ಬೆಂಗಳೂರು: ಬ್ರಾಹ್ಮಣ ಸಿಎಂ (Brahmin CM) ಕುರಿತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಎಚ್‌ಡಿಕೆ ಹೇಳಿಕೆ ಬಗ್ಗೆ ಬ್ರಾಹ್ಮಣ ಸಮುದಾಯ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸ್ವಾಮೀಜಿಯನ್ನು, ಮಾಜಿ ಸಚಿವ ಭೇಟಿಯಾಗುವ ಮೂಲಕ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಬೆಂಗಳೂರಿನ ವಿದ್ಯಾಪೀಠ ಮಠದಲ್ಲಿ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ಶನಿವಾರ ಭೇಟಿಯಾಗಿ ಆಶೀರ್ವಾದ ಪಡೆದರು. ಕುಮಾರಸ್ವಾಮಿ ಅವರ ಬ್ರಾಹ್ಮಣ ಸಿಎಂ ಹೇಳಿಕೆ ಬಳಿಕ ಸಾಕಷ್ಟು ಬ್ರಾಹ್ಮಣ ಮಠಗಳು, ಆಕ್ರೋಶ ವ್ಯಕ್ತಪಡಿಸಿದ್ದವು. ಇದರ ಬೆನ್ನಲ್ಲೇ ಬ್ರಾಹ್ಮಣ ಮಠಕ್ಕೆ ಎಚ್.ಡಿ ರೇವಣ್ಣ ತೆರಳಿ ಸ್ವಾಮೀಜಿಗಳ ಆಶೀರ್ವಾದ ಪಡೆದಿರುವುದು ಕಂಡುಬಂದಿದೆ.
ಇದನ್ನೂ ಓದಿ | JDS Pancharatna: ರಾಜ್ಯದಲ್ಲಿ ಸ್ವತಂತ್ರ ಸರ್ಕಾರ ಮಾಡಲು ಜೆಡಿಎಸ್‌ಗೆ ಒಂದು ಅವಕಾಶ ನೀಡಿ: ಎಚ್.ಡಿ.ಕುಮಾರಸ್ವಾಮಿ
ಶೃಂಗೇರಿ ಮಠ ಒಡೆದ ಹಾಗೂ ಮಹಾತ್ಮ ಗಾಂಧಿಯನ್ನು ಕೊಂದ ಪೇಶ್ವೆ ಬ್ರಾಹ್ಮಣ ಸಮುದಾಯದ ವ್ಯಕ್ತಿಯನ್ನು ರಾಜ್ಯದ ಸಿಎಂ ಮಾಡಲು ಆರ್‌ಎಸ್‌ಎಸ್ ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ಅವರ ಹೇಳಿಕೆಗೆ ಬ್ರಾಹ್ಮಣ ಸಮುದಾಯದಿಂದ ಆಕ್ಷೇಪ ವ್ಯಕ್ತವಾಗಿತ್ತು.