Bull attack | ಸೈಕಲ್‌ನಲ್ಲಿ ಹೋಗುತ್ತಿದ್ದ 7ರ ಬಾಲಕನ ಮೇಲೆ ಗೂಳಿ ದಾಳಿ: ಕೊಂಬಿನಿಂದ ಎತ್ತಿ ಎಸೆದ ಬೀಡಾಡಿಗಳು - Vistara News

ಕರ್ನಾಟಕ

Bull attack | ಸೈಕಲ್‌ನಲ್ಲಿ ಹೋಗುತ್ತಿದ್ದ 7ರ ಬಾಲಕನ ಮೇಲೆ ಗೂಳಿ ದಾಳಿ: ಕೊಂಬಿನಿಂದ ಎತ್ತಿ ಎಸೆದ ಬೀಡಾಡಿಗಳು

ಶಿವಮೊಗ್ಗದಲ್ಲಿ ಏಳು ವರ್ಷದ ಬಾಲಕನ ಮೇಲೆ ಗೂಳಿಗಳು (Bull attack) ದಾಳಿ ನಡೆಸಿವೆ. ಬಾಲಕ ಅದೃಷ್ಟವಶಾತ್‌ ಬಚಾವ್‌ ಆಗಿದ್ದಾನೆ.

VISTARANEWS.COM


on

Gooli dali
ಶಿವಮೊಗ್ಗದಲ್ಲಿ ಗೂಳಿಗಳು ದಾಳಿ ಮಾಡುತ್ತಿರುವ ದೃಶ್ಯ ಮತ್ತು ದಾಳಿಗೆ ಒಳಗಾದ ಬಾಲಕ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬೀಡಾಡಿ ಜಾನುವಾರು, ಗೂಳಿಗಳ ಅಬ್ಬರ ಜೋರಾಗುತ್ತಿದೆ. ಇಲ್ಲಿನ ಗೋಪಿಶೆಟ್ಟಿ ಕೊಪ್ಪದಲ್ಲಿ ನಡೆದ ಒಂದು ಘಟನೆ ಭಯಾನಕವಾಗಿದ್ದು, ಏಳು ವರ್ಷದ ಪುಟ್ಟ ಬಾಲಕ ಜೀವ ಉಳಿಸಿಕೊಂಡಿದ್ದೇ ಪವಾಡ ಎಂಬಂತಿದೆ. ಸೈಕಲ್‌ನಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಎರಡು ಗೂಳಿಗಳು (Bull attack) ದಾಳಿ ನಡೆಸಿದ್ದವು. ಬಾಲಕ ಹೇಗೋ ತಪ್ಪಿಸಿಕೊಂಡು ಬಚಾವಾಗಿದ್ದಾನೆ.

ಗೋಪಿಶೆಟ್ಟಿ ಕೊಪ್ಪದಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ಸನತ್ (7) ಎಂಬ ಬಾಲಕನ ಎರಡು ಗೂಳಿಗಳು ಏಕಾಏಕಿ ದಾಳಿ ಮಾಡಿವೆ. ಮನೆ ಸಮೀಪದ ಅಂಗಡಿಯಿಂದ ಹಾಲು ತರುವಾಗ ಈ ಘಟನೆ ನಡೆದಿದೆ. ಮೊದಲು ಒಂದು ಗೂಳಿ ಬಾಲಕನನ್ನು ಕೊಂಬಿನಿಂದ ಎತ್ತಿ ಎಸೆದು ತಿವಿದರೆ, ಬಳಿಕ ಇನ್ನೊಂದು ಧಾವಿಸುತ್ತದೆ.

ದಾಳಿಯ ಬಳಿಕ ಬಾಲಕನನ್ನು ಕರೆದೊಯ್ಯುತ್ತಿರುವುದು.

ಆಗ ಅಕ್ಕಪಕ್ಕದ ಮನೆಯವರು ಬೊಬ್ಬೆ ಹೊಡೆದುಕೊಂಡು ಓಡಿ ಬಂದಿದ್ದರಿಂದ ಬಾಲಕ ಬಚಾವಾಗುತ್ತಾನೆ. ಗೂಳಿ ದಾಳಿಯಲ್ಲಿ ಬಾಲಕನಿಗೆ ತಲೆ, ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಾಲಕನಿಗೆ ಗೂಳಿ ದಾಳಿ ಮಾಡಿದ ದೃಶ್ಯ ಸಮೀಪದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಶಿವಮೊಗ್ಗ ಬೀಡಾಡಿ ಜಾನುವಾರಗಳ ಸಮಸ್ಯೆಗೆ ತ್ವರಿತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ | Street dog attack | ಮಲಗಿದ್ದ ಭಿಕ್ಷುಕಿಯನ್ನು ಕಚ್ಚಿ ಕೊಂದ ಬೀದಿನಾಯಿಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

Snake Bite: ಕಾಲಿಗೆ ಎರಡು ಬಾರಿ ಹಾವು ಕಚ್ಚಿದ್ದರೂ, ಮುಳ್ಳು ಚುಚ್ಚಿರಬಹುದೆಂದು ನಿರ್ಲಕ್ಷ್ಯ ತೋರಿದ ವ್ಯಕ್ತಿಯೊಬ್ಬ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

snake bite in chikkamagaluru
Koo

ಚಿಕ್ಕಮಗಳೂರು: ಜಮೀನಿನಲ್ಲಿ ಕೆಲಸ ಮುಗಿಸಿ ಬಂದ ವ್ಯಕ್ತಿಯೊಬ್ಬ ಮುಳ್ಳು ಚುಚ್ಚಿದೆ ಎಂದು ತಿಳಿದು ರಾತ್ರಿ ಊಟ ಮಾಡಿ ಮಲಗಿದವ ಚಿರನಿದ್ರೆಗೆ ಜಾರಿದ್ದ. ಗ್ರಾಮದ ಗಣ್ಯ ನಾಯ್ಕ್ (44) ಮೃತ ದುರ್ದೈವಿ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಘಟನೆ (Snake Bite) ನಡೆದಿದೆ.

ಗಣ್ಯ ನಾಯ್ಕ್‌ ಜಮೀನಿನಲ್ಲಿ ಕೆಲಸ ಮಾಡುವಾಗ ಕಾಲಿಗೆ ಎರಡು ಬಾರಿ ಹಾವು ಕಚ್ಚಿತ್ತು. ಆದರೆ ಮುಳ್ಳು ಚುಚ್ಚಿರಬೇಕು ಏನು ಆಗಲ್ಲ ಎಂದು ನಿರ್ಲಕ್ಷಿಸಿದ್ದ. ಹಾವು ಕಚ್ಚಿದ್ದು ಗಮನಕ್ಕೆ ಬಾರದೆ ಮನೆಗೆ ಬಂದು ಊಟ ಮಾಡಿ ಮಲಗಿದ್ದರು. ಆದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಹೆಣವಾಗಿದ್ದ.

ಕುಟುಂಬಸ್ಥರು ಮಲಗಿದ್ದ ಗಣ್ಯನನ್ನು ಎಬ್ಬಿಸಲು ಮುಂದಾಗಿದ್ದಾರೆ. ಆದರೆ ಆತ ಅಲುಗಾಡದೆ ಇದ್ದಾಗ ಅನುಮಾನಗೊಂದು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾಗಿ ಹೇಳಿದ್ದಾರೆ. ಒಂದು ಸಣ್ಣ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಜಿಂಕೆಗಳ ಅನುಮಾನಾಸ್ಪದ ಸಾವು

ಹತ್ತು ದಿನಗಳ ಅಂತರದಲ್ಲಿ ಎರಡು ಜಿಂಕೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ. ಚಿಕ್ಕಬಳ್ಳಾಪುರದ ಚಿಂತಾಮಣಿ ‌ತಾಲ್ಲೂಕಿನ‌ ಏನಿಗದೆಲೆ ಗ್ರಾಮದಲ್ಲಿ ಘಟನೆ ನಡೆದಿದೆ. ಏನಿಗದೆಲೆ ಗ್ರಾಮದ ಹರೀಶ್ ಎಂಬುವರ ತೋಟದಲ್ಲಿ ಜಿಂಕೆಗಳ ಮೃತಪಟ್ಟಿವೆ. ಚಿಲಕಲನೇರ್ಪು ಗ್ರಾಮಪಂಚಾಯ್ತಿ ವ್ಯಾಪ್ತಿಯ ಏನಿಗದೆಲೆ ಗ್ರಾಮದಲ್ಲಿ ಬೇಟೆಗಾರರ ಹಾವಳಿಗೆ ಜಿಂಕೆಗಳು ಬಲಿಯಾಗುತ್ತಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

ಬೈಕ್‌-ಕ್ಯಾಂಟರ್‌ ಡಿಕ್ಕಿಗೆ ಯುವತಿ ನಾಲಿಗೆ ಕಟ್! ಸವಾರ ಸ್ಪಾಟ್‌ ಡೆತ್‌

ಚಿಕ್ಕಮಗಳೂರು/ಬೆಳಗಾವಿ: ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಇದ್ದ ಯುವತಿಯ ನಾಲಿಗೆ ಕಟ್ ಆಗಿದೆ. ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ (Road Accident) ಘಟನೆ ನಡೆದಿದೆ.

ಶಿವರಾಜ್ (26) ಮೃತ ದುರ್ದೈವಿ. ಲಾವಣ್ಯ (20) ನಾಲಿಗೆ ಕಳೆದುಕೊಂಡವಳು. ಲಾವಣ್ಯ ಹಾಸನದ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಳು. ಶಿವರಾಜ್-ಲಾವಣ್ಯ ಇಬ್ಬರು ಅರಸೀಕೆರೆ ತಾಲೂಕಿನ ಬಂದೂರು ಮೂಲದವರು.

ಇಬ್ಬರು ಬೈಕ್‌ನಲ್ಲಿ ಬರುವಾಗ ಕ್ಯಾಂಟರ್‌ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಶಿವರಾಜ್‌ ಸ್ಥಳದಲ್ಲೆ ಮೃತಪಟ್ಟರೆ, ಇತ್ತ ಹಿಂಬದಿ ಕುಳಿತಿದ್ದ ಲಾವಣ್ಯ ಡಿಕ್ಕಿ ರಭಸಕ್ಕೆ ನಾಲಿಗೆಯೇ ಕಟ್‌ ಆಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಗಾಯಾಳು ಲಾವಣ್ಯಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

ಉಳುಮೆ ಮಾಡುವಾಗ ಕರೆಂಟ್‌ ಶಾಕ್‌ಗೆ ರೈತ ಬಲಿ

ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರೈತ ಮಂಜುನಾಥ್ ದಾಸನಕೊಪ್ಪ ಮೃತ ದುರ್ದೈವಿ.

ಗ್ರಾಮದಲ್ಲ ಭಾರಿ ಮಳೆ ಗಾಳಿಗೆ ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಅದನ್ನು ಗಮನಿಸದ ರೈತ ಮಂಜುನಾಥ್ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಕಿತ್ತೂರು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

PM Narendra Modi: ಪ್ರಧಾನಿ ಮೋದಿ ಉಳಿದುಕೊಂಡಿದ್ದ ಹೋಟೆಲ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ; ಎಷ್ಟು ಖರ್ಚಾಗಿತ್ತು?

PM Narendra Modi: 2023ರ ಏಪ್ರಿಲ್‌ನಲ್ಲಿ ಮೈಸೂರಿನಲ್ಲಿ ಆಯೋಜಿಸಿದ್ದ “ಹುಲಿ ಯೋಜನೆ – 50” ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ವೇಳೆ ಖಾಸಗಿ ಹೋಟೆಲ್‌ನಲ್ಲಿ ಪ್ರಧಾನಿ ಮೋದಿ ಅವರು ವಾಸ್ತವ್ಯ ಹೂಡಿದ್ದರು. ಹೋಟೆಲ್‌ನ ಬಾಕಿ ಬಿಲ್‌ ಪಾವತಿಸಲು ರಾಜ್ಯ ಸರ್ಕಾರ ಮುಂದಾಗಿದೆ.

VISTARANEWS.COM


on

PM Narendra Modi
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಉಳಿದುಕೊಂಡಿದ್ದ ಹೋಟೆಲ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. 2023ರ ಏಪ್ರಿಲ್‌ನಲ್ಲಿ ಮೈಸೂರಿನಲ್ಲಿ ಆಯೋಜಿಸಿದ್ದ “ಹುಲಿ ಯೋಜನೆ – 50” ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ವೇಳೆ ಖಾಸಗಿ ಹೋಟೆಲ್‌ನಲ್ಲಿ ಪ್ರಧಾನಿ ಮೋದಿ ಅವರು ವಾಸ್ತವ್ಯ ಹೂಡಿದ್ದರು. ಅದಕ್ಕಾಗಿ ಸುಮಾರು 80 ಲಕ್ಷ ರೂಪಾಯಿ ಬಿಲ್ ಆಗಿತ್ತು. ಹೀಗಾಗಿ ಬಾಕಿ ಬಿಲ್ ಪಾವತಿಸಲು ಪರಿಸರ ಮತ್ತು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ.

ಒಂದು ವರ್ಷದಿಂದಲೂ ಹೋಟೆಲ್‌ನ ಬಾಕಿ ಬಿಲ್ ಪಾವತಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಜಟಾಪಟಿ ನಡೆಯುತ್ತಿತ್ತು. ಬಿಲ್‌ ಪಾವತಿಸಬೇಕು ಎಂದು ಇವರ ಮೇಲೆ ಅವರು, ಅವರ ಮೇಲೆ ಇವರು ಹೇಳಿಕೊಂಡು ಬಂದಿದ್ದರು. ಆದರೆ, ಹೋಟೆಲ್ ಮಾಲೀಕ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಬಾಕಿ ಬಿಲ್ 80 ಲಕ್ಷ ರೂ. ಪಾವತಿಸಲು ಪರಿಸರ ಮತ್ತು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ.

ಬಾಕಿ ಬಿಲ್‌ ಪಾವತಿಗೆ ಕೇಂದ್ರ- ರಾಜ್ಯ ಸರ್ಕಾರದ ನಡುವೆ ಜಟಾಪಟಿ

ಕಳೆದ ವರ್ಷ ಏಪ್ರಿಲ್‌ನಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ವತಿಯಿಂದ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 (Tiger Project 50) ಕಾರ್ಯಕ್ರಮಕ್ಕಾಗಿ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಆತಿಥ್ಯಕ್ಕೆ ಸಂಬಂಧಪಟ್ಟಂತೆ 6.33 ಕೋಟಿ ರೂಪಾಯಿ ವೆಚ್ಚವಾಗಿತ್ತು ಎನ್ನಲಾಗಿತ್ತು. ಇದರಲ್ಲಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂಪಾಯಿ ಬಾಕಿ ಬರಬೇಕಿದೆ. ಇದರಲ್ಲಿ ಖಾಸಗಿ ಹೋಟೆಲ್‌ ಬಿಲ್‌ (Hotel Bill) ಕೂಡಾ ಇದೆ. ಆದರೆ, ಇದರ ವೆಚ್ಚವನ್ನು ಯಾರು ಹೊರುವುದು? ಎಂಬುದೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಜಟಾಪಟಿಗೆ ಕಾರಣವಾಗಿತ್ತು.

ಇದನ್ನೂ ಓದಿ | Narendra Modi: 10 ವರ್ಷ ಬಲಿಷ್ಠ ಪ್ರತಿಪಕ್ಷ ಇರಲಿಲ್ಲ ಎಂಬುದೇ ನೋವು ತಂದಿದೆ; ಮೋದಿ ಬೇಸರ

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ್ದೇ (National Tiger Conservation Authority) ಹೊಣೆ ಎಂದು ರಾಜ್ಯ ಅರಣ್ಯ ಇಲಾಖೆ (Karnataka State Forest Department) ಹೇಳಿತ್ತು. ಬಿಲ್ ಬಾಕಿ ಬಗ್ಗೆ ಪ್ರತಿಕ್ರಿಯಿಸಿದ್ದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ (Ishwar Khandre) ಅವರು, ಪ್ರಧಾನಿ ಮೋದಿ (PM Modi) ಆತಿಥ್ಯ ವೆಚ್ಚಕ್ಕೆ ಸಂಬಂಧಪಟ್ಟಂತೆ ಇರುವ ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದ್ದರು.

Rs 6 crore spent on hosting PM Modi visit to Bandipur Centre and state departments tussle over bill arrears

2023ರ ಏಪ್ರಿಲ್‌ನಲ್ಲಿ “ಹುಲಿ ಯೋಜನೆ – 50” ಕಾರ್ಯಕ್ರಮವನ್ನು ನಡೆಸಲಾಗಿತ್ತು. ಆದರೆ, ಆ ಸಮಯದಲ್ಲಿ ವಿಧಾನಸಭಾ ಚುನಾವಣೆ ಇದ್ದಿದ್ದರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್.ಟಿ.ಸಿ.ಎ. ಕಾರ್ಯಕ್ರಮವಾಗಿತ್ತು ಎಂದು ಈಶ್ವರ ಖಂಡ್ರೆ ತಿಳಿಸಿದ್ದರು.

ಎನ್.ಟಿ.ಸಿ.ಎ. ಖರ್ಚಿನ ಹೊಣೆ ಹೊತ್ತಿತ್ತು

ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ರಚಿಸಲಾಗಿದ್ದ ಸಮಿತಿಯಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು. ವಾಸ್ತವವಾಗಿ ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್.ಟಿ.ಸಿ.ಎ. ಹೇಳಿತ್ತು ಎಂದು ಈಶ್ವರ ಖಂಡ್ರೆ ವಿವರಿಸಿದ್ದರು.

Rs 6 crore spent on hosting PM Modi visit to Bandipur Centre and state departments tussle over bill arrears

ಕಾರ್ಯಕ್ರಮಕ್ಕೆ ಆಗಿರುವ ವೆಚ್ಚ 6.33 ಕೋಟಿ ರೂಪಾಯಿ ಆಗಿದೆ. ಈ ಪೈಕಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂಪಾಯಿ ಬಾಕಿ ಬರಬೇಕಿದೆ. ಇದರಲ್ಲಿ ರಾಡಿಸನ್ ಬ್ಲೂ ಆತಿಥ್ಯ ವೆಚ್ಚ ಸುಮಾರು 80 ಲಕ್ಷ ರೂ. ಸೇರಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದರು.

ಇದನ್ನೂ ಓದಿ | Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

ಪತ್ರ ಬರೆದರೂ ಬಾಕಿ ಹಣ ನೀಡಿಲ್ಲ

ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ಫೋನ್ ಮಾಡಿದ್ದರೂ ಎನ್.ಟಿ.ಸಿ.ಎ. (ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ) ಈ ಬಾಕಿ ಹಣ ನೀಡಿಲ್ಲ. ಈಗ ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ಈಶ್ವರ ಖಂಡ್ರೆ ಹೇಳಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರವೇ ಬಾಕಿ ಬಿಲ್‌ ಪಾವತಿಸಲು ನಿರ್ಧಾರ ಮಾಡಿದೆ.

Continue Reading

ಕರ್ನಾಟಕ

Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Prajwal Revanna Video: ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಸ್‌ಪೋರ್ಟ್‌ ರದ್ದತಿಯ ಪ್ರಕ್ರಿಯೆ ಆರಂಭಿಸಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣನಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಇದರ ಬೆನ್ನಲ್ಲೇ, ವಿದೇಶದಿಂದಲೇ ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದಾರೆ.

VISTARANEWS.COM


on

Prajwal revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Video) ಕೂಡಲೇ ಕರ್ನಾಟಕಕ್ಕೆ ಬಂದು, ನೆಲದ ಕಾನೂನು ಗೌರವಿಸಬೇಕು ಎಂದು ಸಂಸದನ ಅಜ್ಜ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (H D Deve Gowda) ಅವರು ಬಹಿರಂಗ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಬರುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದು, “ಮೇ 31ರಂದು ಭಾರತಕ್ಕೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ಘೋಷಣೆ ಮಾಡಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಸೇರಿ ಹಲವು ಪ್ರಕರಣಗಳಲ್ಲಿ ಪ್ರಜ್ವಲ್‌ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇಷ್ಟಾದರೂ, ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರದ ಕಾರಣ ಅವರ ತಾತ ಎಚ್‌.ಡಿ.ದೇವೇಗೌಡ ಅವರು ಬಹಿರಂಗ ಪತ್ರ ಬರೆದಿದ್ದರು. ನನ್ನ ಮೇಲೆ ಗೌರವ ಇದ್ದರೆ ವಾಪಸ್‌ ಬಾ ಎಂದಿದ್ದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

Continue Reading

ಬೆಂಗಳೂರು

Karnataka Congress: ಬೂತ್ ಮಟ್ಟದಲ್ಲಿ ‘ಕಾಂಗ್ರೆಸ್ ಕುಟುಂಬ’ ಕಾರ್ಯಕ್ರಮ; ಪಕ್ಷ ಬಲವರ್ಧನೆಗೆ ಡಿ.ಕೆ.ಶಿ ಪ್ಲ್ಯಾನ್‌

Karnataka Congress: ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಎಂಬ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಜೂನ್ 1ರಂದು ಪಕ್ಷದ ಪದಾಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ತಿಳಿಸಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರತಿ ಬೂತ್‌ನಲ್ಲಿ 50 ಸದಸ್ಯರನ್ನು ಸೇರಿಸಬೇಕು. ಆ ಬೂತ್ ಹಾಗೂ ಹಳ್ಳಿಗಳಲ್ಲಿ ಏನೇ ಕಾರ್ಯಕ್ರಮ ಮಾಡಿದರೂ ಆ 50 ಮಂದಿಯನ್ನು ಸೇರಿಸಿ ತೀರ್ಮಾನ ಮಾಡಬೇಕು. ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಬೇಕು ಎಂದು ಹೇಳಿದ್ದಾರೆ.

VISTARANEWS.COM


on

Congress Kutumba programme to strengthen organization at booth level says DCM DK Shivakumar
Koo

ಬೆಂಗಳೂರು: ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (Karnataka Congress) ತಿಳಿಸಿದರು.

ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಸೋಮವಾರ ನಡೆದ ಮಾಜಿ ಪ್ರಧಾನಿ ದಿ. ಜವಾಹರ್‌ ಲಾಲ್‌ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೂನ್ 1ರಂದು ಪಕ್ಷದ ಪದಾಧಿಕಾರಿಗಳ ಸಭೆ ಕರೆದಿದ್ದು, “ಕಾಂಗ್ರೆಸ್ ಕುಟುಂಬ” ಎಂಬ ಕಾರ್ಯಕ್ರಮ ಮಾಡಲು ನಿರ್ಧರಿಸಿದ್ದೇವೆ. ಪ್ರತಿ ಬೂತ್‌ನಲ್ಲಿ 50 ಸದಸ್ಯರನ್ನು ಸೇರಿಸಬೇಕು. ಆ ಬೂತ್ ಹಾಗೂ ಹಳ್ಳಿಗಳಲ್ಲಿ ಏನೇ ಕಾರ್ಯಕ್ರಮ ಮಾಡಿದರೂ ಆ 50 ಮಂದಿಯನ್ನು ಸೇರಿಸಿ ತೀರ್ಮಾನ ಮಾಡಬೇಕು. ಆಮೂಲಕ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಬೇಕು. ಯಾರು ಎಷ್ಟೇ ದೊಡ್ಡ ನಾಯಕರಾಗಿದ್ದರೂ ಅವರು ಈ ಜವಾಬ್ದಾರಿ ತೆಗೆದುಕೊಂಡು ಈ ಕಾಂಗ್ರೆಸ್ ಕುಟುಂಬವನ್ನು ಬೆಳೆಸಲೇಬೇಕು. ಇದಕ್ಕೆ ನೀವು ಸಜ್ಜಾಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: 22K ಚಿನ್ನದ ಬೆಲೆ ಗ್ರಾಂಗೆ ₹25 ಏರಿಕೆ; 24K ಬಂಗಾರದ ಬೆಲೆ ಎಷ್ಟು ಏರಿದೆ ಗಮನಿಸಿ

ತಿಂಗಳಿಗೊಮ್ಮೆ ಸಿಎಂರಿಂದ ಕಾರ್ಯಕರ್ತರ ಭೇಟಿ

ನಾನು ಹಾಗೂ ಮುಖ್ಯಮಂತ್ರಿಗಳು ಈ ಬಗ್ಗೆ ಚರ್ಚೆ ಮಾಡಿದ್ದು, ಪ್ರತಿ ತಿಂಗಳು ಒಂದು ದಿನ ಕಾಂಗ್ರೆಸ್ ಕಚೇರಿಯಲ್ಲಿ ಕೂತು ಕಾರ್ಯಕರ್ತರನ್ನು ಭೇಟಿ ಮಾಡುವ ಕೆಲಸ ಮಾಡಲಿದ್ದೇವೆ. ಇದನ್ನು ಸರಿಯಾದ ವ್ಯವಸ್ಥೆ ಮೂಲಕ ಆಯೋಜಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಕೇವಲ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪಕ್ಷದ ಸದಸ್ಯತ್ವ ಹೊಂದಿರುವವರಿಗೆ ಮಾತ್ರ ಅವಕಾಶ ನೀಡಲಾಗಿರುತ್ತದೆ. ಇನ್ನು ಮಂತ್ರಿಗಳು ವಾರ ಮುಂಚಿತವಾಗಿ ದಿನಾಂಕ ನಿಗದಿ ಮಾಡಿ ಕಾರ್ಯಕರ್ತರನ್ನು ಭೇಟಿ ಮಾಡಬೇಕು ಎಂದರು.

ಎಷ್ಟೋ ಬಾರಿ ಕಾರ್ಯಕರ್ತರು ನಮ್ಮನ್ನು ಭೇಟಿ ಮಾಡಲು ದೂರದ ಊರುಗಳಿಂದ ಬರುತ್ತಾರೆ. ಆದರೆ ನಾವು ಅವರನ್ನು ಭೇಟಿ ಮಾಡಲು ಆಗುವುದಿಲ್ಲ. ಪ್ರಮುಖರನ್ನೇ ಮೊದಲು ಕರೆದು ಮಾತನಾಡಿಸುತ್ತೇವೆ. ಇದರಿಂದ ನಮಗೂ ಮುಜುಗರವಾಗುತ್ತದೆ. ನಮ್ಮನ್ನು ವಿಧಾನಸೌಧದಲ್ಲಿ ಕೂರಿಸಿದವರ ಜತೆ ನಮಗೆ ಮಾತನಾಡಲು ಆಗುವುದಿಲ್ಲ. ಈ ಅನುಭವ ನನಗೂ ಆಗಿದೆ. ಹೀಗಾಗಿ ಈ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Landslide: ಪಪುವಾ ನ್ಯೂಗಿನಿಯಾದಲ್ಲಿ ಭೂಕುಸಿತ; ಜೀವಂತ ಸಮಾಧಿಯಾದವರ ಸಂಖ್ಯೆ 2000ಕ್ಕೆ ಏರಿಕೆ

ನಾವು ನಮ್ಮ ದೇವಾಲಯವಾಗಿರುವ ಕಾಂಗ್ರೆಸ್ ಕಚೇರಿಗೆ ಮೊದಲ ಆದ್ಯತೆ ನೀಡಬೇಕು. ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ಮುಂದಿನ ಒಂದು ವರ್ಷದಲ್ಲಿ ಅಡಿಪಾಯ ಹಾಕುತ್ತೇವೆ. ಇನ್ನು ರೇಸ್‌ಕೋರ್ಸ್ ರಸ್ತೆಯ ಕಚೇರಿಯ ಕಟ್ಟಡ ತೆರವುಗೊಳಿಸಿ ಹೊಸದಾಗಿ ನಿರ್ಮಾಣ ಮಾಡುತ್ತೇವೆ ಎಂದ ಅವರು, ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಈ ಕೆಲಸ ಆರಂಭವಾಗಿವೆ ಎಂದರು.

ಎಲ್ಲರೂ ಒಟ್ಟಾಗಿ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆ ಎದುರಿಸಬೇಕು. ನಮ್ಮ ಪಕ್ಷ ಆರಕ್ಕೆ ಆರು ಕ್ಷೇತ್ರಗಳಲ್ಲಿ ಗೆಲ್ಲಬೇಕು. ಆ ಮೂಲಕ ಮೇಲ್ಮನೆಯಲ್ಲಿ ನಮಗೆ ಬಹುಮತ ಸಿಗಬೇಕು. ಆಗ ಮಾತ್ರ ಬಿಲ್‌ಗಳು ಪಾಸಾಗುತ್ತವೆ ಎಂದರು.

ನೆಹರೂ ಅವರು ಕಾಂಗ್ರೆಸ್ ಪಕ್ಷದ ಶಕ್ತಿ

ನೆಹರೂ ಅವರ ಹೆಸರೇ ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರಿಗೆ ಒಂದು ಸ್ಫೂರ್ತಿ. ಈ ದೇಶದಲ್ಲಿ ಸಂವಿಧಾನದ ಅಡಿಯಲ್ಲಿ ನಾವು ಕೆಲಸ ಮಾಡುತ್ತಿದ್ದು ಇದಕ್ಕೆ ಭದ್ರ ಅಡಿಪಾಯ ಹಾಕಿದ್ದು ನೆಹರೂ ಅವರು. ಈ ಇತಿಹಾಸ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: IPL 2024 : ಇದು ಕೂಡ ವಿಶೇಷ; ಕೆಕೆಆರ್​ ಕಪ್​ ಗೆದ್ದ ಮರುದಿನವೇ ಮೊದಲ ಟ್ರೋಫಿಯ 12ನೇ ವಾರ್ಷಿಕೋತ್ಸವ

ಬಿಜೆಪಿ ನಾಯಕರು ಇತಿಹಾಸ ತಿರುಚಲು, ಅವರ ಹೆಸರನ್ನು ಇತಿಹಾಸ ಪುಟಗಳಿಂದ ತೆಗೆಯಲು ಬಹಳ ಪ್ರಯತ್ನ ಮಾಡುತ್ತಿದ್ದಾರೆ. ಅವರು ಇನ್ನು ಎರಡ್ಮೂರು ಜನ್ಮ ಎತ್ತಿ ಬಂದರೂ ನೆಹರೂ ಅವರ ಸಾಧನೆ ತೆಗೆದು ಹಾಕಲು ಸಾಧ್ಯವಿಲ್ಲ ಎಂದರು.

Continue Reading
Advertisement
Karan Johar announces Dhadak 2
ಬಾಲಿವುಡ್14 mins ago

Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

snake bite in chikkamagaluru
ಕ್ರೈಂ14 mins ago

Snake Bite : ಮುಳ್ಳು ಚುಚ್ಚಿದೆ ಎಂದು ನಿದ್ರೆಗೆ ಜಾರಿದವನ ಮೈ ಸೇರಿತು ಹಾವಿನ ವಿಷ! ಬೆಳಗಾಗುವಷ್ಟರಲ್ಲಿ ಮೃತ್ಯು

PM Narendra Modi
ಕರ್ನಾಟಕ19 mins ago

PM Narendra Modi: ಪ್ರಧಾನಿ ಮೋದಿ ಉಳಿದುಕೊಂಡಿದ್ದ ಹೋಟೆಲ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ; ಎಷ್ಟು ಖರ್ಚಾಗಿತ್ತು?

IPL 2024
ಪ್ರಮುಖ ಸುದ್ದಿ28 mins ago

IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

Prajwal revanna Case
ಕರ್ನಾಟಕ31 mins ago

Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Munawar Faruqui gets married for second timeʼ Munawar Faruqui gets married for second timeʼ
ಬಾಲಿವುಡ್44 mins ago

Munawar Faruqui: ಮತ್ತೊಂದು ಮದುವೆಯಾದರಾ ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ?

Congress Kutumba programme to strengthen organization at booth level says DCM DK Shivakumar
ಬೆಂಗಳೂರು51 mins ago

Karnataka Congress: ಬೂತ್ ಮಟ್ಟದಲ್ಲಿ ‘ಕಾಂಗ್ರೆಸ್ ಕುಟುಂಬ’ ಕಾರ್ಯಕ್ರಮ; ಪಕ್ಷ ಬಲವರ್ಧನೆಗೆ ಡಿ.ಕೆ.ಶಿ ಪ್ಲ್ಯಾನ್‌

Virat kohli
ಪ್ರಮುಖ ಸುದ್ದಿ55 mins ago

Virat Kohli: ಐಪಿಎಲ್​ 2024ರ ಸಾಧನೆ ಕುರಿತು ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

Road Accident
ಚಿಕ್ಕಮಗಳೂರು57 mins ago

Accident News : ಈಜಲು ಕೆರೆಗೆ ಜಿಗಿದ ಬಾಲಕ ಮೃತ್ಯು; ಬಸ್‌ ಡಿಕ್ಕಿಗೆ ಬೈಕ್‌ನಲ್ಲಿದ್ದ ರೈತರಿಬ್ಬರು ಸಾವು

ಹಿಮಾಲಯ book cover page launch 2
ಪ್ರಮುಖ ಸುದ್ದಿ58 mins ago

ಗುರು ಸಕಲಮಾ ಆತ್ಮಕಥನ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳುʼ ಮುಖಪುಟ ಅನಾವರಣ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು24 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌