BY Vijayendra : ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ; 'ವಿಶ್ವಾಸ' ನಡೆಗೆ ಮುಂದಾದ ಬಿಎಸ್‌ವೈ ಈಗ ಫುಲ್‌ ಆ್ಯಕ್ಟಿವ್‌! - Vistara News

ಕರ್ನಾಟಕ

BY Vijayendra : ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ; ‘ವಿಶ್ವಾಸ’ ನಡೆಗೆ ಮುಂದಾದ ಬಿಎಸ್‌ವೈ ಈಗ ಫುಲ್‌ ಆ್ಯಕ್ಟಿವ್‌!

BY Vijayendra : ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ‌ವಿ. ಸೋಮಣ್ಣ ಅವರಿಗೆ ಕರೆ ಮಾಡಿದ ಬಿ.ಎಸ್.‌ ಯಡಿಯೂರಪ್ಪ, ಪಕ್ಷ ಸಂಘಟನೆ ಈಗ ಮುಖ್ಯವಾಗಿದೆ. ಮುಂದೆ ಲೋಕಸಭಾ ಚುನಾವಣೆ ಎದುರಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಎಲ್ಲರೂ ಒಟ್ಟಾಗಿರೋಣ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

BS Yediyurappa and BY Vijayendra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ (BJP State President) ಸ್ಥಾನಕ್ಕೆ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಆಯ್ಕೆಯಾಗುತ್ತಿದ್ದಂತೆ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಸಖತ್‌ ಆ್ಯಕ್ಟಿವ್‌ ಆಗಿದ್ದಾರೆ. ಅವರೀಗ “ವಿಶ್ವಾಸ”ದ ನಡೆಯನ್ನು ಇಡುತ್ತಾರೆ. ಅಂದರೆ, ಎಲ್ಲ ಬಣದವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಈ ಸಂಬಂಧ ವಿರೋಧಿ ಬಣ ಎಂದು ಗುರುತಿಸಿಕೊಂಡ ಕೆಲವು ಹಿರಿಯ ಪ್ರಮುಖರಿಗೆ ಕರೆ ಮಾಡಿ ಸಹಕಾರ ನೀಡುವಂತೆ ಕೋರಿದ್ದಾರೆ.

ಈಗಾಗಲೇ ಬಿಜೆಪಿಯಿಂದ ಬರ ಅಧ್ಯಯನ ಪ್ರವಾಸದಲ್ಲಿ ನಿರತರಾಗಿರುವ ಬಿ.ಎಸ್.‌ ಯಡಿಯೂರಪ್ಪ ಅವರು ಅಲ್ಲಿಂದಲೇ ತಮ್ಮ ಕಾರ್ಯಾಚರಣೆಯನ್ನು ಪ್ರಾರಂಭ ಮಾಡಿದ್ದಾರೆ. ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷವು ನೂತನ ಜವಾಬ್ದಾರಿಯನ್ನು ನೀಡಿದ್ದು, ಅದನ್ನು ನಿಭಾಯಿಸಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ಪ್ರಮುಖರಿಗೆ ಕರೆ ಮಾಡಿ ಕೋರಿದ್ದಾರೆ.

ಇದನ್ನೂ ಓದಿ: Karnataka Weather : ಸದ್ಯಕ್ಕೆ ಮಳೆ ಬಂದರೆ ಬಂತು, ಇಲ್ಲದಿದ್ದರೆ ಇಲ್ಲ; ಬಿಸಿಲೇ ಎಲ್ಲ, ಚಳಿ ಇಲ್ಲವೆಂದೇನಿಲ್ಲ!

ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಹಾಗೂ ‌ವಿ. ಸೋಮಣ್ಣ (V Somanna) ಅವರಿಗೆ ಕರೆ ಮಾಡಿದ ಬಿ.ಎಸ್.‌ ಯಡಿಯೂರಪ್ಪ, ಪಕ್ಷ ಸಂಘಟನೆ ಈಗ ಮುಖ್ಯವಾಗಿದೆ. ಮುಂದೆ ಲೋಕಸಭಾ ಚುನಾವಣೆ ಎದುರಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಎಲ್ಲರೂ ಒಟ್ಟಾಗಿರೋಣ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ದವಳಗಿರಿ ನಿವಾಸದತ್ತ ನಾಯಕರು, ಕಾರ್ಯಕರ್ತರ ದಂಡು

ಹಲವು ತಿಂಗಳಿಂದ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಮಾತುಗಳು ಕೇಳಿ ಬರುತ್ತಿದ್ದರೂ ಆಯ್ಕೆ ಮಾತ್ರ ಆಗುತ್ತಿರಲಿಲ್ಲ. ಈ ಎಲ್ಲ ಬೆಳವಣಿಗೆಗಳ ನಡುವೆ ಈಗ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವ ಬಿಜೆಪಿ ವರಿಷ್ಠರ ನಡೆಯನ್ನು ಹಲವರು ಕೊಂಡಾಡಿದ್ದಾರೆ.

ಬಿ.ವೈ. ವಿಜಯೇಂದ್ರ ಭೇಟಿಗೆ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಆಗಮಿಸಿದ್ದರು. ಬಿ.ವೈ. ವಿಜಯೇಂದ್ರ ಅವರು ಇದೇ ವೇಳೆ ತಮ್ಮ ದವಳಗಿರಿ ನಿವಾಸವನ್ನು ತಲುಪಿದ್ದಾರೆ.

ಪಕ್ಷದ ಶಕ್ತಿ ಹೆಚ್ಚಿದೆ: ಸಂಸದ ಜಿ.ಎಸ್. ಬಸವರಾಜು

ಬಿ.ವೈ. ವಿಜೇಯೇಂದ್ರ ಆಯ್ಕೆಯಿಂದ ಪಕ್ಷಕ್ಕೆ ಇನ್ನಷ್ಟು ಶಕ್ತಿ ಜಾಸ್ತಿ ಆಗಿದೆ. ಅವರು ಒಳ್ಳೆಯ ಸಂಘಟನೆಗಾರ. ಚುನಾವಣೆ ಗೆಲ್ಲಿಸಿದ ಅನುಭವ ಇದೆ. ಮುಂದೆ ಸಿಎಂ ಆಗುವ ಅರ್ಹತೆ ಸಹ ಅವರಿಗೆ ಇದೆ. ಮುಂದಿನ ಲೋಕಾಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ವಿಚಾರವನ್ನು ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ತುಮಕೂರು ಸಂಸದ ಜಿ.ಎಸ್.‌ ಬಸವರಾಜು ಹೇಳಿದರು.

ವರಿಷ್ಠರು ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದಾರೆ: ಮುರುಗೇಶ್ ನಿರಾಣಿ

ವರಿಷ್ಠರು ಒಳ್ಳೆಯ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಿಜಯೇಂದ್ರ ಒಳ್ಳೆಯ ಸಂಘಟನಗಾರ. ಈ ಹಿಂದೆ ಹಲವು ಟಾಸ್ಕ್‌ಗಳನ್ನು ನಿಭಾಯಿಸಿದ್ದರು. ಉಪ ಚುನಾವಣೆಗಳನ್ನು ಗೆಲ್ಲಿಸಿದ್ದರು. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ. ಹಿರಿಯರು ಸಂಪೂರ್ಣ ಸಹಕಾರ ಕೊಡುತ್ತೇವೆ. ಒಬ್ಬರೋ ಇಬ್ಬರಿಗೂ ಅಸಮಾಧಾನ ಇರಬಹುದು. ಅವರನ್ನು ಸಹ ಸಹಮತಕ್ಕೆ ತೆಗೆದುಕೊಂಡು ಹೋಗುಲಾಗುವುದು ಎಂದು ಮಾಜಿ ಸಚಿವ ಮುರುಗೇಶ್‌ ನಿರಾಣಿ ಹೇಳಿದರು.

ಹೈಕಮಾಂಡ್ ನಾಯಕರಿಗೆ ಧನ್ಯವಾದ ಹೇಳುತ್ತೇನೆ: ಬಿ.ವೈ. ವಿಜಯೇಂದ್ರ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದ ಪಿ.ಸಿ. ಮೋಹನ್, ಹೈಕಮಾಂಡ್ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ವಿಜಯೇಂದ್ರ‌ ಅವರು ಪಕ್ಷದಲ್ಲಿ ಸುಮಾರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಅವರು ಸಂಘಟನೆಯಲ್ಲಿ ಬಹಳ ಚತುರರಿದ್ದಾರೆ. ಅವರಿಗೆ ಕೊಟ್ಟ ಬೈ ಎಲೆಕ್ಸನ್‌ ಟಾಸ್ಕ್‌ಗಳನ್ನು ಉತ್ತಮವಾಗಿ ನಿಭಾಯಿಸಿ ಗೆಲ್ಲಿಸಿಕೊಂಡು ಬಂದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯು ಅವರ ನೇತೃತ್ವದಲ್ಲಿ ನಡೆಯಲಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 25 ಸ್ಥಾನವನ್ನು ಗೆಲ್ಲುತ್ತೇವೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಲವರ ಆಸೆಗಳು ಸಹಜ. ಹಾಗಂತ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿ ವಿಜಯೇಂದ್ರ‌ ಅವರಿಗಿದೆ ಎಂದು ಹೇಳಿದರು.

ಮಾಜಿ ಸಚಿವ ಬಿ.ಸಿ. ಪಾಟೀಲ್‌ ಹೇಳಿಕೆಯ ವಿಡಿಯೊ ಇಲ್ಲಿದೆ

ಇದನ್ನೂ ಓದಿ: BY Vijayendra : ವಿಜಯೇಂದ್ರಗೆ ಭಾರಿ ಸವಾಲಿದೆ ಎಂದು ತಲೆ ಮೇಲೆ ಕೈಹೊತ್ತು ನಡೆದ ಸಿ.ಟಿ. ರವಿ!

ಇನ್ನು ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಲು ಯಡಿಯೂರಪ್ಪ ಅವರ ದವಳಗಿರಿ ನಿವಾಸಕ್ಕೆ ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್‌ ಆಗಮಿಸಿ ಶುಭಾಶಯ ಸಲ್ಲಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

DCET 2024 : ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

DCET 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಡಿಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಜು.2ರಿಂದ 4ರವರೆಗೆ ದಾಖಲಾತಿ ಪರಿಶೀಲನೆ ನಡೆಯಲಿದೆ.

VISTARANEWS.COM


on

By

DCET 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಡಿಸಿಇಟಿ-2024ರ (DCET 2024) ಪರೀಕ್ಷೆ ಫಲಿತಾಂಶವನ್ನು (Result) ಕೆಇಎ (KEA) ಶನಿವಾರ ಮಧ್ಯಾಹ್ನ ತನ್ನ ವೆಬ್ ಸೈಟಿನಲ್ಲಿ ಪ್ರಕಟಿಸಿದೆ. ಒಟ್ಟು 17,483 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಡಿಪ್ಲೊಮಾ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಹೊಂದಿದ್ದು, ಡಿಸಿಇಟಿ ಪರೀಕ್ಷೆಗೆ ಹಾಜರಾಗಿ ರ‍್ಯಾಂಕ್ ಪ್ರಕಟವಾಗಿರದಿದ್ದರೆ ಅಂತಹ ಅಭ್ಯರ್ಥಿಗಳು ಡಿಪ್ಲೊಮಾ ಅಂಕ ಮತ್ತು ಅಂಕಪಟ್ಟಿಯನ್ನು ಪಿಡಿಎಫ್ ಫಾರ್ಮ್ಯಟ್‌ನಲ್ಲಿ ಪ್ರಾಧಿಕಾರದ ಇಮೇಲ್ ಸಲ್ಲಿಸಿದಲ್ಲಿ ಅರ್ಹತೆಯನ್ನು ಪರಿಶೀಲಿಸಿ, ನಿಯಮಾನುಸಾರ ರ‍್ಯಾಂಕ್ ನೀಡಲಾಗುತ್ತದೆ.

ಡಿಸಿಇಟಿ: ಜು.2ರಿಂದ 4ರವರೆಗೆ ದಾಖಲಾತಿ ಪರಿಶೀಲನೆ

ಬೆಂಗಳೂರು: ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಹಾಗು ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ಜು.2ರಿಂದ 4ವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ‍್ಯಾಂಕ್‌ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ದಾಖಲಾತಿ ಪರಿಶೀಲನೆ ನಡೆಸುವ ಕಾಲೇಜುಗಳ ಪಟ್ಟಿಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮಗೆ ಹತ್ತಿರ ಇರುವ ಯಾವುದಾದರೊಂದು ಕಾಲೇಜಿಗೆ ಖುದ್ದು ಹೋಗಬೇಕು. ಆನ್ ಲೈನ್ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೇಮುಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ವಿಶೇಷ ಪ್ರವರ್ಗದ (ಎನ್ ಸಿಸಿ, ಕ್ರೀಡೆ, ಸೈನಿಕರು, ಮಾಜಿ ಸೈನಿಕರು, ಸಿಎಪಿಎಫ್, ಮಾಜಿ-ಸಿಎಪಿಎಫ್- ಕ್ಲೇಮ್ ಮಾಡಿದ್ದಲ್ಲಿ ಮಾತ್ರ ಅರ್ಹತೆ) ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು.

ಇದನ್ನೂ ಓದಿ: DCET 2024 : ಡಿಸಿಇಟಿಯಲ್ಲಿ ರ‍್ಯಾಂಕ್‌ ಪಡೆದ ವಿಕಲ ಚೇತನರಿಗೆ ಜುಲೈ 1ರಂದು ವೈದ್ಯಕೀಯ ತಪಾಸಣೆ

ಯುಜಿಸಿಇಟಿ ದಾಖಲೆಗಳ ಆನ್ ಲೈನ್ ಪರಿಶೀಲನೆ; ವೆಬ್‌ಸೈಟ್ ನಲ್ಲಿ ಮಾಹಿತಿ ಲಭ್ಯ

ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇನ್ನಿತರ ವೃತ್ತಿಪರ ಕೋರ್ಸ್ ಸೇರಲು ಬಯಸಿ ಅಭ್ಯರ್ಥಿಗಳು ಯುಜಿಸಿಇಟಿ-2024 ಆನ್‌ಲೈನ್ ಅರ್ಜಿಯಲ್ಲಿ ಕ್ಲೇಮ್ ಮಾಡಿದ್ದ ವಿವಿಧ ಮೀಸಲಾತಿಗಳನ್ನು
ಪರಿಗಣಿಸಿ ಆನ್‌ಲೈನ್ ಮೂಲಕ ಪರಿಶೀಲನೆ ನಡೆಸಿದ್ದು, ಅದರ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ.

ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಿದ SATS (ಸ್ಯಾಟ್ಸ್) ಸಂಖ್ಯೆ ಆಧರಿಸಿ ಅಭ್ಯರ್ಥಿಗಳ ವ್ಯಾಸಂಗ, ಕನ್ನಡ ಮಾಧ್ಯಮ, ಗ್ರಾಮೀಣ ವ್ಯಾಸಂಗದ ವಿವರಗಳನ್ನು ಪರಿಶೀಲಿಸಲಾಗಿದೆ. ಅದೇ ರೀತಿಯಾಗಿ, RD (ಆರ್‌ಡಿ) ಸಂಖ್ಯೆ ಆಧರಿಸಿ ಮೀಸಲಾತಿ (ಎಸ್‌ಸಿ, ಎಸ್‌ಟಿ, ಪ್ರವರ್ಗ-1, 2ಎ, 2ಬಿ, 3ಎ, 3ಬಿ) 371(ಜೆ), ಧಾರ್ಮಿಕ ಅಲ್ಪಸಂಖ್ಯಾತ, ಎನ್‌ಸಿಎಲ್‌ಸಿ (Non Creamy Layer Certificate) ಮತ್ತು ಇತರೆ ಮಾಹಿತಿಯನ್ನು ಆಯಾ ಇಲಾಖೆಯ ವೆಬ್‌ಸರ್ವೀಸ್ ಮೂಲಕ ಪರಿಶೀಲಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಶನಿವಾರ ತಿಳಿಸಿದ್ದಾರೆ. ಅರ್ಹತಾ ಕಂಡಿಕೆ ಇ, ಎಫ್, ಜಿ, ಹೆಚ್ ಮತ್ತು ಒ ಕ್ಲಾಸ್ ಗಳಿಗೆ ಅನ್ವಯಿಸುವಂತೆ ಆಯಾ ಇಲಾಖೆಯವರು ಪರಿಶೀಲನೆ ನಂತರ ನೀಡಿದ ಅರ್ಹತೆಯನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

SATS ಮತ್ತು RD ಸಂಖ್ಯೆ ಆಧರಿಸಿ ಮಾಡಲಾಗಿರುವ ಪರಿಶೀಲನೆಯ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟಿನ ಲಿಂಕ್‌ನಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ನಿಗದಿತ ಲಿಂಕ್‌ನಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ, ವಿವರಗಳನ್ನು ನೋಡಬಹುದು. ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಲಿಂಕ್‌ ಅನ್ನು ಸದ್ಯದಲ್ಲಿಯೇ ಸಕ್ರಿಯಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮುಂದಿನ ಹಂತಗಳು:

ಅಭ್ಯರ್ಥಿಗಳು ಪ್ರಕಟಿಸಲಾಗುವ ವೇಳಾಪಟ್ಟಿಯನುಸಾರ ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು; ಆದ್ಯತಾ ಕ್ರಮದಲ್ಲಿ ಆಸಕ್ತಿ ಇರುವ ಕಾಲೇಜು ಮತ್ತು ಕೋರ್ಸುಗಳ ಪಟ್ಟಿ ಸಿದ್ದಪಡಿಸಿಟ್ಟುಕೊಳ್ಳಬೇಕು; ಮೊದಲನೇ ಸುತ್ತಿನ ವೇಳಾಪಟ್ಟಿ ಪ್ರಕಟಿಸಿದ ನಂತರ ಪ್ರಾಧಿಕಾರದ ವೆಬ್‌ಸೈಟಿನ ಲಿಂಕ್‌ನಲ್ಲಿ ಆಯ್ಕೆ (options) ಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು ಎಂದು ಅವರು ವಿವರಿಸಿದರು.

ಅರ್ಹತಾ ಕಂಡಿಕೆಗಳಾದ ಬಿ, ಸಿ, ಡಿ, ಐ, ಜೆ, ಕೆ, ಎಲ್, ಎಮ್, ಎನ್, ಜೆಡ್, ಗಳನ್ನು ನಮೂದಿಸಿರುವ ಅಭ್ಯರ್ಥಿಗಳಿಗೆ ಆಫ್‌ಲೈನ್ ಪರಿಶೀಲನೆಗೆ ಹಾಜರಾಗಲು ಪ್ರತ್ಯೇಕ ವೇಳಾಪಟ್ಟಿ ನೀಡಿ ಪರಿಶೀಲನೆ ಮಾಡಲಾಗಿರುತ್ತದೆ ಮತ್ತು ಅರ್ಹ ಅಭ್ಯರ್ಥಿಗಳಿಗೆ ವೆರಿಫಿಕೇಶನ್ ಸ್ಲಿಪ್ ನೀಡಲಾಗಿದೆ. ಈ ಅಭ್ಯರ್ಥಿಗಳು ಮೇಲಿನ ಲಿಂಕ್‌ಅನ್ನು ಪರಿಶೀಲಿಸಬೇಕಾಗಿಲ್ಲ. ಆಫ್‌ಲೈನ್ ಪರಿಶೀಲನೆಗೆ ಗೈರು ಹಾಜರಾಗಿರುವ ಅಭ್ಯರ್ಥಿಗಳು ಸೀಟು ಹಂಚಿಕೆಗೆ ಅರ್ಹತೆ ಹೊಂದಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Continue Reading

ಕರ್ನಾಟಕ

Vinay Kulkarni: ವಿನಯ್‌ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶ ಮತ್ತೆ ನಿರಾಕರಿಸಿದ ಕೋರ್ಟ್‌

Vinay Kulkarni: ಬಿಜೆಪಿ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಆರೋಪಗಳಿರುವ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ನಿಷೇಧವಿದೆ.

VISTARANEWS.COM


on

vinay Kulkarni
Koo

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ‌ ವಿನಯ್ ಕುಲಕರ್ಣಿ (Vinay Kulkarni) ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶ ಆರೋಪಗಳಿರುವ ಹಿನ್ನೆಲೆಯಲ್ಲಿ ಮತ್ತೆ ಜಿಲ್ಲೆಯ ಪ್ರವೇಶವನ್ನು ನ್ಯಾಯಾಲಯ ನಿರಾಕರಿಸಿದೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಹೈಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಧಾರವಾಡ ಜಿಲ್ಲೆಯ ಪ್ರವೇಶ ಪಡೆದಿದ್ದರು. ಆದರೆ, ಈಗ ಮತ್ತಿ ಪ್ರವೇಶ ಕೋರಿ ಸಲ್ಲಿಸಿರುವ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್ ವಜಾಗೊಳಿಸಿದ್ದಾರೆ.

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಬಿಜೆಪಿ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಆರೋಪಿಯಾಗಿದ್ದಾರೆ. ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಅವರನ್ನು 2016ರ ಜೂನ್‌ 15ರಂದು ಬರ್ಬರವಾಗಿ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ 2020ರ ನವೆಂಬರ್‌ನಲ್ಲಿ ವಿನಯ್‌ ಕುಲಕರ್ಣಿ ಅವರ ಬಂಧನವಾಗಿತ್ತು. ಅವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಜಾಮೀನಿನ ಮೇಲೆ ಹೊರಬಂದಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಕೊಲೆ ಪ್ರಕರಣದಲ್ಲಿ ಆರೋಪಿಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಈ ಹಿಂದೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿತ್ತು. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಕಂಡರೂ ಶಾಸಕನಿಗೆ ಧಾರವಾಡ ಜಿಲ್ಲೆ ಪ್ರವೇಶದ ಮೇಲಿರುವ ನಿರ್ಬಂಧ ತೆರವು ಮಾಡಿಲ್ಲ.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು: ಪೋಕ್ಸೊ ಕೇಸ್‌ನಲ್ಲಿ ಚಾರ್ಜ್‌ ಶೀಟ್‌ ಸಲ್ಲಿಕೆಯಾದ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಮುಂದಿನ ವಿಚಾರಣೆವರೆಗೆ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಜೂನ್‌ 14ರಂದು ಹೈಕೋರ್ಟ್‌ ತಡೆ ನೀಡಿತ್ತು. ಇದೀಗ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ವಿಸ್ತರಣೆ ಮಾಡಿದೆ.

ಬಿ.ಎಸ್‌. ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣದಲ್ಲಿ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ. ಅಲ್ಲದೇ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ಸೂಚನೆ ನೀಡಿದೆ.

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಗುರುವಾರ ಚಾರ್ಜ್‌ ಶಿಟ್‌ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮಧ್ಯಂತರ ಜಾಮೀನು ವಿಸ್ತರಣೆಯಾಗಿದೆ.

Continue Reading

ಕರ್ನಾಟಕ

ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ!

ಕರ್ನಾಟಕ ರಕ್ಷಣಾ ವೇದಿಕೆಯಿಂದ ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1 ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

VISTARANEWS.COM


on

Rakshana Vedike
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯಿಂದ (Karnataka Rakshana Vedike) ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ (KaRaVe Protest) ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ (Bengaluru News) ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕಕ್ಕೆ ಹೊರರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗಗಳನ್ನು ಹೊರರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳವಳಿಗೆ ಸಜ್ಜಾಗಿದೆ. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು.

ಎಲ್ಲ ಖಾಸಗಿ ಸಂಸ್ಥೆಗಳ ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹದಿನೈದು ವರ್ಷ ಕಾಲ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.

ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಭೂಮಿ ನೀಡಲಾಗಿದ್ದರೆ ಹಿಂದಕ್ಕೆ ಪಡೆಯುವ ಮತ್ತು ಆ ಸಂಸ್ಥೆಗಳಿಗೆ ನೀಡಿರುವ ಎಲ್ಲ ಸವಲತ್ತುಗಳನ್ನು ಹಿಂದಕ್ಕೆ ಪಡೆಯುವ ನಿಯಮವನ್ನು ರೂಪಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ದಂಡ ವಿಧಿಸಬೇಕು ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು.

ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ಮೀಸಲಾತಿ ನೀಡಬೇಕು. ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ಹೊರತಾದ ಉಳಿದೆಲ್ಲ ಹುದ್ದೆಗಳಲ್ಲೂ ಶೇ. 90ರಷ್ಟು ಮೀಸಲಾತಿ ನೀಡಬೇಕು.

ರಾಜ್ಯ, ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅವಕಾಶವನ್ನು ಉದ್ದೇಶಿತ ಕಾನೂನಿನಲ್ಲಿ ಅಳವಡಿಸಬೇಕು.

ರಾಜ್ಯ ಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಎದುರಿಸಲು ಸಮರ್ಥ ವಕೀಲರ ತಂಡವನ್ನು ಸಿದ್ಧಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಎಸ್‌ಐಟಿ ಅಧಿಕಾರಿಗಳು ರಿಕವರಿ ಮಾಡಿರುವ ಹಣ ಕೋರ್ಟ್ ಅಕೌಂಟ್‌ಗೆ ಜಮೆ ಮಾಡುತ್ತಿದ್ದಾರೆ. ಶನಿವಾರವೂ ಕೂಡ 10 ಕೋಟಿ ರೂ.ಗಳನ್ನು ವಶಕ್ಕೆ ಪಡೆಯಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮ ಬಹುಕೋಟಿ ಹಗರಣದಲ್ಲಿ (Valmiki Corporation Scam) ಇನ್ನು 10 ಕೋಟಿ‌ ರೂ.ಗಳನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಬಾರ್‌ಗಳು, ಚಿನ್ನದ‌ ಅಂಗಡಿಗಳಿಗೆ ವರ್ಗಾವಣೆ ಆಗಿದ್ದ ಹಣ ವಶಕ್ಕೆ ಪಡೆಯಲಾಗಿದೆ. ಕರ್ನಾಟಕ, ಆಂಧ್ರದಲ್ಲಿನ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ಚುರುಕಗೊಳಿಸಿದೆ.

ವಾಲ್ಮೀಕಿ ನಿಗಮ ಹಗರಣದಲ್ಲಿ ಎಸ್‌ಐಟಿ ಅಧಿಕಾರಿಗಳು ರಿಕವರಿ ಮಾಡಿರುವ ಹಣ ಕೋರ್ಟ್ ಅಕೌಂಟ್‌ಗೆ ಜಮೆ ಮಾಡಲಾಗುತ್ತಿದೆ. ದೊಡ್ಡ ಮೊತ್ತದ ಹಣವನ್ನು ಸಿಐಡಿ ಕಚೇರಿಯಲ್ಲಿಡುವುದು ಕಷ್ಟ. ಭದ್ರತಾ ದೃಷ್ಟಿಯಿಂದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಕೋರ್ಟ್ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ಜಮಾ ಮಾಡಿದ್ದಾರೆ. ನೆನ್ನೆಯಿಂದ ದಿನಕ್ಕೆ ನಾಲ್ಕು ಕೋಟಿಯಂತೆ ಹಣ ಜಮೆ ಮಾಡಲಾಗುತ್ತಿದೆ. ಇದುವರೆಗೂ ಸುಮಾರು 28 ಕೋಟಿ ಹಣ ರಿಕವರಿ ಆಗಿದೆ.

28 ಕೋಟಿ ಹಣವಮ್ನ ಒಟ್ಟಿಗೆ ಜಮೆ ಮಾಡೋದು ಕಷ್ಟ. ಹೀಗಾಗಿ ಅಷ್ಟು ಹಣ ಎಣಿಕೆ ಮಾಡಲು ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ದಿನಕ್ಕೆ ನಾಲ್ಕು ಕೋಟಿ ಹಣವನ್ನು ಮಾತ್ರ ಬ್ಯಾಂಕ್‌ಗೆ ಜಮೆ ಮಾಡಲಾಗುತ್ತಿದೆ.

  • ಮಾರ್ಚ್ 30ರಂದು ನವೀನ್ ಜಿ ಮಾಲೀಕತ್ವದ ಜಿ.ಎನ್ ಇಂಡಸ್ಟ್ರೀಸ್ ಕಂಪನಿ ಹೆಸರಲ್ಲಿ 4.42 ಕೋಟಿ ವರ್ಗಾವಣೆ ಆಗಿತ್ತು.
  • ವಿಜಯ್ ಕೃಷ್ಣ ಆರ್ ಮಾಲೀಕತ್ವದ ರಾಮ್ ಎಂಟರ್ ಪ್ರೈಸಸ್ ಖಾತೆಗೆ 5.7 ಕೋಟಿ ಹಣ ವರ್ಗಾವಣೆ .
  • ರಾಘವೇಂದ್ರ ಅವರ ನೋವೆಲ್ ಸೆಕ್ಯೂರಿಟಿ ಸರ್ವಿಸಸ್ ಪ್ರೈ.ಲಿ.ಕಂಪನಿ ಹೆಸರಿನ ಖಾತೆಗೆ 4 ಕೋಟಿ ಹಣ ವರ್ಗಾವಣೆ.
  • ರೇಖಾ ಎಂಬುವವರ ಮಾಲೀಕತ್ವದ ಸುಜಲ್ ಎಂಟರ್ ಪ್ರೈಸಸ್ ಹೆಸರಿನ ಖಾತೆಗೆ 5.63 ಕೋಟಿ ಹಣ ವರ್ಗಾವಣೆ.

ಎಲ್ಲಾ ಕಂಪನಿ ಹೆಸರಲ್ಲಿ ನಕಲಿ ಖಾತೆ ತೆಗೆದು ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಖಾತೆ ಓಪನ್ ಮಾಡಿದ್ದ ಆಸಾಮಿಗಳು, ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಖಾತೆಗಳಿಗೆ ಹಣ ಜಮೆ ಮಾಡಿಸಿಕೊಂಡಿದ್ದಾರೆ.

ಇದನ್ನೂ ಓದಿ | Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ (Valmiki Corporation Scam) ಪ್ರಕರಣದಲ್ಲಿ ರಾಜೀನಾಮೆ (Resignation) ನೀಡಿರುವ ಮಾಜಿ ಸಚಿವ ನಾಗೇಂದ್ರ (Ex Minister Nagendra) ಸಿಬಿಐ (CBI) ತನಿಖಾ ಸಂಸ್ಥೆಯಿಂದ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಇದೇ ಕಾರಣವಾಗಿ ನಾಗೇಂದ್ರ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಂಡಿಲ್ಲ.

ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆಯ ಬಳಿಕ ನಿಗಮದ ಹಗರಣ ಬೆಳಕಿಗೆ ಬಂದಿತ್ತು. ನಿಗಮದ 186 ಕೋಟಿ ರೂ. ಹಣವನ್ನು ಅಕ್ರಮವಾಗಿ ಅನ್ಯ ರಾಜ್ಯದ ಖಾತೆಗಳಿಗೆ ವರ್ಗಾವಣೆ ಮಾಡಿಸಿದ್ದನ್ನು ಚಂದ್ರಶೇಖರ್‌ ಡೆತ್‌ನೋಟ್‌ ಬೆಳಕಿಗೆ ಬಂದಿತ್ತು. ನಂತರ ಈ ವಿಚಾರದಲ್ಲಿ ಬಿಜೆಪಿ ರಾಜ್ಯವ್ಯಾಪಿ ತೀವ್ರ ಪ್ರತಿಭಟನೆಗೆ ಇಳಿದಿತ್ತು. ಇದರಿಂದ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದ ಅಧಿಕಾರಿಗಳ ಮೇಲೆ ಸರಕಾರ ಕ್ರಮ ಕೈಗೊಂಡು ತನಿಖೆಗೆ ಎಸ್‌ಐಟಿ ರಚಿಸಿತ್ತು. ಒತ್ತಡ ಹೆಚ್ಚಿದ ಪರಿಣಾಮ ಸಚಿವ ನಾಗೇಂದ್ರ ತಲೆದಂಡವೂ ಆಗಿತ್ತು.

ಈ ನಡುವೆ, ಮಾಜಿ ಸಚಿವ ನಾಗೇಂದ್ರ ಮತ್ತು ಟೀಮ್, ಪ್ರಕರಣದಲ್ಲಿ ತಮ್ಮ ಹೆಸರು ಹೇಳದಂತೆ ಆರೋಪಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ನ್ಯಾಯಾಧೀಶರ ಮುಂದೆಯೇ ಆರೋಪಿಯೊಬ್ಬ ಹೇಳಿಕೆ ಕೊಟ್ಟಿದ್ದಾನೆ. ಹೀಗಾಗಿ ಸಾಕ್ಷಿ ನಾಶ ಹಾಗೂ ಆರೋಪಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಗೇಂದ್ರಗೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ | Fahadh Faasil: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು

ಈ ಪ್ರಕರಣದಲ್ಲಿ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ಆದರೆ ಹಗರಣದಲ್ಲಿ ಸಿಬಿಐ ಸಹ ಎಂಟ್ರಿ ಆಗಿದೆ. ನೂರು ಕೋಟಿಗೂ ಮಿಕ್ಕಿದ ಹಣದ ಅವ್ಯವಹಾರ ಆಗಿರುವುದರಿಂದ ಸಿಬಿಐ ತನ್ನದೇ ರೀತಿಯಲ್ಲಿ ತನಿಖೆ ಆರಂಭಿಸಿದೆ. ಹೀಗಾಗಿ ನಾಗೇಂದ್ರಗೆ ಬಂಧನದ ಭೀತಿ ಶುರುವಾಗಿದೆ. ರಾಜೀನಾಮೆ ಕೊಟ್ಟ ಬಳಿಕ ನಾಗೇಂದ್ರ ಎಲ್ಲೂ ಕಾಣಿಸಿಕೊಂಡಿಲ್ಲ. ಅತ್ತ ಪಕ್ಷದ ಕೆಲಸದಲ್ಲೂ ಕಾಣಿಸಿಕೊಳ್ಳುತ್ತಿಲ್ಲ; ಇತ್ತ ಕ್ಷೇತ್ರದಲ್ಲೂ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ, ಬಂಧನದ ಭೀತಿಯಿಂದ ಹಿನ್ನೆಲೆಯಲ್ಲಿ ಉಳಿದಿರಬಹುದು ಎಂದು ಭಾವಿಸಲಾಗಿದೆ.

Continue Reading
Advertisement
Kanguva vs Alia Bhatt Kanguva finally set a date
ಕಾಲಿವುಡ್2 seconds ago

Kanguva vs Alia Bhatt: ಕಂಗುವ- ಮಾರ್ಟಿನ್‌ ಜತೆ ಆಲಿಯಾ ಔಟ್‌ ಸಿನಿಮಾ ಕೂಡ ಕ್ಲ್ಯಾಶ್‌!

DCET 2024
ಬೆಂಗಳೂರು8 mins ago

DCET 2024 : ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

vinay Kulkarni
ಕರ್ನಾಟಕ10 mins ago

Vinay Kulkarni: ವಿನಯ್‌ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶ ಮತ್ತೆ ನಿರಾಕರಿಸಿದ ಕೋರ್ಟ್‌

Sania Mirza
ಕ್ರೀಡೆ28 mins ago

Sania Mirza: ಶಮಿ ಜತೆ ಮದುವೆ ಟಾಕ್​ ಬೆನ್ನಲ್ಲೇ ಇನ್​ಸ್ಟಾಗ್ರಾಮ್​ನಲ್ಲಿ ‘YES’ ಎಂದು ಬರೆದುಕೊಂಡ ಸಾನಿಯಾ ಮಿರ್ಜಾ

Mohamed Muizzu
ವಿದೇಶ29 mins ago

Mohamed Muizzu: ಮಾಲ್ಡೀವ್ಸ್‌ ಅಧ್ಯಕ್ಷನ ವಿರುದ್ಧ ವಾಮಾಚಾರ; ಸಚಿವೆ ಅರೆಸ್ಟ್‌

Rakshana Vedike
ಕರ್ನಾಟಕ38 mins ago

ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ!

Heavy Rain
ದೇಶ38 mins ago

Heavy Rain: ಭಾರೀ ಮಳೆಗೆ ಕುಸಿದು ಬಿದ್ದ ರಾಜ್‌ಕೋಟ್‌ ವಿಮಾನ ನಿಲ್ದಾಣ ಹೊರಭಾಗದ ಛಾವಣಿ

Valmiki Corporation Scam
ಕರ್ನಾಟಕ44 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

baby Death
ತುಮಕೂರು1 hour ago

Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

Viral Video
Latest1 hour ago

Viral Video: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ21 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌