Site icon Vistara News

Bus Accident: ನಿಂತಿದ್ದ ಲಾರಿಗೆ ಸಾರಿಗೆ ಬಸ್‌ ಡಿಕ್ಕಿ; 32 ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

Bus Accident In Raichur

Bus Collides With Truck In Raichur; 32 Passengers Injured

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ (Sindhanur) ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ಡಿಕ್ಕಿಯಾಗಿದ್ದು (Bus Accident), 32 ಜನ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಸಿಂಧನೂರಿನಿಂದ ಅಂಕಲಿಮಠದ ಕಡೆಗೆ ಹೊರಟ್ಟಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿಯಾಗಿದೆ. ಬಸ್‌ ಕಂಡಕ್ಟರ್‌ ಸೇರಿ ಐವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಕೂಡಲೇ ಬಳ್ಳಾರಿಯ ವಿಮ್ಸ್‌ಗೆ ದಾಖಲಿಸಲಾಗಿದೆ. ಇನ್ನು ಸಣ್ಣ ಪುಟ್ಟ ಗಾಯಗಳಾದವರಿಗೆ ರಾಯಚೂರಿನ ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ತೀವ್ರತೆಗೆ ಬಸ್‌ ನಜ್ಜುಗುಜ್ಜಾಗಿದೆ

ಇಂಡಿಕೇಟರ್‌ ಹಾಕದಿರುವುದೇ ಕಾರಣ

ರಸ್ತೆ ಬದಿ ನಿಲ್ಲಿಸಿದ ಲಾರಿಗೆ ಚಾಲಕನು ಇಂಡಿಕೇಟರ್‌ ಹಾಕದಿರುವುದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಲಾರಿ ಚಾಲಕನು ಇಂಡಿಕೇಟರ್‌ ಹಾಕದೆ ಲಾರಿಯನ್ನು ನಿಲ್ಲಿಸಿದ್ದಾನೆ. ಬಸ್‌ ಎದುರಿಗೆ ಲಾರಿ ಬಂದಿದ್ದು, ಸೈಡ್‌ ಕೊಡಲು ಹೋದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬಸ್‌ ನಜ್ಜುಗುಜ್ಜಾಗಿದೆ. ಸಿಂಧನೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದು ವಾರದ ಹಿಂದಷ್ಟೇ ಆಂಧ್ರಪ್ರದೇಶದ ತಿರುಪತಿ ದೇವಸ್ಥಾನಕ್ಕೆ ಹೋಗಿ ಮರಳಿ ಬರುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಒಂದೇ ಕುಟುಂಬದ ಐವರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದರು. ಹಾಗೆಯೇ, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: Accident Case : ಚಲಿಸುತ್ತಿದ್ದಾಗಲೇ ಸುಟ್ಟು ಕರಕಲಾದ ಕಾರು; ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ನಡೆದ ಅಪಘಾತದಲ್ಲಿ ಈ ಸಾವು ಸಂಭವಿಸಿದೆ. ಅಥಣಿಯ ಕುಟುಂಬದವರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ನಡೆದಿರುವ ಭೀಕರ ಅಪಘಾತ ಇದಾಗಿದೆ.

Exit mobile version