್ಚಿನ ಜನರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.

VISTARANEWS.COM


on

More than a hundred people from Kiravatti have joined the Congress party
ಯಲ್ಲಾಪುರ ಪಟ್ಟಣದ ಕಲ್ಮಠದಲ್ಲಿ (ಸೀತಾಪುರ) ಗುರುವಾರ ಬ್ಲಾಕ್ ಕಾಂಗ್ರೆಸ್‌ನ ನೂತನ ಕಾರ್ಯಾಲಯದ ಉದ್ಘಾಟನೆ ಹಾಗೂ ಕಿರವತ್ತಿ ಭಾಗದ 100ಕ್ಕೂ ಹೆಚ್ಚಿನ ಜನರು ಕಾಂಗ್ರೆಸ್‌ಗೆ ಸೇರ್ಪಡೆಯಾದರು.
Koo

ಯಲ್ಲಾಪುರ: ಪಟ್ಟಣದ ಕಲ್ಮಠದಲ್ಲಿ (ಸೀತಾಪುರ) ಬ್ಲಾಕ್ ಕಾಂಗ್ರೆಸ್‌ನ ನೂತನ ಕಾರ್ಯಾಲಯದ ಉದ್ಘಾಟನೆ ಹಾಗೂ ಕಿರವತ್ತಿ (Kiravatti) ಭಾಗದ ನೂರಕ್ಕೂ ಹೆಚ್ಚಿನ ಜನರ ಪಕ್ಷ ಸೇರ್ಪಡೆ ಕಾರ್ಯಕ್ರಮವು ಗುರುವಾರ ನಡೆಯಿತು.

ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ವಿ.ಎಸ್. ಪಾಟೀಲ್, ಗ್ರಾಮದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿದಾಗ, ಕ್ಷೇತ್ರದಲ್ಲಿ ಒಬ್ಬ ನಾಯಕ ಹಾಗೂ ಪಕ್ಷವನ್ನು ಬಲಪಡಿಸಲು ಸಾಧ್ಯ. ಇಂದಿನ ಕಾಲಘಟ್ಟದಲ್ಲಿ ಅಧಿಕಾರ ವಿಕೇಂದ್ರಿಕರಣಗೊಳಿಸುವ ಅವಶ್ಯಕತೆ ಇದೆ. ಗ್ರಾಮ ಮಟ್ಟದ ಸದಸ್ಯನಿಗೂ ಸರಿಯಾದ ನಿರ್ಣಯ ಕೈಗೊಳ್ಳುವ ಹಕ್ಕನ್ನು ನೀಡಬೇಕಿದೆ.

ಚುನಾವಣೆಯ ಸಂದರ್ಭದಲ್ಲಿ ಪಕ್ಷ ಸೇರ್ಪಡೆಗೊಳ್ಳುವುದು ಸಹಜ. ಆದರೆ ಯಾವುದೇ ಕಾರಣವಿಲ್ಲದೆ, ಕೇವಲ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ಇಂದು ನೂರಕ್ಕೂ ಹೆಚ್ಚು ಕಾರ್ಯಕರ್ತರು ಸೇರ್ಪಡೆಗೊಂಡಿರುವುದು ಸಂತಸದ ಸಂಗತಿ. ಶಾಸಕರು ಯಾರೇ ಆಗಿರಲಿ, ಸರ್ಕಾರ ನಮ್ಮದಿದೆ. ಹೀಗಾಗಿ ಬಡವರ, ಅಗತ್ಯ ಉಳ್ಳವರ ಸಹಾಯ ಮಾಡುವ ಮೂಲಕ ಪಕ್ಷದ ಬಲವರ್ಧನೆ ಮಾಡೋಣ. ನಾವು ಪಕ್ಷದಲ್ಲಿ ಬೇಧಭಾವವನ್ನು ಮರೆತು, ಎಲ್ಲರೂ ಸೇರಿ ಕೆಲಸ ಮಾಡಿದಾಗ ವಿರೋಧಿಗಳನ್ನು ಸುಲಭವಾಗಿ ಸೋಲಿಸಬಹುದು. ರಾಜಕೀಯಕ್ಕೆ ದುಡ್ಡು ಮುಖ್ಯವಲ್ಲ, ಜನಸೇವೆಯೇ ಮುಖ್ಯ ಎಂಬುದನ್ನು ನಾವೆಲ್ಲ ಸಮಾಜಕ್ಕೆ ತೋರೋಣ ಎಂದರು.

ಇದನ್ನೂ ಓದಿ: ನಾಳೆಯಿಂದ ಅಂಡರ್​-19 ಏಷ್ಯಾಕಪ್; ಭಾರತ-ಪಾಕ್​ ಮುಖಾಮುಖಿ ಯಾವಾಗ?

ಕಿರವತ್ತಿ ಭಾಗದ ಪ್ರಮುಖ ವಿಲ್ಸನ್ ಫರ್ನಾಂಡಿಸ್‌ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು ಮೆಚ್ಚಿ ಪಕ್ಷ ಸೇರ್ಪಡೆಗೊಂಡಿದ್ದೇವೆ. ಇದು ಕೇವಲ ಟ್ರೈಲರ್ ಆಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಕ್ಷ ಸೇರಲಿದ್ಧಾರೆ. ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಶಕ್ತಿ ತುಂಬುವ ಪ್ರಯತ್ನ ಮಾಡುತ್ತೇವೆ ಎಂದರು.

ತಾಲೂಕಾಧ್ಯಕ್ಷ ಎನ್‌.ಕೆ. ಭಟ್, ಪ್ರಮುಖರಾದ ರಾಘವೇಂದ್ರ ಭಟ್, ಟಿ.ಸಿ. ಗಾಂವ್ಕರ್, ಉಲ್ಲಾಸ್ ಶ್ಯಾನಭಾಗ್, ನರಸಿಂಹ ನಾಯ್ಕ, ನರ್ಮದಾ ನಾಯ್ಕ, ಪೂಜಾ ನೇತ್ರೇಕರ್, ಬಾಬಾಜಾನ್ ಎಂ. ಶೇಖ್, ನೂರ್ ಮಹಮ್ಮದ್, ಮತ್ತಿತರರು ಇದ್ದರು.

ಇದನ್ನೂ ಓದಿ: Job News: ಕೇಂದ್ರ ಸರ್ಕಾರ, ರಕ್ಷಣಾ ಇಲಾಖೆಗಳಲ್ಲಿ ಶೇ.14ರಷ್ಟು ಉದ್ಯೋಗ ಹೆಚ್ಚಳ

ಈ ಸಂದರ್ಭದಲ್ಲಿ ಚೆನ್ನಪ್ಪ ಹಾಗೂ ವಿಲ್ಸನ್ ಫರ್ನಾಂಡಿಸ್ ನೇತೃತ್ವದಲ್ಲಿ ಕಿರವತ್ತಿ ಭಾಗದ ನೂರಕ್ಕೂ ಹೆಚ್ಚು ಜನರು ಕಾಂಗ್ರೆಸ್ ಸೇರ್ಪಡೆಗೊಂಡರು. ಅನಿಲ್ ಮರಾಠೆ ಸ್ವಾಗತಿಸಿದರು, ವಿ.ಎಸ್. ಭಟ್ ಪ್ರಾಸ್ತಾವಿಕ ಮಾತನಾಡಿದರು. ರವಿ ನಾಯ್ಕ ಎಂಜಿನಿಯರ್‌ ವಂದಿಸಿದರು.

Continue Reading

ಉತ್ತರ ಕನ್ನಡ

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಒತ್ತಾಯ

Uttara Kannada News: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ ನಿರ್ಮಿಸುವ ಕುರಿತು ಒತ್ತಾಯಿಸಿ, ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ವತಿಯಿಂದ ಡಿ.11 ರಂದು ಮೆರವಣಿಗೆ ಮೂಲಕ ತಹಸೀಲ್ದಾರ್‌ ಕಛೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ತಿಳಿಸಿದ್ದಾರೆ.

VISTARANEWS.COM


on

Pressmeet for Demand for construction of bypass road in Yallapur
ಯಲ್ಲಾಪುರ ಪಟ್ಟಣದಲ್ಲಿ ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Koo

ಯಲ್ಲಾಪುರ: ಯಲ್ಲಾಪುರ ಪಟ್ಟಣದಲ್ಲಿ ಬೈಪಾಸ್‌ ರಸ್ತೆ (Bypass Road) ನಿರ್ಮಿಸುವ ಕುರಿತು ಒತ್ತಾಯಿಸಿ, ಡಿ.11 ರಂದು ಮೆರವಣಿಗೆ ಮೂಲಕ ತಹಸೀಲ್ದಾರ್‌ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಯಲ್ಲಾಪುರ ನಗರ ಬೈಪಾಸ್‌ ರಸ್ತೆ ಹೋರಾಟ ಸಮಿತಿ ವತಿಯಿಂದ ತೀರ್ಮಾನಿಸಲಾಗಿದೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ಹಾಗೂ ಹೋರಾಟ ಸಮಿತಿ ಸಂಚಾಲಕ ರಾಮು ನಾಯ್ಕ ತಿಳಿಸಿದರು.

ಪಟ್ಟಣದ ಫಾರೆಸ್ಟ್‌ ಐ.ಬಿ.ಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿಯು ಪಟ್ಟಣದ ಮಧ್ಯಭಾಗದಲ್ಲಿ ಹಾದು ಹೋಗಿದ್ದು, ಪ್ರತಿನಿತ್ಯ ಸಂಚರಿಸುವ ಸಾವಿರಾರು ವಾಹನಗಳಿಂದಾಗಿ ಸಾರ್ವಜನಿಕರ, ವಿದ್ಯಾರ್ಥಿಗಳ ಹಾಗೂ ಸ್ಥಳೀಯ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಪಟ್ಟಣದಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಈಗಾಗಲೇ ಅಂಕೋಲಾ ತಾಲೂಕಿನ ಬಾಳೆಗುಳಿವರೆಗೆ ಚತುಷ್ಪಥ ರಸ್ತೆ ಆಗಿದ್ದು, ಮುಂದುವರೆದು ಯಲ್ಲಾಪುರದ ಮೂಲಕ ಈ ರಸ್ತೆ ಹಾದು ಹೋದಲ್ಲಿ, ಯಲ್ಲಾಪುರ ನಗರದಲ್ಲಿ ನಡೆದಾಡುವುದು ಸಹ ಕಷ್ಟ ಸಾಧ್ಯವಾಗಲಿದೆ.

ಇದನ್ನೂ ಓದಿ: T20 World Cup 2024:​ ನೂತನ ಲೋಗೋ ವಿನ್ಯಾಸಕ್ಕೆ ಫಿದಾ ಆದ ಕ್ರಿಕೆಟ್​ ಅಭಿಮಾನಿಗಳು

ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮುಂಚಿತವಾಗಿಯೇ ಬೈಪಾಸ್ ನಿರ್ಮಾಣಕ್ಕೆ ಸರ್ಕಾರ ಆದೇಶಿಸಬೇಕು. ಈ ಪ್ರಯುಕ್ತ ಡಿ. 11 ರಂದು ಬೆಳಗ್ಗೆ 10 ಗಂಟೆಗೆ ವೈಟಿಎಸ್‌ಎಸ್‌ ಮೈದಾನದಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಪಾಲಕರು, ಅಂಗಡಿಕಾರರೆಲ್ಲ ಸೇರಿ ಬೃಹತ್ ಮೆರವಣಿಗೆಯಲ್ಲಿ ಸಾಗಿ ತಹಶೀಲ್ದಾರರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಸಾರ್ವಜನಿಕರು ಸಹ ತಮ್ಮ ಮಕ್ಕಳ ಸುರಕ್ಷತೆಗಾಗಿ, ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಅಗತ್ಯತೆಯ ಕುರಿತು ಮನದಟ್ಟು ಮಾಡಲು ಪಾಲ್ಗೊಳ್ಳುವಂತೆ ಕೋರಿದರು.

ಸಮಿತಿಯ ಪ್ರಮುಖರಾದ ರವಿ ಶ್ಯಾನಭಾಗ್ ಮಾತನಾಡಿ, ಹೆದ್ದಾರಿಯ ಅಕ್ಕ ಪಕ್ಕದ ಅಂಗಡಿಕಾರರು ಹೆಚ್ಚಿನದಾಗಿ ಈ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಅವಶ್ಯಕತೆ ಇದೆ. ಬೈಪಾಸ್ ನಿರ್ಮಾಣವಾಗದೆ ಹೆದ್ದಾರಿ ಅಗಲೀಕರಣವಾದಲ್ಲಿ, ಯಲ್ಲಾಪುರದ ಬಹುತೇಕ ಅಂಗಡಿಗಳು ನೆಲೆ ಕಳೆದುಕೊಳ್ಳಲಿದೆ. ಹೀಗಾಗಿ ಮುಂದಿನ ಭವಿಷ್ಯಕ್ಕಾಗಿ ಪಾಲ್ಗೊಳ್ಳಬೇಕು. ಬೈಪಾಸ್ ನಿರ್ಮಾಣಕ್ಕೆ ಸಮಯ ಆಗಲಿದ್ದು, ಅಲ್ಲಿಯವರೆಗೆ ಟ್ರಾಫಿಕ್ ಪೊಲೀಸರ ತಂಡ ಪ್ರಾರಂಭಿಸಿ, ಟ್ರಾಫಿಕ್ ನಿರ್ವಹಣೆಯ ಕಾರ್ಯ ಮಾಡಬೇಕಿದೆ ಎಂದರು.

ಇದನ್ನೂ ಓದಿ: The Nandi Awards: ನಂದಿ ಫಿಲ್ಮ್‌ ಅವಾರ್ಡ್; ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ,‌ ಎ.ಎ. ಶೇಖ್‌, ಮಹ್ಮದ್‌ ಗೌಸ್‌, ವಕೀಲೆ ಬೇಬಿ ಅಮಿನಾ, ಸುರೇಶ್ ಬೊರಕರ, ಪ್ರಭಾಕರ ನಾಯ್ಕ, ಮಾಧವ ನಾಯಕ, ದಾಸಿಂತ್ ಫರ್ನಾಂಡಿಸ್, ಉಲ್ಲಾಸ್ ಮಹಾಲೆ, ವೇಣುಗೋಪಾಲ ಮದ್ಗುಣಿ, ಜಗನ್ನಾಥ ರೇವಣಕರ ಇದ್ದರು.

Continue Reading

ಆರೋಗ್ಯ

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; ಉ.ಕ ಜಿಲ್ಲಾ ಶಾಸಕರಲ್ಲೇ ಒಡಕು! ತಮ್ಮ ತಾಲೂಕಿಗೇ ಬೇಕೆಂದು ಸದನದಲ್ಲಿ ಕಿತ್ತಾಟ

Super Speciality Hospital : ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಾಸಕರಲ್ಲೇ ಒಡಕು ಮೂಡಿದೆ. ನನ್ನ ತಾಲೂಕಿಗೆ ಕೊಡಿ, ನನ್ನ ತಾಲೂಕಿಗೆ ಕೊಡಿ ಎಂದು ವಿಧಾನ ಮಂಡಲ ಅಧಿವೇಶನದಲ್ಲಿ ಬೇಡಿಕೆ ಇಟ್ಟಿದ್ದಾರೆ. ಕಾರವಾರ ಶಾಸಕ ಸತೀಶ್ ಸೈಲ್‌, ಕುಮಟಾ ಶಾಸಕ ದಿನಕರ್ ಶೆಟ್ಟಿ, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ತಮ್ಮ ತಮ್ಮ ತಾಲೂಕಿಗೆ ಬೇಕು ಎಂದು ಕೇಳಿದ್ದಾರೆ.

VISTARANEWS.COM


on

super speciality hospital in Uttara Kannada District
Koo

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ (Uttara Kannada District) ದಶಕಗಳ ಬೇಡಿಕೆಯಾಗಿದ್ದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ಕನಸು ಸದ್ಯಕ್ಕೆ ಈಡೇರುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಕೊನೇ ಬಜೆಟ್‌ನಲ್ಲಿ ಕುಮಟಾದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು. ಇದಕ್ಕಾಗಿ ಕುಮಟಾದಲ್ಲಿ ಜಾಗವನ್ನೂ ಗುರುತಿಸಿ ಓಕೆ ಮಾಡಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕಳೆದ ಬಜೆಟ್‌ನಲ್ಲಿ (Karnataka budget 2023) ಅನುದಾನ ನೀಡಿರಲಿಲ್ಲ. ಈಗ ಜಿಲ್ಲೆಯ ಶಾಸಕರಲ್ಲೇ ಒಡಕು ಮೂಡಿದೆ. ನನ್ನ ತಾಲೂಕಿಗೆ ಕೊಡಿ, ನನ್ನ ತಾಲೂಕಿಗೆ ಕೊಡಿ ಎಂದು ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ಬೇಡಿಕೆ ಇಟ್ಟಿದ್ದಾರೆ. ಕಾರವಾರ ಶಾಸಕ ಸತೀಶ್ ಸೈಲ್‌, ಕುಮಟಾ ಶಾಸಕ ದಿನಕರ್ ಶೆಟ್ಟಿ, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ತಮ್ಮ ತಮ್ಮ ತಾಲೂಕಿಗೆ ಬೇಕು ಎಂದು ಕೇಳಿದ್ದಾರೆ.

ವಿಧಾನ ಪರಿಷತ್‌ ಕಲಾಪ ವೇಳೆ ಕಾರವಾರ ಶಾಸಕ ಸತೀಶ್‌ ಸೈಲ್‌ ಮಾತನಾಡಿ, ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೇ ಬೇಕು. ಹೀಗಾಗಿ ಸದ್ಯಕ್ಕೆ ಕಾರವಾರದಲ್ಲಿ ಮಾಡಿಕೊಡಿ. ನಂತರ ಉತ್ತರ ಕನ್ನಡದ ಬೇರೆ ಪ್ರದೇಶದಲ್ಲಿ ನಿರ್ಮಾಣ ಮಾಡಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Road Accident : ಆಯತಪ್ಪಿ ಬಿದ್ದ ಸವಾರನ ಮೇಲೆ ಹರಿದ ಲಾರಿ! ತುಂಡಾದ ದೇಹ

ಇದರಿಂದ ಅಸಮಾಧಾನಗೊಂಡ ಕುಮಟಾ ಶಾಸಕ ದಿನಕರ್ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಬೇಕು. ಈಗಾಗಲೇ ಈ ಬಗ್ಗೆ ಒಮ್ಮೆ ನಿರ್ಣಯ ಕೂಡಾ ಆಗಿದೆ. ಅಲ್ಲದೆ, ಸ್ಥಳವನ್ನೂ ಗುರುತಿಸಲಾಗಿದ್ದು, ಎಲ್ಲರೂ ಆಗ ಒಪ್ಪಿಗೆ ನೀಡಿದ್ದರು. ಹೀಗಾಗಿ ಕುಮಟಾದಲ್ಲಿಯೇ ಆಗಬೇಕು. ಇದು ಜಿಲ್ಲೆಯ ಹೃದಯ ಸ್ಥಳ ಆಗಿರುವುದರಿಂದ ಜಿಲ್ಲೆಯ ಎಲ್ಲರಿಗೂ ಇಲ್ಲಿಗೆ ಬರಲು ಅನುಕೂಲ ಆಗಲಿದೆ ಎಂದು ಆಗ್ರಹಿಸಿದರು.

ಆಗ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಮಾತನಾಡಿ, ಶಿರಸಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಿ ಎಂದು ಆಗ್ರಹಿಸಿದ್ದಾರೆ. ಅದಕ್ಕೆ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಅವರು, ಘಟ್ಟದ ಮೇಲೊಂದು, ಘಟ್ಟದ ಕೆಳಗೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಒತ್ತಾಯ ಮಾಡಿದರು. ಹೀಗಾಗಿ ತಮ್ಮ ತಮ್ಮ ಕ್ಷೇತ್ರಗಳಲ್ಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಡಿಮ್ಯಾಂಡ್‌ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಸಕರಿಂದಲೂ ಕೇಳಿಬಂತು.

ಇದಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಉತ್ತರ ನೀಡಿ, ಬಹಳ ದಿನಗಳಿಂದ ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆ ಇದೆ. ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ಮಾಡಬೇಕು ಎಂಬ ಪ್ರಯತ್ನ ನಡೆದಿದೆ. ಆದರೆ, ಕಾರವಾರದಲ್ಲಿ ಅಗತ್ಯ ವೈದ್ಯ ಹುದ್ದೆಗಳಿಗೆ ಎರಡು ಸಲ ಕಾಲ್ ಫಾರ್ ಮಾಡಿದರೂ ಯಾರೂ ಅರ್ಜಿ ಹಾಕಿಲ್ಲ. ಮತ್ತೊಮ್ಮೆ ವೈದ್ಯ ಹುದ್ದೆಗಳಿಗೆ ಆಹ್ವಾನ ನೀಡಲಾಗುತ್ತದೆ. ಈ ಕೆಲಸವಾದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸುಲಭವಾಗಲಿದೆ ಎಂದು ಹೇಳಿದರು.

ಉ.ಕ. ಜನರಿಂದ ನಡೆದಿದ್ದ ಆಂದೋಲನ

ಉತ್ತರ ಕನ್ನಡ ಜಿಲ್ಲೆಯು ಭೌಗೋಳಿಕವಾಗಿ ಬಹಳ ದೊಡ್ಡದಿರುವ ಕಾರಣ, ಅಪಘಾತವಾದರೆ ಇಲ್ಲವೇ ತುರ್ತು ಚಿಕಿತ್ಸೆ ಬೇಕಿದ್ದರೆ ಪಕ್ಕದ ಮಂಗಳೂರು, ಗೋವಾ ಇಲ್ಲವೇ ಹುಬ್ಬಳ್ಳಿಯಂತಹ ಕಡೆಗಳಿಗೆ ಹೋಗಬೇಕು. ಇದರಿಂದ ಸಾಕಷ್ಟು ಜೀವ ಹಾನಿಯಾಗುತ್ತಲಿದೆ. ರಾಜ್ಯಕ್ಕೆ ವಿದ್ಯುತ್‌ ಕೊಟ್ಟ ಜಿಲ್ಲೆಯ ಜನರಿಗೆ ಕನಿಷ್ಠ ಮೂಲ ಸೌಕರ್ಯವೂ ಇಲ್ಲದಂತೆ ಆಗಿದ್ದು, ಕೊನೇ ಪಕ್ಷ ಒಂದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನಾದರೂ ನೀಡಬೇಕು ಎಂದು ಈಚೆಗೆ ಭಾರಿ ಹೋರಾಟ ನಡೆದಿತ್ತು.

ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಮೇಲೆ ಸಾಕಷ್ಟು ಒತ್ತಡವನ್ನು ಹೇರಲಾಗಿತ್ತು. ಹೀಗಾಗಿ ಆಗಿನ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಅವರು ಉತ್ತರ ಕನ್ನಡ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಭೆ ನಡೆಸಿದ್ದಲ್ಲದೆ, ಜಿಲ್ಲೆಗೆ ಭೇಟಿ ನೀಡಿ ಸ್ಥಳಪರಿಶೀಲನೆಯನ್ನೂ ನಡೆಸಿದ್ದರು. ಕೊನೆಗೆ ಸರ್ಕಾರ ಸಹ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸುವಾಗ ಇದರ ಪ್ರಸ್ತಾಪವೇ ಇರಲಿಲ್ಲ. ಇದು ಉತ್ತರ ಕನ್ನಡ ಜಿಲ್ಲೆಯ ಜನರ ಕೆಂಗಣ್ಣಿಗೆ ಗುರಿಯಾಗಿತ್ತು.

ಬಗೆಹರಿದಿದ್ದ ಜಾಗದ ಗೊಂದಲ

ಉತ್ತರ ಕನ್ನಡ ಜಿಲ್ಲೆಯ ಹೃದಯಭಾಗ ಕುಮಟಾದಲ್ಲಿ ಆಸ್ಪತ್ರೆ ನಿರ್ಮಾಣಕ್ಕಾಗಿ ಸರ್ವೆ ನಂಬರ್ 440ರಲ್ಲಿ 15.35 ಎಕರೆ ಜಾಗವನ್ನು ಮೀಸಲಿಡಲಾಗಿದೆ. ಹಿಂದೆ ಈ ಜಾಗವನ್ನು ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕಾಗಿ ಮೀಸಲಿಡಲಾಗಿತ್ತು. ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಜಾಗವಾಗಿರುವ ಹಿನ್ನೆಲೆಯಲ್ಲಿ ಸದ್ಯ ಈ ಜಾಗವನ್ನು ಆಸ್ಪತ್ರೆಗಾಗಿ ನೀಡುವಂತೆ ಸೂಚನೆ ನೀಡಲಾಗಿತ್ತು. ವಸತಿ ಶಾಲೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಪರ್ಯಾಯ ಜಾಗವನ್ನು ಒದಗಿಸುವ ಭರವಸೆಯನ್ನು ನೀಡಲಾಗಿತ್ತು.

ಇದನ್ನೂ ಓದಿ: NPS Cancellation: ರಾಜ್ಯದಲ್ಲಿ ಹಳೇ ಪಿಂಚಣಿ ಶೀಘ್ರ ಜಾರಿ? 10 ದಿನದಲ್ಲಿ ಸಮಿತಿ ಪುನಾರಚನೆ: ಕೃಷ್ಣ ಬೈರೇಗೌಡ

ವಸತಿ ಶಾಲೆಯ ಜಾಗ ಆಸ್ಪತ್ರೆಗೆ

ಉತ್ತರ ಕನ್ನಡ ಜಿಲ್ಲಾಡಳಿತವು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಏಕಲವ್ಯ ವಸತಿ ಶಾಲೆಗೆ ಮೀಸಲಿರಿಸಲಾಗಿದ್ದ ಜಾಗವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ನೀಡುವಂತೆ ಇಲಾಖೆಗೆ ಕಳೆದ ವರ್ಷ ಪತ್ರ ಬರೆಯಲಾಗಿತ್ತು. ಆಗಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಉತ್ತರ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. ಅವರು ಆ ಜಾಗವನ್ನು ಸರ್ಕಾರಕ್ಕೆ ಹಿಂದಿರುಗಿಸಲು ಅನುಮತಿ ನೀಡಿದ್ದರು. ಅದರಂತೆ ಏಕಲವ್ಯ ವಸತಿ ಶಾಲೆಗಾಗಿ ನಿಗದಿಪಡಿಸಿ ಇರಿಸಲಾಗಿದ್ದ 17 ಎಕರೆ 14 ಗುಂಟೆ ಜಮೀನಿನಲ್ಲಿ, 15 ಎಕರೆ 35 ಗುಂಟೆಯಷ್ಟು ಪ್ರದೇಶವನ್ನು ಸರ್ಕಾರಕ್ಕೆ ಹಿಂದಿರುಗಿಸಿತ್ತು. ಜತೆಗೆ ಏಕಲವ್ಯ ವಸತಿ ಶಾಲೆಗೆ ಪರ್ಯಾಯ ಜಾಗ ಒದಗಿಸುವಂತೆ ಜಿಲ್ಲಾಡಳಿತಕ್ಕೆ ಷರತ್ತು ವಿಧಿಸಿ, ಆ ಪ್ರದೇಶವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಕಾಯ್ದಿರಿಸಲು ಸರ್ಕಾರದ ಆಪ್ತ ಕಾರ್ಯದರ್ಶಿಗಳು ಆದೇಶದಲ್ಲಿ ತಿಳಿಸಿದ್ದರು.

Continue Reading
Advertisement
dengue flue
ಆರೋಗ್ಯ3 mins ago

Dengue Fever: ಸೊಳ್ಳೆಗಳಿಂದ ದೂರವಿರಿ! ಹೆಚ್ಚುತ್ತಿರುವ ಡೆಂಗ್ಯೂ ಜ್ವರ, 15 ಸಾವಿರ ಪ್ರಕರಣ ದಾಖಲು

Vistara Editorial, Government should conduct exam without any lapse
ಕರ್ನಾಟಕ24 mins ago

Cabinet Meeting: ಕೃಷಿಕರಲ್ಲದವರಿಂದ ಕೃಷಿ ಭೂಮಿ ಖರೀದಿಗೆ ಖೊಕ್‌, ವಿಧೇಯಕ ವಾಪಸ್ ಪಡೆಯಲು ಸಂಪುಟ ತೀರ್ಮಾನ

Raja Marga Father and Daughter
ಅಂಕಣ37 mins ago

Raja Marga Column : 13 ವರ್ಷದ ನನ್ನ ಮಗಳು ಒಮ್ಮಿಂದೊಮ್ಮೆಗೆ ಮಂಕಾಗಿದ್ದು ಯಾಕೆ?

Hair Care Tips
ಆರೋಗ್ಯ54 mins ago

Hair Care Tips: ಕೂದಲು ಚೆನ್ನಾಗಿರಬೇಕೆಂದರೆ ಯಾವ ಆಹಾರ ಸೇವಿಸಬೇಕು?

Heavy Rain warning In karnataka
ಉಡುಪಿ1 hour ago

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

Vistara editorial, Let's take precautions for pneumonia infection
ಆರೋಗ್ಯ2 hours ago

ವಿಸ್ತಾರ ಸಂಪಾದಕೀಯ: ನ್ಯುಮೋನಿಯಾ ಸೋಂಕಿನ ಬಗ್ಗೆ ಈಗಲೇ ಎಚ್ಚರ ವಹಿಸೋಣ

How To Remove Tea Stains From Clothes
ಲೈಫ್‌ಸ್ಟೈಲ್2 hours ago

How To Remove Tea Stains From Clothes: ಬಟ್ಟೆಯ ಮೇಲಿನ ಚಹಾ ಕಲೆಯನ್ನು ತೆಗೆಯುವ ಸುಲಭದ ಉಪಾಯ ಇದು!

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Vistara News impact, Governmet to scrap 7 d rule of SCSP and TSP act
ಕರ್ನಾಟಕ8 hours ago

ವಿಸ್ತಾರ ನ್ಯೂಸ್ ಇಂಪ್ಯಾಕ್ಟ್; ಎಸ್ಸಿ, ಎಸ್ಟಿ‌ ಹಣ ಅನ್ಯ ಕಾರ್ಯದ ಬಳಕೆಗೆ ತಡೆ, ಕಾಯ್ದೆ ತಿದ್ದುಪಡಿಗೆ ಸಂಪುಟ ನಿರ್ಧಾರ

WPL Auction 2024
ಕ್ರಿಕೆಟ್8 hours ago

WPL Auction 2024: ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಗೆ ಕೇವಲ 2 ದಿನ ಬಾಕಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ13 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ14 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ20 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ1 day ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌