ಮಂಡ್ಯ: ಮೈಸೂರು- ಬೆಂಗಳೂರು ನೂತನ ದಶಪಥ ಹೆದ್ದಾರಿಯಲ್ಲಿ ಖಾಸಗಿ ವೋಲ್ವೊ ಬಸ್ ಒಂದು ಚಲಿಸುವಾಗಲೇ ಹೊತ್ತಿ ಉರಿದ ಘಟನೆ ಶನಿವಾರ ಸಂಭವಿಸಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಘಟನೆ ನಡೆದಿದ್ದು, ಹೆದ್ದಾರಿಯಲ್ಲಿ ಆತಂಕ ಸೃಷ್ಟಿಯಾಗಿದೆ.
ಮೈ- ಬೆಂ ನೂತನ ದಶಪಥ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ನಲ್ಲಿ ಒಮ್ಮಿಂದೊಮ್ಮೆಗೇ ಹೊಗೆ ಕಾಣಿಸಿಕೊಂಡಿದ್ದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಬೊಬ್ಬೆ ಹೊಡೆದು ಬಸ್ಸನ್ನು ನಿಲ್ಲಿಸಿದರು. ಇದರಿಂದಾಗಿ ಕೂಡಲೇ ಬಸ್ನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗೆ ಇಳಿಸಲು ಸಾಧ್ಯವಾಯಿತು.
ಬಸ್ಸಿನಿಂದ ಪ್ರಯಾಣಿಕರು ಇಳಿದು, ಕೆಲವರು ತಮ್ಮ ತಮ್ಮ ಲಗೇಜ್ಗಳನ್ನು ಇಳಿಸಿದರು. ಆದರೆ, ಕೆಲವು ಲಗೇಜ್ಗಳು ಸುಟ್ಟುಹೋಗಿವೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಖಾಸಗಿ ಬಸ್ ನಲ್ಲಿ 30 ಜನ ಪ್ರಯಾಣಿಕರು ಇದ್ದರು. ಅವರನ್ನೆಲ್ಲ ಇಳಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ : Road Accident: ಹ್ಯಾಂಡ್ ಬ್ರೇಕ್ ಹಾಕಲು ಮರೆತ ಲಾರಿ ಚಾಲಕ; ಸಣ್ಣ ಎಡವಟ್ಟಿನಿಂದ ಮುಂದೆ ಆಗಿದ್ದೆಲ್ಲ ದೊಡ್ಡ ಅನಾಹುತ!