Site icon Vistara News

Bus Accident | ಅತಿ ವೇಗ ತಂದ ಆಪತ್ತು; ಲಾರಿಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌ ಛಿದ್ರ

bus accident

ಬೆಂಗಳೂರು: ಅವಸರವೇ ಅಪಘಾತಕ್ಕೆ ಕಾರಣ ಎಂದು ತಿಳಿದಿದ್ದರೂ ಕೆಎಸ್‌ಆರ್‌ಟಿಸಿ ಚಾಲಕನೊಬ್ಬ ಲಾರಿಯನ್ನು ಓವರ್‌ ಟೇಕ್‌ ಮಾಡಲು ಹೋಗಿ ಅಪಘಾತ (Bus Accident) ಸಂಭವಿಸಿದೆ. ನಗರದ ಜಕ್ಕೂರು ಫ್ಲೈಓವರ್‌ ಬಳಿ ಘಟನೆ ನಡೆದಿದೆ.

ಶನಿವಾರ ಬೆಳಗಿನ ಜಾವ ಅಪಘಾತ ಸಂಭವಿಸಿದೆ. ಚಾಲಕ ಕೆಎಸ್‌ಆರ್‌ಟಿಸಿ ಬಸ್‌ ಅನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಲಾರಿ ಹಿಂಭಾಗಕ್ಕೆ ಡಿಕ್ಕಿ ಹೊಡೆಸಿದ್ದು, ಪರಿಣಾಮ ಬಸ್‌ ಮುಂಭಾಗ ಛಿದ್ರವಾಗಿದೆ. ದೇವನಹಳ್ಳಿಯಿಂದ ನಗರಕ್ಕೆ ಬರುತ್ತಿದ್ದ ವೇಳೆ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಆರೇಳು ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಕೆಲ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Accident Case | ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಬಿಕಾಂ ವಿದ್ಯಾರ್ಥಿನಿ ಸಾವು, ಇನ್ನೊಬ್ಬ ವಿದ್ಯಾರ್ಥಿ ಗಂಭೀರ

Exit mobile version