Site icon Vistara News

Brahmin CM : ಬ್ರಾಹ್ಮಣ ವಿರೋಧಿ ಹೇಳಿಕೆ ; ಎಚ್‌ಡಿಕೆ ವಿರುದ್ಧ ಕೊಪ್ಪಳ, ಗಂಗಾವತಿಯಲ್ಲಿ ಭಾರಿ ಪ್ರತಿಭಟನೆ

Brahmins protest

#image_title

ಕೊಪ್ಪಳ/ಗಂಗಾವತಿ: ಬ್ರಾಹ್ಮಣ ಸಮುದಾಯದವರು ಮುಖ್ಯಮಂತ್ರಿ (Brahmin CM) ಆಗುವ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆಪಾದಿಸಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ದ ಕೊಪ್ಪಳ ಹಾಗೂ ಗಂಗಾವತಿ ನಗರದಲ್ಲಿ ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ ನಡೆಯಿತು.

ಕೊಪ್ಪಳ ನಗರದ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಬ್ರಾಹ್ಮಣ ಸಮುದಾಯದ ಮುಖಂಡರು ಎಚ್.ಡಿ. ಕುಮಾರಸ್ವಾಮಿ ವಿರುದ್ದ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಗಂಗಾವತಿ ನಗರದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಬ್ರಾಹ್ಮಣ ಸಮಾಜದ ಯುವಕ ಸಂಘದಿಂದ ಪ್ರತಿಭಟನೆ ನಡೆಸಿದ ಯುವಕರು, ಕುಮಾರಸ್ವಾಮಿ ಸಮಾಜದ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ʻʻತಮ್ಮ ವೈಯಕ್ತಿಕ ರಾಜಕೀಯ ಉದ್ದೇಶಕ್ಕೆ ಸಮಾಜವನ್ನು ಅವಹೇಳನ ಮಾಡುವುದು ಸರಿಯಲ್ಲ. ರಾಜಕೀಯ ಉದ್ದೇಶ ಏನೇ ಇದ್ದರೂ ಅದು ನಿಮ್ಮ ವೈಯಕ್ತಿಕ ವಿಚಾರವಾಗಿದ್ದು, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷದ ನಾಯಕರು ಯಾವುದೇ ಸಮಾಜವನ್ನು ಟೀಕಿಸುವ ಮಟ್ಟಕ್ಕೆ ಇಳಿಯಬಾರದು. ಇದರಿಂದ ಸಮಾಜದಲ್ಲಿ ಪರಸ್ಪರ ಸಮಾಜದಲ್ಲಿ ಬಾಂಧವ್ಯದಲ್ಲಿ ಒಡಕು ಉಂಟಾಗಲಿದೆʼʼ ಎಂದು ಪ್ರತಿಭಟನಾಕಾರರು ಹೇಳಿದರು.

ʻʻಕುಮಾರಸ್ವಾಮಿ ಅವರು ಕೂಡಲೇ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಶೀಘ್ರವಾಗಿ ಕಾನೂನು ಹೋರಾಟ ಮಾಡಲಾಗುವುದು. ಅಲ್ಲದೇ ರಾಜ್ಯಪಾಲರಿಗೂ ದೂರು ನೀಡಲಾಗುವುದುʼʼ ಎಂದು ಹೇಳಿದ ಪ್ರತಿಭಟನಾಕಾರರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬ್ರಾಹ್ಮಣ ಸಮಾಜ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಳ್ಳುವಂತೆ ಸಮಾಜದವರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದೂ ಹೇಳಿದರು.

ಇದನ್ನೂ ಓದಿ : Brahmin CM: ಸತ್ಯ ಹೇಳಲು ಧೈರ್ಯ ಇಲ್ಲದವರು ರಾಜಕೀಯ ನಪುಂಸಕರು: ಕುಮಾರಸ್ವಾಮಿ ವಿರುದ್ಧ ಸಿ.ಟಿ.ರವಿ ಕಿಡಿ

Exit mobile version