Site icon Vistara News

Couple’s fight: ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!

couple's fight

ಕೋಲಾರ: ಮದುವೆಯಾದ ಹಲವು ತಿಂಗಳು, ವರ್ಷಗಳ ಬಳಿಕ ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡುವುದು ಸಾಮಾನ್ಯ. ಆದರೆ, ಇಲ್ಲೊಂದು ಜೋಡಿ ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ಹೊಡೆದಾಡಿಕೊಂಡಿದ್ದು (Couple’s fight), ಇವರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.

ಹೌದು, ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರ ಹೊಡೆದಾಡಿಕೊಂಡು, ವಧು ಸಾವಿಗೀಡಾಗಿ, ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ತ್ಯಂಬರಸನಹಳ್ಳಿಯಲ್ಲಿ ನಡೆದಿದೆ. ಲಿಖಿತಶ್ರೀ ಮೃತ ವಧು, ನವೀನ್ ಗಾಯಾಳು ವರ.

ಅದ್ಧೂರಿಯಾಗಿ ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಆದರೆ ಅದೇನಾಯಿತೋ ಗೊತ್ತಿಲ್ಲ, ಕೆಲ‌ಗಂಟೆಗಳ ನಂತರ ರೂಮ್‌ಗೆ ಹೋಗಿದ್ದ ನವದಂಪತಿ ಅಲ್ಲೇ‌ ಹೊಡೆದಾಡಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಧು ಕೊನೆಯುಸಿರೆಳೆದಿದ್ದಾಳೆ.

ವರ ನವೀನ್ ಸ್ಥಿತಿ ಕೂಡ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆ್ಯಂಡರ್‌ಸನ್ ಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

ಬಸ್ ಚಾಲಕನ ಓವರ್ ಸ್ಪೀಡ್‌ಗೆ ಗರ್ಭಿಣಿ ಬಲಿ

Murder case

ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಓವರ್ ಸ್ಪೀಡ್‌ಗೆ ಗರ್ಭಿಣಿ ಬಲಿಯಾದ ಘಟನೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಬಳಿ ನಡೆದಿದೆ. ನಮಿತಾ (22) ಸ್ಥಳದಲ್ಲೇ ಸಾವನ್ನಪ್ಪಿದ ಗರ್ಭಿಣಿ. ಚೆಕಪ್‌ಗಾಗಿ ಹೋಲಿ ಕ್ರಾಸ್ ಆಸ್ಪತ್ರೆಗೆ ಬದಿದ್ದ ಮಹಿಳೆ, ತಪಾಸಣೆ ಬಳಿಕ ಆಸ್ಪತ್ರೆ ಬಳಿ ರಸ್ತೆ ದಾಟುವಾಗ ಬಸ್ ಡಿಕ್ಕಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಗರ್ಭಿಣಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಆಪಘಾತವಾಗುತ್ತಿದ್ದಂತೆ ಕುಟುಂಬಸ್ಥರು, ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸರು ಹೈರಾಣಾದರು. ಅಪಘಾತವಾದ ಬಳಿಕ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

ಪತ್ನಿಯನ್ನು ಕೊಂದು ಪರಾರಿಯಾದ, ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಸತ್ತ!

Murder case

ಕೋಲಾರ: ಪತ್ನಿಯನ್ನು ಕೊಂದು (Murder Case) ಪರಾರಿಯಾಗಿದ್ದ ಪಾತಕಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ತೀವ್ರವಾಗಿ ಗಾಯಗೊಂಡು ಸತ್ತುಹೋಗಿದ್ದಾನೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ (Bangalore Crime) ಪತ್ನಿಯನ್ನು ಕೊಂದಿದ್ದ (husband killed wife) ಆರೋಪಿ, ಕೋಲಾರದಲ್ಲಿ (Kolar News) ಸಾವಿಗೀಡಾಗಿದ್ದಾನೆ.

ಕೊಲೆ ನಡೆದ ಐದು ದಿನದ ಬಳಿಕ, ಆರೋಪಿ ತಬ್ರೇಝ್ ಪಾಷಾನ ಬೆನ್ನು ಹತ್ತಿದ ಪೊಲೀಸರಿಗೆ ಆತನ ಹೆಣ ಎದುರಾಗಿದೆ. ಫೇಸ್‌ಬುಕ್ ಲೈವ್ ಮಾಡುತ್ತಲೇ ಪತ್ನಿಯ ಹತ್ಯೆ ಮಾಡಿದ್ದ ಪಾತಕಿ, ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಜೀವ ಕಳೆದುಕೊಂಡಿದ್ದಾನೆ.

ಫಾತಿಮಾ‌ (34) ಪತಿಯಿಂದ ಕೊಲೆಯಾದ ಮಹಿಳೆ. ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಐದು ವರ್ಷಗಳ ಹಿಂದೆಯೇ ಈ ದಂಪತಿ ದೂರವಾಗಿದ್ದರು. ಆರೋಪಿ ತಬ್ರೇಝ್ ಪಾಷಾ ಕಳ್ಳತನ ಕೇಸ್, ಗಾಂಜಾ ಕೇಸ್‌ನಲ್ಲಿ ಭಾಗಿಯಾಗಿದ್ದ. ಇತ್ತ ಅಂಗವಿಕಲ ತಾಯಿಯೊಂದಿಗೆ ಇಬ್ಬರು ಮಕ್ಕಳ ಜತೆ ಫಾತಿಮಾ ವಾಸವಿದ್ದಳು. ಆದರೂ ಆಗಾಗ ಮನೆಗೆ ಬಂದು ಜಗಳ ಮಾಡುತ್ತಿದ್ದ. ಪದೇ ಪದೆ ಮನೆಗೆ ಬರುವಂತೆ ಕಿರುಕುಳ ಕೊಡುತ್ತಿದ್ದ.

ಇತ್ತೀಚೆಗೆ ರಸ್ತೆಯಲ್ಲಿ ಆಕೆಯನ್ನು ಅಡ್ಡ ಹಾಕಿ ಜಗಳ ತೆಗೆದಿದ್ದ ತಬ್ರೇಝ್, ಕೊಲೆ ಮಾಡುತ್ತೇನೆ ಎಂದು ಬೆದರಿಸಿದ್ದ. ಹೀಗಾಗಿ ಫಾತಿಮಾ ತಾಯಿ, ತಬ್ರೇಝ್ ಏನಾದರೂ ಮಾಡುತ್ತಾನೆ ಎಂಬ ಆತಂಕದಿಂದ ಮನೆಗೆ ಸಿಸಿಟಿವಿ ಅಳವಡಿಸಿದ್ದರು. ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮನೆಗೆ ಬಂದು ಜಗಳ ತೆಗೆದಿದ್ದ ತಬ್ರೇಜ್ ಪಾಷ, ಇಬ್ಬರು ಮಕ್ಕಳನ್ನು ಹೊರಗೆ ಕಳಿಸಿದ್ದ. ತಾಯಿಯ ಮುಂದೆಯೇ ಪತ್ನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ.

ಮನೆಗೆ ಬರುವ ಮುನ್ನ ಹಾಗೂ ಹತ್ಯೆಯ ವೇಳೆ ತನ್ನ ಕೃತ್ಯವನ್ನು ಈ ಪಾತಕಿ ಫೇಸ್‌ಬುಕ್‌ ಲೈವ್ ಮಾಡಿದ್ದ. ಕೊಲೆಯ ಬಳಿಕ ಕೋಲಾರಕ್ಕೆ ಕಾಲ್ಕಿತ್ತಿದ್ದ. ಮೊಬೈಲ್ ಬಳಸದೇ ಕೋಲಾರದ ಮಸೀದಿಯಲ್ಲಿ ನಾಲ್ಕು ದಿನ ಉಳಿದುಕೊಂಡಿದ್ದ. ಬಳಿಕ ನಿನ್ನೆ ಕೋಲಾರದ ಚಿಕ್ಕಮ್ಮನ ಮನೆಗೆ ತೆರಳಿದ್ದ.

ಇದನ್ನೂ ಓದಿ | Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

ಆರೋಪಿಯನ್ನು ಬಂಧಿಸಲು ಕೋಲಾರಕ್ಕೆ ತೆರಳಿದ್ದ ಚಾಮರಾಜಪೇಟೆ ಪೊಲೀಸರ ತಂಡ ಚಿಕ್ಕಮ್ಮನ ಮನೆಗೆ ಪ್ರವೇಶಿಸಿದಾಗ, ತಪ್ಪಿಸಿಕೊಳ್ಳುವ ಭರದಲ್ಲಿ ಸುಮಾರು 12 ಅಡಿ ಎತ್ತರದ ಮನೆಯ ಟೆರೇಸ್‌ನಿಂದ ಈತ ಜಿಗಿದಿದ್ದಾನೆ. ಆಗ ಬಿದ್ದು ಅಸ್ವಸ್ಥನಾಗಿದ್ದ. ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಸಾವಿಗೀಡಾಗಿದ್ದಾನೆ.

Exit mobile version