ಹುಬ್ಬಳ್ಳಿ: ಒಂದು ಕಡೆ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಮಾಡುತ್ತಾರೆ. ಮತ್ತೊಂದೆಡೆ ಸಂಸದ ಡಿ.ಕೆ. ಸುರೇಶ್ ಭಾರತ ತುಂಡರಿಸುವ ಮಾತು ಹೇಳುತ್ತಾರೆ. ಕಾಂಗ್ರೆಸ್ ಪಕ್ಷಕ್ಕೆ ಏನಾದರೂ ಮಾನ ಮಾರ್ಯಾದೆ ಇದ್ದರೆ ಕೂಡಲೇ ಸಂಸದ ಸುರೇಶ್‌ರನ್ನು ವಜಾಗೊಳಿಸಬೇಕು. ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಮೊದಲು ಅವರನ್ನು ಪಕ್ಷದಿಂದ ಹೊರ ಹಾಕಲಿ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
ಸಂಸದ ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಜೋಶಿ ಅವರು, ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಹೇಳಿಕೆ ಸಂಬಂಧ ಕಾನೂನಾತ್ಮಕ ಕ್ರಮ ಜರುಗಿಸಬೇಕು. ಇವರದ್ದು ದೇಶ ದ್ರೋಹದ ಮನಸ್ಥಿತಿ. ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ ಎಂದು ಬಣ್ಣಿಸಿದ ಕವಿ ಕುವೆಂಪುಗೆ ಮಾಡಿದ ಅವಮಾನವಾಗಿದೆ ಎಂದು ಜೋಶಿ ಖಂಡಿಸಿದ್ದಾರೆ.
ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುಳಿತು ದೇಶ ಒಡೆಯುವ ಹುನ್ನಾರ ಮಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ನೈತಿಕತೆ ಇದ್ದರೆ ಮೊದಲು ಅವರನ್ನು ಪಕ್ಷದಿಂದ ವಜಾಗೊಳಿಸಲಿ ಎಂದು ಹೇಳಿದ್ದಾರೆ.
ಡಿ ಕೆ ಸುರೇಶ್ ಅವರ ಈ ಹೇಳಿಕೆಗೆ ಕಾನೂನಾತ್ಮಕ ಕ್ರಮ ಜರುಗಿಸಬೇಕು. ಇದು ದೇಶ ದ್ರೋಹದ ಮನಸ್ಥಿತಿ. ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ ಎಂದು ಬಣ್ಣಿಸಿದ ಕವಿ ಕುವೆಂಪುಗೆ ಮಾಡಿದ ಅವಮಾನ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕೂತು ದೇಶ ಒಡೆಯುವ ಹುನ್ನಾರ ಮಾಡ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ನೈತಿಕತೆ ಇದ್ದರೆ ಮೊದಲು ಅವರನ್ನು… pic.twitter.com/SAFrZ9WwuW
— Pralhad Joshi (@JoshiPralhad) February 1, 2024
ಇದನ್ನೂ ಓದಿ | Budget 2024: ಲೋಕಸಭೆ ಚುನಾವಣೆ ಪ್ರೇರಿತ ಅಲ್ಲ; ಅಭಿವೃದ್ಧಿಪರ ಅಭೂತಪೂರ್ವ ಬಜೆಟ್ ಎಂದ ಜೋಶಿ
ನಾವು ಹೆಚ್ಚು ಕಾಲ ವಿರೋಧ ಪಕ್ಷದಲ್ಲಿ ಇದ್ದೆವು, ನಾವು ಎಂದೂ ದೇಶ ಒಡೆಯುವ ಮಾತು ಆಡಿಲ್ಲ. ಸುರೇಶ್ ಅವರ ದೇಶದ್ರೋಹದ ಹೇಳಿಕೆ ವಿರುದ್ಧ ಕಾನೂನು ಕ್ರಮ ಆಗಬೇಕು. ಕಾಂಗ್ರೆಸ್ ಪಕ್ಷಕ್ಕೆ ಭಾರತ ದೇಶದ ಭಾವನಾತ್ಮಕ ಸಂಬಂಧ ಇಲ್ಲ ಎಂದು ಹೇಳಿದರು.
ಮಾಗಡಿ ಶಾಸಕ ಬಾಲಕೃಷ್ಣ ಗ್ಯಾರಂಟಿಗಳ ರದ್ದು ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಗ್ಯಾರಂಟಿಗಳೇ ಬೋಗಸ್. ಮೋದಿ ಗ್ಯಾರಂಟಿ ಎಲ್ಲಾ ಗ್ಯಾರಂಟಿಗಳಿಗಿಂತ ಉತ್ತಮ. ಬಡವರನ್ನು ಬಡತನದಿಂದ ಮೇಲೆ ಎತ್ತಿದವರು ಮೋದಿ, ಆದರೆ, ಕಾಂಗ್ರೆಸ್ ಗ್ಯಾರಂಟಿ ಚುನಾವಣೆಗೆ ಮಾತ್ರ ಎಂದು ವ್ಯಂಗ್ಯವಾಡಿದರು.
ನಾವು ಚುನಾವಣೆಗಾಗಿ ಬೇಕಾದ ರೀತಿಯಲ್ಲಿ ಬಜೆಟ್ ಮಂಡನೆ ಮಾಡಬಹುದಾಗಿತ್ತು. ದೇಶದ ಆರ್ಥಿಕ, ಭದ್ರತೆ ಹಿತದೃಷ್ಟಿಯಿಂದ ಬಜೆಟ್ ಮಂಡನೆ ಮಾಡಿದ್ದೇವೆ. ಇದು ಅತ್ಯಂತ ಸಮತೋಲನದ ಬಜೆಟ್ ಮಂಡನೆ ಆಗಿದೆ. ಕೃಷಿ ಮೀನುಗಾರಿಕೆ ಸೇರಿದಂತೆ ಎಲ್ಲಾ ವಲಯಕ್ಕೆ ಆದ್ಯತೆ ನೀಡಲಾಗಿದೆ. ದೊಡ್ಡ ರೀತಿಯಲ್ಲಿ ಮೂಲ ಸೌಕರ್ಯ ನೀಡುವ ದೃಷ್ಟಿಯಿಂದ ಒತ್ತು ಕೊಡಲಾಗಿದೆ. ದೊಡ್ಡ ಪ್ರಮಾಣದಲ್ಲಿ ತೆರಿಗೆ ಸೋರಿಕೆಗೆ ಕಡಿವಾಣ ಹಾಕಲಾಗಿದೆ, ಪರಿಸರ ಕಾಪಾಡಲು ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ | Budget 2024: ಕೃಷಿ, ಹೂಡಿಕೆ, ಉದ್ಯೋಗ ಸೃಷ್ಟಿಗೆ ಇದು ಬೆಸ್ಟ್ ಬಜೆಟ್: ಎಚ್.ಡಿ. ಕುಮಾರಸ್ವಾಮಿ
ಬಜೆಟ್‌ನಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆಗೆ ಒತ್ತು, ಮೂರು ಪ್ರಮುಖ ರೈಲ್ವೆ ಯೋಜನೆಗೆ ಕಾರಿಡಾರ್ ನಿರ್ಮಾಣ, ದೇಶದ ಖನಿಜ ಸಂಪತ್ತಿಗಾಗಿ ಮೈನಿಂಗ್ ಕಾರಿಡಾರ್ ನಿರ್ಮಾಣದ ಉದ್ದೇಶ, ಹೊಸ ಹೆದ್ದಾರಿ ನಿರ್ಮಾಣಕ್ಕೆ ನೀಲ ನಕ್ಷೆ, ಮಹಿಳಾ ಮೀಸಲಾತಿಗೆ ಒತ್ತು, ಹಸಿರು ಶಕ್ತಿ ಯೋಜನೆ ಜಾರಿ ಘೋಷಣೆ ಆಗಿದ್ದು, ಅಂಗನವಾಡಿ ಕಾರ್ಯಕರ್ತರನ್ನು ಆಯುಷ್ಮಾನ್ ಯೋಜನೆ ವ್ಯಾಪ್ತಿಗೆ ತರಲಾಗಿದೆ. ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯ ವಿಶ್ವಾಸವಿದೆ, ಆಗ ದೊಡ್ಡ ಕೊಡುಗೆ ಕೊಡಲಾಗುವುದು ಎಂದು ಹೇಳಿದರು.